Saturday | October 17, 2026 |

ಸೇಫ್‌ ಸಿಟಿ ಟೆಂಡರ್‌; ದೂರುಗಳು ಸಲ್ಲಿಕೆಯಾಗಿದ್ದರೂ ಕ್ರಮ ವಹಿಸದ ಸರ್ಕಾರ

ಬೆಂಗಳೂರು; ನಿರ್ಭಯ ಅನುದಾನದಡಿಯ 612 ಕೋಟಿ ರು.ವೆಚ್ಚದಲ್ಲಿ ಸೇಫ್‌ ಸಿಟಿ ಯೋಜನೆಯ ಟೆಂಡರ್‌ ಪ್ರಕ್ರಿಯೆಯಲ್ಲಿ ಲೋಪಗಳು ನಡೆದಿವೆ ಎಂಬ ದೂರುಗಳು ಕಳೆದ ಮಾರ್ಚ್‌ ಮತ್ತು ಏಪ್ರಿಲ್‌ನಲ್ಲೇ ಸರ್ಕಾರಕ್ಕೆ ಹಲವು ದೂರುಗಳು ಸಲ್ಲಿಕೆಯಾಗಿದ್ದವು. ಆದರೆ ಈ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಹಿಂದಿನ ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಅವರು ಯಾವುದೇ ಕ್ರಮ ವಹಿಸಿರಲಿಲ್ಲ.

ಟೆಂಡರ್‌ ಪ್ರಕ್ರಿಯೆಯ ಕುರಿತು ರಾಜ್ಯ ಗೃಹ ಇಲಾಖೆಯ ಕಾರ್ಯದರ್ಶಿ ರೂಪ ಮೌದ್ಗಿಲ್‌ ಮತ್ತು ಹೆಚ್ಚುವರಿ ಪೊಲೀಸ್‌ ಕಮಿಷನರ್‌ ಹೇಮಂತ್‌ ನಿಂಬಾಳ್ಕರ್‌ ನಡುವೆ ನಡೆಯುತ್ತಿರುವ ಜಟಾಪಟಿ ಬೆನ್ನಲ್ಲೇ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ದೂರುಗಳು ಮುನ್ನೆಲೆಗೆ ಬಂದಿವೆ.
ಸರ್ಕಾರಕ್ಕೆ ಸಲ್ಲಿಕೆಯಾಗಿರುವ ದೂರುಗಳ ಕುರಿತು ಕ್ರಮ ಕೈಗೊಳ್ಳಲು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ ಜಾಗೃತ ವಿಭಾಗವು ಒಳಾಡಳಿತ ಇಲಾಖೆಗೆ ಪತ್ರ ಬರೆದಿರುವುದನ್ನು ಹೊರತುಪಡಿಸಿದರೆ ಈವರೆವಿಗೂ ಯಾವುದೇ ಕ್ರಮ ವಹಿಸಿಲ್ಲ ಎಂದು ತಿಳಿದು ಬಂದಿದೆ.

ದೂರುಗಳನ್ನು ಗಂಭೀರವಾಗಿ ಪರಿಶೀಲಿಸದೆಯೇ ಟೆಂಡರ್ ಪ್ರಕ್ರಿಯೆ ನಡೆಸಲು ಹೆಚ್ಚುವರಿ ಪೊಲೀಸ್‌ ಆಯುಕ್ತರಿಗೆ ಅನುಮತಿ ದೊರೆತಿದೆಯೇ ದೂರುಗಳನ್ನು ಇತ್ಯರ್ಥಗೊಳಿಸದೆಯೇ ಟೆಂಡರ್‌ ಪ್ರಕ್ರಿಯೆ ನಡೆಸಲು ಅನುಮತಿ ನೀಡಿದ್ದಾದರೂ ಹೇಗೆ ಎಂಬ ಪ್ರಶ್ನೆಗಳಿಗೆ ಸರ್ಕಾರ ಈವರೆವಿಗೂ ಯಾವುದೇ ಉತ್ತರ ನೀಡಿಲ್ಲ.

