Wednesday | March 25, 2026 |

ನ್ಯಾಯಾಂಗ ಭ್ರಷ್ಟಾಚಾರ; ವಿಧಾನಸಭೆಯಲ್ಲಿನ ಆಕ್ರೋಶವೇ ‘ಚೋದ್ಯ’ವೆಂದ ನಾಗಿದೇವ ಶರಣರು

Support THE-FILE

spot_img

ಬೆಂಗಳೂರು; ಬಜೆಟ್ ಮೇಲಿನ ಚರ್ಚೆ ವೇಳೆ ಶಾಸಕರು ನ್ಯಾಯಾಂಗ ವ್ಯವಸ್ಥೆಯ ಭ್ರಷ್ಟಾಚಾರದ ಕುರಿತು ವಿಧಾನಸಭೆಯಲ್ಲಿ ಪಕ್ಷಭೇದ ಮರೆತು ನಡೆಸಿದ ಗಂಭೀರ ಸ್ವರೂಪದ ಚರ್ಚೆಯು ಹಲವು ಆಯಾಮ ಪಡೆದುಕೊಳ್ಳಲಾರಂಭಿಸಿದೆ.

ನ್ಯಾಯಾಂಗ ಭ್ರಷ್ಟಾಚಾರ ಕುರಿತು ಗಂಭೀರ ಚರ್ಚೆಗೆ ಪೀಠಿಕೆ ಹಾಕಿದ್ದ ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ಸೇರಿದಂತೆ ಇನ್ನಿತರೆ ಶಾಸಕರು ವ್ಯಕ್ತಪಡಿಸಿರುವ ಅಭಿಪ್ರಾಯಗಳ ಕುರಿತು ಚಿತ್ರದುರ್ಗದ ಛಲವಾದಿ ಗುರುಪೀಠದ ಶ್ರೀ ಬಸವ ನಾಗಿದೇವ ಶರಣರು ತಮ್ಮದೇ ಆದ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ವಿಶೇಷವೆಂದರೆ ರಮೇಶ್‌ಕುಮಾರ್‌ ಅವರ ವಿರುದ್ಧ ಕೇಳಿ ಬಂದಿದ್ದ ಅರಣ್ಯ ಒತ್ತುವರಿ ಆರೋಪದ ಕುರಿತು ಹಾಗೂ ಡಿ ಕೆ ಶಿವಕುಮಾರ್‌, ಪಿ ಚಿದಂಬರಂ ಅವರ ಹೆಸರನ್ನೂ ಹೇಳಿಕೆಯಲ್ಲಿ ಪ್ರಸ್ತಾಪಿಸಿದ್ದಾರೆ.

ನ್ಯಾಯಾಂಗ ಭ್ರಷ್ಟಾಚಾರದ ಕುರಿತು ಶಾಸಕರು ನಡೆಸಿದ್ದ ಚರ್ಚೆಯ ಕುರಿತಾಗಿ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯು ವಿಸ್ತರಿಸಿದೆ. ಪತ್ರಿಕಾ ಹೇಳಿಕೆಯ ಪ್ರತಿ ಮತ್ತು ವಿಡಿಯೋ ತುಣುಕು ಸಹ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಹೇಳಿಕೆಯಲ್ಲೇನಿದೆ?

‘ಈ ದೇಶದ ನ್ಯಾಯಾಂಗ ವ್ಯವಸ್ಥೆಗೆ ಭ್ರಷ್ಟಾಚಾರವನ್ನು ಕಲಿಸಿದ್ದೇ ಕಾಂಗ್ರೆಸ್‌ ಸರ್ಕಾರ ಎಂಬುದನ್ನು ಯಾರೂ ಮರೆಯಬಾರದು. ರಾಹುಲ್‌ಗಾಂಧಿ, ಡಿ ಕೆ ಶಿವಕುಮಾರ್‌, ಪಿ ಚಿದಂಬರಂ ಹೀಗೆ ಹತ್ತು ಹಲವು ಧುರೀಣರು ಸಾವಿರಾರು ಕೋಟಿ ರುಪಾಯಿಗಳ ಅಪರಾ ತಪರಾ, ಕೊಲೆ ಪ್ರಕರಣ ಮತ್ತು ಅರಣ್ಯ ಒತ್ತುವರಿ ಆರೋಪದಲ್ಲಿ ಸಿಲುಕಿರುವ ರಮೇಶ್‌ಕುಮಾರ್‌ ಅಂತಹವರು ಜೈಲು ಕಂಬಿ ಎಣಿಸುವುದರ ಬದಲು ಜಾಮೀನು ಪಡೆದು ಅಡ್ಡಾಡುತ್ತಾ ವ್ಯವಸ್ಥೆಯ ಬಗ್ಗೆ ವಿಧಾನಸಭೆಯಲ್ಲಿ ನ್ಯಾಯಾಂಗದ ಭ್ರಷ್ಟಾಚಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಚೋದ್ಯವೇ ಸರಿ,’ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿಗಳ ಆಯ್ಕೆಯ ವಿಷಯದಲ್ಲಿ ಕೊಲಿಜಿಯಂ ಪದ್ಧತಿಯಲ್ಲಿ ಮಾರ್ಪಾಡು ಆದರೆ ನ್ಯಾಯಾಂಗ ಭ್ರಷ್ಟಾಚಾರ ನಿಯಂತ್ರಣ ಸಾಧ್ಯ ಎಂದು ಹೇಳಿದ್ದಾರೆ. ಕೊಲಿಜಿಯಂನ್ನು ತಮ್ಮ ತಾಳಕ್ಕೆ ತಕ್ಕಂತೆ ಕುಣಿಸಿದ ಅಂದಿನ ಪ್ರಧಾನಿ ನೆಹರೂ ಮತ್ತು ಇಂದಿರಾಗಾಂಧಿಯವರೇ ಇಂದಿನ ಪರಿಸ್ಥಿತಿಗೆ ನೇರ ಕಾರಣ ಎಂದೂ ಆರೋಪಿಸಿದ್ದಾರೆ.

