Sunday | March 29, 2026 |

ವೇತನ ಹಗರಣ; ‘ದಿಫೈಲ್‌’ ವರದಿ ಆಧರಿಸಿ ಸಮಗ್ರ ವರದಿ ಸಲ್ಲಿಸಲು ಹೊರಟ್ಟಿ ಸೂಚನೆ

Support THE-FILE

spot_img

ಬೆಂಗಳೂರು; ನಿಯಮಬಾಹಿರವಾಗಿ ಹೆಚ್ಚುವರಿ ವೇತನ ಪಾವತಿಸಿ ವಿಧಾನಪರಿಷತ್‌ ಸಚಿವಾಲಯದ ಬೊಕ್ಕಸಕ್ಕೆ 48 ಲಕ್ಷ ರು. ನಷ್ಟವಾಗಿದೆ ಎಂದು ಒಂದು ತಿಂಗಳ ಹಿಂದೆಯಷ್ಟೇ ‘ದಿ ಫೈಲ್‌’ ಹೊರಗೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ವರದಿಯನ್ನು ಸಲ್ಲಿಸಬೇಕು ಎಂದು ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಸೂಚಿಸಿದ್ದಾರೆ.

ಪ್ರಕರಣದ ಕುರಿತು ‘ದಿ ಫೈಲ್‌’ ವರದಿ ಆಧರಿಸಿ ವಿಧಾನಪರಿಷತ್‌ ಮಾಜಿ ಸದಸ್ಯ ರಮೇಶ್‌ಬಾಬು ಅವರು ಸಭಾಪತಿ ಅವರಿಗೆ ಇತ್ತೀಚೆಗಷ್ಟೇ ಪತ್ರ ಬರೆದಿದ್ದರು. ಈ ಪತ್ರಕ್ಕೆ ಉತ್ತರಿಸಿರುವ ಸಭಾಪತಿ ಹೊರಟ್ಟಿ ಅವರು ಹೊರಗುತ್ತಿಗೆ ನೌಕರರ ಅಕ್ರಮ ನೇಮಕಾತಿ ಹಾಗೂ ಹೆಚ್ಚುವರಿ ವೇತನ ಪಾವತಿ ಕುರಿತಂತೆ ಸಮಗ್ರ ವರದಿ ಸಲ್ಲಿಸುವಂತೆ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ ಎಂದು ರಮೇಶ್‌ ಬಾಬು ಅವರಿಗೆ 2021ರ ಜುಲೈ 12ರಂದು ಪತ್ರ ಮುಖೇನ ಉತ್ತರಿಸಿದ್ದಾರೆ.

ಅಲ್ಲದೆ ನಿಯಮಬಾಹಿರವಾಗಿ ನೇಮಕವಾಗಿರುವ ಹೊರಗುತ್ತಿಗೆ ನೌಕರರ ಮುಂದುವರೆಸಲು ಆದೇಶ ಪಡೆದಕೊಂಡಿಲ್ಲದ ಕಾರಣ ತಕ್ಷಣವೇ ಕೆಲಸದಿಂದ ಬಿಡುಗಡೆಗೊಳಿಸಲು ಸಭಾಪತಿ ಹೊರಟ್ಟಿ ಅವರು ಆದೇಶಿಸಿರುವುದು ಪತ್ರದಿಂದ ತಿಳಿದು ಬಂದಿದೆ.

ಕಿಯೋನಿಕ್ಸ್‌ ಮೂಲಕ ಹೊರಗುತ್ತಿಗೆ ಅಡಿಯಲ್ಲಿ ನೇಮಕ ಮಾಡಿಕೊಂಡಿರುವ ನೌಕರರಿಗೆ ಹೆಚ್ಚುವರಿ ವೇತನ ಪಾವತಿಸಿರುವ ಪರಿಷತ್‌ ಸಚಿವಾಲಯವು ಆರ್ಥಿಕ ಇಲಾಖೆಯ ಅನುಮತಿಯನ್ನೇ ಪಡೆಯದೇ ನಿಯಮಬಾಹಿರವಾಗಿ ನೇಮಕ ಮಾಡಿದೆ ಎಂದು ‘ದಿ ಫೈಲ್‌’ 2021ರ ಜೂನ್‌ 18ರಂದು ಪ್ರಕಟಿಸಿದ್ದ ವರದಿ ಆಧರಿಸಿ ರಮೇಶ್‌ಬಾಬು ಅವರು 2021ರ ಜುಲೈ 6ರಂದು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಪತ್ರ ಬರೆಯುವ ಮೂಲಕ ಪ್ರಕರಣವನ್ನು ವಿಸ್ತರಿಸಿದ್ದರು.

