ಇಲಾಖೆ ಹಂತದಲ್ಲೇ 31,308 ಕಡತಗಳು ವಿಲೇವಾರಿಗೆ ಬಾಕಿ; ಸಿಎಂ ಸೂಚನೆಗೂ ಕಿಮ್ಮತ್ತಿಲ್ಲ

ಬೆಂಗಳೂರು; ಕಡತ ವಿಲೇವಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅದೆಷ್ಟೇ ಗಡುವು ನೀಡಿ ಎಚ್ಚರಿಕೆ ನೀಡಿದ್ದರೂ 2021ರ ಅಕ್ಟೋಬರ್‌ 25ರ ಅಂತ್ಯಕ್ಕೆ ಒಟ್ಟು 31,308 ಕಡತಗಳು ವಿಲೇವಾರಿಗೆ ಬಾಕಿ ಉಳಿದಿವೆ. ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಕಡತಗಳು ವಿಲೇವಾರಿಯಾಗುತ್ತಿಲ್ಲ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಲ್ಲೇ 18 ಇಲಾಖೆಗಳ ಮುಖ್ಯಸ್ಥರ ಹಂತದಲ್ಲೇ 31,308 ಕಡತಗಳು ವಿಲೇವಾರಿಯಾಗಿಲ್ಲ ಎಂಬುದು ಬಹಿರಂಗವಾಗಿದೆ. ಬಸವರಾಜ ಬೊಮ್ಮಾಯಿ ಅವರು ನಿಭಾಯಿಸುವ ಹಣಕಾಸು ಇಲಾಖೆಯಲ್ಲಿಯೇ 2021ರ ಅಕ್ಟೋಬರ್‌ 27ರ ಅಂತ್ಯಕ್ಕೆ 3,351 ಕಡತಗಳು ಬಾಕಿ ಉಳಿದಿದ್ದವು. 18 ಇಲಾಖೆಗಳಲ್ಲಿ 16,543 … Continue reading ಇಲಾಖೆ ಹಂತದಲ್ಲೇ 31,308 ಕಡತಗಳು ವಿಲೇವಾರಿಗೆ ಬಾಕಿ; ಸಿಎಂ ಸೂಚನೆಗೂ ಕಿಮ್ಮತ್ತಿಲ್ಲ