Tuesday | August 25, 2026 |

ಕೃಷಿ ಇಲಾಖೆಯಲ್ಲಿ ಲಂಚಾವತಾರ ; ಬಿ ಸಿ ಪಾಟೀಲ್‌ ಮೌನ ಪ್ರಶ್ನಿಸಿದ ಕಾಂಗ್ರೆಸ್‌

ಬೆಂಗಳೂರು; ಕೃಷಿ ಇಲಾಖೆಯ ಅಧಿಕಾರಿ, ನೌಕರರ ವರ್ಗಾವಣೆಗೆ ಸಚಿವ ಬಿ ಸಿ ಪಾಟೀಲ್‌ ಅವರು ಹಣಕ್ಕಾಗಿ ಬೇಡಿಕೆ ಇರಿಸಿದ್ದಾರೆ ಎಂಬ ದೂರಿನ ಕುರಿತು ‘ದಿ ಫೈಲ್‌’ ವರದಿ ಪ್ರಕಟಿಸುತ್ತಿದ್ದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಘಟಕವೂ ಈ ಪ್ರಕರಣದ ಬಗ್ಗೆ ದನಿ ಎತ್ತಿದೆ.

ಎಚ್‌ ನಾಗೇಶ್‌ ಮತ್ತು ಬಿ ಸಿ ಪಾಟೀಲ್‌ ಅವರ ಹೆಸರನ್ನು ಪ್ರಸ್ತಾಪಿಸದೆಯೇ ಪ್ರಕರಣದಲ್ಲಿ ಬಿಜೆಪಿ ಸರ್ಕಾರದ ತಾರತಮ್ಯವನ್ನು ಮಾಜಿ ಸಚಿವ ಡಾ ಎಚ್‌ ಸಿ ಮಹದೇವಪ್ಪ ಅವರು ಪ್ರಶ್ನಿಸಿದ ಬೆನ್ನಲ್ಲೇ ಇದೀಗ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯೂ ಬಿ ಸಿ ಪಾಟೀಲ್‌ ಅವರ ಮೌನದ ಹಿಂದೆ ಅನುಮಾನವನ್ನೂ ವ್ಯಕ್ತಪಡಿಸಿದೆ. ಈ ಕುರಿತು ಟ್ವೀಟ್‌ ಕೂಡ ಮಾಡಿದೆ.

‘ಕೃಷಿ ಇಲಾಖೆಯ ನೌಕರರ ವರ್ಗಾವಣೆಗೆ ಸಚಿವ ಬಿ ಸಿ ಪಾಟೀಲ್‌ ಹಾಗೂ ಉನ್ನತಾಧಿಕಾರಿಗಳು ಹಣಕ್ಕಾಗಿ ಪೀಡಿಸುತ್ತಿರುವ ದೂರು ನಿಮಗೆ ಬಂದಿದೆ. ನಿಮ್ಮ ಮೌನ ನೋಡಿದರೆ ನಿಮಗೂ ಪಾಲಿರುವ ಅನುಮಾನ ಮೂಡುತ್ತಿದೆ. ನಾ ಖಾವೂಂಗಾ ನಾ ಖಾನೆದುಂಗ ಎನ್ನುವುದನ್ನು ಖಾವುಂಗಾ ಸಬ್‌ ಕೋ ಖಾನೆದುಂಗ ಎಂದು ಬದಲಿಸಿದ್ದೀರಾ,’ ಎಂದು ಬಿಜೆಪಿಯ ಕರ್ನಾಟಕ ಘಟಕವನ್ನೂ ಪ್ರಶ್ನಿಸಿದೆ.

