Friday | August 21, 2026 |

ಲಸಿಕೆ ಸೇವಾ ಶುಲ್ಕ ಹೆಚ್ಚಳ; ಕಾರ್ಪೋರೇಟ್‌ ಆಸ್ಪತ್ರೆಗಳ ಮುಂದೆ ಮಂಡಿಯೂರಿದ ಸರ್ಕಾರ

ಬೆಂಗಳೂರು; ಲಸಿಕೆಯ ಡೋಸ್‌ವೊಂದಕ್ಕೆ ವಿಧಿಸಿದ್ದ ಸೇವಾ ಶುಲ್ಕ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರವು ಖಾಸಗಿ ಆಸ್ಪತ್ರೆಗಳ ಮುಂದೆ ಮಂಡಿಯೂರಿದೆ. ಉತ್ಪಾದಕ ಕಂಪನಿಯಿಂದ ಲಸಿಕೆ ಸಾಗಾಣಿಕೆ, ದಾಸ್ತಾನು ಮತ್ತು ಸುರಕ್ಷತೆಗೆ ಹೆಚ್ಚಿನ ವೆಚ್ಚ ತಗುಲಲಿದೆ ಎಂಬ ಕಾರಣವನ್ನು ಮುಂದೊಡ್ಡಿದ್ದ ಕಾರ್ಪೋರೇಟ್‌ ಮತ್ತು ಖಾಸಗಿ ಆಸ್ಪತ್ರೆಗಳ ವಾದವನ್ನು ಪುರಸ್ಕರಿಸಿರುವ ರಾಜ್ಯ ಸರ್ಕಾರವು ಸೇವಾ ಶುಲ್ಕದಲ್ಲಿ 100 ರು. ಹೆಚ್ಚಳ ಮಾಡಿ ಪರಿಷ್ಕರಿಸಿ ಆದೇಶ ಹೊರಡಿಸಿದೆ.

ಸರ್ಕಾರ ಈಗಾಗಲೇ ವಿಧಿಸಿರುವ ಶುಲ್ಕ ಕಡಿಮೆ ಎಂದು ವಾದಿಸುತ್ತಿರುವ ಖಾಸಗಿ ಆಸ್ಪತ್ರೆಗಳು ಶುಲ್ಕದ ಮೊತ್ತವನ್ನು 300 ರು.ಗಳಿಗೆ ಹೆಚ್ಚಿಸಬೇಕು ಎಂದು ಖಾಸಗಿ ಆಸ್ಪತ್ರೆಗಳ ಒಕ್ಕೂಟವು ಒತ್ತಡ ಹೇರಿತ್ತು. ಸೇವಾ ಶುಲ್ಕವನ್ನು ಪರಿಷ್ಕರಿಸಿ 2021ರ ಮೇ 27ರಂದು ಆದೇಶ ಹೊರಡಿಸಿದೆ. ಈ ಆದೇಶದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಸೇವಾ ಶುಲ್ಕವನ್ನು ಪರಿಷ್ಕರಿಸಿ 100 ರು. ಹೆಚ್ಚಳ ಮಾಡಿರುವ ಕಾರಣ ಖಾಸಗಿ ಆಸ್ಪತ್ರೆಗಳಲ್ಲಿ ನೀಡುವ ಲಸಿಕೆಯ ಒಟ್ಟು ದರದಲ್ಲಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಲಸಿಕಾಕರಣ ಬೂತ್‌ಗಳನ್ನು ತೆರೆಯಬೇಕು. ಲಸಿಕಾಕರಣದ ಸ್ಥಳದಲ್ಲಿ ಸಾಕಷ್ಟು ಅಂತರ ಕಾಪಾಡಲು ಹೆಚ್ಚಿನ ಸ್ಥಳಾವಕಾಶ ಕಲ್ಪಿಸುವುದು, ಲಸಿಕೆ ಖರೀದಿಸಲು ಮುಂಚಿತವಾಗಿ ಮೊತ್ತ ಪಾವತಿಸುವುದು ಮತ್ತು ಹಲವು ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಬೇಕಾಗಿರುತ್ತದೆ. ಅಲ್ಲದೆ ಇನ್ನು ಹಲವು ಕಾರ್ಯಗಳಿಗೆ ಹೆಚ್ಚಿನ ಮೊತ್ತ ವ್ಯಯವಾಗುತ್ತದೆ. ಹೀಗಾಗಿ ಸೇವಾ ಶುಲ್ಕವನ್ನು ಕನಿಷ್ಠ 300 ರು.ಗಳಿಗೆ ಹೆಚ್ಚಿಸಲು ಮನವಿ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್‌ ಹೋಮ್ಸ್‌ ಸಂಘವು ಮನವಿ ಮಾಡಿತ್ತು.

