Sunday | August 30, 2026 |

‘ದಿ ಫೈಲ್‌’ ವರದಿ ಪರಿಣಾಮ; ಲೋಕಾಯುಕ್ತ ಮೆಟ್ಟಿಲೇರಿದ ಕೋವಿಡ್‌ ಆಂಬುಲೆನ್ಸ್‌ ಬಿಲ್ವಿದ್ಯೆ ಹಗರಣ

ಬೆಂಗಳೂರು; ‘ದಿ ಫೈಲ್‌’ ಹೊರಗೆಡವಿದ್ದ ಆಂಬುಲೆನ್ಸ್‌ ಸೇರಿದಂತೆ ಖಾಸಗಿ ವಾಹನಗಳ ಏಜೆನ್ಸಿಗಳ ಬಿಲ್ವಿದ್ಯೆ ಪ್ರಕರಣ ಇದೀಗ ಲೋಕಾಯುಕ್ತ ಮೆಟ್ಟಿಲೇರಿದೆ.

ಕೋವಿಡ್‌-19ರ ಜಾಗೃತಿ ಕಾರ್ಯಕ್ರಮಗಳ ಹೆಸರಿನಲ್ಲಿ ಖಾಸಗಿ ವಾಹನಗಳನ್ನು ಬಳಸದೆಯೇ 5 ಕೋಟಿ ರು.ಗೂ ಹೆಚ್ಚಿನ ಮೊತ್ತಕ್ಕೆ ಬಿಲ್‌ ಸೃಷ್ಟಿಸಿರುವ ಕರ್ನಾಟಕ ಡ್ರಗ್‌ ಅಂಡ್‌ ಲಾಜಿಸ್ಟಿಕ್ಸ್‌ ಸಂಸ್ಥೆಯ ಬಿಲ್ವಿದ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಡಾ ಸಾರ್ವಭೌಮ ಬಗಲಿ ಅವರು ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದಾರೆ. ವಿಶೇ‍ಷವೆಂದರೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್‌ ಅವರನ್ನು ದೂರಿನಲ್ಲಿ ಮೊದಲ ಪ್ರತಿವಾದಿಯನ್ನಾಗಿಸಲಾಗಿದೆ.

ಅದೇ ರೀತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಪಂಕಜಕುಮಾರ್‌ ಪಾಂಡೆ, ಓಂ ಪ್ರಕಾಶ್‌ ಪಾಟೀಲ್‌, ಸ್ವತಂತ್ರಕುಮಾರ್‌ ಬಣಕಾರ್‌ ಸೇರಿದಂತೆ ಇನ್ನಿತರೆ ಅಧಿಕಾರಿಗಳನ್ನು ಪ್ರತಿವಾದಿಯನ್ನಾಗಿಸಲಾಗಿದೆ. ಈ ದೂರಿನ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಕೋವಿಡ್‌ ಹೆಸರಿನಲ್ಲಿ ನಡೆದಿದ್ದ ಭ್ರಷ್ಟಾಚಾರದ ಮತ್ತೊಂದು ಮುಖವನ್ನು ‘ದಿ ಫೈಲ್‌’ 2020ರ ಮೇ 25ರಂದೇ ಅನಾವರಣಗೊಳಿಸಿತ್ತು.

ಕೋವಿಡ್‌ ಬಿಲ್ವಿದ್ಯೆ; ವಾಹನ ಬಳಸದಿದ್ದರೂ 5 ಕೋಟಿ ರು.ಪಾವತಿ?

ಕೊರೊನಾ ವೈರಾಣು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಟೆಂಪೋ ಟ್ರಾವಲರ್‌, ಇನ್ನೋವಾ, ಆಂಬುಲೆನ್ಸ್‌ ಮತ್ತು ಟ್ಯಾಕ್ಸಿ ಸೇರಿದಂತೆ ಒಟ್ಟು 396 ವಾಹನಗಳನ್ನು ಖಾಸಗಿಯವರಿಂದ ಬಾಡಿಗೆ ಆಧಾರದ ಮೇಲೆ ಪಡೆದುಕೊಂಡಿತ್ತು. ಬಹುತೇಕ ವಾಹನಗಳು ಅಧಿಕಾರಿಗಳ ಸಂಬಂಧಿಕರಿಗೆ ಸೇರಿವೆ ಎಂಬ ಆರೋಪಗಳು ಕೇಳಿ ಬಂದಿದ್ದವು.