‘ದಲಿತರ ಮೇಲೆ ಕೇವಲ ಆರೋಪ ಬಂದರೂ ಅವರ ತಲೆದಂಡ ಮಾಡುವ ಮನುವಾದಿ ಬಿಜೆಪಿ ಸರ್ಕಾರ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಾಕ್ಷಿಗಳಿದ್ದರೂ ಅಂತವರ ಬಗ್ಗೆ ಮೌನ ವಹಿಸುತ್ತದೆ. ಮುಖ್ಯಮಂತ್ರಿಗಳೇ ಭ್ರಷ್ಟಾಚಾರವನ್ನು ಜಾತಿ ನೋಡಿ ಅಳೆಯುವ ನಿಮ್ಮ ದಲಿತ ವಿರೋಧಿ ನೀತಿಯನ್ನು ಬದಿಗಿಟ್ಟು ನ್ಯಾಯಯುತವಾಗಿ ಕ್ರಮ ವಹಿಸಿ ತನಿಖೆಗೆ ಸೂಚನೆ ನೀಡಿ,’ ಎಂದು ಮಾಜಿ ಸಚಿವ ಎಚ್‌ ಸಿ ಮಹದೇವಪ್ಪ ಅವರು ಟ್ವೀಟ್‌ನಲ್ಲಿ ಆಗ್ರಹಿಸಿದ್ದನ್ನು ಸ್ಮರಿಸಬಹುದು.

ಪ್ರಕರಣದ ಹಿನ್ನೆಲೆ

ಸಚಿವ ಬಿ ಸಿ ಪಾಟೀಲ್ ಅವರ ಹೆಸರು ಬಳಸಿ ಅವರ ಆಪ್ತಕೂಟ ಕೃಷಿ ಇಲಾಖೆ ಅಧಿಕಾರಿ, ನೌಕರರುಗಳಿಂದ ಲಕ್ಷಗಟ್ಟಲೇ ಸುಲಿಗೆ ಮಾಡಿದೆ ಎಂದು ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಪತ್ರ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಇದೇ ಇಲಾಖೆಯ ಗ್ರೂಪ್‌ ಎ , ಗ್ರೂಪ್‌ ಬಿ ಮತ್ತು ಗ್ರೂಪ್‌ ಸಿ ವರ್ಗದ ಅಧಿಕಾರಿ ನೌಕರರ ವರ್ಗಾವಣೆಯಲ್ಲಿಯೂ ಲಂಚಕ್ಕಾಗಿ ಬೇಡಿಕೆ ಇರಿಸಲಾಗಿತ್ತು ಎಂಬ ಮಾಹಿತಿಯನ್ನು ಸ್ವತಃ ಕೆಲ ಅಧಿಕಾರಿ, ನೌಕರರುಗಳೇ ಈ ಕುರಿತು ಒಂದಷ್ಟು ಅಧಿಕಾರಿಗಳು ಲಿಖಿತವಾಗಿ ಮುಖ್ಯಮಂತ್ರಿಗೆ 2020ರ ಜುಲೈ 1ರಂದು ಪತ್ರ ಮುಖೇನ ಗಮನಕ್ಕೆ ತಂದಿದ್ದರು.

‘2020-21ನೇ ಸಾಲಿನ ಗ್ರೂಪ್‌ ಎ, ಗ್ರೂಪ್‌ ಮತ್ತು ಗ್ರೂಪ್‌ ಸಿ ವರ್ಗದ ಅಧಿಕಾರಿ/ನೌಕರರಿಗೆ ಮಾತ್ರ ಅನ್ವಯವಾಗುವಂತೆ 2020ರ ಜುಲೈ 10ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖೆ ಸಚಿವರುಗಳಿಗೆ ಅಧಿಕಾರಿ ಪ್ರತ್ಯಾಯೋಜಿಸಲಾಗಿದೆ. ಈ ಆದೇಶದ ಹಿನ್ನೆಲೆಯಲ್ಲಿ ಕೃಷಿ ಸಚಿವರಿಗೆ ಹಣ ಸಂದಾಯ ಮಾಡಬೇಕು ಎಂಬ ಸಬೂಬು ಹೇಳಿ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ತಮ್ಮ ಅಧೀನದಲ್ಲಿರುವ ಅಧಿಕಾರಿ/ನೌಕರರು ವರ್ಗಾವಣೆ ಪಡೆಯಬೇಕಾದರೆ ಅಥವಾ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಚೇರಿಗಳಲ್ಲಿಯೇ ಮುಂದುವರೆಯಬೇಕಾದರೆ ಲಕ್ಷ ರು.ಗಳನ್ನು ಕಡ್ಡಾಯವಾಗಿ ನೀಡಬೇಕು,’ ಎಂದು ಆದೇಶ ನೀಡಿರುತ್ತಾರೆ ಎಂದು ಪತ್ರದಲ್ಲಿ ವಿವರಿಸಿದ್ದರು.

