Thursday | March 26, 2026 |

ಶ್ರೀರಾಮ ಸಕ್ಕರೆ ಕಾರ್ಖಾನೆ ಗುತ್ತಿಗೆ; ನಿರಾಣಿ ಸಿಂಗಲ್‌ ಬಿಡ್‌ಗೆ ಆರ್ಥಿಕ ಇಲಾಖೆಯ ಕೊಕ್ಕೆ

Support THE-FILE

spot_img

ಬೆಂಗಳೂರು; ಕಳೆದ ಹಲವು ವರ್ಷಗಳಿಂದ ಸ್ಥಗಿತಗೊಂಡಿರುವ ಕೆ ಆರ್ ನಗರದ ಶ್ರೀರಾಮ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಖಾಸಗಿಯವರಿಗೆ ಗುತ್ತಿಗೆ ನೀಡುವ ಸಂಬಂಧ ಸರ್ಕಾರ ಕರೆದಿದ್ದ ಬಿಡ್‌ನಲ್ಲಿ ಸಿಂಗಲ್‌ ಬಿಡ್ಡರ್‌ ಆಗಿರುವ ಸಚಿವ ಮುರುಗೇಶ್‌ ನಿರಾಣಿ ಉದ್ಯಮದ ಸಮೂಹಕ್ಕೆ ಆರ್ಥಿಕ ಇಲಾಖೆ ಕೊಕ್ಕೆ ಹಾಕಿದೆ. ಸಿಂಗಲ್‌ ಬಿಡ್‌ನ್ನು ಅನುಮೋದಿಸಲು ನಿರಾಕರಿಸಿರುವ ಇಲಾಖೆ, ಮರು ಟೆಂಡರ್‌ ಏಕೆ ಕರೆಯಬಾರದು ಎಂದು ಪ್ರಶ್ನಿಸಿದೆ.

ಪಾಂಡವಪುರ ಸಕ್ಕರೆ ಕಾರ್ಖಾನೆಯ ನೋಂದಣಿ ಶುಲ್ಕ ಮನ್ನಾ ಸೇರಿದಂತೆ ಇನ್ನಿತರೆ ಹೊಸ ಷರತ್ತುಗಳನ್ನು ಒಪ್ಪದಿದ್ದ ಸರ್ಕಾರ, ಶ್ರೀರಾಮ ಸಕ್ಕರೆ ಕಾರ್ಖಾನೆ ಗುತ್ತಿಗೆ ಸಂಬಂಧ ಸಿಂಗಲ್‌ ಬಿಡ್‌ನ್ನೂ ಒಪ್ಪಿಕೊಳ್ಳದಿರುವುದು ಮುರುಗೇಶ್‌ ನಿರಾಣಿಗೆ ಮತ್ತೊಂದು ಹಿನ್ನಡೆಯಾದಂತಾಗಿದೆ.

ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಗುತ್ತಿಗೆ ನೀಡಲು ಕರೆದಿದ್ದ ಟೆಂಡರ್‌ನಲ್ಲಿ 125 ಕೋಟಿಗೆ ಸಿಂಗಲ್‌ ಬಿಡ್‌ ಮಾಡಲಾಗಿತ್ತು. ಸಂಪುಟದ ಅನುಮತಿ ಸಿಕ್ಕರೆ ಆ ಕಾರ್ಖಾನೆಯನ್ನೂ ಗುತ್ತಿಗೆ ಪಡೆದು ಮುನ್ನಡೆಸಲಾಗುವುದು ಎಂದು ಹೇಳಿಕೆ ನೀಡಿದ್ದ ಶಾಸಕ ಮುರುಗೇಶ್ ಆರ್ ನಿರಾಣಿ ಅವರಿಗೀಗ ಆರ್ಥಿಕ ಇಲಾಖೆ ಎತ್ತಿರುವ ತಕರಾರು ತಲೆಬಿಸಿ ಮಾಡಿದೆ. ಈ ಸಂಬಂಧ ಆರ್ಥಿಕ ಇಲಾಖೆಯ ಉನ್ನತ ಮೂಲಗಳು ‘ದಿ ಫೈಲ್‌’ಗೆ ಖಚಿತಪಡಿಸಿವೆ.

