Saturday | March 21, 2026 |

ಪಿಎಂ ಕಿಸಾನ್‌; ಪ.ಜಾತಿ, ಪ.ಪಂಗಡ ಉಪ ಯೋಜನೆಯಲ್ಲಿ 210 ಕೋಟಿ ಬಳಸದೇ ವಾಪಸ್‌ ಮಾಡಿದ ಇಲಾಖೆ

Support THE-FILE

spot_img

ಬೆಂಗಳೂರು: ಹೊಸ ಬೆಳೆ ವಿಮಾ ಯೋಜನೆ ಮತ್ತು ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿಯಲ್ಲಿ 2021-22ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಲೆಕ್ಕ ಶೀರ್ಷಿಕೆಯಡಿಯಲ್ಲಿ ಒದಗಿಸಿದ್ದ ಅನುದಾನವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಲ್ಲಿ ವಿಫಲವಾಗಿರುವ ಕೃಷಿ ಇಲಾಖೆಯು 210.66 ಕೋಟಿ ರು. ಗಳನ್ನು ಸರ್ಕಾರಕ್ಕೆ ವಾಪಸ್‌ ಮಾಡಿರುವುದು ಇದೀಗ ಬಹಿರಂಗವಾಗಿದೆ.

 

2021-22ನೇ ಸಾಲಿನಲ್ಲಿ ಹೊಸ ಬೆಳೆ ವಿಮಾ ಯೋಜನೆ ಮತ್ತು ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಉಪ ಶೀರ್ಷಿಕೆಯಡಿ ಉಳಿತಾಯವಾಗುವ ಅನುದಾನವನ್ನು ಕೃಷಿ ಯಾಂತ್ರೀಕರಣ ಮತ್ತು ಕೃಷಿ ಸಂಸ್ಕರಣೆ ಕಾರ್ಯಕ್ರಮಗಳಿಗೆ ಪುನರ್‌ ವಿನಿಯೋಗ ಮಾಡಲು ಅನುಮತಿ ನೀಡಬೇಕು ಎಂದು 2022ರ ಫೆ. 3ರಂದು ಸಲ್ಲಿಸಿದ್ದ ಪ್ರಸ್ತಾವನೆಯೂ ತಿರಸ್ಕೃತಗೊಂಡಿದೆ.

 

ಈ ಕುರಿತು ಕೃಷಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಇಲಾಖೆಯ ಆಯುಕ್ತರಿಗೆ 2022ರ ಫೆಬ್ರುವರಿ 16ರಂದು ಪತ್ರ ಬರೆದಿದ್ದಾರೆ ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

‘2021-22ನೇ ಸಾಲಿನಲ್ಲಿ ಹೊಸ ಬೆಳೆ ವಿಮಾ ಯೋಜನೆ ಲೆಕ್ಕ ಶೀರ್ಷಿಕೆಯಡಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಉಪ ಶೀರ್ಷಿಕೆಯಡಿಯಲ್ಲಿ ವೆಚ್ಚವಾಗದೇ ಉಳಿತಾಯವಾದ ಒಟ್ಟು 138 ಕೋಟಿ ಹಾಗೂ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯ ಲೆಕ್ಕ ಶೀರ್ಷಿಕೆಯ ಎಸ್‌ಸಿಎಸ್‌ಪಿ ಮತ್ತು ಟಿ ಎಸ್‌ ಪಿ ಉಪ ಶೀರ್ಷಿಕೆಯಡಯಲ್ಲಿ ಉಳಿತಾಯವಾಗುವ ಒಟ್ಟು 72.00 ಕೋಟಿ ಸೇರಿ ಒಟ್ಟು 210.66 ಕೋಟಿ ರು.ಗಳನ್ನು ಅನುದಾನವನ್ನು ಸರ್ಕಾರಕ್ಕೆ ಆಧ್ಯರ್ಪಿಸಲಾಗಿದೆ. ಆದ್ದರಿಂದ ಈ ಲೆಕ್ಕ ಶೀರ್ಷಿಕೆಗಳಡಿ ಅನುದಾನ ಉಳಿತಾಯವಿರುವುದಿಲ್ಲ. ಪ್ರಸ್ತಾವನೆಯಲ್ಲಿ ಕೋರಿದಂತೆ ಪುನರ್‌ವಿನಿಯೋಗ ಸಾಧ್ಯವಿಲ್ಲ,’ ಎಂದು ಕೃಷಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಇಲಾಖೆಯ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ನಿರ್ದೇಶಿಸಿದ್ದಾರೆ.

