Thursday | July 16, 2026 |

85 ಕೋಟಿ ಸಾಲಕ್ಕೆ ಸಹ-ಕಂಪನಿಯ ಸ್ಥಿರಾಸ್ತಿ ಒತ್ತೆ;ನಿಬಂಧನೆ ಪಾಲಿಸದ ನಿರಾಣಿ ಷುಗರ್ಸ್‌

ಬೆಂಗಳೂರು: ಬೃಹತ್‌ ಮತ್ತು ಕೈಗಾರಿಕೆ ಸಚಿವ ಮುರುಗೇಶ್‌ ಆರ್‌ ನಿರಾಣಿ ಅವರ ಒಡೆತನದ ನಿರಾಣಿ ಷುಗರ್ಸ್‌ ಲಿಮಿಟೆಡ್‌, ಸಹ-ಕಂಪನಿಗೆ ಸೇರಿರುವ ಸ್ಥಿರಾಸ್ತಿಯನ್ನು ಅಡಮಾನವಾಗಿರಿಸಿ 85.00 ಕೋಟಿ ರು. ಸಾಲವನ್ನು ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ನಿಂದ ಪಡೆದಿದೆ. ಅಲ್ಲದೆ ಇದಕ್ಕೆ ಬೆಂಬಲವಾಗಿ ಯಾವುದೇ ದಾಖಲೆಗಳನ್ನೂ ಸಹ ಕಂಪನಿಯು ಒದಗಿಸಿಲ್ಲ ಎಂಬುದೂ ಇದೀಗ ಬಹಿರಂಗವಾಗಿದೆ.

ಮುಖ್ಯಮಂತ್ರಿ ಹುದ್ದೆ ಗದ್ದುಗೆ ಜಿದ್ದಿನಲ್ಲಿ ತೀವ್ರ ಪೈಪೋಟಿ ನೀಡಿ ಕಡೆಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಶಾಸನಬದ್ಧ ಲೆಕ್ಕ ಪರಿಶೋಧನಾ ವರದಿಯೂ ಮುನ್ನೆಲೆಗೆ ಬಂದಿದೆ.

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ನ 2018-19ನೇ ಸಾಲಿನ ಶಾಸನಬದ್ಧ ಲೆಕ್ಕ ಪರಿಶೋಧನೆ ವರದಿಯು ನಿರಾಣಿ ಷುಗರ್ಸ್‌ ಲಿಮಿಟೆಡ್‌ ಪಡೆದಿದ್ದ 85.00 ಕೋಟಿ ಸಾಲದ ಹಿಂದಿನ ಕಥೆಯನ್ನು ಬಿಚ್ಚಿಟ್ಟಿದೆ. ಶಾಸನಬದ್ಧ ಲೆಕ್ಕ ಪರಿಶೋಧನೆ ವರದಿಯ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

‘ನಿರಾಣಿ ಷುಗರ್ಸ್‌ ಒದಗಿಸಿರುವ ದಾಖಲೆಯ ಪ್ರಕಾರ ಸ್ಥಿರಾಸ್ತಿಯು ರತ್ನ ಸಿಮೆಂಟ್ಸ್‌ (ಎಡವಾಡ)ಗೆ ಸೇರಿದ್ದಾಗಿದೆ. ಇದಕ್ಕೆ ಬೆಂಬಲವಾಗಿ ಯಾವ ದಾಖಲೆಗಳು ರತ್ನ ಸಿಮೆಂಟ್ಸ್‌ರವರು ಒದಗಿಸಿಲ್ಲದ ಕಾರಣ ರತ್ನ ಸಿಮೆಂಟ್ಸ್‌ ಆಡಳಿತ ಮಂಡಳಿಗೆ ಸ್ಥಿರಾಸ್ತಿಯನ್ನು ಬೇರೆ ಕಂಪನಿಗೆ ಸಾಲ ಪಡೆಯಲು ಅಡಮಾನ ಮಾಡಿಕೊಡುವ ಅಧಿಕಾರವಿದೆ ಎಂದು ಖಾತರಿಪಡಿಸಲಾಗುವುದಿಲ್ಲ,’ ಎಂದು ಲೆಕ್ಕ ಪರಿಶೋಧನಾ ವರದಿಯಲ್ಲಿ ಅಭಿಪ್ರಾಯಪಡಲಾಗಿದೆ.

ಹಾಗೆಯೇ ನಿರಾಣಿ ಷುಗರ್ಸ್‌ಗೆ 85.00 ಕೋಟಿ ರು.ಸಾಲ ಮಂಜೂರಾತಿ ಮಾಡುವ ಸಂಬಂಧದಲ್ಲಿಯೂ ಮಂಜೂರಾತಿ ನಿಬಂಧನೆಗಳನ್ನು ಪಾಲಿಸಿಲ್ಲ ಎಂಬ ಸಂಗತಿ ಲೆಕ್ಕ ಪರಿಶೋಧನಾ ವರದಿಯಿಂದ ಗೊತ್ತಾಗಿದೆ. ‘ಮಂಜೂರಾತಿ ನಿಬಂಧನೆ ಸಂಖ್ಯೆ 09ರ ಪ್ರಕಾರ ರತ್ನ ಸಿಮೆಂಟ್ಸ್‌ (ಎಡವಾಡ) ನಿರ್ದೇಶಕರು ಮತ್ತು ಪ್ರವರ್ತಕರುಗಳು ಬ್ಯಾಂಕಿನ ನಾಮಮಾತ್ರ ಸದಸ್ಯ ಸದಸ್ಯರಾಗಿರುಬೇಕಾಗುತ್ತದೆ. ಹಾಗೂ ನಿರಾಣಿ ಷುಗರ್ಸ್‌ ದವರು ಪಡೆಯುವ ಸಾಲಕ್ಕೆ ಮತ್ತು ಸಾಲ ಚುಕ್ತಾ ಆಗುವವರೆಗೂ ವೈಯಕ್ತಿಕ ಖಾತರಿ ನೀಡಬೇಕಾಗಿರುತ್ತದೆ. ವೈಯಕ್ತಿಕ ಖಾತರಿಯ ಪ್ರತಿಯನ್ನು ಪರಿಶೀಲನೆ ಒದಗಿಸಿಲ್ಲ,’ ಎಂದು ಲೆಕ್ಕ ಪರಿಶೋಧನೆ ವರದಿಯಲ್ಲಿ ವಿವರಿಸಲಾಗಿದೆ.