ಟೆಂಡರ್‌ ಪ್ರಕ್ರಿಯೆಯಲ್ಲಿ ಕಂಡು ಬಂದಿದೆ ಎನ್ನಲಾಗಿರುವ ಹಲವು ಲೋಪಗಳನ್ನು ಮರೆಮಾಚಿಸಲೆತ್ನಿಸಿರುವ ಪೊಲೀಸ್‌ ಇಲಾಖೆಯ ಉನ್ನತ ಅಧಿಕಾರಿಗಳ ಗುಂಪೊಂದು ಇಡೀ ಪ್ರಕರಣದಲ್ಲಿ ಸರ್ಕಾರವನ್ನು ದಿಕ್ಕು ತಪ್ಪಿಸಲೆತ್ನಿಸಿದೆ ಎಂಬ ಆರೋಪಗಳು ಕೇಳಿ ಬಂದಿವೆ.
ಸಚಿವ ಸಂಪುಟವನ್ನು ಬದಿಗಿರಿಸಿ ನಿರ್ಭಯ ಅನುದಾನದಡಿಯಲ್ಲಿ 612 ಕೋಟಿ ರು.ಮೊತ್ತದಲ್ಲಿ ಸಿಸಿಟಿವಿ ಅಳವಡಿಸಲು ಮರು ಟೆಂಡರ್‌ ಕರೆಯಲು ಮುಂದಾಗಿದ್ದನ್ನು ಕಳೆದ ನವೆಂಬರ್‌ನಲ್ಲಿ ‘ದಿ ಫೈಲ್‌’ ಹೊರಗೆಡವಿತ್ತು.

ಪ್ರಕರಣ ಹಿನ್ನೆಲೆ

ಬೆಂಗಳೂರು ನಗರದಲ್ಲಿ ನಿರ್ಭಯ ಯೋಜನೆಯಡಿ ಸೇಫ್‌ ಸಿಟಿ ಪ್ರಾಜೆಕ್ಟ್‌ನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರವು 667.00 ಕೋಟಿ ರು.ಗೆ ಮಂಜೂರಾತಿ ನೀಡಿತ್ತು. ಇದರಲ್ಲಿ ಕೇಂದ್ರದ ಪಾಲಿನ 167.26 ಕೋಟಿ ಹಾಗೂ ರಾಜ್ಯ ಸರ್ಕಾರದಿಂದ 111.56 ಕೋಟಿ ಒಟ್ಟು 278.76 ಕೋಟಿ ರು. ಅನುದಾಕ್ಕೆ ಮಂಜೂರಾತಿ ದೊರೆತಿದೆ.

ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಾಜ್ಯ ಉನ್ನತ ಮಟ್ಟದ ಸಭೆ ನಡೆದಿತ್ತು. ಟೆಂಡರ್‌ ಪ್ರಕ್ರಿಯೆ ಕೈಗೊಳ್ಳಲು 2019ರ ಸೆಪ್ಟಂಬರ್‌ 7ರಂದು ಟೆಂಡರ್‌ ಆಹ್ವಾನ ಸಮಿತಿ, ಟೆಂಡರ್‌ ಪರಿಶೀಲನಾ ಸಮಿತಿ ಮತ್ತು ಅಂಗೀಕಾರ ಸಮಿತಿಯನ್ನು ಸರ್ಕಾರ ರಚಿಸಿತ್ತು. ಈ ಪೈಕಿ ಟೆಂಡರ್‌ ಆಹ್ವಾನ ಮತ್ತು ಪರಿಶೀಲನಾ ಸಮಿತಿಗೆ ಹೆಚ್ಚುವರಿ ಪೊಲೀಸ್‌ ಆಯುಕ್ತರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು ಎಂಬುದು ತಿಳಿದು ಬಂದಿದೆ.

