Wednesday | May 13, 2026 |

ಸಹಭಾಗಿ ಪತ್ರಿಕೋದ್ಯಮ; ‘ದಿ ಫೈಲ್‌’ ವರದಿಯನ್ನು ವಿಸ್ತರಿಸಿದ ಪ್ರಜಾವಾಣಿ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರವು 2020-21ನೇ ಸಾಲಿನ ಪ್ರಧಾನಮಂತ್ರಿ ಕಿಸಾನ್‌ ಕರ್ನಾಟಕ ಯೋಜನೆಯಡಿ ಎರಡನೇ ಕಂತಿನ ಆರ್ಥಿಕ ಸಹಾಯ ಧನ ಬಿಡುಗಡೆ ಮಾಡಲು ಈವರೆವಿಗೂ ನಯಾ ಪೈಸೆಯನ್ನೂ ಬಿಡುಗಡೆ ಮಾಡಿಲ್ಲ ಎಂದು ಒಂದು ವಾರದ ಹಿಂದೆಯೇ ಹೊರಗೆಡವಿದ್ದ ‘ದಿ ಫೈಲ್‌’ ವರದಿಯನ್ನು ಪ್ರಜಾವಾಣಿ ಪತ್ರಿಕೆಯೂ ವಿಸ್ತರಿಸಿದೆ.

ಕೋವಿಡ್‌ನಿಂದ ಉದ್ಭವಿಸಿರುವ ಆರ್ಥಿಕ ಸಂಕಷ್ಟದಲ್ಲೂ ಮಠ ಮಾನ್ಯಗಳಿಗೆ 80 ಕೋಟಿ ಅನುದಾನ ಬಿಡುಗಡೆ ಮಾಡಿದ್ದ ಸರ್ಕಾರವು ಪಿಎಂ ಕಿಸಾನ್‌ ಸಮ್ಮಾನ್‌ ಕರ್ನಾಟಕ ಯೋಜನೆಯ ಹೆಚ್ಚುವರಿ ಅನುದಾನವನ್ನು ನೀಡದೇ ಇದ್ದದ್ದನ್ನು ದಾಖಲೆ ಸಮೇತ ವರದಿ ಪ್ರಕಟಿಸಿತ್ತು.

ಕಿಸಾನ್‌ ಯೋಜನೆ 2ನೇ ಕಂತಿನ ಬಿಡಿಗಾಸು ಕೊಡದ ಸರ್ಕಾರ; ಮಠಗಳಿಗಿರುವ ನೆರವು ರೈತರಿಗೇಕಿಲ್ಲ?

‘ದಿ ಫೈಲ್‌’ ವರದಿ ಪ್ರಕಟಿಸಿದ ಒಂದು ವಾರದ ನಂತರ ರೈತರ ಕೈಸೇರದ ಎರಡನೇ ಕಂತು ಶೀರ್ಷಿಕೆಯಲ್ಲಿ ವಿಶೇಷ ವರದಿಯನ್ನು ಪ್ರಕಟಿಸಿರುವ ಪ್ರಜಾವಾಣಿಯು ಈ ನಿಟ್ಟಿನಲ್ಲಿ ಸಹಭಾಗಿ ಪತ್ರಿಕೋದ್ಯಮವನ್ನು ಮುಂದುವರೆಸಿದೆ.

ಸರ್ಕಾರದ ಆಡಳಿತ ವೈಫಲ್ಯ, ಯೋಜನೆಗಳ ಅನುಷ್ಠಾನದಲ್ಲಿನ ಹಿನ್ನಡೆ, ಅಕ್ರಮ, ಅವ್ಯವಹಾರ, ಭ್ರಷ್ಟಾಚಾರ, ಆಡಳಿತದಲ್ಲಿನ ಲೋಪದೋಷಗಳ ಕುರಿತು ಬೇರೊಂದು ಮಾಧ್ಯಮದಲ್ಲಿ ವರದಿ ಪ್ರಕಟವಾದಾಗ ಮುಖ್ಯ ವಾಹಿನಿಯಲ್ಲಿರುವ ಮಾಧ್ಯಮಗಳು ಅ ವರದಿಗಳನ್ನು ಇನ್ನಷ್ಟು ವಿಸ್ತರಿಸುವ ಮೂಲಕ ಸರ್ಕಾರದ ಕಣ್ಣು ತೆರೆಸುವುದು ಪತ್ರಿಕೋದ್ಯಮದಲ್ಲಿ ಉತ್ತಮ ಬೆಳವಣಿಗೆಯೇ ಸರಿ.

