Monday | March 23, 2026 |

40 ಪರ್ಸೆಂಟ್‌ ಕಮಿಷನ್‌ ಹಗರಣಕ್ಕೆ ಕ್ಲೀನ್‌ ಚಿಟ್‌; ತನಿಖೆ ನಡೆಸದೆಯೇ ಮಣ್ಣೆಳೆದು ಮುಚ್ಚಿ ಹಾಕಿದ ಸರ್ಕಾರ

Support THE-FILE

spot_img

ಬೆಂಗಳೂರು; ಹತ್ತು ಕೋಟಿ ಅನುದಾನ ಮೀರಿದ ಎಲ್ಲಾ ಕಾಮಗಾರಿಗಳು, ಟೆಂಡರ್‌ ಪ್ರಕ್ರಿಯೆ ಅಥವಾ ಬಿಲ್‌ ಪಾವತಿಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪ ಕುರಿತಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ತಮ್ಮ ಹಂತದಲ್ಲೇ ಕ್ಲೀನ್‌ ಚಿಟ್‌ ಕೊಟ್ಟುಕೊಂಡಿವೆ. ಅಲ್ಲದೆ ಶೇ. 40ರಷ್ಟು ಕಮಿಷನ್‌ಗೆ ಬೇಡಿಕೆ ಇರಿಸಲಾಗುತ್ತಿದೆ ಎಂಬ ಕುರಿತು ಒಂದೇ ಒಂದು ದೂರು ಬಂದಿಲ್ಲ ಎಂದು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು, ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ಸಿಂಗ್‌ ಅವರಿಗೆ ವರದಿ ನೀಡಿವೆ.

 

ಟೆಂಡರ್ ಪ್ರಕ್ರಿಯೆಯಲ್ಲಿ ಹಗರಣದ ಹಾಗೂ ಶೇ. 40ರಷ್ಟು ಕಮಿಷನ್‌ಗೆ ವಿಚಾರವಾಗಿ ಗುತ್ತಿಗೆದಾರರ ಸಂಘವು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ವಿಚಾರದ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯ ಕಾರ್ಯದರ್ಶಿ ರವಿಕುಮಾರ್‌ ಅವರಿಗೆ ಸೂಚಿಸಿದ್ದರು.

 

ತನಿಖೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬರೆದಿರುವ ಪತ್ರದ ಪ್ರತಿ

 

ಈ ಸೂಚನೆ ಮೇರೆಗೆ ಮುಖ್ಯ ಕಾರ್ಯದರ್ಶಿ ರವಿಕುಮಾರ್‌ ಅವರು ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ಸಿಂಗ್‌ಗೆ ಸೂಚಿಸಿದ್ದರು.

 

ಮುಖ್ಯ ಕಾರ್ಯದರ್ಶಿ ರವಿಕುಮಾರ್‌, ರಾಕೇಶ್‌ಸಿಂಗ್‌ ಅವರಿಗೆ ಬರೆದಿರುವ ಪತ್ರ

 

 

ಈ ಸಂಬಂಧ ರಾಕೇಶ್‌ಸಿಂಗ್ ಅಧಿಕಾರಿಗಳೊಂದಿಗೆ 2021ರ ನವೆಂಬರ್‌ 29ರಂದು ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿದ್ದರು.

 

ರಾಕೇಶ್‌ಸಿಂಗ್ ಸಭೆ ನಡೆಸಿರುವ ಪತ್ರ

ಈ ಪ್ರಕರಣವು ಪ್ರಧಾನಿ ಕಚೇರಿ ಮೆಟ್ಟಿಲೇರಿದ್ದರೂ ಗಂಭೀರವಾಗಿ ಪರಿಗಣಿಸದ ರಾಕೇಶ್‌ಸಿಂಗ್‌ ಅವರು ನಿಗಮಗಳಿಂದಲೇ ವರದಿ ಪಡೆದಿದ್ದಾರೆ. ಹೀಗಾಗಿ ನಿಗಮಗಳು ತಮ್ಮ ವ್ಯಾಪ್ತಿಯಲ್ಲಿ ಬಿಲ್‌ ಪಾವತಿ ಹಂತ, ಟೆಂಡರ್‌ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮಗಳು ನಡೆದಿಲ್ಲ ಎಂದು ತಮ್ಮ ಹಂತದಲ್ಲಿಯೇ ಕ್ಲೀನ್‌ ಚಿಟ್‌ ಕೊಟ್ಟುಕೊಂಡಿವೆ.