‘ಆರ್ಥಿಕ ಇಲಾಖೆಯ ಅನುಮತಿ ಪಡೆಯದೆ ಮಾಡಿರುವ ನೇಮಕಾತಿ ಅಕ್ರಮವಾಗಿದ್ದು, ಈ ಸಂಬಂಧ ಪರಿಷತ್ತಿನ ಸಚಿವಾಲಯ ಮತ್ತು ಆರ್ಥಿಕ ಇಲಾಖೆಯೊಂದಿಗೆ ನಡೆದಿರುವ ಪತ್ರ ವ್ಯವಹಾರಗಳನ್ನು ಪಾರದರ್ಶಕತೆ ದೃಷ್ಟಿಯಿಂದ ವಿಧಾನಪರಿಷತ್ತಿನ ಅಧಿವೇಶನದಲ್ಲಿ ಬಹಿರಂಗಗೊಳಿಸಬೇಕು. ನಿಯಮಾವಳಿಗಳನ್ನು ಮೀರಿ ಹೆಚ್ಚುವರಿ ವೇತನ ಪಾವತಿ ಮಾಡಿರುವ ಸಚಿವಾಲಯದ ಅಧಿಕಾರಿಗಳನ್ನು ಅಮಾನತಿನಲ್ಲಿಡಬೇಕು. ಪ್ರಕರಣ ಕುರಿತು ವಿಧಾನಪರಿಷತ್‌ನ 5 ಸದಸ್ಯರನ್ನೊಳಗೊಂಡ ಸಮಿತಿ ರಚಿಸಿ ತನಿಖೆಗೆ ಒಳಪಡಿಸಬೇಕು,’ ಎಂದು ಪತ್ರದಲ್ಲಿ ಒತ್ತಾಯಿಸಿದ್ದರು.

ಪ್ರಕರಣದ ಹಿನ್ನೆಲೆ

ಜ್ಯೂನಿಯರ್‌ ಪ್ರೋಗ್ರಾಮರ್‌, ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌, ಕಂಪ್ಯೂಟರ್‌ ಆಪರೇಟರ್ಸ್‌, ಡಿಟಿಪಿ ಆಪರೇಟರ್ಸ್‌ಗಳನ್ನು ಹೊರಗುತ್ತಿಗೆ ಅಡಿಯಲ್ಲಿ ನೇಮಕ ಮಾಡಿರುವ ಪರಿಷತ್‌ ಸಚಿವಾಲಯವು ಕನಿಷ್ಠ ವೇತನ ಕಾಯ್ದೆಗಿಂತಲೂ ಹೆಚ್ಚುವರಿಯಾಗಿ ಕಳೆದ ಎರಡೂವರೆ ವರ್ಷಗಳಿಂದ 48,42,564 ರು.ಗಳನ್ನು ಪಾವತಿಸಲಾಗಿತ್ತು. ಈ ಸಂಬಂಧ ತಕರಾರು ತೆಗೆದಿದ್ದ ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು 2021ರ ಏಪ್ರಿಲ್‌ 9ರಂದು ಪರಿಷತ್‌ ಸಚಿವಾಲಯದ ಕಾರ್ಯದರ್ಶಿಗೆ ಪತ್ರವನ್ನೂ ಬರೆದಿದ್ದರು.

ಡೇಟಾ ಎಂಟ್ರಿ ಆಪರೇಟರ್‌ ಹುದ್ದೆಗಳಿಗೆ ಸತೀಶ್‌ ಸಿ, ಶೃತಿ ಎಸ್‌, ಪ್ರತೀಕ್‌ ಶೆಟ್ಟಿ, ಸುಶಾಂತ್‌ ನಾಯಕ್‌, ಜ್ಯೂನಿಯರ್‌ ಪ್ರೋಗ್ರಾಮರ್‌ ಹುದ್ದೆಗೆ ಸುಹಾಸ್‌ ಎಂ, ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌ ಹುದ್ದೆಗಳಿಗೆ ಯೋಗೇಶ್ವರಿ ಬಿ, ಪುಷ್ಪಾ ಎಚ್‌ ಎಂ, ಯೋಗಿತಾ ಪಿ ಆರ್‌, ಜ್ಯೂನಿಯರ್‌ ಆಪರೇಟರ್‌ ಕನ್ಸಲ್ಟೆಂಟ್‌ ಹುದ್ದೆಗೆ ಎಂ ನಿಖಿಲ್‌ ಅವರನ್ನು ಕಿಯೋನಿಕ್ಸ್‌ ಮೂಲಕ ನೇಮಿಸಲಾಗಿತ್ತು.