ಲಸಿಕಾಕರಣಕ್ಕೆ ಚಾಲನೆ ನೀಡಿದ್ದ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾರ್ಗಸೂಚಿಯಂತೆ ಪ್ರತಿ ಡೋಸ್‌ಗೆ 100 ರು.ನಂತೆ ಮಾತ್ರ ಸೇವಾ ಶುಲ್ಕ ಪಡೆಯಬೇಕು ಎಂದು 2021ರ ಮೇ 3ರಂದು ರಾಜ್ಯ ಸರ್ಕಾರವು ಸುತ್ತೋಲೆ ಹೊರಡಿಸಿತ್ತು. ಆದರೆ ಬಹುತೇಕ ಆಸ್ಪತ್ರೆಗಳು ಈ ಸುತ್ತೋಲೆಯನ್ನು ಪಾಲಿಸಿರಲಿಲ್ಲ. ಬದಲಿಗೆ ಸೇವಾ ಶುಲ್ಕ ಹೆಚ್ಚಳ ಮಾಡಬೇಕು ಎಂದು ಪಟ್ಟು ಹಿಡಿದಿದ್ದವು.

ಸೇವಾ ಶುಲ್ಕ ಪರಿಷ್ಕರಿಸಿ ಹೆಚ್ಚಳ ಮಾಡುವ ಸಂಬಂಧ ಫನಾ ಅಧ್ಯಕ್ಷ ಡಾ ಎಚ್‌ ಎಂ ಪ್ರಸನ್ನ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಅವರಿಗೆ 2021ರ ಮೇ 23ರಂದು ಪತ್ರ ಬರೆದಿತ್ತು.

‘ಸರಬರಾಜುದಾರರಿಂದ 4-5 ಪಟ್ಟು ಹೆಚ್ಚಳ ದರದಲ್ಲಿ ಲಸಿಕೆಗಳನ್ನು ಖಾಸಗಿ ಆಸ್ಪತ್ರೆಗಳು ಖರೀದಿಸಿವೆ. ಹೀಗಾಗಿ ಖಾಸಗಿ ಆಸ್ಪತ್ರೆಗಳು ಲಸಿಕೆ ಖರೀದಿಗೆ ಹೆಚ್ಚಿನ ಪ್ರಮಾಣದಲ್ಲಿ ಹೂಡಿಕೆ ಮಾಡಿವೆ. ಲಸಿಕೆಗಳ ಸುರಕ್ಷತೆ ಮತ್ತು ಸಾಗಾಣಿಕೆಗೆ ಹೆಚ್ಚಿನ ವೆಚ್ಚವಾಗಲಿದೆ. ಅಲ್ಲದೆ ಇತರೆ ವೆಚ್ಚಗಳನ್ನೂ ಭರಿಸಬೇಕಿರುವ ಕಾರಣ ಸೇವಾ ಶುಲ್ಕವನ್ನು ಪರಿಷ್ಕರಿಸಿ 300 ರು.ಗಳಿಗೆ ಹೆಚ್ಚಿಸಬೇಕು,’ ಎಂದು ಫನಾ ಅಧ್ಯಕ್ಷ ಡಾ ಎಚ್‌ ಎಂ ಪ್ರಸನ್ನ ಅವರು ಪತ್ರದಲ್ಲಿ ಕೋರಿದ್ದರು. ಈ ಕುರಿತು ‘ದಿ ಫೈಲ್‌’ ಮೇ 27ರಂದು ವರದಿ ಪ್ರಕಟಿಸಿತ್ತು.

