Friday | April 3, 2026 |

48 ಕೋಟಿ ವಂಚನೆ ಪ್ರಕರಣ; ಸಹಕಾರ ಇಲಾಖೆ ಕದ ತಟ್ಟಿದ ಗೃಹ ಇಲಾಖೆ

ಬೆಂಗಳೂರು; ರಾಜ್ಯ ಕೃಷಿ ಮಾರಾಟ ಮಂಡಳಿಯ ₹ 48 ಕೋಟಿ ನಿಶ್ಚಿತ ಠೇವಣಿ (ಎಫ್‌ಡಿ) ಹಣವನ್ನು ಬೇರೆ ಖಾತೆಗಳಿಗೆ ವರ್ಗಾಯಿಸಿ ವಂಚಿಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ಉಪ ಪ್ರಧಾನ ವ್ಯವಸ್ಥಾಪಕ(ಡಿಜಿಎಂ) ಸಿದ್ದಗಂಗಯ್ಯ ಅವರನ್ನು ವಿಚಾರಣೆಗೆ ಪೂರ್ವಾನುಮತಿ ಕೋರಿ ಸಹಕಾರ ಇಲಾಖೆಗೆ ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಸಲಿದೆ ಎಂದು ತಿಳಿದು ಬಂದಿದೆ.

ಮಂಡಳಿಯ ಮಾರುಕಟ್ಟೆ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕ (ಡಿಜಿಎಂ) ಸಿದ್ದಗಂಗಯ್ಯ, ಸಿಂಡಿಕೇಟ್‌ ಬ್ಯಾಂಕಿನ ಉತ್ತರಹಳ್ಳಿ ಶಾಖೆಯ ವ್ಯವಸ್ಥಾಪಕ ಮಂಜುನಾಥ್ ಸೇರಿ 12 ಮಂದಿ ವಿರುದ್ಧ ಕೇಂದ್ರ ಅಪರಾಧ ಪತ್ತೆ ದಳ (ಸಿಸಿಬಿ) ಏಪ್ರಿಲ್‌ನಲ್ಲಿ ನ್ಯಾಯಾಲಯಕ್ಕೆ ಪ್ರಾಥಮಿಕ ದೋಷಾರೋಪಪಟ್ಟಿ ಸಲ್ಲಿಸಿತ್ತು.

ಇದರ ಬೆನ್ನಲ್ಲೇ ಆರೋಪಿ ಡಾ ಸಿದ್ದಗಂಗಯ್ಯ ಅವರನ್ನು ಸಕ್ಷಮ ನ್ಯಾಯಾಲಯದಲ್ಲಿ ಕಲಂ 197 ಸಿಆರ್‌ಪಿಸಿ ಅಡಿಯಲ್ಲಿ ಅಭಿಯೋಜನೆಗೊಳಪಡಿಸಲು ಪೂರ್ವಾನುಮತಿ ಕೋರಲು ಗೃಹ ಇಲಾಖೆ ಸಹಕಾರ ಇಲಾಖೆಯ ಕದ ತಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೆಚ್ಚಿನ ಮುತುವರ್ಜಿ ವಹಿಸಿದ್ದಾರೆ. ಹೀಗಾಗಿ ಅರೋಪಿ ಅಧಿಕಾರಿಗಳ ವಿರುದ್ಧ ವಿಚಾರಣೆಗೆ ಸಹಕಾರ ಇಲಾಖೆಯ ಪೂರ್ವಾನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಪ್ರಕರಣದಲ್ಲಿ ಸಿದ್ದಗಂಗಯ್ಯ ಅವರೂ ಸೇರಿದಂತೆ ಉತ್ತರಹಳ್ಳಿ ಶಾಖೆಯ ಸಹಾಯಕ ವ್ಯವಸ್ಥಾಪಕ, ನಿವೃತ್ತ ಖಜಾನೆ ಅಧಿಕಾರಿ ಲಕ್ಷ್ಮಯ್ಯ ಅವರನ್ನೂ ಆರೋಪಿಗಳನ್ನಾಗಿಸಿದೆ. ಈ ಎಲ್ಲ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗಿದ್ದು, 1400 ಪುಟಗಳ ದೋಷಾರೋಪ ಪಟ್ಟಿ ಕೂಡ ಸಲ್ಲಿಕೆಯಾಗಿದೆ.
ರಾಜ್ಯ ಕೃಷಿ ಮಾರಾಟ ಮಂಡಳಿಗೆ ಸಿಂಡಿಕೇಟ್‌ ಬ್ಯಾಂಕ್‌ ಹಣ ಹಿಂದಿರುಗಿಸಿದೆ. ಏಪ್ರಿಲ್‌ 3ರಂದು ₹50.52 ಕೋಟಿ ಮತ್ತು ಏಪ್ರಿಲ್‌ 22ರಂದು ₹50.85 ಕೋಟಿ ಹಣವನ್ನು ಆವರ್ತನಿಧಿ ಖಾತೆಗೆ ಹಿಂತಿರುಗಿಸಿದೆ. ₹1.37 ಕೋಟಿ ಬಡ್ಡಿ ಹಣವೂ ಇದರಲ್ಲಿ ಸೇರಿದೆ.

