Monday | April 13, 2026 |

ಒಕ್ಕಲಿಗರ ಸಂಘದ ಬೈಲಾ ತಿದ್ದುಪಡಿ; ದೇವೇಗೌಡರ ಮನವಿಗೆ ಮನ್ನಣೆ ನೀಡದ ಸರ್ಕಾರ

ಬೆಂಗಳೂರು; ರಾಜ್ಯ ಒಕ್ಕಲಿಗರ ಸಂಘದ ಬೈಲಾ ತಿದ್ದುಪಡಿಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಸೇರಿದಂತೆ ಹಲವರು ಬರೆದಿದ್ದ ಪತ್ರಗಳಿಗೆ ರಾಜ್ಯ ಬಿಜೆಪಿ ಸರ್ಕಾರ ಮಾನ್ಯತೆ ನೀಡಿಲ್ಲ. ಆಡಳಿತಾಧಿಕಾರಿ ಅವಧಿಯಲ್ಲಿ ಬೈಲಾ ತಿದ್ದುಪಡಿ ಮಾಡಲು ನಿರಾಕರಿಸಿದೆ. ಹೀಗಾಗಿ ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವರಿಗೆ ಇದು ಹಿನ್ನಡೆಯಾದಂತಿದೆ.

ರಾಜ್ಯ ಒಕ್ಕಲಿಗರ ಸಂಘದ ಬೈಲಾ ತಿದ್ದುಪಡಿ ಮಾಡಿ ಆ ನಂತರ ಸಂಘದ ಚುನಾವಣೆ ನಡೆಸಬೇಕು ಎಂದು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ, ಸಚಿವ ಗೋಪಾಲಯ್ಯ, ವಿಧಾನಪರಿಷತ್‌ ಸದಸ್ಯ ಅ ದೇವೇಗೌಡ ಅವರು ಸಹಕಾರಿ ಇಲಾಖೆಗೆ ಪತ್ರ ಬರೆದಿದ್ದರು. ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಸಹಾಯಕ ಕಾರ್ಯದರ್ಶಿ, ಖಜಾಂಚಿ ಸೇರಿದಂತೆ ಇನ್ನಿತರೆ ಪದಾಧಿಕಾರಿಗಳನ್ನು ನೇರವಾಗಿ ಸಂಘದ ಎಲ್ಲಾ ಸದಸ್ಯರುಗಳಿಂದ ನಿರ್ದೇಶಕರ ಚುನಾವಣೆಯಲ್ಲಿಯೇ ಆಯ್ಕೆ ಮಾಡುವ ಸಂಬಂಧ ಉದ್ಧೇಶಿತ ಬೈಲಾ ತಿದ್ದುಪಡಿಗೆ ಒಪ್ಪದಿರಲು ಸಹಕಾರ ಇಲಾಖೆ ನಿಲುವು ತಾಳಿದೆ. ಇದಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ಗೆ ಟಿಪ್ಪಣಿ ಹಾಳೆಯೊಂದು ಲಭ್ಯವಾಗಿದೆ.

ಸಂಘದಲ್ಲಿ ಒಟ್ಟು 5,20,721 ಮಂದಿ ಸದಸ್ಯರು ನೋಂದಣಿಯಾಗಿದ್ದಾರೆ. ಸಂಘದ ಬೈಲಾ 7(3)ರ ಪ್ರಕಾರ 11 ಜಿಲ್ಲಾ ಕ್ಷೇತ್ರಗಳಿಂದ 35 ಕಾರ್ಯಕಾರಿ ಸಮಿತಿ ಸದಸ್ಯರಿದ್ದಾರೆ. ಪದಾಧಿಕಾರಿಗಳ ನೇರ ಚುನಾವಣೆಗೆ ಬೈಲಾ ತಿದ್ದುಪಡಿ ಮಾಡಲು ಅಧ್ಯಕ್ಷರು, ಉಪಾಧ್ಯಕ್ಷರು, ಸಹಾಯಕ ಕಾರ್ಯದರ್ಶಿ, ಖಜಾಂಚಿ ಸೇರಿ ಒಟ್ಟು 5 ಸ್ಥಾನಗಳಿಗೆ ಯಾವ ಜಿಲ್ಲೆಯ ನಿರ್ದೇಶಕರ ಸಂಖ್ಯೆಯಲ್ಲಿ ಕಡಿಮೆ ಮಾಡಬೇಕು ಎಂಬ ಬಗ್ಗೆಯೂ ತೀರ್ಮಾನವಾಗಿಲ್ಲ ಎಂಬ ಸಂಗತಿ ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

ಪದಾಧಿಕಾರಿಗಳ ನೇರ ಆಯ್ಕೆ ಮಾಡಲು 11 ಜಿಲ್ಲಾ ಕ್ಷೇತ್ರಗಳ ವ್ಯಾಪ್ತಿಯ ಪ್ರತಿ ಮತಗಟ್ಟೆಯಲ್ಲಿಯೂ 6 ಪೆಟ್ಟಿಗೆಗಳನ್ನು ಇಡಬೇಕಿದೆ. ಇದರ ನಿರ್ವಹಣೆ ಮತ್ತು ಖರ್ಚು ವೆಚ್ಚಗಳು ಗಣನೀಯವಾಗಿ ಹೆಚ್ಚುತ್ತದೆ. ಈ ರೀತಿಯ ಬೈಲಾ ತಿದ್ದುಪಡಿಯನ್ನು ಸಂಘದ ಆಡಳಿತಾಧಿಕಾರಿ ಅವಧಿಯಲ್ಲಿ ಆಡಳಿತಾಧಿಕಾರಿ ಮಾಡಲು ಕಾನೂನಿನಲ್ಲಿ ಅವಕಾಶ ಇದೆಯೇ ಎಂಬ ಬಗ್ಗೆ ಸರ್ಕಾರವನ್ನು ಕೋರಲು ಇಲಾಖೆ ಮುಂದಾಗಿದೆ ಎಂಬುದು ಗೊತ್ತಾಗಿದೆ.