ಪ್ರಧಾನಿ ಕಚೇರಿ ಮೆಟ್ಟಿಲೇರಿತ್ತು ಟೆಂಡರ್‌ ಪ್ರಕರಣ

ಈ ಯೋಜನೆಗೆ ಆರಂಭದಲ್ಲಿ ಪೊಲೀಸ್‌ ಇಲಾಖೆ ಕರೆದಿದ್ದ ಟೆಂಡರ್‌ ಪ್ರಕ್ರಿಯೆ ಮತ್ತು ಕಂಪನಿಯನ್ನು ಅಯ್ಕೆ ಮಾಡಿದ್ದ ಪ್ರಕ್ರಿಯೆಯಲ್ಲಿ ಲೋಪಗಳಾಗಿವೆ ಎಂದು ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಪ್ರಧಾನಿ ಕಚೇರಿಗೆ 2020ರ ಜೂನ್‌ 29ರಂದು ದೂರು ಸಲ್ಲಿಸಿತ್ತು. ಟೆಂಡರ್‌ನಲ್ಲಿ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌, ಲಾರ್ಸನ್‌ ಅಂಡ್‌ ಟೋಬ್ರೋ (ಎಲ್‌ ಅಂಡ್‌ ಟಿ), ಮಾಟ್ರಿಕ್ಸ್‌ ಸೆಕ್ಯುರಿಟಿ ಅಂಡ್‌ ಸರ್ವೇಲೆಯನ್ಸ್‌ ಪ್ರೈವೈಟ್‌ ಲಿಮಿಟೆಡ್‌, ಎನ್‌ಸಿಸಿ ಲಿಮಿಟೆಡ್‌ ಭಾಗವಹಿಸಿದ್ದವು.

ಹಿತಾಸಕ್ತಿ ಸಂಘರ್ಷ ಆರೋಪ

ಟೆಂಡರ್‌ನಲ್ಲಿ ಭಾಗವಹಿಸಿದ್ದ ಮ್ಯಾಟ್ರಿಕ್ಸ್‌ ಮತ್ತು ಎನ್‌ಸಿಸಿ ನಿರ್ದೇಶಕರೊಬ್ಬರು ಎರಡೂ ಕಂಪನಿಯಲ್ಲಿ ಶೇ.5ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಷೇರು ಹೊಂದಿದ್ದರು. ಹೀಗಾಗಿ ಎರಡೂ ಕಂಪನಿಗಳಿಗೆ ಅವಕಾಶಕೊಟ್ಟಲ್ಲಿ ಇದು ಹಿತಾಸಕ್ತಿ ಸಂಘರ್ಷವಾಗಲಿದೆ. ಹಾಗೆಯೇ ಆರ್‌ಎಫ್‌ಪಿ ಷರತ್ತುಗಳನ್ನು ನೇರವಾಗಿ ಉಲ್ಲಂಘಿಸಿದೆ ಎಂದು ಬಿಇಎಲ್‌ ಕಂಪನಿ ಪ್ರಧಾನಿಗೆ ಸಲ್ಲಿಸಿದ್ದ ದೂರಿನಲ್ಲಿ ವಿವರಿಸಿತ್ತು ಎಂಬುದು ತಿಳಿದು ಬಂದಿದೆ.

ಅನರ್ಹಗೊಂಡಿದ್ದ ಎನ್‌ಸಿಸಿ

ಆರ್‌ಎಫ್‌ಪಿ ಪ್ರಕಾರ ದಾಖಲೆಗಳನ್ನು ನೀಡದ ಕಾರಣ ಟೆಂಡರ್‌ ಸಮಿತಿಯು ಎನ್‌ಸಿಸಿ ಲಿಮಿಟೆಡ್‌ನ್ನು ಅನರ್ಹಗೊಳಿಸಿತ್ತು. ಹೀಗಾಗಿ ಮ್ಯಾಟ್ರಿಕ್ಸ್‌ ಕಂಪನಿಯನ್ನು ಟೆಂಡರ್‌ನಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು ಎಂಬುದು ದೂರಿನಿಂದ ಗೊತ್ತಾಗಿದೆ.