 

ಮುಖ್ಯ ಕಾರ್ಯದರ್ಶಿ ಸೂಚನೆ ಮೇರೆಗೆ ರಾಕೇಶ್‌ಸಿಂಗ್‌ ಅವರು ತನಿಖೆ ನಡೆಸಿರುವುದು ಮತ್ತು ಈ ಸಂಬಂಧ ನಿಗಮಗಳೊಂದಿಗೆ ನಡೆಸಿರುವ ಪತ್ರ ವ್ಯವಹಾರಗಳು ಕುರಿತಂತೆ ‘ದಿ ಫೈಲ್‌’ ಆರ್‌ಟಿಐ ಅಡಿಯಲ್ಲಿ ದಾಖಲಾತಿಗಳನ್ನು ಪಡೆದುಕೊಂಡಿದೆ.

 

ಕರ್ನಾಟಕ ನೀರಾವರಿ ನಿಗಮ, ಕೃಷ್ಣಭಾಗ್ಯ ಜಲನಿಗಮ, ಕಾವೇರಿ ಜಲನಿಗಮ, ವಿಶ್ವೇಶ್ವರಯ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕರು ನವೆಂಬರ್‌ ಮತ್ತು ಡಿಸೆಂಬರ್‌ನಲ್ಲಿ ವರದಿ ಸಲ್ಲಿಸಿದ್ದಾರೆ. ಇದನ್ನಾಧರಿಸಿ ರಾಕೇಶ್‌ಸಿಂಗ್‌ ಅವರು 2021ರ ಡಿಸೆಂಬರ್‌ 01ರಂದೇ ವರದಿ ಸಲ್ಲಿಸಿದ್ದಾರೆ. ನಾಲ್ಕೂ ನಿಗಮಗಳೂ ಕೆಪಿಡಬ್ಲ್ಯೂಡಿ ಕೋಡ್‌ ಮತ್ತು ಕೆಟಿಪಿಪಿ ಕಾಯ್ದೆ ಮತ್ತು ರಾಜ್ಯ ಸರ್ಕಾರವು ಕಾಲಕಾಲಕ್ಕೆ ಹೊರಡಿಸಿರುವ ಆದೇಶ ಮತ್ತು ಸುತ್ತೋಲೆಗಳನ್ನು ಪಾಲಿಸುತ್ತಿವೆ ಎಂದು ವರದಿಯಲ್ಲಿ ಪ್ರಸ್ತಾಪಿಸಿದ್ದಾರೆ.

 

ರಾಕೇಶ್‌ಸಿಂಗ್‌ ಸಲ್ಲಿಸಿರುವ ವರದಿ ಪ್ರತಿ

 

‘ಹಾಲಿ ಮುಖ್ಯಮಂತ್ರಿ ಅವರು ಅಧಿಕಾರ ವಹಿಸಿಕೊಂಡ ನಂತರ 10 ಕೋಟಿ ರು.ಗೂ ಮೀರಿದ ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆ, ಬಿಲ್‌ ಪಾವತಿ, ಭೂ ಸ್ವಾಧೀನದ ಬಾಕಿ ಮೊತ್ತ, ಸಣ್ಣ ಗುತ್ತಿಗೆದಾರರಿಗೆ ಆದ್ಯತೆ ಮೇಲೆ ಹಣ ಪಾವತಿಸಲಾಗುತ್ತಿದೆ. ಯಾವುದೇ ಬಿಲ್‌ಗಳು ಪಾವತಿಗಾಗಿ ಬಾಕಿ ಉಳಿದಿಲ್ಲ. ಈ ಬಿಲ್‌ಗಳ ಪಾವತಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳು ಸ್ವೀಕೃತವಾಗಿಲ್ಲ,’ ಎಂದು ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿರುವ ವರದಿಯಲ್ಲಿ ವಿವರಿಸಲಾಗಿದೆ.

 

ಕಾವೇರಿ ನೀರಾವರಿ ನಿಗಮದ ಉತ್ತರವೇನು?

 

2021ರ ಜುಲೈ 28ರಿಂದ ಇಲ್ಲಿಯವರೆಗೆ ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯಲ್ಲಿ 10.00 ಕೋಟಿ ಮೀರಿದ ಯಾವುದೇ ಕಾಮಗಾರಿಯ ಟೆಂಡರ್‌ನ್ನು ಅನುಮೋದಿಸಿರುವುದಿಲ್ಲ. ಹಾಗೂ 10.00 ಕೋಟಿ ಮೀರಿದ ಬಿಲ್‌ ಪಾವತಿಯೂ ಸಹ ಮಾಡಿರುವುದಿಲ್ಲ ಎಂದು 2021ರ ನವೆಂಬರ್‌ 29ರಂದು ಮಾಹಿತಿ ಒದಗಿಸಿದೆ.