ಶಾಸಕಾಂಗ ಮತ್ತು ಕಾರ್ಯಾಂಗ ತಮ್ಮ ಜವಾಬ್ದಾರಿಗಳನ್ನು ಮರೆತಿದ್ದಾಗ ‘ನ್ಯಾಯಾಂಗ ಕ್ರಿಯಾಶೀಲತೆ’ (ಜುಡಿಷಿಯಲ್ ಆಕ್ಟಿವಿಸಮ್) ಆರಂಭವಾಯಿತು. ಈಗೀಗ ನ್ಯಾಯಾಲಯಗಳಿಂದ ಹೊರ ಬೀಳುತ್ತಿರುವ ತೀರ್ಪುಗಳನ್ನು ನೋಡಿದರೆ ಆತಂಕವಾಗುತ್ತದೆ. ನ್ಯಾಯದ ದೀಪ ಹೊಯ್ದಾಡುತ್ತಿದ್ದು, ಎಲ್ಲಿ ಆರಿ ಹೋಗುವುದೊ ಎಂಬ ಆತಂಕ ಕಾಡುತ್ತಿದೆ’ ಎಂದು ಶಾಸಕರು ಹೇಳಿದ್ದನ್ನು ಸ್ಮರಿಸಬಹುದು.

ನ್ಯಾಯದ ದೀಪ ಹೊಯ್ದಾಡುತ್ತಿದ್ದು, ಅದು ಆರಿ ಹೋದರೆ ದೇಶದಲ್ಲಿ ಅರಾಜಕತೆಯ ಕಾರ್ಗತ್ತಲು ಕವಿಯುತ್ತದೆ. ನ್ಯಾಯಾಂಗದಲ್ಲಿ ವಿಪರೀತ ಭ್ರಷ್ಟಾಚಾರ ತಾಂಡವವಾಡುತ್ತಿದೆ. ನ್ಯಾಯಾಧೀಶರು ಜನಪ್ರತಿನಿಧಿಗಳನ್ನು ಕಳ್ಳ–ಕಾಕರಂತೆ ನೋಡುತ್ತಾರೆ ಎಂದೂ ಹೇಳಿದ್ದರು.
‘ನ್ಯಾಯಾಂಗ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಅಕ್ರಮಗಳು ಮತ್ತು ಭ್ರಷ್ಟಾಚಾರದ ಬಗ್ಗೆ ಹೊರಗೆ ಎಲ್ಲೂ ಧ್ವನಿ ಎತ್ತಲು ಸಾಧ್ಯವಿಲ್ಲ. ಮಾತನಾಡಿದರೆ ಮಾರನೇ ದಿನವೇ ನೋಟಿಸ್‌ ಬರುತ್ತದೆ. ಇಲ್ಲಿ (ಸದನದಲ್ಲಿ) ಮಾತ್ರ ನಮಗೆ ರಕ್ಷಣೆ ಇದೆ. ಇಲ್ಲಿಯೇ ವಿಮರ್ಶಾತ್ಮಕವಾಗಿ ಮಾತನಾಡದಿದ್ದರೆ ಇನ್ನೆಲ್ಲಿ ಮಾತನಾಡುವುದು’ ಎಂದು ಶಾಸಕರು ಕೇಳಿದರು.

‘ಶಾಸಕಾಂಗ ಮತ್ತು ಕಾರ್ಯಾಂಗ ತಮ್ಮ ಜವಾಬ್ದಾರಿಗಳನ್ನು ಮರೆತಿದ್ದಾಗ ‘ನ್ಯಾಯಾಂಗ ಕ್ರಿಯಾಶೀಲತೆ’ (ಜುಡಿಷಿಯಲ್ ಆಕ್ಟಿವಿಸಮ್) ಆರಂಭವಾಯಿತು. ಈಗೀಗ ನ್ಯಾಯಾಲಯಗಳಿಂದ ಹೊರ ಬೀಳುತ್ತಿರುವ ತೀರ್ಪುಗಳನ್ನು ನೋಡಿದರೆ ಆತಂಕವಾಗುತ್ತದೆ. ನ್ಯಾಯದ ದೀಪ ಹೊಯ್ದಾಡುತ್ತಿದ್ದು, ಎಲ್ಲಿ ಆರಿ ಹೋಗುವುದೊ ಎಂಬ ಆತಂಕ ಕಾಡುತ್ತಿದೆ’ ಎಂದು ರಮೇಶ್‌ಕುಮಾರ್‌ ಹೇಳುವ ಮೂಲಕ ನ್ಯಾಯಾಂಗ ಭ್ರಷ್ಟಾಚಾರದ ಕುರಿತು ಪೀಠಿಕೆಯನ್ನು ಹಾಕಿದ್ದರು.