ಚೀನಾ ಉತ್ಪನ್ನ ನಮೂದಿಸಿದ್ದ ಮ್ಯಾಟ್ರಿಕ್ಸ್‌

ಟೆಂಡರ್‌ನಲ್ಲಿ ಭಾಗವಹಿಸಲು ಅವಕಾಶ ಪಡೆದುಕೊಂಡಿದ್ದ ಮ್ಯಾಟ್ರಿಕ್ಸ್‌ ಕಂಪನಿಯು ಚೀನಾ ತಯಾರಿಸಿರುವ ಕ್ಯಾಮರಾ, ಸರ್ವರ್‌, ಸಂಗ್ರಹಣಾ ಕೋಶ ಉಪಕರಣಗಳ ಸೇರಿದಂತೆ ಇನ್ನಿತರೆ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ನಮೂದಿಸಿತ್ತು. ಟೆಂಡರ್‌ ಮೌಲ್ಯಮಾಪನ ಸಮಿತಿ ಮುಂದೆ ಇದೇ ಉಪಕರಣಗಳ ಮಾದರಿಯನ್ನು ಪ್ರದರ್ಶಿಸಿತ್ತು.

ಚೀನಾ ತಯಾರಿಸಿರುವ ಸಿಸಿಟಿವಿ ಕ್ಯಾಮರಾಗಳನ್ನು ಬಳಸಿದಲ್ಲಿ ಸಾರ್ವಜನಿಕ ಭದ್ರತೆ, ಸುರಕ್ಷತೆಗೆ ಧಕ್ಕೆ ಆಗಲಿದೆ ಎಂದು ದೂರಿದ್ದ ಬಿಇಎಲ್‌, ನಿವಾಸಿಗಳ ದತ್ತಾಂಶವೂ ಸೋರಿಕೆಯಾಗಲಿದೆ. ಹಾಗೆಯೇ ಖಾಸಗಿತನದ ಮಹತ್ವ ಕಳೆದುಕೊಳ್ಳಲಿದೆ. ಹೀಗಾಗಿ ಟೆಂಡರ್‌ ಪ್ರಕ್ರಿಯೆಯಲ್ಲಿ ಪ್ರಧಾನಿ ಮಧ್ಯ ಪ್ರವೇಶಿಸುವ ಮೂಲಕ ಟೆಂಡರ್‌ ಪ್ರಾಧಿಕಾರವು ಮ್ಯಾಟ್ರಿಕ್ಸ್‌ ಕಂಪನಿಯನ್ನು ಅನರ್ಹಗೊಳಿಸಲು ಟೆಂಡರ್‌ ಪ್ರಾಧಿಕಾರಕ್ಕೆ ನಿರ್ದೇಶಿಸಬೇಕು ಎಂದು ದೂರಿನಲ್ಲಿ ಕೋರಿತ್ತು.

ಆದರೆ ಇದನ್ನು ಮರೆಮಾಚಿದ್ದ ಅಧಿಕಾರಿಗಳ ಗುಂಪೊಂದು 667 ಕೋಟಿ ಮೊತ್ತದ ಟೆಂಡರ್‌ ಪ್ರಕ್ರಿಯೆಯನ್ನು ಸಚಿವ ಸಂಪುಟದ ಗಮನಕ್ಕೂ ತಂದಿರಲಿಲ್ಲ ಎನ್ನಲಾಗಿದೆ. ಇಡೀ ಟೆಂಡರ್‌ ಪ್ರಕ್ರಿಯೆಯನ್ನು ಹಿರಿಯ ಐಪಿಎಸ್‌ ಅಧಿಕಾರಿಗಳ ಹಂತದಲ್ಲೇ ನಡೆಸಲು ಪೂರ್ಣಗೊಳಿಸಲು ಮುಂದಾಗಿತ್ತು.