 

ಕಾವೇರಿ ನೀರಾವರಿ ನಿಗಮದ ವಿವರಣೆ

 

ಕೃಷ್ಣಾ ಭಾಗ್ಯ ಜಲನಿಗಮದ ಉತ್ತರ ಹೀಗಿದೆ.

 

ಹಾಲಿ ಮುಖ್ಯಮಂತ್ರಿಗಳು 2021ರ ಜುಲೈ 28ರಂದು ಅಧಿಕಾರ ವಹಿಸಿಕೊಂಡ ದಿನದಿಂದ ಇಲ್ಲಿಯವರೆಗೂ 10.00 ಕೋಟಿ ರು.ಮೀರಿದ ಯಾವುದೇ ಕಾಮಗಾರಿಗಳಿಗೆ ಟೆಂಡರ್‌ಗಳನ್ನು ಅನುಮೋದಿಸಿಲ್ಲ. ಈ ಸಂಬಂಧ ಈ ಕಚೇರಿಯಲ್ಲಿ ಯಾವುದೇ ದೂರುಗಳು ಸ್ವೀಕೃತವಾಗಿಲ್ಲ. ಈ ಅವಧಿಯಲ್ಲಿ ನಿಗಮವು ಬಿಲ್‌ಗಳನ್ನು ಶೇ.80ರಷ್ಟು ಕಾಮಗಾರಿಗಳಿಗೆ ಆದ್ಯತೆ ಮೇರೆಗೆ , ಸಣ್ಣ ಗುತ್ತಿಗೆದಾರರಿಗೆ ಹಿರಿತನದ ಆಧಾರದ ಮೇಲೆ ಪಾವತಿ ಮಾಡಲಾಗುತ್ತದೆ. ಮತ್ತು ಬಾಕಿ ಉಳಿದಿರುವ ಶೇ.20ರಷ್ಟು ಅನುದಾನವನ್ನು ಕಾಮಗಾರಿಯ ತುರ್ತು ಅವಶ್ಯಕತೆಗಳಿಗನುಗುಣವಾಗಿ ಹಾಗೂ ಕಾಮಗಾರಿಯ ಪ್ರಗತಿಯ ದೃಷ್ಟಿಯಿಂದ ಬಿಲ್‌ಗಳನ್ನು ಪಾವತಿ ಮಾಡಲಾಗಿದೆ.

 

ಕೃಷ್ಣಭಾಗ್ಯಜಲನಿಗಮ ನೀಡಿರುವ ಉತ್ತರದ ಪ್ರತಿ

 

10.00 ಕೋಟಿ ಹಾಗೂ ಅದರ ಮೇಲ್ಪಟ್ಟಂಎ ಎಸ್‌ಡಿಪಿ ಲೆಕ್ಕ ಶೀರ್ಷಿಕೆ ಅಡಿಯಲ್ಲಿ ಸಾಕಷ್ಟು ಅನುದಾನ ಲಭ್ಯತೆ ಇದ್ದು ಆರ್ಥಿಕ ಪ್ರಗತಿ ಸಾಧಿಸಬೇಕಾಗಿದ್ದರಿಂದ ಪಾವತಿಸಲಾಗಿದೆ. ಈ ಬಿಲ್‌ನ್ನೂ ಹಿರಿತನದ ಆಧಾರದ ಮೇಲೆ ಪಾವತಿಸಲಾಗಿದೆ. ಪ್ರಸ್ತುತ ಎಸ್‌ಡಿಪಿ ಅಡಿಯಲ್ಲಿ 32.37 ಕೋಟಿ ಅನುದಾನ ಲಭ್ಯತೆ ಇದ್ದು ಯಾವುದೇ ಬಿಲ್‌ಗಳು ಪಾವತಿಗಾಗಿ ಬಾಕಿ ಉಳಿದಿಲ್ಲ. ಹಾಗೆಯೇ ಈ ಬಿಲ್‌ ಪಾವತಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳು ಸ್ವೀಕೃತವಾಗಿಲ್ಲ ಎಂದು 2021ರ ನವೆಂಬರ್‌ 30ರಂದು ಬರೆದ ಪತ್ರದಲ್ಲಿ ವಿವರಿಸಿದೆ.

