Saturday | October 17, 2026 |

ಅಸ್ಸಾಂ ಮಾದರಿ ಒಪ್ಪದ ಸರ್ಕಾರ; ಎನ್ಎಚ್‌ಎಂ ಗುತ್ತಿಗೆ ನೌಕರರಿಗೆ ಶಿಶುಪಾಲನಾ ರಜೆ ನೀಡಲು ನಿರಾಕರಣೆ

ಬೆಂಗಳೂರು; ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಶಿಶುಪಾಲನಾ ರಜೆ ನೀಡುವ ಸಂಬಂಧ ಅಸ್ಸಾಂ ಮಾದರಿಯನ್ನು ಅಳವಡಿಸಿಕೊಳ್ಳಲು ನಿರಾಕರಿಸಿದೆ.

 

ಪ್ರತಿಯೊಂದು ಯೋಜನೆಗೂ ಗುಜರಾತ್‌ ಮಾದರಿಯನ್ನು ಪ್ರತಿಬಾರಿಯೂ ಉಲ್ಲೇಖಿಸಿ ಪ್ರಚಾರ ಪಡೆದುಕೊಳ್ಳುವ ರಾಜ್ಯ ಬಿಜೆಪಿ ಸರ್ಕಾರವು ಗುಜರಾತ್‌ ಮಾದರಿಗಾಗಿ ಆರ್ಥಿಕ ಹೊರೆಯನ್ನೂ ಮೈಮೇಲೆ ಎಳೆದುಕೊಳ್ಳಲು ಹೊರಟಿದೆ. ಆದರೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಇಯಲ್ಲಿ ಕಾರ್ಯನಿರ್ವಹಿಸುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಶಿಶುಪಾಲನಾ ರಜೆ ನೀಡುವ ಮೂಲಕ ನೆಮ್ಮದಿ ನೀಡುವಂತಹ ಅಸ್ಸಾಂ ಮಾದರಿಯನ್ನು ಅಳವಡಿಸಿಕೊಳ್ಳಲು ಮುಂದಾಗುತ್ತಿಲ್ಲ.

 

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಅಸ್ಸಾಂ ರಾಜ್ಯದಲ್ಲಿ ನೀಡಲಾಗಿರುವ ಶಿಶುಪಾಲನಾ ರಜೆ ಮಾದರಿಯನ್ನು ರಾಜ್ಯದಲ್ಲಿಯೂ ಅಳವಡಿಸಿಕೊಳ್ಳಬೇಕು ಎಂದು ನೌಕರರ ಸಂಘವು ಇಟ್ಟಿದ್ದ ಬೇಡಿಕೆಯನ್ನು ಸಚಿವ ಸುಧಾಕರ್‌ ಅಧ್ಯಕ್ಷತೆಯ ಸಭೆಯು ಇದನ್ನು ಒಪ್ಪದೇ ಪ್ರಸ್ತಾವನೆಯನ್ನು ತಳ್ಳಿ ಹಾಕಿದೆ.

 

 

ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ಬೇಡಿಕೆಗಳ ಕುರಿತು 2022ರ ಫೆ.24ರಂದು ನಡೆದಿದ್ದ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದೆ. ಸಭೆಯ ನಡವಳಿ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಸಭೆಯ ನಡವಳಿ ಪ್ರತಿ

 

‘2021ರ ಸೆ.3ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾದಡಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಗುತ್ತಿಗೆ ನೌಕರರಾಗಿದ್ದು ಹಾಗೂ ಗುತ್ತಿಗೆ ಅವಧಿಯು ಒಂದು ವರ್ಷಕ್ಕೆ ಮಾತ್ರ ಸೀಮಿತವಾಗಿರು ಹಿನ್ನೆಲೆಯಲ್ಲಿ ಶಿಶುಪಾಲನಾ ರಜೆಯನ್ನು ಅಳವಡಿಸಿಕೊಳ್ಳಲು ಅವಕಾಶವಿರುವುದಿಲ್ಲ,’ ಎಂದು ಸಭೆಯಲ್ಲಿ ನಿರ್ಣಯ ಗೊಂಡಿರುವುದು ಸಭೆಯ ನಡವಳಿಯಿಂದ ತಿಳಿದು ಬಂದಿದೆ.

