Saturday | September 5, 2026 |

ಕೇಂದ್ರ ಪುರಸ್ಕೃತ ಯೋಜನೆ; 2,948 ಕೋಟಿಯಲ್ಲಿ 523 ಕೋಟಿ ಕೊಟ್ಟರೂ ತುಟಿಬಿಚ್ಚದ ಸರ್ಕಾರ

ಬೆಂಗಳೂರು; ಸ್ವಚ್ಛ ಭಾರತ, ಪೂರಕ ಪೌಷ್ಠಿಕ ಆಹಾರ, ರಾಷ್ಟ್ರೀಯ ಉಚ್ಚತರ ಶಿಕ್ಷಣ ಅಭಿಯಾನ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಯೋಜನೆ ಸೇರಿದಂತೆ 17ಕ್ಕೂ ಹೆಚ್ಚಿನ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಒಟ್ಟು ಅನುದಾನದಲ್ಲಿ ಶೇ. 50ಕ್ಕಿಂತಲೂ ಕಡಿಮೆ ಬಿಡುಗಡೆ ಮಾಡಿದೆ. ಕೇಂದ್ರ ಪುರಸ್ಕೃತ ಯೋಜನೆ, ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರವು ಒಟ್ಟು ಅನುದಾನದಲ್ಲಿ ಇನ್ನೂ 2,419.01 ಕೋಟಿ ರು. ಬಾಕಿ ಉಳಿಸಿಕೊಂಡಿದೆ. ಸಕಾಲದಲ್ಲಿ ಅನುದಾನ ಬಿಡುಗಡೆ ಆಗದ ಕಾರಣ ಕೇಂದ್ರ ಪುರಸ್ಕೃತ ಯೋಜನೆಗಳು ರಾಜ್ಯದಲ್ಲಿ ತೆವಳುತ್ತಿವೆ.

ವಿಶೇಷ ಎಂದರೆ ವಸತಿ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಬೈರತಿ ಬಸವರಾಜು ಗೋವಿಂದ ಕಾರಜೋಳ, ಡಾ ಕೆ ಸುಧಾಕರ್‌, ಬಿ ಶ್ರೀರಾಮುಲು ಇಲಾಖೆಗಳಿಗೆ ಕೇಂದ್ರ ಪುರಸ್ಕೃತದ ಕೆಲ ಯೋಜನೆಗಳಿಗೆ ಬಿಡಿಗಾಸನ್ನೂ ನೀಡದಿದ್ದರೂ ಈ ಸಚಿವರ್ಯಾರು ತುಟಿ ಬಿಚ್ಚಿಲ್ಲ.
ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಸಂಬಂಧಿಸಿದಂತೆ ಇಲಾಖಾವಾರು ಮತ್ತು ಕಾರ್ಯಕ್ರಮವಾರು ಪ್ರಗತಿ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್‌ ಅಧ್ಯಕ್ಷತೆಯಲ್ಲಿ 2021ರ ಜನವರಿ 21ರಂದು ನಡೆದ ಸಭೆಯಲ್ಲಿ ಶೇ. 50ಕ್ಕಿಂತಲೂ ಕಡಿಮೆ ಅನುದಾನ ಬಿಡುಗಡೆಯಾಗಿರುವ ಸಂಗತಿ ತಿಳಿದು ಬಂದಿದೆ.

100 ಕೋಟಿ ರು.ಗಿಂತ ಹೆಚ್ಚಿನ ಅನುದಾನವಿರುವ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಿಗೆ 2020-21ನೇ ಸಾಲಿಗೆ ಒಟ್ಟು 2,948.94 ಕೋಟಿ ರು. ಅನುದಾನವನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಿತ್ತು. ಆದರೆ ಈ ಪೈಕಿ 2020ರ ಡಿಸೆಂಬರ್‌ ಅಂತ್ಯಕ್ಕೆ ಕೇವಲ 529.93 ಕೋಟಿ ರು. ಮಾತ್ರ ಬಿಡುಗಡೆ ಮಾಡಿದೆ. ಇನ್ನೂ 2,419.01 ಕೋಟಿ ರು.ಗಳನ್ನು ಬಿಡುಗಡೆ ಮಾಡಿಲ್ಲ ಎಂಬುದು ದಾಖಲೆಯಿಂದ ಗೊತ್ತಾಗಿದೆ.