46 ಟೆಂಪೋ ಟ್ರಾವಲರ್‌ಗಳಿಗೆ 1,20,000 ರು., 64 ಇನ್ನೋವಾ ವಾಹನಗಳಿಗೆ 10,4,000 ರು, 55 ಆಂಬುಲೆನ್ಸ್‌ಗಳಿಗೆ 75,000 ರು., ಮಾಸಿಕ ಬಾಡಿಗೆ ಲೆಕ್ಕಾಚಾರದಲ್ಲಿ ನೀಡಿದ್ದರೆ, 32 ಟ್ಯಾಕ್ಸಿಗಳಿಗೆ ದಿನದ ಬಾಡಿಗೆ ಲೆಕ್ಕಾಚಾರದಲ್ಲಿ 3,200 ರು. ಸೇರಿ 3 ತಿಂಗಳ ಅವಧಿಯವರೆಗೆ ಅಧಿಕಾರಿಗಳು ಒಟ್ಟು 5.81 ಕೋಟಿ ರು. ಬಿಲ್‌ ಮಾಡಿದ್ದಾರೆ ಎಂದು ‘ದಿ ಫೈಲ್‌’ ವರದಿ ಪ್ರಕಟಿಸಿತ್ತು.

‘ಆರೋಗ್ಯ ಇಲಾಖೆಯ 130 ಮತ್ತು ಇತರೆ ಇಲಾಖೆಗಳು ಆರೋಗ್ಯ ಇಲಾಖೆಗೆ 69 ವಾಹನಗಳು ಸೇರಿದಂತೆ ಒಟ್ಟು 199 ವಾಹನಗಳಿವೆ. ಈ ವಾಹನಗಳನ್ನಷ್ಟೇ ಬಳಸಿಕೊಂಡಿರುವ ಕರ್ನಾಟಕ ಡ್ರಗ್ಸ್‌ ಅಂಡ್‌ ಲಾಜಿಸ್ಟಿಕ್ಸ್‌ ಸಂಸ್ಥೆ, ಖಾಸಗಿ ವಲಯದ 396 ವಾಹನಗಳ ಪೈಕಿ ಬಹುತೇಕ ವಾಹನಗಳನ್ನು ಬಳಸಿಕೊಂಡಿಲ್ಲ. ಆದರೂ ವಾಹನಗಳನ್ನು ಬಳಸಲಾಗಿದೆ ಎಂದು ಕೋವಿಡ್‌ 19ರ ಹೆಸರಿನಲ್ಲಿ ಬಿಡುಗಡೆಯಾಗಿರುವ ಹಣವನ್ನು ದುರುಪಯೋಗಪಡಿಸಿಕೊಂಡಿದ್ದರು ಎನ್ನಲಾಗಿದೆ.

ಖಾಸಗಿ ವಾಹನಗಳನ್ನು ಎಷ್ಟು ಪ್ರಮಾಣದಲ್ಲಿ ಬಳಸಲಾಗಿದೆ ಅಥವಾ ಬಳಸಲಾಗಿದೆಯೇ ಇಲ್ಲವೇ ಎಂಬ ಬಗ್ಗೆ ವಾಹನಗಳ ಲಾಗ್‌ ಪುಸ್ತಕವನ್ನು ತನಿಖೆಗೊಳಪಡಿಸಿದರೆ ಇದರ ಸತ್ಯಾಂಶ ಹೊರಬರಲಿದೆ ಎನ್ನುತ್ತಾರೆ ಅಧಿಕಾರಿಯೊಬ್ಬರು. ಪ್ರತಿ ಕಿ ಮೀ ಗೆ ನಿಗದಿಪಡಿಸಿರುವ ದರದ ಜತೆಗೆ ಇಂಧನ ವೆಚ್ಚವನ್ನೂ ಕರ್ನಾಟಕ ಡ್ರಗ್ಸ್‌ ಅಂಡ್‌ ಲಾಜಿಸ್ಟಿಕ್‌ ಸಂಸ್ಥೆ ಭರಿಸಿದೆ ಎಂದು ಗೊತ್ತಾಗಿದೆ.

‘ಮಾಸಿಕ ಬಾಡಿಗೆ ಅಧಾರದಲ್ಲಿ ಪಡೆದುಕೊಂಡಿರುವ ವಾಹನಗಳು ದಿನವೊಂದರಲ್ಲಿ ಎಷ್ಟು ಕಿ.ಮೀ.ವರೆಗೆ ಪ್ರಯಾಣಿಸಿದೆ, ಯಾವ ಅಧಿಕಾರಿಗಳು ಯಾವ ಸ್ಥಳಕ್ಕೆ ತೆರಳಿದ್ದರು ಎಂಬುದನ್ನು ತನಿಖೆಗೊಳಪಡಿಸಿದಲ್ಲಿ ವಾಹನಗಳ ಬಳಕೆ ನಿಜಾಂಶ ಹೊರಬೀಳಲಿದೆ,’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕರ್ನಾಟಕ ಡ್ರಗ್‌ ಅಂಡ್‌ ಲಾಜಿಸ್ಟಿಕ್‌ ಸಂಸ್ಥೆಯಲ್ಲಿ ಹಲವು ಅಕ್ರಮಗಳು ನಡೆಯುತ್ತಿರುವ ಆರೋಪಗಳು ಕೇಳಿ ಬರುತ್ತಿದ್ದರೂ ಸಚಿವ ಬಿ ಶ್ರೀರಾಮುಲು ಅವರು ಮಾತ್ರ ಯಾವುದರಲ್ಲಿಯೂ ಅಕ್ರಮ ನಡೆದಿಲ್ಲ ಎಂದೇ ಹೇಳಿದ್ದರು. ಅಲ್ಲದೆ  ಡಾ ಕೆ ಸುಧಾಕರ್‌ ಅವರು ಯಾವುದೇ ಹಗರಣವಾಗಿಲ್ಲ ಎಂದು ವಿಧಾನಸಭೆ ಅಧಿವೇಶನದಲ್ಲಿಯೂ ಹೇಳಿದ್ದರು.