ಈ ಹಿಂದೆ ಇದೇ ಯೋಜನೆಗೆ ಕರೆದಿದ್ದ ಟೆಂಡರ್‌ ಪ್ರಕ್ರಿಯೆಯಲ್ಲಿನ ಲೋಪಗಳ ಕುರಿತು ಪ್ರಧಾನಿಗೆ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ನೀಡಿದ್ದರಿಂದ ಮರು ಟೆಂಡರ್‌ ಪ್ರಕ್ರಿಯೆ ನಡೆದಿದೆ. ಯೋಜನೆ ಮೊತ್ತ 10 ಕೋಟಿ ರು. ಮೀರಿರುವುದರಿಂದ ಸಚಿವ ಸಂಪುಟಕ್ಕೆ ಟೆಂಡರ್‌ ಪ್ರಕ್ರಿಯೆಗಳನ್ನು ಮಂಡಿಸಬೇಕು. ಈ ಕುರಿತು ರಾಜ್ಯ ಸರ್ಕಾರವು ಈ ಹಿಂದೆ ಆದೇಶ ಹೊರಡಿಸಿತ್ತು.  ಟೆಂಡರ್‌ ಆಹ್ವಾನ ಸಮಿತಿಯ ಅಧ್ಯಕ್ಷ ಹೆಚ್ಚುವರಿ ಪೊಲೀಸ್‌ ಆಯುಕ್ತ ಹೇಮಂತ್‌ ನಿಂಬಾಳ್ಕರ್‌ ಅವರು ಸಚಿವ ಸಂಪುಟಕ್ಕೆ ಮಂಡಿಸದೆಯೇ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪಕ್ಕೂ ಗುರಿಯಾಗಿದ್ದರು.
ಅಲ್ಲದೆ ಐಎಂಎ ವಂಚನೆ ಪ್ರಕರಣದಲ್ಲಿ ಗುರುತರ ಆರೋಪ ಮತ್ತು

ಸಿಬಿಐ ವಿಚಾರಣೆಗೊಳಪಟ್ಟಿರುವ ಹೇಮಂತ್‌ ನಿಂಬಾಳ್ಕರ್‌ ಅವರನ್ನೇ ಟೆಂಡರ್‌ ಆಹ್ವಾನ ಮತ್ತು ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ಮುಂದುವರೆಸಿರುವುದಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳ ವಲಯದಲ್ಲಿಯೂ ಅಸಮಾಧಾನಕ್ಕೆ ಕಾರಣವಾಗಿತ್ತು.

Hot this week

ಮರಿಮಲ್ಲಪ್ಪ ಶಿಕ್ಷಣ ಸಂಸ್ಥೆಯಿಂದ ನಿಯಮ, ಕಾಯ್ದೆ ಉಲ್ಲಂಘನೆ ಆರೋಪ; ಆಡಳಿತಾಧಿಕಾರಿ ನೇಮಕಕ್ಕೆ ಮುಂದಾದ ಸರ್ಕಾರ, ಇದು ಖಾಸಗಿ ಸಂಸ್ಥೆಯೋ ಸಾರ್ವಜನಿಕ ಸಂಸ್ಥೆಯೋ?

ಬೆಂಗಳೂರು; ಮೈಸೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮರಿಮಲ್ಲಪ್ಪ ವಿದ್ಯಾ ಸಂಸ್ಥೆಯು ಕಾಲೇಜು, ...

ಅಪೆಕ್ಸ್ ಬ್ಯಾಂಕ್‌ನಲ್ಲಿ 1,000 ಕೋಟಿ ಹಗರಣ; ಹೈಕೋರ್ಟ್‌ನಲ್ಲಿ ಪಿಐಎಲ್‌, ಸರ್ಕಾರಕ್ಕೆ ಎದುರಾಗಲಿದೆಯೇ ಸಂಕಷ್ಟ?

ಬೆಂಗಳೂರು; ಕೃಷಿಗೆ ಸಂಬಂಧಿಸದ ಉದ್ದೇಶಗಳಿಗಾಗಿ ಸಾಲ ಮಂಜೂರಾತಿ,  ಈಗಾಗಲೇ ಅನುತ್ಪಾದಕ ಆಸ್ತಿಗಳೆಂದು (Non-Performing...