ಇನ್ನು, ನಿರಾಣಿ ಷುಗರ್ಸ್‌ ಲಿಮಿಟೆಡ್‌ ಸಮೂಹ ಬ್ಯಾಂಕ್‌ಗಳಿಂದ ನಿರಾಪೇಕ್ಷಣಾ ಪತ್ರವನ್ನು ಪಡೆದಿಲ್ಲ. ‘ ಎಲ್ಲಾ ಬ್ಯಾಂಕ್‌ಗಳಿಂದ ನಿರಾಪೇಕ್ಷಣಾ ಪತ್ರವನ್ನು ಪಡೆಯದ ಕಾರಣ ಅಪೆಕ್ಸ್‌ ಬ್ಯಾಂಕ್‌ನಿಂದ ಮಂಜೂರಾದ ದುಡಿಯುವ ಬಂಡವಾಳ ಸಾಲದ ಹೊಣೆಗಾರಿಕೆಯು ಅಪೆಕ್ಸ್‌ ಬ್ಯಾಂಕ್‌ನದ್ಧೇ ಆಗಿರುತ್ತದೆ. ಇದು ಕಂಪನಿಯು ಒದಗಿಸಿರುವ ಭದ್ರತೆಯ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತದೆ,’ ಎಂದು ಲೆಕ್ಕ ಪರಿಶೋಧನೆ ವರದಿಯಲ್ಲಿ ಹೇಳಲಾಗಿದೆ.

ಅದೇ ರೀತಿ ಈ ಕಂಪನಿಗೆ ಸಾಲ ಮಂಜೂರಾತಿ ಮಾಡಿದ ನಂತರ ನಡೆದಿರುವ ಬೆಳವಣಿಗೆಗಳ ಕುರಿತು ಶಾಸನಬದ್ಧ ಲೆಕ್ಕ ಪರಿಶೋಧಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ಯಂತ್ರ ಮತ್ತು ಸ್ಥಾವರಗಳ ಮೇಲೆ ಬಜಾಜ್‌ ಅಲೆಯನ್ಸ್‌ರಿಂದ ಪಡೆದ ವಿಮೆ ನವೆಂಬರ್‌ 2018ಕ್ಕೆ ಮುಗಿದಿದ್ದು ಹಾಗೂ ದಾಸ್ತಾನು ಪಾಲಿಸಿಯು ಸಹ ಏಪ್ರಿಲ್‌ 2019ಕ್ಕೆ ಮುಕ್ತಾಯಗೊಂಡಿದೆ. ಈ ಪಾಲಿಸಿಗಳನ್ನು ನವೀಕರಿಸಿರುವುದಿಲ್ಲ,’ ಎಂದು ಲೆಕ್ಕ ಪರಿಶೋಧನೆ ವರದಿಯಲ್ಲಿ ವಿವರಿಸಲಾಗಿದೆ.

ಸಾಲ ಮಂಜೂರಾತಿ ನಿಬಂಧನೆ 25ರ ಪ್ರಕಾರ ಸಾಲಗಾರ ಕಂಪನಿಯು ತನ್ನ ಎಲ್ಲಾ ಸ್ಥಿರ ಹಾಗೂ ಚಾಲ್ತಿ ಆಸ್ತಿಗಳ ಮೇಲಿನ 2ನೇ ಚಾರ್ಜ್‌ನ್ನು ಫಾರಂ ನಂ ಸಿಎಚ್‌ಜಿ 1ರ ಮೂಲಕ ಅಪೆಕ್ಸ್‌ ಬ್ಯಾಂಕ್‌ನ ಪರವಾಗಿ ರಿಜಿಸ್ಟರ್‌ ಆಫ್‌ ಕಂಪನೀಸ್‌ನಲ್ಲಿ 2ನೇ ಚಾರ್ಜ್‌ ಸೃಷ್ಟಿ ಮಾಡಬೇಕು. ಆದರೆ ನಿರಾಣಿ ಷುಗರ್ಸ್‌ ಲಿಮಿಟೆಡ್‌ಗೆ ಸಂಬಂಧಿಸಿದ 2ನೇ ಚಾರ್ಜ್‌ ಸೃಷ್ಟಿಗೆ ಸಂಬಂಧಿಸಿದ ದಾಖಲೆಗಳು ಕಡತದಲ್ಲಿರಿಸಿರಲಿಲ್ಲ ಎಂಬುದು ಲೆಕ್ಕ ಪರಿಶೋಧನೆ ವರದಿಯಿಂದ ತಿಳಿದು ಬಂದಿದೆ.

Hot this week

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!