 

ಹೆರಿಗೆ ರಜೆ ನೀಡುವಾಗ ಗುತ್ತಿಗೆ ಆಧಾರದಲ್ಲಿ ದುಡಿಯುವವರು ಹಾಗೂ ಕಾಯಂ ನೌಕರರು ಎಂಬ ತಾರತಮ್ಯ ತೋರುವಂತಿಲ್ಲ. ಕಾಯಂ ನೌಕರರಿಗೆ ನೀಡುವಷ್ಟೇ ಹೆರಿಗೆ ರಜೆಯನ್ನು ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವವರಿಗೂ ನೀಡಬೇಕು’ ಎಂದು ಕರ್ನಾಟಕ ಹೈಕೋರ್ಟ್‌ ಇತ್ತೀಚೆಗಷ್ಟೇ ಆದೇಶಿಸಿತ್ತು.

 

‘ಆರ್ಥಿಕವಾಗಿ ಸಬಲರಾಗಲು ಮತ್ತು ಸಶಕ್ತ ಜೀವನ ರೂಪಿಸಿಕೊಳ್ಳಲು ಇಂದು ಮಹಿಳೆಯರೂ ವಿವಿಧ ಕ್ಷೇತ್ರಗಳಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿದ್ದಾರೆ. ಇವರಿಗೆಲ್ಲಾ ಹೆರಿಗೆ ರಜೆ ನಿರಾಕರಿಸಿದರೆ ಅದು ಸಾಮಾಜಿಕ ನ್ಯಾಯಕ್ಕೆ ಎಸಗುವ ಅಪಚಾರವಾಗುತ್ತದೆ’ ಎಂದು ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಅಭಿಪ್ರಾಯಪಟ್ಟಿತ್ತು.

 

ಈ ಆದೇಶವನ್ನು 2013ರಲ್ಲಿ ಪ್ರಶ್ನಿಸಲಾಗಿತ್ತು. ರಿಟ್‌ ಅರ್ಜಿಯನ್ನು ಮಾನ್ಯ ಮಾಡಿದ್ದ ನ್ಯಾಯಪೀಠ, ‘ಭಾರತದಲ್ಲಿ ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಬಹಳಷ್ಟು ಮಹಿಳೆಯರು ಗ್ರಾಮೀಣ ಪ್ರದೇಶದಿಂದ ಬಂದವರಾಗಿರುತ್ತಾರೆ. ಇವರಲ್ಲಿ, ದಿನಗೂಲಿ ಮತ್ತು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವವರೇ ಹೆಚ್ಚಿದ್ದಾರೆ. ಇಂಥವರ ಸಾಂವಿಧಾನಿಕ ಹಕ್ಕುಗಳನ್ನು ಯಾರೂ ಕಸಿಯುವಂತಿಲ್ಲ’ ಎಂದು ಸ್ಪಷ್ಟವಾಗಿ ತಿಳಿಸಿತ್ತು.

 

ಇದೇ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ದಿನ ಭತ್ಯೆ ಮತ್ತು ಪ್ರಯಾಣ ಭತ್ಯೆಯನ್ನು 2008-09ರಿಂದಲೂ ಪರಿಷ್ಕರಣೆಗೊಂಡಿಲ್ಲ. ಈ ಸಂಬಂಧ ಪರಿಷ್ಕೃತ ಆದೇಶ ಹೊರಡಿಸಬೇಕು ಎಂದು ಸಂಘವು ಇರಿಸಿದ್ದ ಬೇಡಿಕೆಯನ್ನೂ ತಳ್ಳಿ ಹಾಕಿರುವ ಸರ್ಕಾರವು ‘ದಿನಭತ್ಯೆ ಹಾಗೂ ಪ್ರಯಾಣಭತ್ಯೆಯು ಪಿಐಪಿಯ ಮಿತಿ ಮೀರು ಹಿನ್ನೆಲೆಯಲ್ಲಿ ಸದರಿ ವರ್ಷದಲ್ಲಿ ಸೌಲಭ್ಯವನ್ನು ನೀಡಲು ಅವಕಾಶವಿರುವುದಿಲ್ಲ,’ ಎಂಬ ನಿರ್ಣಯ ಕೈಗೊಂಡಿದೆ.

