ಸಿಎಂ ಇಲಾಖೆಯಲ್ಲೇ ವಿಲೇವಾರಿಗೆ 3,351 ಕಡತ ಬಾಕಿ; ನೂರು ದಿನ ಪೂರೈಸಿದ್ದರೂ ಚುರುಕಿಲ್ಲ

ಬೆಂಗಳೂರು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿಭಾಯಿಸುವ ಹಣಕಾಸು ಇಲಾಖೆಯಲ್ಲಿ 2021ರ ಅಕ್ಟೋಬರ್‌ 27ರ ಅಂತ್ಯಕ್ಕೆ 3,351 ಕಡತಗಳು ಬಾಕಿ ಉಳಿದಿರುವುದು ಇದೀಗ ಬಹಿರಂಗವಾಗಿದೆ. ಅವರದೇ ಇಲಾಖೆಯು ಕಡತ ವಿಲೇವಾರಿಯಲ್ಲಿ ಹಿಂದೆ ಬಿದ್ದಿರುವುದು ನೂರು ದಿನದ ಸಂಭ್ರಮವನ್ನು ಅಣಕಿಸಿದಂತಾಗಿದೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನದಂದೇ ಕಡತ ವಿಲೇವಾರಿಗೆ ಸೂಚಿಸಿದ್ದರಲ್ಲದೆ 15 ದಿನದಲ್ಲಿ ಕಡತಗಳು ವಿಲೇವಾರಿಯಾಗಿರಬೇಕು ಎಂದೂ ಅಧಿಕಾರಿಗಳಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದರು. ಹಣಕಾಸು ಇಲಾಖೆಯಲ್ಲಿಯೇ 3,351 ಕಡತಗಳು ವಿಲೇವಾರಿಯಾಗದಿರುವುದು ಮುಖ್ಯಮಂತ್ರಿ ನೀಡಿದ್ದ ಎಚ್ಚರಿಕೆ ಸಂದೇಶವನ್ನು ಕಸದ ಬುಟ್ಟಿಗೆ … Continue reading ಸಿಎಂ ಇಲಾಖೆಯಲ್ಲೇ ವಿಲೇವಾರಿಗೆ 3,351 ಕಡತ ಬಾಕಿ; ನೂರು ದಿನ ಪೂರೈಸಿದ್ದರೂ ಚುರುಕಿಲ್ಲ