ದಿ ಫೈಲ್‌ ಪ್ರಕಟಿಸಿದ್ದ ವರದಿಯಲ್ಲೇನಿತ್ತು?

ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾಗಿರುವ ಪ್ರಧಾನಮಂತ್ರಿ ಕಿಸಾನ್‌ ಯೋಜನೆಗೆ ರಾಜ್ಯ ಸರ್ಕಾರವು ಅನುದಾನವನ್ನು ಹಂಚಿಕೊಳ್ಳುತ್ತಿದೆ. ಆದರೆ 2020-21ನೇ ಸಾಲಿನಲ್ಲಿ ರಾಜ್ಯ ಸರ್ಕಾರದಿಂದ ನೀಡುವ 4,000 ರು. ಹೆಚ್ಚುವರಿ ಆರ್ಥಿಕ ಸಹಾಯಧನದ ಎರಡನೇ ಕಂತಿನ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಈ ಕುರಿತು ಕೃಷಿ ಆಯುಕ್ತರು 2021ರ ಮಾರ್ಚ್‌ 16ರಂದು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಬರೆದಿದ್ದ ಪತ್ರವನ್ನಾಧರಿಸಿ ವರದಿ ಮಾರ್ಚ್‌ 25ರಂದು ವರದಿ ಪ್ರಕಟಿಸಿತ್ತು.

4,000 ರು.ಗಳ ಹೆಚ್ಚುವರಿ ಆರ್ಥಿಕ ನೆರವನ್ನು 2 ಕಂತುಗಳಲ್ಲಿ ಪಿ ಎಂ ಕಿಸಾನ್‌ ಕರ್ನಾಟಕ ಯೋಜನೆಯಡಿ ನೀಡುತ್ತಿದೆ. ಇದಕ್ಕಾಗಿ ರಾಜ್ಯವಲಯದ ಲೆಕ್ಕ ಶೀರ್ಷಿಕೆ (2401-00-800-1-05-100) ಅಡಿ ಒಟ್ಟು 2,100 ಕೋಟಿ ರು. ನಿಗದಿಪಡಿಸಿತ್ತು. ಈ ಪೈಕಿ 2020-21ನೇ ಸಾಲಿನಲ್ಲಿ ಎರಡನೇ ಕಂತಿಗೆ 51,66,395 ರೈತರಿಗೆ 1,033.28 ಕೋಟಿ ಹಾಗೂ ಮೊದಲನೇ ಕಂತಿನ ಬಾಕಿ ಬಾಕಿ 56,665 ರೈತರಿಗೆ 11.33 ಕೋಟಿ ರು. ಸೇರಿ ಒಟ್ಟಾರೆ 2020-21ನೇ ಸಾಲಿಗೆ 1,044.61 ಕೋಟಿ ರು. ಅನುದಾನ ಒದಗಿಸಬೇಕಿತ್ತು.