ಸಚಿವ ಬಿ ಸಿ ಪಾಟೀಲ್‌ ಅವರ ಆಪ್ತ ಕಾರ್ಯದರ್ಶಿ ಕೆಎಎಸ್‌ ಅಧಿಕಾರಿ ಸಿ ಎಲ್‌ ಶಿವಕುಮಾರ್‌, ಎ ಸಿ ಮಂಜುನಾಥ್‌, ದಯಾನಂದ ಎಂಬುವರಿಗೆ ಹಣ ಸಂದಾಯ ಮಾಡಿರುವ ಪಟ್ಟಿಯನ್ನೂ ಕೃಷಿ ಇಲಾಖೆ ಸಿಬ್ಬಂದಿಗಳು ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದ್ದನ್ನು ಸ್ಮರಿಸಬಹುದು.

ಜಂಟಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್‌ 50 ಲಕ್ಷ, ಅಪರ ನಿರ್ದೇಶಕರುಗಳು 50 ಲಕ್ಷ, ಬೆಳಗಾವಿ ಜಂಟಿ ನಿರ್ದೇಶಕರು (ಜಿಲಾನಿ ಮತ್ತು ಪಾಟೀಲ್‌) 2 ಕೋಟಿ, ಕಲ್ಬುರ್ಗಿ ಜಂಟಿ ನಿರ್ದೇಶಕ (ಸೂಗೂರು) 1 ಕೋಟಿ, ರೂಪಾದೇವಿ 75 ಲಕ್ಷ, ಅಪರ ನಿರ್ದೇಶಕರು( ದಿವಾಕರ) 1 ಕೋಟಿ, ಚಿಕ್ಕಬಳ್ಳಾಪುರ ಜಂಟಿ ನಿರ್ದೇಶಕರು (ರೂಪ) 50 ಲಕ್ಷ, ದಾವಣಗೆರೆ ಜಂಟಿ ನಿರ್ದೇಶಕರು 50 ಲಕ್ಷ, ಜಂಟಿ ನಿರ್ದೇಶಕರು ಹಾವೇರಿ (ಮಂಜುನಾಥ್‌) 1 ಕೋಟಿ ನೀಡಿದ್ದಾರೆ ಎಂಬ ಸಂಗತಿ ಕೃಷಿ ಇಲಾಖೆ ಸಿಬ್ಬಂದಿ ಮುಖ್ಯ ಕಾರ್ಯದರ್ಶಿಗೆ ಪಟ್ಟಿ ಸಮೇತ ಸಲ್ಲಿಸಿದ್ದ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಆಪ್ತ ಕಾರ್ಯದರ್ಶಿ ಶಿವಕುಮಾರ್‌, ದಯಾನಂದ್‌ ಮತ್ತು ಮಂಜುನಾಥ್‌ ಎಂಬುವರು ಇಲಾಖೆಯ ಅಧಿಕಾರಿ, ನೌಕರರುಗಳಿಗೆ ವಾಟ್ಸಾಪ್‌ ಕರೆ ಮಾಡುವ ಮೂಲಕ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಪತ್ರದಲ್ಲಿ ದೂರಿದ್ದ ನೌಕರರು, ಕೃಷಿ ಯಾಂತ್ರೀಕರಣ, ಕೃಷಿ ಪರಿಕರ, ಕೀಟನಾಶಕಗಳು, ಸ್ಪ್ರಿಂಕಲ್‌/ಡ್ರಿಪ್‌ಗಳ ಅನುದಾನ ನೀಡುವುದರಲ್ಲಿಯೂ ಲೂಟಿ ಮಾಡಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದನ್ನು ಸ್ಮರಿಸಬಹುದು.

