Saturday | September 12, 2026 |

ಸಚಿವ ಅಶೋಕ್‌ ಆಪ್ತ ಸಹಾಯಕ ಗಂಗಾಧರ್‌ ವಿರುದ್ಧ ಕಡೆಗೂ ಎಫ್‌ಐಆರ್‌ ದಾಖಲು

ಬೆಂಗಳೂರು; ಸಬ್‌ ರಿಜಿಸ್ಟ್ರಾರ್‌ ಬಳಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಒಳಗಾಗಿರುವ ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಗಂಗಾಧರ್‌ ಅವರ ವಿರುದ್ಧ ಶೃಂಗೇರಿ ಪಟ್ಟಣ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ನ್ಯಾಯಾಲಯದ ಅನುಮತಿ ಪಡೆದಿರುವ ಪೊಲೀಸರು ಐಪಿಸಿ 506ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಎಫ್‌ಐಆರ್‌ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಕಳೆದ 3 ದಿನಗಳ ಹಿಂದೆಯೇ ಶೃಂಗೇರಿ ಪಟ್ಟಣದ ಸಬ್‌ ರಿಜಿಸ್ಟ್ರಾರ್‌ ಚೆಲುವರಾಜು ಅವರು ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಗಂಗಾಧರ್‌ ಅವರ ವಿರುದ್ಧ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಬಗ್ಗೆ ದೂರು ಸಲ್ಲಿಸಿದ್ದರು. 72 ಗಂಟೆಗಳಾದರೂ ಕ್ರಮ ಕೈಗೊಳ್ಳದ ಶೃಂಗೇರಿ ಪೊಲೀಸರು ಎಫ್‌ಐಆರ್‌ ದಾಖಲಿಸಲು ಮೀನಮೇಷ ಎಣಿಸುತ್ತಿದ್ದರು. ಈ ಕುರಿತು ‘ದಿ ಫೈಲ್‌’ ವರದಿ ಪ್ರಕಟಿಸಿತ್ತು. ವರದಿ ಪ್ರಕಟವಾದ ಬೆನ್ನಲ್ಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

 

ಪ್ರಕರಣದ ಹಿನ್ನೆಲೆ

ಶೃಂಗೇರಿಯ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಅಕ್ಷರ ಮಿತ್ರ ಕಾರ್ಯಕ್ರಮದಲ್ಲಿ ಸಚಿವ ಆರ್‌ ಅಶೋಕ್‌ ಅವರು ಭಾಗವಹಿಸಿದ್ದರು. 2021ರ ಜನವರಿ 21ರಂದು ಕಂದಾಯ ಸಚಿವರ ಪ್ರವಾಸ ವೇಳಾಪಟ್ಟಿಯನ್ನು ಉಪ ನೋಂದಣಾಧಿಕಾರಿ ಎಚ್‌ ಎಸ್‌ ಚೆಲುವರಾಜು ಅವರ ಖಾಸಗಿ ಮೊಬೈಲ್‌ ನಂಬರ್‌ 9741114815ಗೆ ಸಂದೇಶ ಕಳಿಸಲಾಗಿತ್ತು. ಆದರೆ ಸಂದೇಶ ಕಳಿಸಿದವ ಇವರಿಗೆ ಪರಿಚಯವಿರಲಿಲ್ಲ. ಇದಾಗಿ 3 ದಿನದ ನಂತರ 2021ರ ಜನವರಿ 24ರಂದು ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಎಂದು ಪರಿಚಯಿಸಿಕೊಂಡ ಗಂಗಾಧರ್‌ ಎಂಬ ವ್ಯಕ್ತಿಯು ತಮ್ಮನ್ನು ಮತ್ತು ಸಚಿವ ಅಶೋಕ್‌ ಅವರನ್ನು ಭೇಟಿ ಆಗಬೇಕು ಎಂದು ಸೂಚಿಸಿದ್ದರು ಎಂದು ಠಾಣೆಗೆ ಸಲ್ಲಿಸಿರುವ ದೂರಿನಲ್ಲಿ ಆರೋಪಿಸಿದ್ದಾರೆ.

2021ರ ಜನವರಿ 24ರಂದು ಸಚಿವ ಆರ್‌ ಅಶೋಕ್‌ ಅವರನ್ನು ಭೇಟಿಯಾಗಲು ಶರಂಗೇರಿಯ ಆದಿಚುಂಚನಗಿರಿ ಸಮುದಾಯ ಭವನಕ್ಕೆ ತೆರಳಿದ್ದ ವೇಳೆಯಲ್ಲಿ ಗಂಗಾಧರ ಎಂಬಾತ ತನಗೆ ಹಣ ನೀಡಬೇಕು ಎಂದು ಬೇಡಿಕೆ ಇಟ್ಟರು ಎಂದು ದೂರಿದ್ದಾರೆ. ಈ ಬಗ್ಗೆ ನನಗೆ ಯಾರಿಗೂ ಈ ರೀತಿ ಹಣ ನೀಡುವ ಅಥವಾ ಯಾರಿಂದಲೂ ಹಣ ಪಡೆಯುವ ಅಭ್ಯಾಸ ನನಗೆ ಇಲ್ಲ ಎಂದು ಸ್ಥಳದಲ್ಲಿಯೇ ತಿಳಿಸಿ ಆತನ ಬೇಡಿಕೆಯನ್ನು ತಿರಸ್ಕರಿಸಿದ್ದೆ ಎಂದು ವಿವರಿಸಿದ್ದಾರೆ.