‘ಆರ್ಥಿಕ ಇಲಾಖೆಯ ಅನುಮತಿ ಪಡೆಯದೇ ಹಾಗೂ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ವ್ಯತಿರಿಕ್ತವಾಗಿ ಕಿಯೋನಿಕ್ಸ್‌ನಿಂದ ಕರಾರು ಒಪ್ಪಂದ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿರುವುದು ನಿಯಮಬಾಹಿರವಾಗಿರುತ್ತದೆ. ಆದ್ದರಿಂದ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿದ್ದಂತೆ ಹುದ್ದೆಗಳ ವೇತನ ಶ್ರೇಣಿಯ ಕನಿಷ್ಠ ವೇತನ ಕಾಯ್ದೆ ಪ್ರಕಾರ ನಿಗದಿಗೊಳಿಸಬೇಕು,’ ಎಂದು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ಪರಿಷತ್‌ನ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದರು.

ಹೆಚ್ಚುವರಿ ಪಾವತಿಸಿದ್ದೆಷ್ಟು?

ಜ್ಯೂನಿಯರ್‌ ಪ್ರೋಗ್ರಾಮರ್‌ ಹುದ್ದೆಗೆ ಕನಿಷ್ಠ ವೇತನ ಕಾಯ್ದೆಯಡಿ ಆರ್ಥಿಕ ಇಲಾಖೆಯು 22,800 ರು. ನಿಗದಿಪಡಿಸಿದೆ. ಆದರೆ ವಿಧಾನಪರಿಷತ್ತಿನ ಸಚಿವಾಲಯವು ನೀಡುತ್ತಿರುವುದು 42,065 ರು. . ಅಂದರೆ ಹೆಚ್ಚುವರಿಯಾಗಿ 19,265 ರು. ಪ್ರತಿ ತಿಂಗಳೂ ಪಾವತಿಯಾಗುತ್ತಿದೆ. ಕಳೆದ ಎರಡೂವರೆ ವರ್ಷಗಳಿಂದ ಹೆಚ್ಚುವರಿಯಾಗಿ ಜ್ಯೂನಿಯರ್‌ ಪ್ರೋಗ್ರಾಮರ್‌ ಹುದ್ದೆಗೆ 5,58,685 ರು. ಪಾವತಿಯಾಗಿದೆ. ಅದರಂತೆ ಇಬ್ಬರು ಜ್ಯೂನಿಯರ್‌ ಪ್ರೋಗ್ರಾಮರ್‌ಗಳಿಗೆ ಒಟ್ಟು 11,17,370 ರು. ಹೆಚ್ಚುವರಿಯಾಗಿ ಪಾವತಿಯಾದಂತಾಗಿದೆ.

ಅದೇ ರೀತಿ ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌ ಹುದ್ದೆಗೆ 20,000 ರು. ಕನಿಷ್ಠ ವೇತನ ನಿಗದಿಪಡಿಸಿದ್ದರೆ ವಿಧಾನಪರಿಷತ್ತಿನ ಸಚಿವಾಲಯವು 38,266 ರು. ನೀಡುತ್ತಿದೆ. ಹೆಚ್ಚುವರಿ 18,266 ರು. ನಂತೆ ಹೆಚ್ಚುವರಿಯಾಗಿ 5,29,714 ರು. ಪಾವತಿಸಲಾಗಿದೆ. ಅದರಂತೆ ಮೂವರು ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌ ಹುದ್ದೆಗಳಿಗೆ ಒಟ್ಟು 15,89,142 ರು. ಪಾವತಿಸಲಾಗಿದೆ.

ಹಾಗೆಯೇ ಡೇಟಾ ಎಂಟ್ರಿ ಆಪರೇಟರ್‌ ಹುದ್ದೆಗೆ 13,284 ರು. ನೀಡಬೇಕಿದ್ದರೆ ವಿಧಾನಪರಿಷತ್ತಿನ ಸಚಿವಾಲಯವು 18,414.25 ರು.ಗಳನ್ನು ಹೆಚ್ಚುವರಿ ನೀಡಿ ಒಟ್ಟು 31,699 ರು. ನಂತೆ ಒಬ್ಬರಿಗೆ 5,34, 013 ರು ಪಾವತಿಯಾಗಿದೆ. ನೀಡುತ್ತಿದೆ. ಅದರಂತೆ ನಾಲ್ವರು ಡೇಟಾ ಎಂಟ್ರಿ ಆಪರೇಟರ್‌ಗಳಿಗೆ ಹೆಚ್ಚುವರಿಯಾಗಿ 21,36,052 ರು. ರು. ಪಾವತಿಸಿರುವುದು ಆರ್ಥಿಕ ಇಲಾಖೆ ಬರೆದಿರುವ ಪತ್ರದಿಂದ ತಿಳಿದು ಬಂದಿದೆ.

