Saturday | April 11, 2026 |

ಅಂದಾಜು ಸಮಿತಿ ಸದಸ್ಯರ ಮೇಲೆ ಗೂಂಡಾಗಿರಿ ಪ್ರಕರಣ; ‘ದಿ ಫೈಲ್‌’ ವರದಿ ಬೆನ್ನಲ್ಲೇ ದನಿ ಎತ್ತಿದ ಸಿದ್ದರಾಮಯ್ಯ

ಬೆಂಗಳೂರು; ಕೃಷ್ಣಭಾಗ್ಯ ಜಲನಿಗಮದ ನಾರಾಯಣಪುರ ಬಲದಂಡೆ ಕಾಲುವೆ ಅಧುನೀಕರಣ, ನವೀಕರಣ ಮತ್ತು ವಿಸ್ತರಣೆ ಕಾಮಗಾರಿಗಳ ಗುಣಮಟ್ಟ ಮತ್ತು ಭೌತಿಕ ಪರಿಶೀಲನೆಗೆ ತೆರಳಿದ್ದ ಬಿಜೆಪಿ ಶಾಸಕ ಅಭಯ್‌ ಪಾಟೀಲ್‌ ಅಧ್ಯಕ್ಷತೆಯ ಕರ್ನಾಟಕ ವಿಧಾನಸಭೆಯ ಅಂದಾಜುಗಳ ಸಮಿತಿಯ ಶಾಸಕ ಸದಸ್ಯರ ಮೇಲೆ ಗುತ್ತಿಗೆದಾರರ ಬೆಂಬಲಿಗರ ಗುಂಪೊಂದು ಮುಗಿಬಿದ್ದು ಹಲ್ಲೆಗೂ ಮುಂದಾಗಿದ್ದ ಘಟನೆ ಕುರಿತು ‘ದಿ ಫೈಲ್‌’ ಸರಣಿ ವರದಿ ಪ್ರಕಟಿಸುತ್ತಿದ್ದಂತೆ ಇದೀಗ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಹ ದನಿ ಎತ್ತಿದ್ದಾರೆ.

 

ಉತ್ತರಪ್ರದೇಶ, ಬಿಹಾರದಂತಹ ವಾತಾವರಣ ಸೃಷ್ಟಿಯಾಗಿದ್ದರೂ ಸಮಿತಿಯ ಯಾವೊಬ್ಬ ಶಾಸಕ ಸದಸ್ಯರೂ ಇದುವರೆಗೂ ತುಟಿ ಬಿಚ್ಚದಿದ್ದರೂ ಸಮಿತಿ ಸದಸ್ಯರ ಮೇಲೆ ಮುಗಿಬಿದ್ದಿದ್ದ ಗುಂಪಿನ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು ಎಂದು ಟ್ವೀಟ್‌ ಮಾಡಿದ್ದಾರೆ.

 

‘ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಸ್ಥಳ ಪರಿಶೀಲನೆಗೆ ತೆರಳಿದ್ದ ಅಂದಾಜು ಸಮಿತಿಯ ಸದಸ್ಯರನ್ನು ಕಾಮಗಾರಿ ಸ್ಥಳಕ್ಕೆ ತೆರಳಲು ಅವಕಾಶ ನೀಡದೇ ಅವರ ಮೇಲೆ ಗೂಂಡಾಗಿರಿ ಪ್ರದರ್ಶಿಸಿದ ಗುತ್ತಿಗೆದಾರ ಹಾಗೂ ಆತನ ಬೆಂಬಲಿಗರ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು,’ ಎಂದು ಟ್ವೀಟ್‌ ಮಾಡಿದ್ದಾರೆ.

 

ಸಿದ್ದರಾಮಯ್ಯ ಅವರು ಮಾಡಿರುವ ಟ್ವೀಟ್‌

 

ಅಲ್ಲದೆ ಈ ಕುರಿತು ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರೂ ಸಹ ವಿಡಿಯೋ ತುಣಕನ್ನು ಟ್ವೀಟ್‌ನಲ್ಲಿ ಹಂಚಿಕೊಳ್ಳುವ ಮೂಲಕ ಗಮನಸೆಳೆದಿದ್ದರು.