ಆರಂಭಿಕ ಹಂತದಲ್ಲಿ ಕಾವು ಪಡೆದುಕೊಂಡಿದ್ದ ಈ ಚರ್ಚೆ ಆನಂತರ ಅಪೂರ್ಣವಾಗುತ್ತಿದ್ದಂತೆ ಜೆಡಿಎಸ್‌ನ ಎ.ಟಿ.ರಾಮಸ್ವಾಮಿ ಅವರು ಚರ್ಚೆಯನ್ನು ಮತ್ತಷ್ಟು ಬೆಳೆಸಲು ಮುಂದಾದರಲ್ಲದೆ, ‘ಎಲ್ಲ ಕ್ಷೇತ್ರಗಳಂತೆ ನ್ಯಾಯಾಂಗವೂ ನೈತಿಕತೆ ಕಳೆದುಕೊಂಡಿದೆ. ನ್ಯಾಯಾಂಗ ನೌಕರರ ಗೃಹ ನಿರ್ಮಾಣ ಮಂಡಳಿಯ ಸದಸ್ಯರಲ್ಲದ ಮತ್ತು ಹೈಕೋರ್ಟ್‌ ಹಾಗೂ ಸುಪ್ರೀಂಕೋರ್ಟ್‌ನ 84 ನ್ಯಾಯಾಧೀಶರು ನಿವೇಶನ ಖರೀದಿಸಿದ್ದಾರೆ. ನಿಯಮಾವಳಿ ಪ್ರಕಾರ ನ್ಯಾಯಾಧೀಶರಿಗೆ ನಿವೇಶನ ಖರೀದಿಸುವ ಹಕ್ಕು ಇಲ್ಲ. ಹಾಗಿದ್ದರೆ ಇವರಿಗೇ ಬೇರೆ ಕಾನೂನು ಇದೆಯೇ’ ಎಂದು ಖಾರವಾಗಿ ಪ್ರಶ್ನಿಸಿದ್ದರು.

‘ಈ ಹಗರಣ ನಡೆದು ಇಷ್ಟು ಸಮಯವಾದರೂ ಇವರ (ನ್ಯಾಯಾಧೀಶರ) ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ? ನಾವು ಯಾರ ಬಳಿ ಹೋಗಿ ನ್ಯಾಯ ಕೋರಬೇಕು? ನ್ಯಾಯಾಂಗದಲ್ಲಿ ಪಾವಿತ್ರ್ಯ ಉಳಿದಿದೆಯೇ’ ಎಂದೂ ರಾಮಸ್ವಾಮಿ ಕೇಳಿದ್ದರು. ’ಸಂವಿಧಾನದಲ್ಲಿ ಜನಪ್ರತಿನಿಧಿ ಸಭೆಯೇ ಅಂತಿಮ ಸಭೆ. ಜನಪ್ರತಿನಿಧಿಗಳು ಎಲ್ಲಿಯವರೆಗೆ ಸಮರ್ಪಕವಾಗಿ ಕೆಲಸ ಮಾಡುತ್ತಾರೋ ಅಲ್ಲಿಯವರೆಗೆ ಸಂಶಯದಿಂದ ನೋಡಬಾರದು‘ ಕಾಂಗ್ರೆಸ್‌ ಸದಸ್ಯ ಎಚ್‌.ಕೆ.ಪಾಟೀಲ್‌ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು.

‘ನಾನೂ ಕಾನೂನು ಸಚಿವನಾಗಿದ್ದೆ. ನ್ಯಾಯಾಲಯದಲ್ಲಿ ಇತ್ಯರ್ಥವಾಗದೇ ಬಾಕಿ ಉಳಿದ ಪ್ರಕರಣಗಳ ಸಂಖ್ಯೆಯನ್ನು ಒಬ್ಬ ದೊಡ್ಡ ವಕೀಲರ ಬಳಿ ಕೇಳಿದೆ. ಅದಕ್ಕೆ ಅವರು… ಅಯ್ಯೋ ಅದನ್ನೆಲ್ಲಾ ಕೇಳಿ ತಪ್ಪು ಮಾಡಬೇಡಿ. ಅದರಿಂದ ನ್ಯಾಯಾಂಗ ನಿಂದನೆ ಆಗುತ್ತದೆ ಎಂದು ಗಾಬರಿ ಬೀಳಿಸಿದರು’ ಎಂದು ಪಾಟೀಲ್‌ ಅವರು ಹೇಳಿದ್ದನ್ನು ಸ್ಮರಿಸಬಹುದು.

Hot this week

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

Topics

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

Related Articles

Popular Categories

error: Content is protected !!