Wednesday | August 12, 2026 |

ಹಣಕ್ಕಾಗಿ ಬೇಡಿಕೆ; ಸಚಿವ ಅಶೋಕ್‌ ಆಪ್ತ ಸಹಾಯಕನ ವಿರುದ್ಧ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರು; ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಒಳಗಾಗಿರುವ ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಗಂಗಾಧರ್‌ ಅವರ ವಿರುದ್ಧ ಶೃಂಗೇರಿ ಸಬ್‌ ರಿಜಿಸ್ಟ್ರಾರ್‌ ಚೆಲುವರಾಜು ಅವರು ಶೃಂಗೇರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

ಪ್ರಕರಣದ ಹಿನ್ನೆಲೆ

ಶೃಂಗೇರಿಯ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಅಕ್ಷರ ಮಿತ್ರ ಕಾರ್ಯಕ್ರಮದಲ್ಲಿ ಸಚಿವ ಆರ್‌ ಅಶೋಕ್‌ ಅವರು ಭಾಗವಹಿಸಿದ್ದರು. 2021ರ ಜನವರಿ 21ರಂದು ಕಂದಾಯ ಸಚಿವರ ಪ್ರವಾಸ ವೇಳಾಪಟ್ಟಿಯನ್ನು ಉಪ ನೋಂದಣಾಧಿಕಾರಿ ಎಚ್‌ ಎಸ್‌ ಚೆಲುವರಾಜು ಅವರ ಖಾಸಗಿ ಮೊಬೈಲ್‌ ನಂಬರ್‌ 9741114815ಗೆ ಸಂದೇಶ ಕಳಿಸಲಾಗಿತ್ತು. ಆದರೆ ಸಂದೇಶ ಕಳಿಸಿದವ ಇವರಿಗೆ ಪರಿಚಯವಿರಲಿಲ್ಲ. ಇದಾಗಿ 3 ದಿನದ ನಂತರ 2021ರ ಜನವರಿ 24ರಂದು ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಎಂದು ಪರಿಚಯಿಸಿಕೊಂಡ ಗಂಗಾಧರ್‌ ಎಂಬ ವ್ಯಕ್ತಿಯು ತಮ್ಮನ್ನು ಮತ್ತು ಸಚಿವ ಅಶೋಕ್‌ ಅವರನ್ನು ಭೇಟಿ ಆಗಬೇಕು ಎಂದು ಸೂಚಿಸಿದ್ದರು ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

2021ರ ಜನವರಿ 24ರಂದು ಸಚಿವ ಆರ್‌ ಅಶೋಕ್‌ ಅವರನ್ನು ಭೇಟಿಯಾಗಲು ಶರಂಗೇರಿಯ ಆದಿಚುಂಚನಗಿರಿ ಸಮುದಾಯ ಭವನಕ್ಕೆ ತೆರಳಿದ್ದ ವೇಳೆಯಲ್ಲಿ ಗಂಗಾಧರ ಎಂಬಾತ ತನಗೆ ಹಣ ನೀಡಬೇಕು ಎಂದು ಬೇಡಿಕೆ ಇಟ್ಟರು ಎಂದು ದೂರಿದ್ದಾರೆ. ಈ ಬಗ್ಗೆ ನನಗೆ ಯಾರಿಗೂ ಈ ರೀತಿ ಹಣ ನೀಡುವ ಅಥವಾ ಯಾರಿಂದಲೂ ಹಣ ಪಡೆಯುವ ಅಭ್ಯಾಸ ನನಗೆ ಇಲ್ಲ ಎಂದು ಸ್ಥಳದಲ್ಲಿಯೇ ತಿಳಿಸಿ ಆತನ ಬೇಡಿಕೆಯನ್ನು ತಿರಸ್ಕರಿಸಿದ್ದೆ ಎಂದು ವಿವರಿಸಿದ್ದಾರೆ.

ಅದೇ ದಿನ ಗಂಗಾಧರ್‌ (ದೂರವಾಣಿ ಸಂಖ್ಯೆ ; 7760666222) 8-30ರ ಸಮಯದಲ್ಲಿ ತನ್ನ ಮೊಬೈಲ್‌ನಿಂದ ವಾಟ್ಸಾಪ್‌ ಧ್ವನಿ ಕರೆ ಮಾಡಿದ್ದ ಎಂದು ದೂರಿನಲ್ಲಿ ಹೇಳಿರುವ ಚೆಲುವರಾಜು ಅವರು ಗಂಗಾಧರ್‌ ಎಂಬುವರು ಸರ್ಕಾರಿ ಅಧಿಕಾರಿಯನ್ನು ಅಕ್ರಮ ಹಣಕ್ಕಾಗಿ ಬಳಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಚೆಲುವರಾಜು ಅವರು ಆರೋಪಿಸಿದ್ದಾರೆ.