‘ನಾವು ಕೆಳಮಟ್ಟದ ಇಲಾಖೆಯ ಸೇವಕರಾಗಿ ಕೆಲಸ ನಿರ್ವಹಿಸುತ್ತಿದ್ದು ನಮ್ಮ ಸಂಬಳದಲ್ಲಿ ನಮ್ಮ ಸಂಸಾರ ನಡೆಸುವುದೇ ಕಷ್ಟಕರವಾಗಿದೆ. ನಮಗೆ ಏನಾದರೂ ಮಾಡಿದರೆ ಹೇಗೆ ಎಂದು ಹಣ ಹೊಂದಿಸುತ್ತಿದ್ದೇವೆ. ಇದು ಹೀಗೆ ಮುಂದುವರೆದರೆ ರೈತರ ಆತ್ಮಹತ್ಯೆ ಬದಲು ರೈತ ಇಲಾಖೆ ಅಧಿಕಾರಿಗಳು ಸಾಲ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವ ಸಮಯ ದೂರವಿಲ್ಲ. ಇದರಿಂದ ಮಾನಸಿಕ ಹಿಂಸೆ ಅನುಭವಿಸುವುದಕ್ಕಿಂತ ಅದೇ ಮೇಲು,’ ಎಂದು ಅಧಿಕಾರಿ, ನೌಕರರು ಅಳಲು ವ್ಯಕ್ತಪಡಿಸಿರುವುದು ಪತ್ರದಿಂದ ಗೊತ್ತಾಗಿದೆ.

‘ಅನುದಾನ ಯಾರಿಗೆ ಕೊಡಬೇಕು ಎಂದು ಏಜೆಂಟರುಗಳು ಮಂತ್ರಿಗಳ ಕಚೇರಿ, ವಸೂಲಿಗಾಗಿ ಪ್ರತ್ಯೇಕ ಕಚೇರಿ ತೆರೆದು ಯಾರು ಹೆಚ್ಚಿನ ಕಮಿಷನ್‌ ನೀಡುತ್ತಾರೋ ಉಪಕರಣಗಳು ಗುಣಮಟ್ಟದಿಂದ ಕೂಡಿಲ್ಲದಿದ್ದರೂ ಆಪ್ತ ಕಾರ್ಯದರ್ಶಿ, ಖಾಸಗಿ ಏಜೆಂಟರುಗಳು ಸೂಚಿಸುವ ವ್ಯಕ್ತಿಗಳಿಗೆ ಜಂಟಿ ನಿರ್ದೇಶಕರುಗಳು ಇಂಡೆಂಟ್‌ಗಳನ್ನು ನೀಡಬೇಕು. ಎಲ್ಲದಕ್ಕೂ ಮಂತ್ರಿಗಳ ಹೆಸರನ್ನು ಹೇಳಲಾಗುತ್ತಿದೆ,’ ಎಂದು ದೂರಿನಲ್ಲಿ ಆರೋಪಿಸಿದ್ದರು.

ಅಬಕಾರಿ ಸಚಿವರಾಗಿದ್ದ ಎಚ್‌ ನಾಗೇಶ್‌ ಅವರು ಪರಿಶಿಷ್ಟ ಜಾತಿಯವರಾಗಿದ್ದ ಕಾರಣಕ್ಕೆ ಅವರಿಂದ ರಾಜೀನಾಮೆ ಪಡೆಯಲಾಗಿದೆ. ಆದರೆ ಲಿಂಗಾಯತ ಸಮುದಾಯಕ್ಕೆ ಸೇರಿರುವ ಬಿ ಸಿ ಪಾಟೀಲ್‌ ಅವರ ವಿರುದ್ಧವೂ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪಗಳಿದ್ದರೂ ರಾಜೀನಾಮೆ ಪಡೆದಿಲ್ಲವೇಕೆ, ಅವರಿಂದ ರಾಜೀನಾಮೆ ಪಡೆಯಲು ಯಡಿಯೂರಪ್ಪ ಅವರಿಗೆ ಧೈರ್ಯವಿಲ್ಲವೇ ಎಂಬ ಪ್ರಶ್ನೆಗಳು ಕೃಷಿ ಇಲಾಖೆಯಲ್ಲಿ ಕೇಳಿ ಬಂದಿದ್ದವು.

Hot this week

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

Related Articles

Popular Categories

error: Content is protected !!