ಅಕ್ರಮ ಎಸಗಿರುವ ಪ್ರಕರಣಗಳು ದಾಖಲೆ ಸಮೇತ ಬಹಿರಂಗವಾಗುತ್ತಿದ್ದರೂ ಅಧಿಕಾರಿಗಳ ವಿರುದ್ಧ ಕ್ರಮವಿರಲಿ, ಆರೋಪಕ್ಕೆ ಗುರಿಯಾಗಿರುವ ಅಧಿಕಾರಿಗಳನ್ನು ಬೇರೆಡೆ ವರ್ಗಾವಣೆ ಮಾಡುವ ಗೋಜಿಗೂ ಹೋಗಿಲ್ಲ. ಇದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿತ್ತು.

ಪಿಪಿಇ ಕಿಟ್‌, ಸ್ಯಾನಿಟೈಸರ್‌, ಗ್ಲುಕೋಸ್‌, ವೆಂಟಿಲೇಟರ್‌ ಸೇರಿದಂತೆ ಇನ್ನಿತರೆ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿವೆ ಎಂಬ ಬಲವಾದ ಆರೋಪಗಳು ಕೇಳಿ ಬಂದಿದ್ದವು. ಈ ಎಲ್ಲಾ ಅಕ್ರಮಗಳ ಕುರಿತು ‘ದಿ ಫೈಲ್‌’ ಸರಣಿ ವರದಿಗಳನ್ನು ಪ್ರಕಟಿಸಿದ್ದನ್ನು ಸ್ಮರಿಸಬಹುದು.

Hot this week

ಬೇನಾಮಿ ಆಸ್ತಿ ಹೊಂದಿದ ಆರೋಪ; ವಿಟಿಯು ಕುಲಪತಿ ವಿದ್ಯಾಶಂಕರ್ ಗೆ ಆದಾಯ ತೆರಿಗೆ ಇಲಾಖೆ ನೋಟೀಸ್‌

ಬೆಂಗಳೂರು;  ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕುರಿತು ಆದಾಯ...

‘ಅದಾನಿ ಕಂಪನಿಯಿಂದಲೇ ವಿವಾದ, 850 ಕೋಟಿ ರು ಪಾವತಿಸುವ ಲಕ್ಷಣಗಳೂ ಗೋಚರಿಸುತ್ತಿಲ್ಲ, ಅಧಿಕಾರಿಗಳ ಕೈ ಕಟ್ಟಿ ಹಾಕಿದೆ’; ಸರ್ಕಾರದ ಅಸಹಾಯಕತೆ ಬಹಿರಂಗ

ಬೆಂಗಳೂರು;  'ಕಲ್ಬುರ್ಗಿಯ ವಾಡಿಯಲ್ಲಿ  ಸುಣ್ಣದ ಕಲ್ಲು ಗಣಿ ಗುತ್ತಿಗೆ ಪ್ರದೇಶದಲ್ಲಿ ಗಣಿಗಾರಿಕೆ...

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ಬೆಂಗಳೂರು;  ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ...
Please Scan to make Your Contribution

Topics

ಬೇನಾಮಿ ಆಸ್ತಿ ಹೊಂದಿದ ಆರೋಪ; ವಿಟಿಯು ಕುಲಪತಿ ವಿದ್ಯಾಶಂಕರ್ ಗೆ ಆದಾಯ ತೆರಿಗೆ ಇಲಾಖೆ ನೋಟೀಸ್‌

ಬೆಂಗಳೂರು;  ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕುರಿತು ಆದಾಯ...

‘ಅದಾನಿ ಕಂಪನಿಯಿಂದಲೇ ವಿವಾದ, 850 ಕೋಟಿ ರು ಪಾವತಿಸುವ ಲಕ್ಷಣಗಳೂ ಗೋಚರಿಸುತ್ತಿಲ್ಲ, ಅಧಿಕಾರಿಗಳ ಕೈ ಕಟ್ಟಿ ಹಾಕಿದೆ’; ಸರ್ಕಾರದ ಅಸಹಾಯಕತೆ ಬಹಿರಂಗ

ಬೆಂಗಳೂರು;  'ಕಲ್ಬುರ್ಗಿಯ ವಾಡಿಯಲ್ಲಿ  ಸುಣ್ಣದ ಕಲ್ಲು ಗಣಿ ಗುತ್ತಿಗೆ ಪ್ರದೇಶದಲ್ಲಿ ಗಣಿಗಾರಿಕೆ...

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ಬೆಂಗಳೂರು;  ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ...

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

Related Articles

Popular Categories

error: Content is protected !!