ಐಪಿಎಸ್‌ ರವಿ ಚನ್ನಣ್ಣನವರ್‌ ತಂದಿದ್ದ ನ್ಯಾಯಾಲಯದ ತಡೆಯಾಜ್ಞೆ, ಮಾರ್ಚ್‌ 14ರವರೆಗೆ ವಿಸ್ತರಣೆ

Photo Credit; Deccan Hearald

ಬೆಂಗಳೂರು; ತಮ್ಮ ವಿರುದ್ಧ ಯಾವುದೇ ಸುದ್ದಿ ಪ್ರಕಟಿಸಬಾರದು ಎಂದು ‘ದಿ ಫೈಲ್‌’ ಸೇರಿದಂತೆ ಮಾಧ್ಯಮಗಳ ವಿರುದ್ಧ ಐಪಿಎಸ್‌ ಅಧಿಕಾರಿ ರವಿ ಚನ್ನಣ್ಣನವರ್‌ ನ್ಯಾಯಾಲಯದಿಂದ ತಂದಿದ್ದ ಮಧ್ಯಂತರ ಪ್ರತಿಬಂಧಕಾಜ್ಞೆಯನ್ನು ಸಿಟಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರು ವಿಸ್ತರಿಸಿದ್ದಾರೆ.

 

ಪ್ರತಿಬಂಧಕಾಜ್ಞೆಯನ್ನು ಮಾರ್ಚ್‌ 14ರವರೆಗೆ ವಿಸ್ತರಿಸಲಾಗಿದೆ. ಈ ಸಂಬಂಧ ಸಿಟಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರು ಫೆ.11ರಂದು ಆದೇಶ ಹೊರಡಿಸಿದ್ದಾರೆ.

 

ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಿವಿಧ ದಿನಪತ್ರಿಕೆಗಳು, ಸಂಜೆ ಪತ್ರಿಕೆಗಳು, ಸುದ್ದಿ ವಾಹಿನಿಗಳು ಸೇರಿದಂತೆ 37 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿದೆ.

 

ಅರ್ಜಿಯ ವಿಚಾರಣೆ ನಡೆಸಿ ಮಧ್ಯಂತರ ಪ್ರತಿಬಂಧಕಾಜ್ಞೆ ನೀಡಿ ಜನವರಿ 14ರಂದು ಆದೇಶ ಹೊರಡಿಸಿದ್ದ ಸಿಟಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರು ಈ ಸಂಬಂಧ ಫೆ.1ಕ್ಕೆ ವಿಚಾರಣೆ ಮುಂದೂಡಿದ್ದರು.

 

ಆ ನಂತರ ವಿಚಾರಣೆಯು ಫೆ.10ಕ್ಕೆ ವಿಚಾರಣೆಯನ್ನು ಮತ್ತೊಮ್ಮೆ ಮುಂದೂಡಲಾಗಿತ್ತು. ಫೆ.11ರಂದು ವಿಚಾರಣೆ ಬಳಿಕ ಇದೀಗ ಮಾರ್ಚ್‌ 14ರವರೆಗೆ ಪ್ರತಿಬಂಧಕಾಜ್ಞೆಯನ್ನು ವಿಸ್ತರಿಸಲಾಗಿದೆಯಲ್ಲದೆ ಅದೇ ದಿನಾಂಕಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

Your generous support will help us remain independent and work without fear.

Latest News

Related Posts