ಲಸಿಕೆ ದರ ಏರಿಕೆ!; ಸೇವಾ ಶುಲ್ಕ ಪರಿಷ್ಕರಿಸಿ 300 ರು. ಹೆಚ್ಚಳಕ್ಕೆ ಒತ್ತಡ

ಫನಾ ಕೋರಿಕೆ ಕುರಿತು ಸರ್ಕಾರ ಯಾವುದೇ ನಿರ್ಧಾರ ತಳೆಯದಿದ್ದರೂ ಬಹುತೇಕ ಕಾರ್ಪೋರೇಟ್‌ ಆಸ್ಪತ್ರೆಗಳು ಡೋಸ್‌ವೊಂದಕ್ಕೆ 1,250 ರು. ಶುಲ್ಕ ವಸೂಲು ಮಾಡಿದ್ದವು. ಖಾಸಗಿ ಆಸ್ಪತ್ರೆಗಳು ಕೋವಿಶೀಲ್ಡ್‌ನ ಒಂದು ಡೋಸ್‌ಗೆ 850 ರು.,, ಕೊವಾಕ್ಸಿನ್‌ಗೆ 1,250 ರು. ಸ್ಪುಟ್ನಿಕ್‌ ವಿ ಲಸಿಕೆಗೆ 1,250 ರು. ವಿಧಿಸಿವೆ. ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಸಂಬಂಧಿ ಡಾ ಶರಣ್‌ ಪಾಟೀಲ್‌ ಅವರ ಒಡೆತನದ ಸ್ಪರ್ಶ ಆಸ್ಪತ್ರೆಯೂ ಸೇರಿದಂತೆ ಹಲವು ಆಸ್ಪತ್ರೆಗಳು ಲಸಿಕೆಗೆ 850 ರು.ನಿಂದ 1,250 ರು.ವರೆಗೂ ಶುಲ್ಕ ವಿಧಿಸಿವೆ.

ತಾನು ಉತ್ಪಾದಿಸುತ್ತಿರುವ ‘ಕೋವಿಶೀಲ್ಡ್‌’ ಲಸಿಕೆಯನ್ನು ಮುಕ್ತ ಮಾರುಕಟ್ಟೆಯಲ್ಲಿ ಪ್ರತಿ ಡೋಸ್‌ಗೆ 600 ರೂ.ಗೆ ಪೂರೈಕೆ ಮಾಡುವುದಾಗಿ ಸೀರಂ ಇನ್‌ಸ್ಟಿಟ್ಯೂಟ್‌ ಈಗಾಗಲೇ ಘೋಷಿಸಿದೆ. ಅದು ಲಸಿಕೆ ಬೆಲೆ ಎಂದೂ ಹೇಳಿತ್ತು. ಈ ಬೆಲೆ ಮೇಲೆ ಆಸ್ಪತ್ರೆಗಳು ರಾಜ್ಯ ಸರ್ಕಾರ ನಿಗದಿಪಡಿಸಿರುವ 100 ರು. ಸೇವಾ ಶುಲ್ಕವೂ ಸೇರಿದಂತೆ 700 ರು. ವಿಧಿಸಬೇಕಿತ್ತು. ಆದರೆ ಬಹುತೇಕ ಕಾರ್ಪೋರೇಟ್‌ ಆಸ್ಪತ್ರೆಗಳು ಕೋವಿಶೀಲ್ಡ್‌ ಒಂದು ಡೋಸ್‌ಗೆ 850 ರು. ವಸೂಲಿ ಮಾಡುತ್ತಿವೆ. ಅಲ್ಲದೆ ಬಹುತೇಕ ಆಸ್ಪತ್ರೆಗಳು ಒಂದೊಂದು ದರ ವಸೂಲು ಮಾಡುತ್ತಿವೆ.

Hot this week

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...
Please Scan to make Your Contribution

Topics

ಫ್ರೀಡಂ ಹಬ್ಬಕ್ಕೆ 6 ಕೋಟಿ ವೆಚ್ಚ!; ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಕೆಲಸ ಆರಂಭಿಸಿದ ಕಂಪನಿ

ಬೆಂಗಳೂರು; ಹೊಸದಾಗಿ ವಿದ್ಯಾರ್ಥಿ ನಿಲಯಗಳ ಆರಂಭ, ಅನುಮೋದಿತ ಕಾಮಗಾರಿಗಳ ಕಾರ್ಯಭಾರಕ್ಕೆ ನಲುಗಿ...

Related Articles

Popular Categories

error: Content is protected !!