 

 

ಅದೇ ರೀತಿ ರಾಜ್ಯ ಬಿಜೆಪಿ ಸರ್ಕಾರವು 2020-21ನೇ ಸಾಲಿನ ಪ್ರಧಾನಮಂತ್ರಿ ಕಿಸಾನ್‌ ಕರ್ನಾಟಕ ಯೋಜನೆಯಡಿ ಎರಡನೇ ಕಂತಿನ ಆರ್ಥಿಕ ಸಹಾಯ ಧನ ಬಿಡುಗಡೆ ಮಾಡುವಲ್ಲಿಯೂ ವಿಳಂಬ ಮಾಡಿತ್ತು.
ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾಗಿರುವ ಪ್ರಧಾನಮಂತ್ರಿ ಕಿಸಾನ್‌ ಯೋಜನೆಗೆ ರಾಜ್ಯ ಸರ್ಕಾರವು ಅನುದಾನವನ್ನು ಹಂಚಿಕೊಳ್ಳುತ್ತಿದೆ. ಆದರೆ 2020-21ನೇ ಸಾಲಿನಲ್ಲಿ ರಾಜ್ಯ ಸರ್ಕಾರದಿಂದ ನೀಡುವ 4,000 ರು. ಹೆಚ್ಚುವರಿ ಆರ್ಥಿಕ ಸಹಾಯಧನದ ಎರಡನೇ ಕಂತಿನ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಈ ಕುರಿತು ಕೃಷಿ ಆಯುಕ್ತರು 2021ರ ಮಾರ್ಚ್‌ 16ರಂದು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.

 

4,000 ರು.ಗಳ ಹೆಚ್ಚುವರಿ ಆರ್ಥಿಕ ನೆರವನ್ನು 2 ಕಂತುಗಳಲ್ಲಿ ಪಿ ಎಂ ಕಿಸಾನ್‌ ಕರ್ನಾಟಕ ಯೋಜನೆಯಡಿ ನೀಡುತ್ತಿದೆ. ಇದಕ್ಕಾಗಿ ರಾಜ್ಯವಲಯದ ಲೆಕ್ಕ ಶೀರ್ಷಿಕೆ (2401-00-800-1-05-100) ಅಡಿ ಒಟ್ಟು 2,100 ಕೋಟಿ ರು. ನಿಗದಿಪಡಿಸಿತ್ತು. ಈ ಪೈಕಿ 2020-21ನೇ ಸಾಲಿನಲ್ಲಿ ಎರಡನೇ ಕಂತಿಗೆ 51,66,395 ರೈತರಿಗೆ 1,033.28 ಕೋಟಿ ಹಾಗೂ ಮೊದಲನೇ ಕಂತಿನ ಬಾಕಿ ಬಾಕಿ 56,665 ರೈತರಿಗೆ 11.33 ಕೋಟಿ ರು. ಸೇರಿ ಒಟ್ಟಾರೆ 2020-21ನೇ ಸಾಲಿಗೆ 1,044.61 ಕೋಟಿ ರು. ಅನುದಾನ ಒದಗಿಸಬೇಕಿತ್ತು.