ಪ್ರಕರಣ ಹಿನ್ನೆಲೆ
ರಾಜ್ಯ ಕೃಷಿ ಮಾರಾಟ ಮಂಡಳಿಯ ಆವರ್ತನಿಧಿಯಿಂದ ನಿಶ್ಚಿತ ಠೇವಣಿ (ಎಫ್.ಡಿ) ಇಡುವ ಸಲುವಾಗಿ ಬ್ಯಾಂಕ್‌ಗಳಿಂದ ಕೊಟೇಷನ್ ಕರೆದಿತ್ತು. ಸಿಂಡಿಕೇಟ್ ಬ್ಯಾಂಕ್ ಉತ್ತರಹಳ್ಳಿ ಶಾಖೆಯು ಎಫ್‌.ಡಿ ಹೂಡಿಕೆಗೆ ಹೆಚ್ಚು ಬಡ್ಡಿ ನೀಡುವುದಾಗಿ ಮುಂದೆ ಬಂದಿತ್ತು. ರಾಜ್ಯ ಕೃಷಿ ಮಾರಾಟ ಮಂಡಳಿ ಆವರ್ತನಿಧಿ ಇರುವ ರಾಜಾಜಿನಗರ ಶಾಖೆಯ ಆಂಧ್ರ ಬ್ಯಾಂಕಿನಿಂದ ಆರ್‌ಟಿಜಿಎಸ್ ಮೂಲಕ ₹ 100 ಕೋಟಿ ಹಣವನ್ನು ಸಿಂಡಿಕೇಟ್ ಬ್ಯಾಂಕಿನ ಉತ್ತರಹಳ್ಳಿ ಶಾಖೆಗೆ ವರ್ಗಾಯಿಸಿ ತಲಾ ₹ 50 ಕೋಟಿಯಂತೆ ಎರಡು ನಿಶ್ಚಿತ ಠೇವಣಿ ಇಡಲಾಗಿತ್ತು.

ಈ ಒಟ್ಟು ಹಣದಲ್ಲಿ 48 ಕೋಟಿ ರು. ದುರುಪಯೋಗವಾಗಿದ್ದು ಬೆಳಕಿಗೆ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮರ್ಷಿಯಲ್‌ ಪೊಲೀಸ್‌ ಠಾಣೆಯಲ್ಲಿ ಐಪಿಸಿ 118,406,408,409, 411, 418, 420, 462, 467, 468, 473, 474, 201, 120(ಬಿ) ಅಡಿಯಲ್ಲಿ ಮೊಕದ್ದಮೆ ದಾಖಲಿಸಲಾಗಿತ್ತು. ಆ ನಂತರ ಗೃಹ ಸಚಿವರ ಸೂಚನೆಯಂತೆ ಈ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆಯಾಗಿತ್ತು.

