Sunday | September 6, 2026 |

ಪಿ ಯು ಉಪನ್ಯಾಸಕರ ಬಡ್ತಿ; ತಮ್ಮದೇ ಶಿಫಾರಸ್ಸು ಒಪ್ಪದ ಐಎಎಸ್‌ ಕುಮಾರ್‌ ನಾಯಕ್‌

ಬೆಂಗಳೂರು; ಪಿ ಯು ಕಾಲೇಜುಗಳ ಉಪನ್ಯಾಸಕರು ಪದವಿ ಕಾಲೇಜುಗಳಿಗೆ ಬಡ್ತಿ ಹೊಂದುವ ಬಗ್ಗೆ 9 ವರ್ಷದ ಹಿಂದೆ ಶಿಫಾರಸ್ಸು ಮಾಡಿದ್ದ ಐಎಎಸ್‌ ಅಧಿಕಾರಿ ಕುಮಾರ್‌ನಾಯಕ್‌ ಅವರು ಇದೀಗ ತಾವೇ ಮಾಡಿದ್ದ ಶಿಫಾರಸ್ಸನ್ನು ಒಪ್ಪದಿರುವುದು ವಿರೋಧಾಭಾಸಕ್ಕೆ ಕಾರಣವಾಗಿದೆ.

ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಮತ್ತು ರಾಜ್ಯ ಅರ್ಹತಾ ಪರೀಕ್ಷೆ (ಎಸ್‌ಎಲ್‌ಇಟಿ)ಯಲ್ಲಿ ತೇರ್ಗಡೆ ಹೊಂದಿ ಅರ್ಹತೆ ಗಳಿಸಿದ್ದ ಪಿ ಯು ಉಪನ್ಯಾಸಕರು ಪದವಿ ಕಾಲೇಜುಗಳಿಗೆ ಬಡ್ತಿ ನೀಡಲು ಪ್ರಾಥಮಿಕ, ಪ್ರೌಢಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿದ್ದ ಕುಮಾರ್‌ನಾಯಕ್‌ ಅವಧಿಯಲ್ಲಿ ಶಿಫಾರಸ್ಸು ಮಾಡಿದ್ದರು. ಆದರೀಗ ಅವರೇ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ. ಆದರೆ ತಾವು ಮಾಡಿದ್ದ ಶಿಫಾರಸ್ಸನ್ನೇ ಈಗ ಒಪ್ಪಿಲ್ಲ.

ನೆಟ್‌ ಮತ್ತು ಸ್ಲೆಟ್‌ ಪರೀಕ್ಷೆಯಲ್ಲಿ ಅರ್ಹತೆ ಗಳಿಸಿ ಪದವಿ ಕಾಲೇಜುಗಳಿಗೆ ಬಡ್ತಿ ಹೊಂದುವ ನಿರೀಕ್ಷೆಯಲ್ಲಿದ್ದ ಪಿ ಯು ಉಪನ್ಯಾಸಕರಲ್ಲಿ ಹೊಸ ಆಸೆ ಚಿಗುರಿಸಿದ್ದ ಕುಮಾರ್‌ನಾಯಕ್‌ ಅವರು ತಾವು ಮಾಡಿದ್ದ ಶಿಫಾರಸ್ಸನ್ನು ಜಾರಿ ಮಾಡಲು ಸಾಧ್ಯವೇ ಇಲ್ಲ ಎಂದು ಷರಾ ಬರೆದಿರುವುದು ವಿಪರ್ಯಾಸದ ಸಂಗತಿಯಾಗಿದೆ.

ಕುಮಾರ್‌ ನಾಯಕ್‌ ಅವರು ಕಳೆದ 9 ವರ್ಷಗಳ ಹಿಂದೆ ಸರ್ಕಾರಕ್ಕೆ ಮಾಡಿದ್ದ ಒಟ್ಟು 6 ಶಿಫಾರಸ್ಸುಗಳನ್ನು ಮಾಡಿದ್ದರು. ಈಗಿನ ಸರ್ಕಾರ 2ನ್ನು ಮಾತ್ರ ಜಾರಿಗೊಳಿಸಿ ಇನ್ನೂ 4 ಶಿಫಾರಸ್ಸುಗಳನ್ನು ಪರಿಶೀಲನೆಯಲ್ಲಿಟ್ಟಿದೆ. ಈ ಪೈಕಿ 3 ಶಿಫಾರಸ್ಸುಗಳನ್ನು ಜಾರಿಗೆ ಸಂಬಂಧಿಸಿದಂತೆ ಇಲಾಖೆಗಳ ಸಹಮತಿ ಇನ್ನೂ ದೊರೆತಿಲ್ಲ.

ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತು 15 ವರ್ಷಗಳ ಸೇವೆ ಪೂರೈಸಿರುವ ಹಾಗೂ ಬೋಧನಾ ವಿಷಯದಲ್ಲಿ ಶೇ. 55ರಷ್ಟು ಅಂಕ ಗಳಿಸಿ ಎನ್‌ಇಟಿ/ಎಸ್‌ಎಲ್‌ಇಟಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಉಪನ್ಯಾಸಕರಿಗೆ ಪದವಿ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ಉನ್ನತ ಶಿಕ್ಷಣ ಇಲಾಖೆಯ ಕಾಲೇಜು ಶಿಕ್ಷಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರುವುದು ಸೂಕ್ತ ಎಂದು ಕುಮಾರ್‌ ನಾಯಕ್‌ ಅವರು ಶಿಫಾರಸ್ಸು ಮಾಡಿದ್ದರು.