 

‘2020-21ನೇ ಸಾಲಿನಲ್ಲಿ ಎರಡನೇ ಕಂತಿನ ಆರ್ಥಿಕ ಸಹಾಯಧನವನ್ನು ಪಾವತಿಸಲು ಅನುದಾನ ಇಲ್ಲಿಯವರೆಗೆ ಬಿಡುಗಡೆ ಮಾಡಿಲ್ಲ, ‘ ಎಂದು ಕೃಷಿ ಆಯುಕ್ತರು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಅನುದಾನ ಹೆಚ್ಚುವರಿ ಆರ್ಥಿಕ ಸಹಾಯಧನ ಬಿಡುಗಡೆಯಾಗದ ಕಾರಣ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ಸಾವಿರಾರು ಸಂಖ್ಯೆಯ ರೈತರು ಸಂಕಷ್ಟದಲ್ಲಿದ್ದರೂ ಕೃಷಿ ಸಚಿವ ಬಿ ಸಿ ಪಾಟೀಲ್‌ ರೈತರ ಸಂಕಷ್ಟವನ್ನು ಆಲಿಸಿರಲಿಲ್ಲ.!

 

ಇದೇ ಲೆಕ್ಕ ಶೀರ್ಷಿಕೆಯಲ್ಲಿ ಕಳೆದ ಸಾಲಿನಲ್ಲಿ 59346.00 ಲಕ್ಷ ರುಗ.ಳನ್ನು ಪ್ರಸಕ್ತ ಸಾಲಿನಲ್ಲಿ ಬಳಸಿಕೊಂಡಿದ್ದ ಕೃಷಿ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಒದಗಿಸಿರುವ ಅನುದಾನವನ್ನು ಉಳಿಕೆ ಮಾಡಲು ಮುಂದಾಗಿದೆ ಎಂದು ಗೊತ್ತಾಗಿದೆ.

 

ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ 60,85,996 ರೈತರು ಪಿಎಂಕೆ ಪೋರ್ಟಲ್‌ನಲ್ಲಿ ಮತ್ತು 3,77,990 ಸ್ವಯಂ/ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಿದ್ದಾರೆ. ನೋಂದಣಿ ವಿವರಗಳನ್ನು ಪರಿಶೀಲಿಸಿದ ನಂತರ ಕೇಂದ್ರ ಸರ್ಕಾರಕ್ಕೆ ಒಟ್ಟು 57,09,537 ರೈತರ ವಿವರಗಳನ್ನು ಕಳಿಸಲಾಗಿತ್ತು ಎಂದು ಕೃಷಿ ಸಚಿವ ಬಿ ಸಿ ಪಾಟೀಲ್‌ ಅವರು 2021ರ ಮಾರ್ಚ್‌ 17ರಂದು ನಡೆದಿದ್ದ ವಿಧಾನಸಭೆ ಅಧಿವೇಶನದಲ್ಲಿ ಡಾ ಅಜಯ್‌ ಧರ್ಮಸಿಂಗ್‌ ಅವರಿಗೆ ಲಿಖಿತ ಉತ್ತರ ನೀಡಿದ್ದರು.

 

ಅಲ್ಲದೆ ಯೋಜನೆ ಜಾರಿಯಾದ ದಿನದಿಂದ ಈವರೆವಿಗೆ 53,96,762 ರೈತರಿಗೆ ಹಣ ಸಂದಾಯವಾಗಿದೆ. ವಿವಿಧ ಕಾರಣಗಳಿಂದಾಗಿ 20,584 ಫಲಾನುಭವಿ ರೈತರಿಗೆ ಯೋಜನೆಯ ಅರ್ಥಿಕ ನೆರವು ಲಭಿಸಿಲ್ಲ. 2018-19ರಲ್ಲಿ 1106062, 2019-20ರಲ್ಲಿ 4304980, 2020-21ರಲ್ಲಿ 296964 ರೈತರು ಪಿಎಂಕೆ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ. 2018-19ರಲ್ಲಿ 19,872, 2019-20ರಲ್ಲಿ 50,10,591, 2020-21ರಲ್ಲಿ 53,96,762 ರೈತರು ಆರ್ಥಿಕ ನೆರವು ಪಡೆದಿದ್ದರು.

Hot this week

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

Topics

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

Related Articles

Popular Categories

error: Content is protected !!