‘2020-21ನೇ ಸಾಲಿನಲ್ಲಿ ಎರಡನೇ ಕಂತಿನ ಆರ್ಥಿಕ ಸಹಾಯಧನವನ್ನು ಪಾವತಿಸಲು ಅನುದಾನ ಇಲ್ಲಿಯವರೆಗೆ ಬಿಡುಗಡೆ ಮಾಡಿಲ್ಲ, ‘ ಎಂದು ಕೃಷಿ ಆಯುಕ್ತರು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಅನುದಾನ ಹೆಚ್ಚುವರಿ ಆರ್ಥಿಕ ಸಹಾಯಧನ ಬಿಡುಗಡೆಯಾಗದ ಕಾರಣ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ಸಾವಿರಾರು ಸಂಖ್ಯೆಯ ರೈತರು ಸಂಕಷ್ಟದಲ್ಲಿದ್ದರೂ ಕೃಷಿ ಸಚಿವ ಬಿ ಸಿ ಪಾಟೀಲ್‌ ರೈತರ ಸಂಕಷ್ಟವನ್ನು ಆಲಿಸಿರಲಿಲ್ಲ ಎಂದು ‘ದಿ ಫೈಲ್‌’ ವರದಿಯಲ್ಲಿ ವಿವರಿಸಿತ್ತು.

ಇದೇ ಲೆಕ್ಕ ಶೀರ್ಷಿಕೆಯಲ್ಲಿ ಕಳೆದ ಸಾಲಿನಲ್ಲಿ 59346.00 ಲಕ್ಷ ರುಗ.ಳನ್ನು ಪ್ರಸಕ್ತ ಸಾಲಿನಲ್ಲಿ ಬಳಸಿಕೊಂಡಿದ್ದ ಕೃಷಿ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಒದಗಿಸಿರುವ ಅನುದಾನವನ್ನು ಉಳಿಕೆ ಮಾಡಲು ಮುಂದಾಗಿತ್ತು. ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ಈವರೆವಿಗೆ 60,85,996 ರೈತರು ಪಿಎಂಕೆ ಪೋರ್ಟಲ್‌ನಲ್ಲಿ ಮತ್ತು 3,77,990 ಸ್ವಯಂ/ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಿದ್ದಾರೆ. ನೋಂದಣಿ ವಿವರಗಳನ್ನು ಪರಿಶೀಲಿಸಿದ ನಂತರ ಕೇಂದ್ರ ಸರ್ಕಾರಕ್ಕೆ ಒಟ್ಟು 57,09,537 ರೈತರ ವಿವರಗಳನ್ನು ಕಳಿಸಿರುವುದು ಕೃಷಿ ಸಚಿವ ಬಿ ಸಿ ಪಾಟೀಲ್‌ ಅವರು 2021ರ ಮಾರ್ಚ್‌ 17ರಂದು ನಡೆದಿದ್ದ ವಿಧಾನಸಭೆ ಅಧಿವೇಶನದಲ್ಲಿ ಡಾ ಅಜಯ್‌ ಧರ್ಮಸಿಂಗ್‌ ಅವರಿಗೆ ಲಿಖಿತ ಉತ್ತರದಿಂದ ತಿಳಿದು ಬಂದಿದೆ.

ಅಲ್ಲದೆ ಯೋಜನೆ ಜಾರಿಯಾದ ದಿನದಿಂದ ಈವರೆವಿಗೆ 53,96,762 ರೈತರಿಗೆ ಹಣ ಸಂದಾಯವಾಗಿದೆ. ವಿವಿಧ ಕಾರಣಗಳಿಂದಾಗಿ 20,584 ಫಲಾನುಭವಿ ರೈತರಿಗೆ ಯೋಜನೆಯ ಅರ್ಥಿಕ ನೆರವು ಲಭಿಸಿಲ್ಲ. 2018-19ರಲ್ಲಿ 1106062, 2019-20ರಲ್ಲಿ 4304980, 2020-21ರಲ್ಲಿ 296964 ರೈತರು ಪಿಎಂಕೆ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ. 2018-19ರಲ್ಲಿ 19,872, 2019-20ರಲ್ಲಿ 50,10,591, 2020-21ರಲ್ಲಿ 53,96,762 ರೈತರು ಆರ್ಥಿಕ ನೆರವು ಪಡೆದಿರುವುದನ್ನು ವರದಿಯಲ್ಲಿ ವಿವರಿಸಲಾಗಿತ್ತು.

Hot this week

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...
Please Scan to make Your Contribution

Topics

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

Related Articles

Popular Categories

error: Content is protected !!