ಕೋವಿಡ್‌-19; ಸಚಿವರ ತವರು ಜಿಲ್ಲೆ ಬಳ್ಳಾರಿಯಲ್ಲಿ ಪ್ರಕರಣಗಳ ಸಂಖ್ಯೆ ಮುಚ್ಚಿಡಲಾಗುತ್ತಿದೆಯೇ?

ಬೆಂಗಳೂರು; ಯಾರ ಜಫ್ತಿಗೂ ಸಿಗದಂತೆ ನಾಗಾಲೋಟದಂತೆ ಓಡುತ್ತಿರುವ ಕೋವಿಡ್‌-19 ಸೋಂಕಿತರ ಪ್ರಕರಣಗಳ ಸಂಖ್ಯೆಯನ್ನು ರಾಜ್ಯ ಸರ್ಕಾರ ಮುಚ್ಚಿಡುತ್ತಿದೆ ಎಂಬ ಅನುಮಾನಗಳನ್ನು ಬಲಪಡಿಸುವುತ್ತ ಒಂದಷ್ಟು ಪುರಾವೆ ಲಭ್ಯವಾಗಿವೆ.


ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ತವರು ಜಿಲ್ಲೆ ಬಳ್ಳಾರಿಯಲ್ಲಿ ಸೋಂಕಿತರ ಸಂಖ್ಯೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿ ಮತ್ತು ಆರೋಗ್ಯ ಇಲಾಖೆ ಬಿಡುಗಡೆಗೊಳಿಸುವ ಪ್ರಕಟಣೆಯಲ್ಲಿ ಸಂಖ್ಯೆಯಲ್ಲಿ ವ್ಯತ್ಯಾಸವಿರುವುದು ಇದೀಗ ಬಹಿರಂಗವಾಗಿದೆ.


ಬಳ್ಳಾರಿ ಜಿಲ್ಲೆಯಲ್ಲಿ ಇಂದು ಒಟ್ಟು 104 ಪ್ರಕರಣಗಳು ಕೋವಿಡ್‌-19 ಸೋಂಕಿತ ಪ್ರಕರಣಗಳು ಖಚಿತಪಟ್ಟಿವೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಕಟಣೆ ಹೊರಡಿಸಿದ್ದರು. ಆದರೆ ರಾತ್ರಿ 8-30ರ ಸುಮಾರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆಗೊಳಿಸಿದ ಪ್ರಕಟಣೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಕೇವಲ 99 ಪ್ರಕರಣಗಳು ಖಚಿತಪಟ್ಟಿವೆ ಎಂದು ತಿಳಿಸಿದೆ.

ಜಿಲ್ಲೆಗಳಿಂದ ಅಂಕಿ ಸಂಖ್ಯೆಗಳನ್ನು ಕ್ರೋಢೀಕರಿಸುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂತಿಮವಾಗಿ ಪ್ರಕರಣಗಳ ಒಟ್ಟು ಸಂಖ್ಯೆಯನ್ನು ಮುಚ್ಚಿಡುತ್ತಿದೆ ಎಂಬ ಆರೋಪಕ್ಕೆ ಬಳ್ಳಾರಿ ಜಿಲ್ಲೆಯ ಅಂಕಿ ಸಂಖ್ಯೆಗಳೇ ಪುರಾವೆ ಒದಗಿಸಿದಂತಾಗಿದೆ.


ಬಳ್ಳಾರಿ ಜಿಲ್ಲಾಧಿಕಾರಿ ಪ್ರಕಾರ ಇಲ್ಲಿಯವರೆಗೆ ಒಟ್ಟು 3,90,240 ತಪಾಸಣೆಗೊಳಪಡಿಸಲಾಗಿದೆ. ಇಂದು 586 ಮಂದಿಯನ್ನು ತಪಾಸಣೆಗೊಳಪಡಿಸಲಾಗಿದೆ. ಒಟ್ಟು ಪ್ರಕರಣಗಳ ಪೈಕಿ 1,272 ಪ್ರಕರಣಗಳು ಖಚಿತಪಟ್ಟಿವೆ. ಹೊಸಪೇಟೆ, ಸಂಡೂರು, ಕೂಡ್ಲಿಗಿ,ಬಳ್ಳಾರಿ, ಹರಪನಹಳ್ಳಿಯಲ್ಲಿ ಖಚಿತ ಪಟ್ಟ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಈ ಪೈಕಿ ಬಳ್ಳಾರಿಯ 4 ಮಂದಿ ಆರೋಗ್ಯ ಸಿಬ್ಬಂದಿಗೆ ಕೋವಿಡ್‌ ಸೋಂಕಿರುವುದು ಖಚಿತಪಟ್ಟಿದೆ.

the fil favicon

SUPPORT THE FILE

Latest News

Related Posts