ಮಂಡಳಿಗೆ ಸಂಬಂಧಿಸಿ ₹ 100 ಕೋಟಿಯನ್ನು ಸಿಂಡಿಕೇಟ್‌ ಬ್ಯಾಂಕಿನಲ್ಲಿ ನಿಶ್ಚಿತ ಠೇವಣಿ ಇರಿಸುವ ಬದಲು ವ್ಯವಸ್ಥಾಪಕ ಮಂಜುನಾಥ್ ಮತ್ತು ಅದೇ ಬ್ಯಾಂಕಿನ ಉಪ ವ್ಯವಸ್ಥಾಪಕ ಜಯರಾಮ್‌ ಅವರು ಮಂಡಳಿಯ ಫೈನಾನ್ಸ್‌ ಅಧಿಕಾರಿ ಹುದ್ದೆಯನ್ನು ಮಹಮ್ಮದ್‌ ಮುಸ್ತಫಾ ಎಂಬ ವ್ಯಕ್ತಿಯ ಹೆಸರಿನಲ್ಲಿ ನಕಲಿಯಾಗಿ ಸೃಷ್ಟಿಸಿ, ಆ ಹೆಸರಿನಲ್ಲಿ ಚಾಲ್ತಿ ಖಾತೆ ತೆರೆದು ಅನಧಿಕೃತವಾಗಿ ಹಣ ವರ್ಗಾವಣೆ ಮಾಡಿದ್ದರು ಎಂಬ ಸಂಗತಿ ತನಿಖೆಯಿಂದ ಗೊತ್ತಾಗಿತ್ತು. 100 ಕೋಟಿಯಲ್ಲಿ 48 ಕೋಟಿಯನ್ನು ಚೆನ್ನೈ ನಗರದ 106 ಇತರ ಚಾಲ್ತಿ ಖಾತೆಗಳಿಗೆ ವಿವಿಧ ಹಂತಗಳಲ್ಲಿ ವರ್ಗಾವಣೆ ಮಾಡಿರುವುದು ಸಿಸಿಬಿ ತನಿಖೆಯಿಂದ ತಿಳಿದು ಬಂದಿತ್ತು.

Hot this week

ಕೆಎಎಸ್ 2011ರ ನೇಮಕಾತಿ ಅಕ್ರಮದ ತನಿಖಾ ವರದಿಗೆ ಕೊನೆ ಮೊಳೆ; ವಿಚಾರಣೆಯಿಲ್ಲದೇ ಪ್ರಕರಣ ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು; 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ...

ಗಂಗಾ ಕಲ್ಯಾಣ ಯೋಜನೆ ವಿದ್ಯುದ್ದೀಕರಣ; ವಾಸ್ತವಿಕ ವೆಚ್ಚದಲ್ಲಿ ಏರಿಕೆ, ಎಸ್ಕಾಂಗಳಿಗೆ ಆರ್ಥಿಕ ಸಂಕಷ್ಟ

ಬೆಂಗಳೂರು; ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣ ವಿದ್ಯುತ್ ಸರಬರಾಜು...

ಅಂಬೇಡ್ಕರ್, ಜಗಜೀವನ್ ರಾಂ ಪ್ರಶಸ್ತಿಗೆ ಲಾಬಿ!; ಸರಜೂ ಕಾಟ್ಕರ್ ಸೇರಿ ಹಲವರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯು ಪ್ರತೀ ಏಪ್ರಿಲ್ ತಿಂಗಳಲ್ಲಿ ನೀಡುವ ಡಾ...