ಅದೇ ರೀತಿ 10 ಕೋಟಿ ರು.ಗಳಿಗಿಂತ ಹೆಚ್ಚಿನ ಅನುದಾನವಿರುವ ಕಾರ್ಯಕ್ರಮಗಳಲ್ಲೂ ಶೇ.50ಕ್ಕಿಂತ ಕಡಿಮೆ ಬಿಡುಗಡೆಯಾಗಿದೆ. ತುಂಗಾ ಮೇಲ್ದಂಡೆ ಯೋಜನೆ ಸೇರಿದಂತೆ ಹಲವು ಯೋಜನೆಗಳಿಗೆ 242.29 ಕೋಟಿ ರು.ಗಳನ್ನು ಕೇಂದ್ರ ಸರ್ಕಾರವು ಅನುದಾನ ಒದಗಿಸಬೇಕಿತ್ತು. ಆದರೆ ಡಿಸೆಂಬರ್‌ 2020ರ ಅಂತ್ಯಕ್ಕೆ ಕೇವಲ 23.72 ಕೋಟಿ ರು. ಮಾತ್ರ ಬಿಡುಗಡೆ ಮಾಡಿ ಇನ್ನೂ 218.57 ಕೋಟಿ ರು. ಬಾಕಿ ಉಳಿಸಿಕೊಂಡಿದೆ.

ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡಿರುವ ಸ್ವಚ್ಛ ಭಾರತ (ನಗರ) ಯೋಜನೆಗೆ ಒಟ್ಟು 120 ಕೋಟಿ ರು.ಅನುದಾನ ಘೋಷಿಸಿದ್ದ ಕೇಂದ್ರ ಸರ್ಕಾರವು ಡಿಸೆಂಬರ್‌ 2020ರ ಅಂತ್ಯದವರೆಗೂ ನಯಾ ಪೈಸೆ ಬಿಡುಗಡೆ ಮಾಡಿಲ್ಲ. ಅದೇ ರೀತಿ ವಸತಿ ಇಲಾಖೆ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡಿರುವ ಪ್ರಧಾನ ಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ)ಗೆ 300 ಕೋಟಿ ರು. ಅನುದಾನ ಘೋಷಣೆಯಾಗಿದೆಯಾದರೂ ಡಿಸೆಂಬರ್‌ 2020ರ ಅಂತ್ಯಕ್ಕೆ ಬಿಡಿಗಾಸನ್ನೂ ನೀಡದಿರುವುದು ಪ್ರಗತಿ ಸಭೆಯ ನಡವಳಿಯಿಂದ ತಿಳಿದು ಬಂದಿದೆ.

ಪೂರಕ ಪೌಷ್ಠಿಕ ಆಹಾರ ಯೋಜನೆಗೆ ಕೇಂದ್ರ ಸರ್ಕಾರವು ಘೋಷಿಸಿದ್ದ 599.44 ಕೋಟಿ ರು. ಅನುದಾನದ ಪೈಕಿ ಡಿಸೆಂಬರ್‌ 2020ರ ಅಂತ್ಯಕ್ಕೆ 156.60 ಕೋಟಿ ರು.ಮಾತ್ರ ಬಿಡುಗಡೆ ಮಾಡಿದೆ. ಪ್ರಧಾನಮಂತ್ರಿ ಆವಾಜ್‌ ಯೋಜನೆ (ನಗರ)ಗೆ 515.00 ಕೋಟಿ ರು ಪೈಕಿ ಕೇವಲ 9.19 ಕೋಟಿ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್‌)ಗೆ 402.05 ಕೋಟಿ ರು. ಪೈಕಿ 117.29 ಕೋಟಿ, ಅಮೃತ್‌ ಮಿಷನ್‌ ಯೋಜನೆಗೆ 290.57 ಕೋಟಿ ರು. ಪೈಕಿ ಕೇವಲ 0.51 ಕೋಟಿ, ಹಿಂದುಳಿದ ವರ್ಗಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ 237.50 ಕೋಟಿ ರು.ನಲ್ಲಿ 79.13 ಕೋಟಿ, ನಾರಾಯಣಪುರ ಎಡದಂಡೆ ಕಾಲುವೆ ಯೋಜನೆಗೆ 218.97 ಕೋಟಿ ರು.ನಲ್ಲಿ 109.48 ಕೋಟಿ ರು., ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ 145.50 ಕೋಟಿ ರು. ಪೈಕಿ 11.22 ಕೋಟಿ, ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಯೋಜನೆಗೆ 119.91 ಕೋಟಿ ರು.ನಲ್ಲಿ 46.51 ಕೋಟಿ ರು.ಮಾತ್ರ ಬಿಡುಗಡೆ ಮಾಡಿರುವುದು ಗೊತ್ತಾಗಿದೆ.