ಸಿಂಗಲ್‌ ಬಿಡ್‌ನ್ನು ಒಪ್ಪಿಕೊಂಡಲ್ಲಿ ಕಾನೂನು ಮತ್ತು ಆರ್ಥಿಕ ಪರಿಣಾಮಗಳು ಎದುರಾಗಲಿವೆ ಎಂದು ಆರ್ಥಿಕ ಇಲಾಖೆ ಅಭಿಪ್ರಾಯ ನೀಡಿದೆ ಎಂದು ಗೊತ್ತಾಗಿದೆ. ಆರ್‌ಎಸ್‌ಎಸ್‌ಕೆ ಕಾರ್ಖಾನೆಯು ಗುತ್ತಿಗೆ ಮೊತ್ತ 480 ಕೋಟಿಗೆ ಬೇಡಿಕೆ ಇಟ್ಟಿತ್ತು. ಕಾರ್ಖಾನೆ ಈಗಾಗಲೇ ಹೊಂದಿರುವ ಹಣಕಾಸಿನ ಹೊಣೆಗಾರಿಕೆಗೂ (250 ಕೋಟಿ ಸಾಲ) ಮತ್ತು ಬಿಡ್‌ನಲ್ಲಿ ನಮೂದಿಸಿದ್ದ ಮೊತ್ತದ ಮಧ್ಯೆ ಅಜಗಜಾಂತರ ವ್ಯತ್ಯಾಸವಿತ್ತು. ಸಿಂಗಲ್‌ ಬಿಡ್‌ನ್ನು ಒಪ್ಪಿಕೊಂಡಿರುವ ಅಧಿಕಾರಿಗಳು ಇದಕ್ಕೆ ಸಮರ್ಥನೆಯನ್ನೂ ನೀಡಿರಲಿಲ್ಲ ಎಂದು ಗೊತ್ತಾಗಿದೆ.

ದಿವಂಗತ ಡಿ. ದೇವರಾಜು ಅರಸು ಸರಕಾರದಲ್ಲಿ ಶಾಸಕರಾಗಿದ್ದ ದಿ. ಎಚ್‌. ಬಿ. ಕೆಂಚೇಗೌಡ ಸಚಿವ ಸ್ಥಾನದ ಆಕಾಂಕ್ಷೆ ತೊರೆದು ಜಿಲ್ಲೆಯ ರೈತರ ಹಿತಕ್ಕಾಗಿ ಈ ಕಾರ್ಖಾನೆ ನಿರ್ಮಿಸಲು ಮುನ್ನುಡಿ ಬರೆದಿದ್ದರು. ಷೇರು ಹಣ ಸಂಗ್ರಹಿಸಲು ಜಿಲ್ಲೆಯ ಐದು ತಾಲೂಕಿನಾದ್ಯಂತ ಹಗಲಿರುಳು ಶ್ರಮಿಸಿ, ನೂರಾರು ಪ್ರಮುಖ ರೈತ ಮುಖಂಡರ ಸಹಕಾರದೊಂದಿಗೆ 1979ರಲ್ಲಿ ಈ ಕಾರ್ಖಾನೆ ಆರಂಭವಾಗಿತ್ತು. ಈ ಕಾರ್ಖಾನೆಗೀಗ 40 ವರ್ಷದ ಇತಿಹಾಸವಿದೆ. ಆದರೆ ಕಳೆದ 8 ವರ್ಷಗಳಿಂದ ಕಾರ್ಖಾನೆ ಸ್ಥಗಿತಗೊಂಡಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು 40 ವರ್ಷಗಳ ಕಾಲ ಗುತ್ತಿಗೆಗೆ ಪಡೆದ ನಂತರ ನಿರಾಣಿ ಒಡೆತನದ ಉದ್ಯಮ ಸಮೂಹ ವರಾತ ತೆಗೆದಿತ್ತು. ಬಿಜೆಪಿ ಶಾಸಕ ಮುರುಗೇಶ್‌ ನಿರಾಣಿ ಒಡೆತನಕ್ಕೆ ಸೇರಿರುವ ನಿರಾಣಿ ಉದ್ಯಮ ಸಮೂಹ ಮುಂದಿಟ್ಟಿದ್ದ ಹೊಸ ಬೇಡಿಕೆಯನ್ನು ತಿರಸ್ಕರಿಸಿತ್ತು.