 

ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರು ಮಾಡಿರುವ ಟ್ವೀಟ್‌

ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಸಭೆಯು ನಡೆಯುತ್ತಿದ್ದ ವೇಳೆಯಲ್ಲಿ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಿ ಡಿ ಹಿರೇಮಠ್‌ ಎಂಬುವರು ಏಕಾಏಕಿ ನುಗ್ಗಿ ದಾಂಧಲೆ ನಡೆಸಿದರು ಎಂಬ ಕಾರಣಕ್ಕೆ ಅವರ ವಿರುದ್ಧ ಠಾಣೆಯಲ್ಲಿ ವಿಧಾನಸಭೆ ಸಚಿವಾಲಯದ ಅಧೀನ ಕಾರ್ಯದರ್ಶಿ ದೂರು ನೀಡಿರುವ ಬೆನ್ನಲ್ಲೇ ಕಾಮಗಾರಿಗಳ ಭೌತಿಕ ಪರಿಶೀಲನೆ ವೇಳೆಯಲ್ಲಿ ಗುತ್ತಿಗೆದಾರರ ಗುಂಪು ಮುಗಿಬಿದ್ದು ಗೂಂಡಾ ವಾತಾವರಣ ಸೃಷ್ಟಿಯಾಗಿದ್ದರೂ ಅಂದಾಜು ಸಮಿತಿ ಸದಸ್ಯರ್ಯಾರು ತುಟಿ ಬಿಚ್ಚಿರಲಿಲ್ಲ. ಈ ಕುರಿತು ‘ದಿ ಫೈಲ್‌’ 2022ರ ಮೇ 9ರಂದೇ ವರದಿ ಪ್ರಕಟಿಸಿತ್ತು.

ಅಂದಾಜು ಸಮಿತಿಯ ಶಾಸಕರುಗಳಿಗೂ ಭದ್ರತೆಯಿಲ್ಲ; ಕಾಮಗಾರಿ ಪರಿಶೀಲನೆಗೆ ತೆರಳಿದ್ದವರ ಮೇಲೆ ಹಲ್ಲೆ!

 

ಕಾಮಗಾರಿಗಳ ಭೌತಿಕ ಪರಿಶೀಲನೆಗೆ ಗುತ್ತಿಗೆದಾರರ ಗುಂಪೊಂದು ಅಡ್ಡಿ ವ್ಯಕ್ತಪಡಿಸಿ, ಪರಿಶೀಲನೆ ನಡೆಸಲು ನೀವು ಯಾರು ಎಂದು ಗುಂಪು ಗುಂಪಾಗಿ ಮುಗಿಬಿದ್ದಿರುವುದು ಇದೇನು ಬಿಹಾರವೋ ಅಥವಾ ಉತ್ತರ ಪ್ರದೇಶವೋ ಎಂಬಂತಹ ವಾತಾವರಣ ಸೃಷ್ಟಿಯಾಗಿರುವ ಘಟನೆಗೆ ಸಾಕ್ಷ್ಯವನ್ನಾಗಿ ವಿಡಿಯೋ ತುಣುಕನ್ನು ‘ದಿ ಫೈಲ್‌ ಮತ್ತು ವಾರ್ತಾಭಾರತಿ’ ಮುನ್ನೆಲೆಗೆ ತಂದಿತ್ತು. ಅಲ್ಲದೆ ಗೃಹ ಸಚಿವರು ಈ ಬಗ್ಗೆ ಗಮನಹರಿಸಿಲ್ಲ ಎಂದು ‘ದಿ ಫೈಲ್‌’ 2022ರ ಮೇ 14ರಂದು ಮತ್ತೊಂದು ವರದಿ ಪ್ರಕಟಿಸಿತ್ತು.

ರಾಜ್ಯದಲ್ಲಿ ಬಿಹಾರ ವಾತಾವರಣ ಸೃಷ್ಟಿ; ಅಂದಾಜು ಸಮಿತಿ ಶಾಸಕರ ಮೇಲೆ ಗುತ್ತಿಗೆದಾರರು ಮುಗಿಬಿದ್ದರೂ ಮೌನ

 

ಸಮಿತಿ ಸದಸ್ಯರ ಪ್ರವಾಸದ ವೇಳೆಯಲ್ಲಿ ಶಿಷ್ಟಾಚಾರ ಮತ್ತು ಭದ್ರತೆ ಒದಗಿಸಬೇಕಿದ್ದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯವೂ ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಒಂದೊಮ್ಮೆ ಪರಿಸ್ಥಿತಿ ಕೈ ಮೀರಿದ್ದರೇ ಶಾಸಕ ಸದಸ್ಯರ ಪ್ರಾಣಕ್ಕೂ ಆಪತ್ತು ಒದಗಲಿತ್ತು ಎಂಬ ದೃಶ್ಯಗಳು ವಿಡಿಯೋ ತುಣುಕಿನಲ್ಲಿವೆ.
ಕಾಮಗಾರಿಗಳ ಭೌತಿಕ ಪರಿಶೀಲನೆ ವೇಳೆಯಲ್ಲಿ ಇಷ್ಟೆಲ್ಲಾ ಬೆಳವಣಿಗೆಗಳು ನಡೆದಿದ್ದರೂ ಸಮಿತಿ ಸದಸ್ಯರು ಠಾಣೆಗೆ ದೂರು ನೀಡಿಲ್ಲ. ಅಲ್ಲದೆ ಈ ಪ್ರಕರಣದ ಬಗ್ಗೆ ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೂ ಸಹ ಈಗಲೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಈ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ನ ಕರ್ನಾಟಕ ಘಟಕವೂ ಸಹ ಶಾಸಕರು ದೂರು ನೀಡಿಲ್ಲವೇಕೆ, ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಗೃಹಮಂತ್ರಿ ಮೌನ ವಹಿಸಿರುವುದೇಕೆ ಎಂದು ಪ್ರ್ರಶ್ನಿಸಿದೆ.