‘ವಿಧಾನ ಪರಿಷತ್‌ನ ಲೆಕ್ಕ ಶೀರ್ಷಿಕೆ (2011-02-103-2-01-034)ಯಂತೆ ಕರ್ನಾಟಕ ವಿಧಾನ ಪರಿಷತ್‌ನ ಸಚಿವಾಲಯದಲ್ಲಿ ಶೀಘ್ರಲಿಪಿಗಾರರ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಪಡೆದಿದ್ದು ವೇತನವನ್ನು 30,350 ರು.ಗಳಿಗೆ ನಿಗದಿಗೊಳಸಲಾಗಿದೆ. ಇದು ಕನಿಷ್ಠ ವೇತನ ಕಾಯ್ದೆ ಮೀರಿದ್ದರಿಂದ ಪರಿಷ್ಕರಿಸಿ 22,000 ರು.ಗಳಿಗೆ ನಿಗದಿಪಡಿಸಿ 2021-22ನೇ ಸಾಲಿನ ಅಯವ್ಯಯದಲ್ಲಿ ಅನುದಾನ ನಿಗದಿಪಡಿಸಲಾಗಿದೆ. ಆದ್ದರಿಂದ ಶೀಘ್ರಲಿಪಿಗಾರರ ವೇತನವನ್ನೂ ಮರು ನಿಗದಿಪಡಿಸಬೇಕು,’ ಎಂದು ಆರ್ಥಿಕ ಇಲಾಖೆಯು ಆಡಳಿತ ಇಲಾಖೆಗೆ ನಿರ್ದೇಶಿಸಿತ್ತು.

ಜ್ಯೂನಿಯರ್‌ ಪ್ರೋಗ್ರಾಮರ್‌, ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌ ಹುದ್ದೆಗಳ ಭರ್ತಿಗೆ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಶೇ.50ರಷ್ಟನ್ನು ಪದನ್ನೋತಿಯಿಂದ ಶೇ.50ರಷ್ಟು ನೇರ ನೇಮಕಾತಿಯಿಂದ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ. ಎರಡೂ ಇಲ್ಲದ ಪಕ್ಷದಲ್ಲಿ ನಿಯೋಜನೆ ಮೇಲೆ ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದರೆ ಆರ್ಥಿಕ ಇಲಾಖೆಯ ಅನುಮತಿ ಪಡೆಯದೇ ಹಾಗೂ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ವ್ಯತಿರಿಕ್ತವಾಗಿ ಕಿಯೋನಿಕ್ಸ್‌ನಿಂದ ಕರಾರು ಒಪ್ಪಂದ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ನಿಯಮಬಾಹಿರವಾಗಿ ಭರ್ತಿ ಮಾಡಿರುವುದು ಪತ್ರದಿಂದ ಗೊತ್ತಾಗಿದೆ.

ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿದ್ದಂತೆ ಹುದ್ದೆಗಳ ವೇತನ ಶ್ರೇಣಿಯ ಕನಿಷ್ಠ ವೇತನ ಕಾಯ್ದೆ ಪ್ರಕಾರ ಜ್ಯೂನಿಯರ್‌ ಪ್ರೋಗ್ರಾಮರ್‌ ಹುದ್ದೆಗೆ 22,800 ರು., ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌ ಹುದ್ದೆಗೆ 20,000 ರು., ಮತ್ತು ಕನಿಷ್ಠ ವೇತನ ಕಾಯ್ದೆ ಪ್ರಕಾರ ಡಾಡಾ ಎಂಟ್ರಿ ಆಪರೇಟರ್‌, ಸ್ವಚ್ಛತಾ ಕಾರ್ಮಿಕರಾದ ಸಫಾಯಿ ಕರ್ಮಚಾರಿಗಳಿಗೆ ಆಯವ್ಯಯದಲ್ಲಿ ಅನುದಾನ ನಿಗದಿಪಡಿಸಲಾಗಿದೆ. ಈ ಹುದ್ದೆಗಳ ಭರ್ತಿಗೆ ಆಡಳಿತ ಇಲಾಖೆಯು ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಕ್ರಮ ವಹಿಸಬೇಕು ಎಂದು ಆರ್ಥಿಕ ಇಲಾಖೆಯು ಸೂಚಿಸಿರುವುದು ತಿಳಿದು ಬಂದಿದೆ.

ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ಪತ್ರ ಬರೆದು 1 ತಿಂಗಳಾದರೂ ಪರಿಷತ್‌ ಸಚಿವಾಲಯವು ಯಾವುದೇ ಕ್ರಮ ವಹಿಸಿಲ್ಲ. ಅಲ್ಲದೆ ಈ ಕುರಿತು ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಈವರೆವಿಗೂ ಮೌನ ಮುರಿದಿಲ್ಲ ಮತ್ತು ವೇತನದಲ್ಲಿ ಪಾವತಿಯಾಗಿರುವ ಹೆಚ್ಚುವರಿ ಮೊತ್ತವನ್ನು ವಸೂಲು ಮಾಡಿಲ್ಲ ಎಂದು ತಿಳಿದು ಬಂದಿದೆ.

Hot this week

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

Topics

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

Related Articles

Popular Categories

error: Content is protected !!