ಅಬಕಾರಿ ಸಚಿವರಾಗಿದ್ದ ಎಚ್‌ ನಾಗೇಶ್‌ ವಿರುದ್ಧವೂ ಒಂದು ಕೋಟಿ ಲಂಚದ ಆರೋಪ ಕೇಳಿ ಬಂದಿತ್ತು. ಈ ಕುರಿತು ಅಬಕಾರಿ ಇಲಾಖೆಯ ಜಂಟಿ ಆಯುಕ್ತರ ಪುತ್ರಿ ಪ್ರಧಾನಮಂತ್ರಿ ಕಚೇರಿಗೆ ದೂರು ದಾಖಲಿಸಿದ್ದರು. ಹಾಗೆಯೇ ಕೃಷಿ ಇಲಾಖೆ ಅಧಿಕಾರಿ, ನೌಕರರು ಸಚಿವ ಬಿ ಸಿ ಪಾಟೀಲ್‌ ಅವರ ವಿರುದ್ಧ ಹಣ ವಸೂಲಿ ಆರೋಪ ಮಾಡಿ ಮುಖ್ಯಮಂತ್ರಿ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವರಿಗೆ ದೂರು ಸಲ್ಲಿಸಿದ್ದನ್ನು ಸ್ಮರಿಸಬಹುದು.

Hot this week

ಚಿಲುಮೆ ಪ್ರಕರಣ; ನಿರ್ದಿಷ್ಟ, ಖಚಿತ, ಸ್ಪಷ್ಟವಾಗಿ ಕೋರಿದ್ದ ಮಾಹಿತಿಯೇ ‘ಮಾಹಿತಿ ವ್ಯಾಖ್ಯಾನದಡಿಯಲ್ಲಿಲ್ಲವೆಂದ’ ಇಲಾಖೆ, ಮತದಾರರ ದತ್ತಾಂಶ ಕಳ್ಳತನ ಮುಚ್ಚಿ ಹಾಕಿತೇ ಕಾಂಗ್ರೆಸ್?

ಬೆಂಗಳೂರು;  ಮತದಾರರ ಪಟ್ಟಿ ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲು ಹಿಂದಿನ ಬಿಜೆಪಿ ಸರ್ಕಾರವು...

ಗಣಿ ಗುತ್ತಿಗೆಯ 14 ಬ್ಲಾಕ್‌ಗಳ ಹರಾಜಿಗೆ ತರಾತುರಿ; ಗಣಿ ಅಧಿಕಾರಿಗಳ ಕುತ್ತಿಗೆ ಮೇಲೆ ಕುಳಿತ ಮುಖ್ಯಮಂತ್ರಿ?

ಬೆಂಗಳೂರು; ರಾಮಗಢ್, ದೋಣಿಮಲೈ, ಡೆಕ್ಕನ್ ಮೈನಿಂಗ್, ಕುಮಾರಸ್ವಾಮಿ ಬ್ಲಾಕ್, ಹನುಮಾನ್ ಮೈನ್ಸ್‌...

ಶೇ.60ರಷ್ಟು ವಸೂಲಾಗದ ತೆರಿಗೆಯೇತರ ಆದಾಯ, ತೆರಿಗೆ ಪಾವತಿಯಲ್ಲಿ ದುರ್ಬಳಕೆ; ಜಮೆಯಾಗದ 13.07 ಕೋಟಿ ತೆರಿಗೆ ಹಣ, 1,478 ಪಂಚಾಯ್ತಿಗಳಲ್ಲಿ ಅಕ್ರಮ?

ಬೆಂಗಳೂರು;  ರಾಜ್ಯದ ಗ್ರಾಮ ಪಂಚಾಯ್ತಿಗಳು  ಶೇಕಡ 60ರಷ್ಟು  ತೆರಿಗೆಯೇತರ ಆದಾಯವನ್ನು ವಸೂಲಿ...
Please Scan to make Your Contribution

Topics

ಗಣಿ ಗುತ್ತಿಗೆಯ 14 ಬ್ಲಾಕ್‌ಗಳ ಹರಾಜಿಗೆ ತರಾತುರಿ; ಗಣಿ ಅಧಿಕಾರಿಗಳ ಕುತ್ತಿಗೆ ಮೇಲೆ ಕುಳಿತ ಮುಖ್ಯಮಂತ್ರಿ?

ಬೆಂಗಳೂರು; ರಾಮಗಢ್, ದೋಣಿಮಲೈ, ಡೆಕ್ಕನ್ ಮೈನಿಂಗ್, ಕುಮಾರಸ್ವಾಮಿ ಬ್ಲಾಕ್, ಹನುಮಾನ್ ಮೈನ್ಸ್‌...

ಶೇ.60ರಷ್ಟು ವಸೂಲಾಗದ ತೆರಿಗೆಯೇತರ ಆದಾಯ, ತೆರಿಗೆ ಪಾವತಿಯಲ್ಲಿ ದುರ್ಬಳಕೆ; ಜಮೆಯಾಗದ 13.07 ಕೋಟಿ ತೆರಿಗೆ ಹಣ, 1,478 ಪಂಚಾಯ್ತಿಗಳಲ್ಲಿ ಅಕ್ರಮ?

ಬೆಂಗಳೂರು;  ರಾಜ್ಯದ ಗ್ರಾಮ ಪಂಚಾಯ್ತಿಗಳು  ಶೇಕಡ 60ರಷ್ಟು  ತೆರಿಗೆಯೇತರ ಆದಾಯವನ್ನು ವಸೂಲಿ...

80,950 ಸ್ವ ಸಹಾಯ ಗುಂಪುಗಳಿಂದ 1,758.53 ಕೋಟಿ ರುಪಾಯಿ ಸಾಲದ ಹೊರ ಬಾಕಿ; ವಸೂಲಾತಿಯಲ್ಲಿ ವಿಫಲ

ಬೆಂಗಳೂರು; ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಸಾಲ...

Related Articles

Popular Categories

error: Content is protected !!