‘ಸಂಘದ ಸದಸ್ಯರ ಪೈಕಿ ಶೇ.60ಕ್ಕಿಂತಲೂ ಹೆಚ್ಚಿನ ಸದಸ್ಯರು ಗ್ರಾಮೀಣ ಭಾಗದವರಾಗಿದ್ದು ಅವರೆಲ್ಲರೂ ಮೊಬೈಲ್‌ ಸಂಖ್ಯೆಯನ್ನು ಹೊಂದಿರುವುದಿಲ್ಲ. ವರ್ಚುವಲ್‌ ಸರ್ವ ಸದಸ್ಯರ ಸಭೆಗೆ ಭಾಗವಹಿಸಲು ಅಗತ್ಯವಿರುವ ಸ್ಮಾರ್ಟ್‌ ಫೋನ್‌ ಹೊಂದಿರುವ ಸಾಧ್ಯತೆ ಕಡಿಮೆ ಇದೆ. ಇವರುಗಳು ವರ್ಚುವಲ್‌ ಸರ್ವ ಸದಸ್ಯರ ಸಭೆಯಲ್ಲಿ ಅಭಿಪ್ರಾಯವನ್ನು ವ್ಯಕ್ತಪಡಿಸಲು ಸಾಧ್ಯವಾಗುವುದಿಲ್ಲ. ದೊಡ್ಡಮಟ್ಟದ ಸದಸ್ಯರನ್ನೊಳಗೊಂಡ ಸಂಘದ ಸದಸ್ಯರನ್ನು ಕರೆದು ಬೈಲಾ ತಿದ್ದುಪಡಿ ಅಂಶಗಳನ್ನೊಳಗೊಂಡ ದೊಡ್ಡಮಟ್ಟದ ತೀರ್ಮಾನದ ಬಗ್ಗೆ ಸದಸ್ಯರ ಅಭಿಪ್ರಾಯವನ್ನು ಏಕಕಾಲದಲ್ಲಿ ಸಂಗ್ರಹಿಸುವುದು ಕಷ್ಟಕರ. ಹೀಗಾಗಿ ಸಂಘದ ಚುನಾವಣೆ ನಡೆಸಲು ಚುನಾವಣಾಧಿಕಾರಿ ನೇಮಕ ಮಾಡಬೇಕು,’ ಎಂದು ಹಲವರು ಕೋರಿದ್ದರು.

ಮಹತ್ವವಾದ ಬೈಲಾ ತಿದ್ದುಪಡಿಯನ್ನು ಆಡಳಿತಾಧಿಕಾರಿಯವರ ಅವಧಿಯಲ್ಲಿ ಸಂಘಗಳ ಕಾಯ್ದೆ ಅಡಿಯಲ್ಲಿ ಮಾಡುವುದು ಸೂಕ್ತವೇ ಎಂಬ ಬಗ್ಗೆ ಸರ್ಕಾರದ ನಿರ್ದೇಶನ ಕೋರಿದ್ದ ಇಲಾಖೆ, ಅಂತಿಮವಾಗಿ ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರ ಅಡಿಯಲ್ಲಿ ಸಂಘಗಳ ಬೈಲಾ ತಿದ್ದುಪಡಿ ಮಾಡುವ ಅವಕಾಶವಿಲ್ಲ ಎಂದು ನಿಲುವು ತಾಳಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

ನಿವೃತ್ತ ಐಎಎಸ್ ಅಧಿಕಾರಿ ಶಂಕರಲಿಂಗೇ ಗೌಡ ಅವರನ್ನು ಆಡಳಿತಾಧಿಕಾರಿಯನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ. ಫೆ.21ರಿಂದ ಜಾರಿಗೆ ಬರುವಂತೆ ಶಂಕರಲಿಂಗೇಗೌಡ ಅವರು ಮುಂದಿನ 6 ತಿಂಗಳವರೆಗೂ ಆಡಳಿತಾಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ. ನೂತನ ಆಡಳಿತಾಧಿಕಾರಿಯಾಗಿರುವ ಶಂಕರಲಿಂಗೇಗೌಡ ಅವರು 6 ತಿಂಗಳ ಅವಧಿಯಲ್ಲಿ ಸಂಘದಲ್ಲಿನ ನ್ಯೂನತೆಗಳನ್ನು ಸರಿಪಡಿಸಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ ನಡೆಸಿ ಚುನಾಯಿತ ಆಡಳಿತ ಮಂಡಳಿಗೆ ಅಧಿಕಾರ ಹಸ್ತಾಂತರಿಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸಹಕಾರ ಇಲಾಖೆ ಆದೇಶ ಹೊರಡಿಸಿತ್ತು.

Hot this week

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ದಾಖಲಾಗದ ಎಫ್‌ಐಆರ್, ವರದಿ ಸಲ್ಲಿಸಲು ಸೂಚನೆ

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ...

13 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಸಂಘದಿಂದ ಮತ್ತೊಂದು ಪತ್ರ, ಕೋರ್ಟ್‌ ಕದ ತಟ್ಟಿದ ಗುತ್ತಿಗೆದಾರರು

ಬೆಂಗಳೂರು;  ಮಹಾತ್ಮಗಾಂಂಧಿ ನಗರ ವಿಕಾಸ ಯೋಜನೆ -1 ರ ಅಡಿಯಲ್ಲಿ ಕಾಮಗಾರಿ...

Topics

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

Related Articles

Popular Categories

error: Content is protected !!