ಕೆಪಿಸಿಸಿ ಮಾಡಿರುವ ಟ್ವೀಟ್‌

 

ಪ್ರಕರಣದ ಹಿನ್ನೆಲೆ

 

ಈ ಸಮಿತಿಯಲ್ಲಿ ಅಧ್ಯಕ್ಷ ಅಭಯ್‌ ಪಾಟೀಲ್‌ ಸೇರಿ ಒಟ್ಟು 15 ಮಂದಿ ಶಾಸಕರಿದ್ದರು. ಕಾಲುವೆಗಳ ಕಾಮಗಾರಿ ಭೌತಿಕ ಪರಿಶೀಲನೆಗೆ ಮುಂದಾಗುತ್ತಿದ್ದಂತೆ ಇದ್ದಕ್ಕಿದ್ದಂತೆ ಗುತ್ತಿಗೆದಾರರ ಗುಂಪೊಂದು ಸಮಿತಿಯ ಸುತ್ತಲೂ ಘೇರಾಯಿಸಿ ಬೆದರಿಕೆಯನ್ನೂ ಒಡ್ಡಿತು. ಮತ್ತು ಪರಿಶೀಲನೆಗೆ ಅಡ್ಡಿಯುಂಟು ಮಾಡಿತು. ಆದರೆ ಈ ವೇಳೆಯಲ್ಲಿ ಬೆರಳಣಿಕೆಯಷ್ಟು ಪೊಲೀಸರು ಇದ್ದುದ್ದರಿಂದಾಗಿ ಸಮಿತಿಯ ಸದಸ್ಯರ ಜೀವಕ್ಕೂ ಆಪತ್ತು ಬಂದೊದಗಿತ್ತು ಎಂದು ತಿಳಿದು ಬಂದಿದೆ.

 

ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆ, ಸೀಳು ಕಾಲುವೆ ಸೇರಿದಂತೆ ಇನ್ನಿತರೆ ಕಾಮಗಾರಿಗಳನ್ನು ಡಿ ವೈ ಉಪ್ಪಾರ್‌ ಮತ್ತು ಎನ್‌ ಡಿ ವಡ್ಡರ್‌ ಎಂಬ ಗುತ್ತಿಗೆದಾರರು ನಿರ್ವಹಿಸಿದ್ದರು ಎಂದು ತಿಳಿದು ಬಂದಿದೆ. ಈ ಪೈಕಿ ಎನ್‌ ಡಿ ವಡ್ಡರ್‌ ಅವರು ಬಿಜೆಪಿಯ ಮಾಜಿ ಶಾಸಕ ಮಾನಪ್ಪ ವಜ್ಜಲ್‌ ಅವರ ಸಂಬಂಧಿ ಎಂದು ಹೇಳಲಾಗುತ್ತಿದೆ.

 

ವಿಶೇಷವೆಂದರೆ ಸಮಿತಿ ಸದಸ್ಯರಿಗೆ ಬಂದೋಬಸ್ತ್‌ ಮತ್ತು ಭದ್ರತೆ ನೀಡಲು ನಿಯೋಜಿತವಾಗಿದ್ದ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಎಂಬುವರು ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿಯ ಹಗರಣದಲ್ಲಿ ಭಾಗಿ ಆಗಿದ್ದಾರೆ ಎಂಬ ಆರೋಪದಡಿ ಸಮಿತಿ ಭೇಟಿ ನೀಡಿದ ದಿನದಂದೇ ಬಂಧನಕ್ಕೊಳಗಾಗಿದ್ದರು.