 

ಹಾಗೆಯೇ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಯಾರು ಕೋವಿಡ್‌ ರೋಗಿಗಳನ್ನು ಆಸ್ಪತ್ರೆಗಳಲ್ಲಿ ಪಿಪಿಇ ಕಿಟ್, ಇತ್ಯಾದಿ ಧರಿಸಿ ಆರೈಕೆ ಮಾಡಿರುವವರಿಗೆ ಮಾತ್ರ ಕೋವಿಡ್‌ ಪ್ರೋತ್ಸಾಹ ಧನ ನೀಡಲಾಗಿದೆ. ಆದರೆ ಪಿಪಿಇ ಕಿಟ್‌ ಧರಿಸದೇ ಆರೈಕೆ ಮಾಡಿರುವವರಿಗೆ ಪ್ರೋತ್ಸಾಹ ಧನನೀಡಲು ಅವಕಾಶವಿಲ್ಲ ಎಂದು ಸಂಘದ ಈ ಬೇಡಿಕೆಯನ್ನೂ ತಳ್ಳಿ ಹಾಕಿರುವುದು ಸಭೆ ನಡವಳಿಯಿಂದ ಗೊತ್ತಾಗಿದೆ.

 

ಸಮಾನ ವೇತನಕ್ಕೆ ಸಂಬಂಧಿಸಿದಂತೆ ಶ್ರೀನಿವಾಸಚಾರಿ ಅವರು ನೀಡಿದ್ದ ವರದಿಯಂತೆ 2021-22ನೇ ಸಾಲಿಗೆ ಪಡೆಯುತ್ತಿರುವ ವೇತನಕ್ಕೆ ಶೇ.15ರಷ್ಟು ಹೆಚ್ಚಳ ಮಾಡುವ ಪ್ರಸ್ತಾವನೆ ಆಧರಿಸಿ 38 ವೃಂದಗಳ 17,033 ಸಿಬ್ಬಂದಿಗಳಿಗೆ 71.26 ಕೋಟಿ ರು. ಅನುದಾನ ಬಿಡುಗಡೆಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ.

Hot this week

ಅಪೆಕ್ಸ್ ಬ್ಯಾಂಕ್‌ನಲ್ಲಿ 1,000 ಕೋಟಿ ಹಗರಣ; ಹೈಕೋರ್ಟ್‌ನಲ್ಲಿ ಪಿಐಎಲ್‌, ಸರ್ಕಾರಕ್ಕೆ ಎದುರಾಗಲಿದೆಯೇ ಸಂಕಷ್ಟ?

ಬೆಂಗಳೂರು; ಕೃಷಿಗೆ ಸಂಬಂಧಿಸದ ಉದ್ದೇಶಗಳಿಗಾಗಿ ಸಾಲ ಮಂಜೂರಾತಿ,  ಈಗಾಗಲೇ ಅನುತ್ಪಾದಕ ಆಸ್ತಿಗಳೆಂದು (Non-Performing...

ರೈಲ್ವೇ- ವಿಮಾನ ಭತ್ಯೆ; 15ನೇ ವಿಧಾನಸಭೆಯ ಶಾಸಕರಿಗೆ 16.32 ಕೋಟಿ ಮರು ಪಾವತಿ

ಬೆಂಗಳೂರು; ಹದಿನೈದನೇ ವಿಧಾಸಭೆ ಅವಧಿಯಲ್ಲಿ ರಾಜ್ಯದ 224 ಶಾಸಕರು  16.32 ಕೋಟಿಯಷ್ಟು...