ಅದೇ ರೀತಿ 10 ಕೋಟಿಗಿಂತ ಹೆಚ್ಚಿನ ಅನುದಾನವಿರುವ ಕಾರ್ಯಕ್ರಮಗಳಾದ ತುಂಗಾ ಮೇಲ್ದಂಡೆ ಯೋಜನೆಗೆ 66.89 ಕೋಟಿ ರು.ಪೈಕಿ ಬಿಡುಗಡೆ ಮಾಡಿದ್ದು ಕೇವಲ 4.45 ಕೋಟಿ ಮಾತ್ರ. ಸಮಗ್ರ ಮಕ್ಕಳ ಸಂರಕ್ಷಣಾ ಯೋಜನೆಗೆ 55.08 ಕೋಟಿ ರು.ನಲ್ಲಿ 14.63 ಕೋಟಿ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರವು ರಾಷ್ಟ್ರೀಯ ಉಚ್ಚತರ ಶಿಕ್ಷಣ ಅಭಿಯಾನಕ್ಕೆ ಘೋಷಿಸಿದ್ದ 50.40 ಕೋಟಿ ರು.ನಲ್ಲಿ, ರಾಷ್ಟ್ರೀಯ ಆಯುಷ್‌ ಅಭಿಯಾನಕ್ಕೆ 19.63 ಕೋಟಿ, ಮೀನುಗಾರಿಕೆ ಬಂದರುಗಳ ನಿರ್ಮಾಣಕ್ಕೆ 18.75 ಕೋಟಿ, ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ವೇತನಕ್ಕೆ 18.15 ಕೋಟಿ ರು.ನಲ್ಲಿ ಬಿಡಿಗಾಸನ್ನೂ ನೀಡಿಲ್ಲ.

ಜಿಎಸ್‌ಟಿ ಹಣ ಬಿಡುಗಡೆ, ಪ್ರಕೃತಿ ವಿಕೋಪ ಸೇರಿದಂತೆ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ನಿಗದಿಯಂತೆ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರ, ಕೇಂದ್ರ ಪುರಸ್ಕೃತ ಯೋಜನೆಗಳಲ್ಲೂ ತಾರತಮ್ಯವನ್ನು ಮುಂದುವರೆಸಿದೆ.

Hot this week

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...
Please Scan to make Your Contribution

Topics

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...

ಐಪಿಎಸ್ ರವೀಂದ್ರ ಕಾಶಿನಾಥ್ ಗಡಾದಿ ವಿರುದ್ಧ ಆರೋಪ; 4 ತಿಂಗಳಾದರೂ ಸಲ್ಲಿಕೆಯಾಗದ ಚಾರ್ಜ್‌ಶೀಟ್‌, ಇಲಾಖೆ ವಿಚಾರಣೆ ವಿಳಂಬ

ಬೆಂಗಳೂರು; ಕರ್ತವ್ಯಲೋಪ ಮತ್ತು ನಿಯಮ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಐಪಿಎಸ್...

Related Articles

Popular Categories

error: Content is protected !!