ರೈಲ್ವೇ- ವಿಮಾನ ಭತ್ಯೆ; 15ನೇ ವಿಧಾನಸಭೆಯ ಶಾಸಕರಿಗೆ 16.32 ಕೋಟಿ ಮರು ಪಾವತಿ

ಬೆಂಗಳೂರು; ಹದಿನೈದನೇ ವಿಧಾಸಭೆ ಅವಧಿಯಲ್ಲಿ ರಾಜ್ಯದ 224 ಶಾಸಕರು  16.32 ಕೋಟಿಯಷ್ಟು...

ಆರ್ಥಿಕ ಸ್ಥಿತಿ ಬಹಿರಂಗಪಡಿಸಿ ಕೋಲಾಹಲ ಎಬ್ಬಿಸಿದ್ದ ಅನಧಿಕೃತ ಟಿಪ್ಪಣಿಯ ಕಡತ ಒದಗಿಸಲು ನಿರಾಕರಿಸಿದ ಸರ್ಕಾರ

ಬೆಂಗಳೂರು; ರಾಜ್ಯ ಸರ್ಕಾರವು ₹2 ಲಕ್ಷ ಕೋಟಿಗೂ ಹೆಚ್ಚಿನ ಕಾಮಗಾರಿಗಳ ಬಾಕಿ...

ಸ್ಟಿಂಗ್ ಆಪರೇಷನ್‌; ಅಸಲು ದಾವೆ ಬೆನ್ನಲ್ಲೇ ಪೊಲೀಸ್‌ ಆಯುಕ್ತರಿಗೂ ದೂರು ಸಲ್ಲಿಸಿ ಯಾವ ಭಯವೂ ನನಗಿಲ್ಲವೆಂದ ಸಿದ್ದರಾಮಯ್ಯ

ಬೆಂಗಳೂರು; ಯೂ ಟ್ಯೂಬ್‌ ಸೇರಿದಂತೆ ಇನ್ನಿತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು...
Please Scan to make Your Contribution

Topics

ಮರಿಮಲ್ಲಪ್ಪ ಶಿಕ್ಷಣ ಸಂಸ್ಥೆಯಿಂದ ನಿಯಮ, ಕಾಯ್ದೆ ಉಲ್ಲಂಘನೆ ಆರೋಪ; ಆಡಳಿತಾಧಿಕಾರಿ ನೇಮಕಕ್ಕೆ ಮುಂದಾದ ಸರ್ಕಾರ, ಇದು ಖಾಸಗಿ ಸಂಸ್ಥೆಯೋ ಸಾರ್ವಜನಿಕ ಸಂಸ್ಥೆಯೋ?

ಬೆಂಗಳೂರು; ಮೈಸೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮರಿಮಲ್ಲಪ್ಪ ವಿದ್ಯಾ ಸಂಸ್ಥೆಯು ಕಾಲೇಜು, ...

ಅಪೆಕ್ಸ್ ಬ್ಯಾಂಕ್‌ನಲ್ಲಿ 1,000 ಕೋಟಿ ಹಗರಣ; ಹೈಕೋರ್ಟ್‌ನಲ್ಲಿ ಪಿಐಎಲ್‌, ಸರ್ಕಾರಕ್ಕೆ ಎದುರಾಗಲಿದೆಯೇ ಸಂಕಷ್ಟ?

ಬೆಂಗಳೂರು; ಕೃಷಿಗೆ ಸಂಬಂಧಿಸದ ಉದ್ದೇಶಗಳಿಗಾಗಿ ಸಾಲ ಮಂಜೂರಾತಿ,  ಈಗಾಗಲೇ ಅನುತ್ಪಾದಕ ಆಸ್ತಿಗಳೆಂದು (Non-Performing...