ಅದೇ ದಿನ ಗಂಗಾಧರ್‌ (ದೂರವಾಣಿ ಸಂಖ್ಯೆ ; 7760666222) 8-30ರ ಸಮಯದಲ್ಲಿ ತನ್ನ ಮೊಬೈಲ್‌ನಿಂದ ವಾಟ್ಸಾಪ್‌ ಧ್ವನಿ ಕರೆ ಮಾಡಿದ್ದ ಎಂದು ದೂರಿನಲ್ಲಿ ಹೇಳಿರುವ ಚೆಲುವರಾಜು ಅವರು ಗಂಗಾಧರ್‌ ಎಂಬುವರು ಸರ್ಕಾರಿ ಅಧಿಕಾರಿಯನ್ನು ಅಕ್ರಮ ಹಣಕ್ಕಾಗಿ ಬಳಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಚೆಲುವರಾಜು ಅವರು ಆರೋಪಿಸಿದ್ದನ್ನು ಸ್ಮರಿಸಬಹುದು.

Hot this week

ದಿ ಫೈಲ್‌ ಸಂಪಾದಕರಿಗೆ ಜೀವ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ; ಅಪರಿಚಿತನ ವಿರುದ್ಧ ಕಡೆಗೂ ಎಫ್‌ಐಆರ್ ದಾಖಲಿಸಿದ ಪೊಲೀಸರು

ಬೆಂಗಳೂರು; ದಿ ಫೈಲ್‌ ಸುದ್ದಿ ಜಾಲತಾಣದಲ್ಲಿ ಪ್ರಕಟಿಸಿದ್ದ ವರದಿ ಉಲ್ಲೇಖಿಸಿ ಸಂಪಾದಕರಿಗೆ...

ಬಹು ದೊಡ್ಡ ಬರಗಾಲ; ಜಿಲ್ಲಾಧಿಕಾರಿಗಳ ಪಿ ಡಿ ಖಾತೆಗಳಲ್ಲಿ 310 ಕೋಟಿಯಷ್ಟೇ ಲಭ್ಯ

ಬೆಂಗಳೂರು; ರಾಜ್ಯದ ಇತಿಹಾಸದಲ್ಲಿ ಎರಡನೇ ಬಾರಿಗೆ ಕಾಣಿಸಿಕೊಂಡಿರುವ ಬಹುದೊಡ್ಡ ಬರಕ್ಕೆ ತುತ್ತಾಗಿರುವ...
Please Scan to make Your Contribution

Topics

ದಿ ಫೈಲ್‌ ಸಂಪಾದಕರಿಗೆ ಜೀವ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ; ಅಪರಿಚಿತನ ವಿರುದ್ಧ ಕಡೆಗೂ ಎಫ್‌ಐಆರ್ ದಾಖಲಿಸಿದ ಪೊಲೀಸರು

ಬೆಂಗಳೂರು; ದಿ ಫೈಲ್‌ ಸುದ್ದಿ ಜಾಲತಾಣದಲ್ಲಿ ಪ್ರಕಟಿಸಿದ್ದ ವರದಿ ಉಲ್ಲೇಖಿಸಿ ಸಂಪಾದಕರಿಗೆ...

ಬಹು ದೊಡ್ಡ ಬರಗಾಲ; ಜಿಲ್ಲಾಧಿಕಾರಿಗಳ ಪಿ ಡಿ ಖಾತೆಗಳಲ್ಲಿ 310 ಕೋಟಿಯಷ್ಟೇ ಲಭ್ಯ

ಬೆಂಗಳೂರು; ರಾಜ್ಯದ ಇತಿಹಾಸದಲ್ಲಿ ಎರಡನೇ ಬಾರಿಗೆ ಕಾಣಿಸಿಕೊಂಡಿರುವ ಬಹುದೊಡ್ಡ ಬರಕ್ಕೆ ತುತ್ತಾಗಿರುವ...

ಶೇ 14 ಟೆಂಡರ್ ಪ್ರೀಮಿಯಂಗೆ ಸಮರ್ಥನೆ ಮಾಡಲು ಶೇ.10ರಷ್ಟು ಸೇವಾ ಶುಲ್ಕ ಸೇರಿಸಿದ್ದ ಬಿಎಸ್‌ಡಬ್ಲ್ಯೂಎಂಎಲ್; ಆರ್ಥಿಕ ಇಲಾಖೆ ಅವಲೋಕನ

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಾಗಾಣಿಕೆ ಮಾಡುವ...

ತನಿಖೆಯಿಂದ ಪತ್ತೆ ಹಚ್ಚಬಹುದಾದನ್ನು ದೂರುದಾರ ಸಾಬೀತುಪಡಿಸಬೇಕೇ?; ಸಿದ್ದಾರ್ಥ ವಿಹಾರ ಟ್ರಸ್ಟ್‌ ಪ್ರಕರಣದಲ್ಲಿ ನ್ಯಾಯಪೀಠದ ಅವಲೋಕನ

ಬೆಂಗಳೂರು; 'ದೂರುದಾರರ ವಿಚಾರಣೆಯ ಮೂಲಕವೇ  ಸಂಪೂರ್ಣ ಸರಪಳಿಯನ್ನು ಬಿಚ್ಚಿಡುವಂತೆ ಖಾಸಗಿ ದೂರುದಾರರಿಂದ...

Related Articles

Popular Categories

error: Content is protected !!