ನಿರಾಣಿ ಉದ್ಯಮ ಸಮೂಹವು ಗುತ್ತಿಗೆ ಅವಧಿ ಪೂರ್ಣಗೊಂಡ ನಂತರವೂ ಕಂಪನಿಯಲ್ಲಿನ ಎಲ್ಲಾ ಬಗೆಯ ಯಂತ್ರೋಪಕರಣಗಳು ಸರ್ಕಾರದ ವಶಕ್ಕೆ ಬದಲಿಗೆ ಕಂಪನಿ ವಶಕ್ಕೆ ನೀಡಬೇಕು ಒತ್ತಡ ಹೇರಿತ್ತಲ್ಲದೆ ಮುದ್ರಾಂಕ ಮತ್ತು ನೋಂದಣಿ ಶುಲ್ಕ ಮನ್ನಾ ಮಾಡಬೇಕು ಎಂದು ಸರ್ಕಾರದ ಮೆಟ್ಟಿಲೇರಿತ್ತು. ಕರಾರು ಒಪ್ಪಂದಕ್ಕೆ ಸಹಿ ಮಾಡಿದ ನಂತರ ಕಂಪನಿಗೆ ಗುತ್ತಿಗೆ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದ ನಂತರ ನಿರಾಣಿ ಉದ್ಯಮ ಸಮೂಹ ತೆಗೆದಿದ್ದ ವರಾತಕ್ಕೆ ಸರ್ಕಾರ ಸೊಪ್ಪು ಹಾಕಿಲ್ಲ. ಬದಲಿಗೆ ನೋಂದಣಿ ಶುಲ್ಕವನ್ನು ಮನ್ನಾ ಮಾಡಬೇಕು ಎಂಬ ಮನವಿಯನ್ನೇ ತಿರಸ್ಕರಿಸಿತ್ತು.

‘ಬಾಗಲಕೋಟೆ ಮುಧೋಳದ ನಿರಾಣಿ ಶುಗರ್ಸ್‌ ಲಿಮಿಟೆಡ್‌ಗೆ 40 ವರ್ಷಗಳ ಅವಧಿಗೆ ಗುತ್ತಿಗೆ ನೀಡಲು ಆದೇಶ ಹೊರಡಿಸಲಾಗಿದೆ. ಗುತ್ತಿಗೆ ಕರಾರಿನ ನೋಂದಣಿ ಸಂದರ್ಭದಲ್ಲಿ ವಿಧಿಸಲಾಗುವ ಮುದ್ರಾಂಕ ಮತ್ತು ನೋಂದಣಿ ಶುಲ್ಕವನ್ನು ಮನ್ನಾ ಮಾಡುವಂತೆ ಕೋರಿದ್ದ ಮನವಿಯನ್ನು ತಿರಸ್ಕರಿಸಲಾಗಿದೆ,’ಎಂದು ವಾಣಿಜ್ಯ ಕೈಗಾರಿಕೆ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಬ್ಬು ಅಭಿವೃದ್ಧಿ, ಸಕ್ಕರೆ ನಿರ್ದೇಶನಾಲಯದ ಆಯುಕ್ತರಿಗೆ 2020ರ ಅಕ್ಟೋಬರ್‌ 12ರಂದು ಪತ್ರ ಮುಖೇನ ತಿಳಿಸಿದ್ದನ್ನು ಸ್ಮರಿಸಬಹುದು.

Hot this week

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

Topics

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

Related Articles

Popular Categories

error: Content is protected !!