ಗ್ಯಾರಂಟಿಗಳಿಂದ ಹೆಚ್ಚಿದ ಹಣಕಾಸಿನ ಒತ್ತಡ, ಶಾಸಕಾಂಗದ ಅನುಮೋದನೆಯಿಲ್ಲದೇ 10,035 ಕೋಟಿ ವೆಚ್ಚಕ್ಕೆ ಆದೇಶ

ಬೆಂಗಳೂರು; ರಾಜ್ಯ ಶಾಸಕಾಂಗದ ಅನುಮೋದನೆಗೆ ಮುಂಚಿತವಾಗಿಯೇ 10,035.13 ಕೋಟಿ ರು ವೆಚ್ಚಕ್ಕೆ...

ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ; ವರ್ಷವಾದರೂ ಇಲಾಖೆಗಳಿಂದ ಬಾರದ ಮಾಹಿತಿ, ಅಧಿಸೂಚನೆಗೂ ಕಿಮ್ಮತ್ತಿಲ್ಲ, ನೆನಪೋಲೆಯ ಕಾಲಹರಣ

ಬೆಂಗಳೂರು; ರಾಜ್ಯ ಸರ್ಕಾರದ ವಿರುದ್ಧ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು...

Topics

ಕೆಎಎಸ್ 2011ರ ನೇಮಕಾತಿ ಅಕ್ರಮದ ತನಿಖಾ ವರದಿಗೆ ಕೊನೆ ಮೊಳೆ; ವಿಚಾರಣೆಯಿಲ್ಲದೇ ಪ್ರಕರಣ ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು; 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ...

ಗಂಗಾ ಕಲ್ಯಾಣ ಯೋಜನೆ ವಿದ್ಯುದ್ದೀಕರಣ; ವಾಸ್ತವಿಕ ವೆಚ್ಚದಲ್ಲಿ ಏರಿಕೆ, ಎಸ್ಕಾಂಗಳಿಗೆ ಆರ್ಥಿಕ ಸಂಕಷ್ಟ

ಬೆಂಗಳೂರು; ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣ ವಿದ್ಯುತ್ ಸರಬರಾಜು...

ಅಂಬೇಡ್ಕರ್, ಜಗಜೀವನ್ ರಾಂ ಪ್ರಶಸ್ತಿಗೆ ಲಾಬಿ!; ಸರಜೂ ಕಾಟ್ಕರ್ ಸೇರಿ ಹಲವರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯು ಪ್ರತೀ ಏಪ್ರಿಲ್ ತಿಂಗಳಲ್ಲಿ ನೀಡುವ ಡಾ...

ಗ್ಯಾರಂಟಿಗಳಿಂದ ಹೆಚ್ಚಿದ ಹಣಕಾಸಿನ ಒತ್ತಡ, ಶಾಸಕಾಂಗದ ಅನುಮೋದನೆಯಿಲ್ಲದೇ 10,035 ಕೋಟಿ ವೆಚ್ಚಕ್ಕೆ ಆದೇಶ

ಬೆಂಗಳೂರು; ರಾಜ್ಯ ಶಾಸಕಾಂಗದ ಅನುಮೋದನೆಗೆ ಮುಂಚಿತವಾಗಿಯೇ 10,035.13 ಕೋಟಿ ರು ವೆಚ್ಚಕ್ಕೆ...

ಗೋವಾ ತಮ್ನಾರ್; ಭೂಮಿಯ ಗಡಿ ಗುರುತು, ಮರಗಳ ಗಣತಿ ಅಪೂರ್ಣ, ಆದರೂ ನಿರ್ವಹಣಾ ಯೋಜನೆ ಸಲ್ಲಿಕೆ

ಬೆಂಗಳೂರು; ಪಶ್ಚಿಮ ಘಟ್ಟದ ಕಾಳಿ ಹುಲಿ ಸಂರಕ್ಷಿತಾರಣ್ಯ ಸೇರಿ ಬರೋಬ್ಬರಿ 174...

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ...

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

Related Articles

Popular Categories

error: Content is protected !!