ರೈಲ್ವೇ- ವಿಮಾನ ಭತ್ಯೆ; 15ನೇ ವಿಧಾನಸಭೆಯ ಶಾಸಕರಿಗೆ 16.32 ಕೋಟಿ ಮರು ಪಾವತಿ

ಬೆಂಗಳೂರು; ಹದಿನೈದನೇ ವಿಧಾಸಭೆ ಅವಧಿಯಲ್ಲಿ ರಾಜ್ಯದ 224 ಶಾಸಕರು  16.32 ಕೋಟಿಯಷ್ಟು...

ಆರ್ಥಿಕ ಸ್ಥಿತಿ ಬಹಿರಂಗಪಡಿಸಿ ಕೋಲಾಹಲ ಎಬ್ಬಿಸಿದ್ದ ಅನಧಿಕೃತ ಟಿಪ್ಪಣಿಯ ಕಡತ ಒದಗಿಸಲು ನಿರಾಕರಿಸಿದ ಸರ್ಕಾರ

ಬೆಂಗಳೂರು; ರಾಜ್ಯ ಸರ್ಕಾರವು ₹2 ಲಕ್ಷ ಕೋಟಿಗೂ ಹೆಚ್ಚಿನ ಕಾಮಗಾರಿಗಳ ಬಾಕಿ...

ಸ್ಟಿಂಗ್ ಆಪರೇಷನ್‌; ಅಸಲು ದಾವೆ ಬೆನ್ನಲ್ಲೇ ಪೊಲೀಸ್‌ ಆಯುಕ್ತರಿಗೂ ದೂರು ಸಲ್ಲಿಸಿ ಯಾವ ಭಯವೂ ನನಗಿಲ್ಲವೆಂದ ಸಿದ್ದರಾಮಯ್ಯ

ಬೆಂಗಳೂರು; ಯೂ ಟ್ಯೂಬ್‌ ಸೇರಿದಂತೆ ಇನ್ನಿತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು...

21 ಪ್ಯಾಕೇಜ್‌ ಟೆಂಡರ್; ಶೇ. 5 ಪ್ರೀಮಿಯಂ ಮೀರಿದ್ದರೂ ಪರಿಶೀಲನೆ ಸಮಿತಿ ರಚಿಸಲು ಆಕ್ಷೇಪ ಎತ್ತಿದ್ದ ಡಿಕೆಶಿ

ಬೆಂಗಳೂರು;  ಜಿಬಿಎ ವ್ಯಾಪ್ತಿಯಲ್ಲಿ  ಉತ್ಪತ್ತಿಯಾಗುವ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ನೈರ್ಮಲ್ಯ...

ಪ್ರಭಾವಿ ನಾಯಕನ ವಿರುದ್ಧ ಸ್ಟಿಂಗ್ ಕಾರ್ಯಾಚರಣೆ; ನ್ಯಾಯಾಂಗ ತನಿಖೆಗೆ ಹೈಕೋರ್ಟ್‌, ಬಾಲ ನ್ಯಾಯಮಂಡಳಿ ಮೆಟ್ಟಿಲೇರಿದ ನೈಜ ಹೋರಾಟಗಾರರ ವೇದಿಕೆ

ಬೆಂಗಳೂರು; ಯೂ ಟ್ಯೂಬ್‌ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ  ‘ಹನಿಟ್ರ್ಯಾಪ್’ ಪ್ರಕರಣದ...

ಸ್ಟಿಂಗ್ ಆಪರೇಷನ್‌; ಮಾಧ್ಯಮಗಳ ವಿರುದ್ಧ ತಡೆಯಾಜ್ಞೆಗೆ ಸಿದ್ದರಾಮಯ್ಯ ಎಂಬುವರಿಂದ ಅಸಲು ದಾವೆ ದಾಖಲು, ನಾಳೆಯೇ ಅರ್ಜಿ ವಿಚಾರಣೆ

ಬೆಂಗಳೂರು;  ರಾಜ್ಯ ರಾಜಕಾರಣದಲ್ಲಿ ಬಹು ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಬಗ್ಗೆ...

Related Articles

Popular Categories

error: Content is protected !!