ಆರ್ಥಿಕ ಸ್ಥಿತಿ ಬಹಿರಂಗಪಡಿಸಿ ಕೋಲಾಹಲ ಎಬ್ಬಿಸಿದ್ದ ಅನಧಿಕೃತ ಟಿಪ್ಪಣಿಯ ಕಡತ ಒದಗಿಸಲು ನಿರಾಕರಿಸಿದ ಸರ್ಕಾರ

ಬೆಂಗಳೂರು; ರಾಜ್ಯ ಸರ್ಕಾರವು ₹2 ಲಕ್ಷ ಕೋಟಿಗೂ ಹೆಚ್ಚಿನ ಕಾಮಗಾರಿಗಳ ಬಾಕಿ...

ಸ್ಟಿಂಗ್ ಆಪರೇಷನ್‌; ಅಸಲು ದಾವೆ ಬೆನ್ನಲ್ಲೇ ಪೊಲೀಸ್‌ ಆಯುಕ್ತರಿಗೂ ದೂರು ಸಲ್ಲಿಸಿ ಯಾವ ಭಯವೂ ನನಗಿಲ್ಲವೆಂದ ಸಿದ್ದರಾಮಯ್ಯ

ಬೆಂಗಳೂರು; ಯೂ ಟ್ಯೂಬ್‌ ಸೇರಿದಂತೆ ಇನ್ನಿತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು...

21 ಪ್ಯಾಕೇಜ್‌ ಟೆಂಡರ್; ಶೇ. 5 ಪ್ರೀಮಿಯಂ ಮೀರಿದ್ದರೂ ಪರಿಶೀಲನೆ ಸಮಿತಿ ರಚಿಸಲು ಆಕ್ಷೇಪ ಎತ್ತಿದ್ದ ಡಿಕೆಶಿ

ಬೆಂಗಳೂರು;  ಜಿಬಿಎ ವ್ಯಾಪ್ತಿಯಲ್ಲಿ  ಉತ್ಪತ್ತಿಯಾಗುವ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ನೈರ್ಮಲ್ಯ...
Please Scan to make Your Contribution

Topics

ಅಪೆಕ್ಸ್ ಬ್ಯಾಂಕ್‌ನಲ್ಲಿ 1,000 ಕೋಟಿ ಹಗರಣ; ಹೈಕೋರ್ಟ್‌ನಲ್ಲಿ ಪಿಐಎಲ್‌, ಸರ್ಕಾರಕ್ಕೆ ಎದುರಾಗಲಿದೆಯೇ ಸಂಕಷ್ಟ?

ಬೆಂಗಳೂರು; ಕೃಷಿಗೆ ಸಂಬಂಧಿಸದ ಉದ್ದೇಶಗಳಿಗಾಗಿ ಸಾಲ ಮಂಜೂರಾತಿ,  ಈಗಾಗಲೇ ಅನುತ್ಪಾದಕ ಆಸ್ತಿಗಳೆಂದು (Non-Performing...

ರೈಲ್ವೇ- ವಿಮಾನ ಭತ್ಯೆ; 15ನೇ ವಿಧಾನಸಭೆಯ ಶಾಸಕರಿಗೆ 16.32 ಕೋಟಿ ಮರು ಪಾವತಿ

ಬೆಂಗಳೂರು; ಹದಿನೈದನೇ ವಿಧಾಸಭೆ ಅವಧಿಯಲ್ಲಿ ರಾಜ್ಯದ 224 ಶಾಸಕರು  16.32 ಕೋಟಿಯಷ್ಟು...