 

ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆ, ಉಪ ಕಾಲುವೆ ಮತ್ತು ಸೀಳು ಕಾಲುವೆ ಕಾಮಗಾರಿಯು ಗುಣಮಟ್ಟದಿಂದ ಕೂಡಿಲ್ಲ. ಕಾಮಗಾರಿಗಳಲ್ಲಿ ಬೋಗಸ್‌ ಬಿಲ್‌ ಸೃಷ್ಟಿಸಿ ಅವ್ಯವಹಾರ ಎಸಗಲಾಗಿದೆ ಎಂದು ಸ್ಥಳೀಯ ಶಾಸಕರೂ ಸೇರಿದಂತೆ ಇನ್ನಿತರರು ಅಂದಾಜುಗಳ ಸಮಿತಿಗೆ ದೂರು ಸಲ್ಲಿಸಿತ್ತು. ಇದನ್ನಾಧರಿಸಿ ಸಮಿತಿಯು ಪ್ರವಾಸ ನಡೆಸಿ ಭೌತಿಕ ಪರಿಶೀಲನೆಗೆ ಮುಂದಾಗಿತ್ತು ಎಂದು ತಿಳಿದು ಬಂದಿದೆ.

 

ಶಾಸಕ ಐಹೊಳೆ ದುರ್ಯೋಧನ, ವೀರಣ್ಣ ಚರಂತಿಮಠ್‌, ಮಹಾದೇವಪ್ಪ ಶಿವಲಿಂಗಪ್ಪ ಯಾದವಾಡ, ಡಾ ಶಿವರಾಜ್‌ ಪಾಟೀಲ್‌, ದೊಡ್ಡಗೌಡರ ಮಹಾಂತೇಶ ಬಸವಂತರಾಯ್‌, ಸಂಜೀವ್‌ ಮಠಂದೂರು, ಎಚ್‌ ನಾಗೇಶ್‌, ಸುನೀಲ್‌ ಬಿಳಿಯಾನಾಯ್ಕ, ಅಮರೇಗೌಡ ಬಯ್ಯಾಪುರ, ಶರಣಬಸಪ್ಪಗೌಡ ದರ್ಶನಾಪುರ, ಕೌಜಲಿಗೆ ಮಹಾಂತೇಶ್‌ ಶಿವಾನಂದ, ಸತೀಶ್‌ ಎಲ್‌ ಜಾರಕಿಹೊಳಿ, ಯಶವಂತರಾಯಗೌಡ ವಿಠಲಗೌಡ ಪಾಟೀಲ್‌ ಅವರು ಸಮಿತಿಯ ಸದಸ್ಯರಾಗಿದ್ದಾರೆ.

Hot this week

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ದಾಖಲಾಗದ ಎಫ್‌ಐಆರ್, ವರದಿ ಸಲ್ಲಿಸಲು ಸೂಚನೆ

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ...

13 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಸಂಘದಿಂದ ಮತ್ತೊಂದು ಪತ್ರ, ಕೋರ್ಟ್‌ ಕದ ತಟ್ಟಿದ ಗುತ್ತಿಗೆದಾರರು

ಬೆಂಗಳೂರು;  ಮಹಾತ್ಮಗಾಂಂಧಿ ನಗರ ವಿಕಾಸ ಯೋಜನೆ -1 ರ ಅಡಿಯಲ್ಲಿ ಕಾಮಗಾರಿ...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

ತರಕಾರಿ ಬೀಜಗಳ ಕಿಟ್ ವಿತರಣೆ; ದಾಸ್ತಾನು ಇಲ್ಲದ ಏಜೆನ್ಸಿಗೆ 4 ಜಿ ವಿನಾಯಿತಿ, ಬಹುಕೋಟಿ ಅಕ್ರಮ, ಭ್ರಷ್ಟಾಚಾರ ಸುಳಿಯಲ್ಲಿ ಸರ್ಕಾರ?

ಬೆಂಗಳೂರು; 2023-24 ಮತ್ತು 2025-26ನೇ ಸಾಲಿನವರೆಗೆ  ತೋಟಗಾರಿಕೆ ಇಲಾಖೆಯು ಜಾರಿಗೊಳಿಸಿದ್ದ  ...

Topics

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

2,298 ಕೋಟಿ ರು ಮೊತ್ತದ ಬಿಲ್‌ ಬಾಕಿ; 276 ಕಾಮಗಾರಿ ಅಪೂರ್ಣ, ಬೊಕ್ಕಸ ಬರಿದಾಯಿತೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಕೈಗೆತ್ತಿಕೊಂಡಿದ್ದ  ಕಾಮಗಾರಿಗಳು ನಿಗದಿತ ಅವಧಿಯಲ್ಲಿ...

ಪುಸ್ತಕಗಳ ಖರೀದಿಯಲ್ಲಿ ವಂಚನೆ, ಭ್ರಷ್ಟಾಚಾರ ಆರೋಪ;ಎಚ್ ಟಿ ಪೋತೆ ಅವರ ವಿರುದ್ಧ ಕ್ರಮಕ್ಕೆ ಮೀನಮೇಷ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ...

Related Articles

Popular Categories

error: Content is protected !!