ಎಂ ಫಿಲ್‌ ಪಡೆದ ಉಪನ್ಯಾಸಕರಿಗೆ ಒಂದು ಹೆಚ್ಚುವರಿ ವಾರ್ಷಿಕ ವೇತನ ಬಡ್ತಿ ಹಾಗೂ ಪಿಎಚ್‌ಡಿ ಪಡೆದ ಉಪನ್ಯಾಸಕರಿಗೆ ಎರಡು ಹೆಚ್ಚುವರಿ ವಾರ್ಷಿಕ ವೇತಗನ ಬಡ್ತಿ ಮಂಜೂರು ಮಾಡುವ ಸಂಬಂಧ ಕುಮಾರ್‌ ನಾಯಕ್‌ ಅವರು ಮಾಡಿದ್ದ ಶಿಫಾರಸ್ಸು ಇನ್ನೂ ಸರ್ಕಾರದ ಹಂತದಲ್ಲೇ ಪರಿಶೀಲನೆಯಲ್ಲಿದೆ.

ಅದೇ ರೀತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆಯನ್ನು ಸಕ್ರಮಗೊಳಿಸುವ ಕುರಿತು ಸಂಬಂಧಿಸಿದ ಇಲಾಖೆ ಜತೆಗೆ ಪತ್ರ ವ್ಯವಹಾರವನ್ನು ಮುಂದುವರೆಸಿರುವ ಸರ್ಕಾರ, ಗುತ್ತಿಗೆ ಆಧಾರದಲ್ಲಿ ನೇಮಕವಾಗಿ ಸೇವಾ ಸಕ್ರಮಗೊಂಡ ಉಪನ್ಯಾಸಕರ ಕುರಿತಂಎ ವಿಧಾನಪರಿಷತ್ತಿನ ಸದಸ್ಯ ಕೆ ಟಿ ಶ್ರೀಕಂಠೇಗೌಡ ಅವರ ನೇತೃತ್ವದ ಸಮಿತಿ ವರದಿ ಸಲ್ಲಿಸಿದ ನಂತರ ಆ ಪ್ರಸ್ತಾವನೆಯನ್ನು ಪರಿಶೀಲಿಸಲು ನಿರ್ಧರಿಸಿದೆ.

ಕುಮಾರ್‌ನಾಯಕ್‌ ಅವರು ಮಾಡಿದ್ದ ಶಿಫಾರಸ್ಸುಗಳ ಪೈಕಿ ಜೂನ್‌ 2016ರಂದು ಕಾರ್ಯನಿರ್ವಹಿಸುತ್ತಿರುವ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರುಗಳಿಗೆ ಒಂದು ಹೆಚ್ಚುವರಿ ವೇತನ ಬಡ್ತಿ ಮಂಜೂರಾಗಿದೆ. ನಿಯೋಜನೆ ಭತ್ಯೆಯನ್ನು 300 ರು.ಗಳಿಂದ 750 ಕ್ಕೆ ಹೆಚ್ಚಿಸಿ ಆದೇಶಿಸಿದೆ. ಪ್ರಸ್ತುತ 500 ರು. ಗಳ ವಿಶೇಷ ಭತ್ಯೆಯನ್ನು ಪಡೆಯುತ್ತಿರುವ ಉಪನ್ಯಾಸಕರುಗಳಿಗೂ ಇದನ್ನು ಮುಂದುವರೆಸಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಾಂಶುಪಾಲರಿಗೆ ಮಾಸಿಕ 1,000 ರು.ಗಳ ವಿಶೇಷ ಭತ್ಯೆಯನ್ನೂ ಮಂಜೂರು ಮಾಡಿದೆ. ಸರ್ಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕರು, ಪ್ರಾಂಶುಪಾಲರು ಹಾಗೂ ಪ್ರೌಢಶಾಲೆ ಸಹ ಶಿಕ್ಷಕರ ವೇತನ ತಾರತಮ್ಯ ಸರಿಪಡಿಸಲು ಕುಮಾರ್ ನಾಯಕ್ ವರದಿ ಅನುಷ್ಠಾನವಾಗಬೇಕಿದೆ. ಇದಕ್ಕಾಗಿ 190 ಕೋಟಿ ರೂ. ಅನುದಾನ ನೀಡಬೇಕು ಎಂದು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರಾಗಿದ್ದ ಕಿಮ್ಮನೆ ರತ್ನಾಕರ ಅವರು ಒತ್ತಾಯಿಸಿದ್ದನ್ನು ಸ್ಮರಿಸಬಹುದು.

Hot this week

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಬುಕ್ ಬ್ರಹ್ಮ ಸಾಹಿತ್ಯ ಉತ್ಸವಕ್ಕೆ 5 ಲಕ್ಷ ರು ಅನುದಾನ; ನೋಂದಣಿಯಾಗಿ 3 ವ‍ರ್ಷ ಪೂರೈಸದ ಬುಕ್‌ ಬ್ರಹ್ಮ ಫೌಂಡೇಷನ್‌ಗೆ ಒಂದು ಬಾರಿ ವಿನಾಯಿತಿ

ಬೆಂಗಳೂರು;  ಅನುದಾನ ಪಡೆಯುವ ಸಂಘ, ಸಂಸ್ಥೆಗಳು ನೋಂದಣಿಯಾಗಿ  3 ವರ್ಷಗಳನ್ನು ಪೂರೈಸಿರಬೇಕು...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...
Please Scan to make Your Contribution

Topics

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...

Related Articles

Popular Categories

error: Content is protected !!