ಆರ್ಥಿಕ ಸ್ಥಿತಿ ಬಹಿರಂಗಪಡಿಸಿ ಕೋಲಾಹಲ ಎಬ್ಬಿಸಿದ್ದ ಅನಧಿಕೃತ ಟಿಪ್ಪಣಿಯ ಕಡತ ಒದಗಿಸಲು ನಿರಾಕರಿಸಿದ ಸರ್ಕಾರ

ಬೆಂಗಳೂರು; ರಾಜ್ಯ ಸರ್ಕಾರವು ₹2 ಲಕ್ಷ ಕೋಟಿಗೂ ಹೆಚ್ಚಿನ ಕಾಮಗಾರಿಗಳ ಬಾಕಿ...

ಸ್ಟಿಂಗ್ ಆಪರೇಷನ್‌; ಅಸಲು ದಾವೆ ಬೆನ್ನಲ್ಲೇ ಪೊಲೀಸ್‌ ಆಯುಕ್ತರಿಗೂ ದೂರು ಸಲ್ಲಿಸಿ ಯಾವ ಭಯವೂ ನನಗಿಲ್ಲವೆಂದ ಸಿದ್ದರಾಮಯ್ಯ

ಬೆಂಗಳೂರು; ಯೂ ಟ್ಯೂಬ್‌ ಸೇರಿದಂತೆ ಇನ್ನಿತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು...

21 ಪ್ಯಾಕೇಜ್‌ ಟೆಂಡರ್; ಶೇ. 5 ಪ್ರೀಮಿಯಂ ಮೀರಿದ್ದರೂ ಪರಿಶೀಲನೆ ಸಮಿತಿ ರಚಿಸಲು ಆಕ್ಷೇಪ ಎತ್ತಿದ್ದ ಡಿಕೆಶಿ

ಬೆಂಗಳೂರು;  ಜಿಬಿಎ ವ್ಯಾಪ್ತಿಯಲ್ಲಿ  ಉತ್ಪತ್ತಿಯಾಗುವ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ನೈರ್ಮಲ್ಯ...

ಪ್ರಭಾವಿ ನಾಯಕನ ವಿರುದ್ಧ ಸ್ಟಿಂಗ್ ಕಾರ್ಯಾಚರಣೆ; ನ್ಯಾಯಾಂಗ ತನಿಖೆಗೆ ಹೈಕೋರ್ಟ್‌, ಬಾಲ ನ್ಯಾಯಮಂಡಳಿ ಮೆಟ್ಟಿಲೇರಿದ ನೈಜ ಹೋರಾಟಗಾರರ ವೇದಿಕೆ

ಬೆಂಗಳೂರು; ಯೂ ಟ್ಯೂಬ್‌ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ  ‘ಹನಿಟ್ರ್ಯಾಪ್’ ಪ್ರಕರಣದ...

ಸ್ಟಿಂಗ್ ಆಪರೇಷನ್‌; ಮಾಧ್ಯಮಗಳ ವಿರುದ್ಧ ತಡೆಯಾಜ್ಞೆಗೆ ಸಿದ್ದರಾಮಯ್ಯ ಎಂಬುವರಿಂದ ಅಸಲು ದಾವೆ ದಾಖಲು, ನಾಳೆಯೇ ಅರ್ಜಿ ವಿಚಾರಣೆ

ಬೆಂಗಳೂರು;  ರಾಜ್ಯ ರಾಜಕಾರಣದಲ್ಲಿ ಬಹು ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಬಗ್ಗೆ...

ಅಕ್ರಮ ಖಾತೆ, ಅನರ್ಹರಿಗೆ 79.28 ಕೋಟಿ ರು ಪರಿಹಾರ; ಕೆಎಎಸ್ ಅಧಿಕಾರಿ ವಿರುದ್ಧದ ಮೊದಲ ವಿಚಾರಣೆಯಲ್ಲೇ ಲೋಪ, ಮರು ವಿಚಾರಣೆಗೆ ಆದೇಶ

ಬೆಂಗಳೂರು; ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಇಮ್ಮಾವು ಗ್ರಾಮದಲ್ಲಿ 54 ಎಕರೆಗೆ...

Related Articles

Popular Categories

error: Content is protected !!