 

ಹಾಗೆಯೇ ಜೆಎನ್‌ಎಸ್‌ ಸುಪ್ರದ ಏಜೆನ್ಸಿ ನಿರ್ವಹಿಸುತ್ತಿರುವ ಕಾಮಗಾರಿ ಪ್ರಗತಿಯ ಹಿತದೃಷ್ಟಿಯಿಂದ ಮುಖ್ಯ ಅಭಿಯಂತರರ ಕೋರಿಕೆ ಮೇರೆಗೆ 34.13 ಕೋಟಿ ರು.ಗಳ ಪೈಕಿ ಭಾಗಶಃ ಬಿಲ್‌ನ್ನು ಮಾತ್ರ ಪಾವತಿಸಲಾಗಿದೆ. ಹಾಗೆಯೇ ಬಿಲ್‌ ಪಾವತಿ ಸಂಬಂಧ ಯಾವುದೇ ದೂರುಗಳು ಈ ಕಚೇರಿಯಲ್ಲಿ ಸ್ವೀಕೃತವಾಗಿಲ್ಲ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಮಾಹಿತಿ ಒದಗಿಸಿದ್ದಾರೆ.

 

ಕರ್ನಾಟಕ ನೀರಾವರಿ ನಿಗಮದ ವಿವರಣೆ

 

ಕೃಷ್ಣಾ ವ್ಯಾಪ್ತಿ, ವಾರಾಹಿ, ಸೌಪರ್ಣಿಕಾ ಯೋಜನೆ, ಕಾರಂಜಾ ಮತ್ತು ಗೋದಾವರಿ ವ್ಯಾಪ್ತಿಯಲ್ಲಿ ಸಣ್ಣ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಆದರೆ 2021ರ ಜುಲೈ 27ರಿಂದ ಇಲ್ಲಿಯವರೆಗೆ ಯಾವುದೇ ಕಾಮಗಾರಿಯನ್ನು ನಿಗಮವು ಅನುಮೋದಿಸಿಲ್ಲ. ನಿಗಮವು ಪ್ರತಿ ತಿಂಗಳೂ ಬಾಕಿ ಬಿಲ್‌ಗಳನ್ನು ಪಾವತಿಸುತ್ತಿದೆ. 2021ರ ಜುಲೈ 27ರಿಂದ ಇಲ್ಲಿಯವರೆಗೆ ಒಟ್ಟಾರೆ 38,850.08 ಲಕ್ಷ ರುಗ.ಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ 2021ರ ಜುಲೈ 30ರಿಂದ ನವೆಂಬರ್‌ 8ರವರೆಗೆ ಕಾಮಗಾರಿಗಳಿಗಾಗಿ 11,211.12 ಲಕ್ಷ ರು., ಮತ್ತು 2021ರ ನವೆಂಬರ್‌ 20ರಂದು 17,214.23 ಲಕ್ಷ ರು.ಗಳನ್ನು ಬಿಡುಗಡೆ ಮಾಡಿದೆ ಎಂದು ವಿವರ ಒದಗಿಸಿದೆ.

 

ಕರ್ನಾಟಕ ನೀರಾವರಿ ನಿಗಮ ನೀಡಿರುವ ವಿವರಣೆ

 

ಇನ್ನುಳಿದ ವಿಶ್ವೇಶ್ವರಯ್ಯ ಜಲನಿಗಮ ಸಹ 10.00 ಕೋಟಿ ರು.ಗೂ ಮೀರಿದ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಮತ್ತು ಬಾಕಿ ಬಿಲ್‌ಗಳ ಪಾವತಿ ಸಂಬಂಧ ಯಾವುದೇ ದೂರುಗಳು ಸಲ್ಲಿಕೆಯಾಗಿಲ್ಲ ಎಂದು ತಿಳಿಸಿರುವುದು ವ್ಯವಸ್ಥಾಪಕ ನಿರ್ದೇಶಕರು ಬರೆದಿರುವ ಪತ್ರಗಳಿಂದ ಗೊತ್ತಾಗಿದೆ.

 

ಗುತ್ತಿಗೆದಾರರ ಪತ್ರದಲ್ಲಿ ಇರುವ ಅಂಶವನ್ನು ಪರಿಶೀಲನೆ ನಡೆಸಿ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶಿಸಿದ್ದರು.

 

‘ನಮ್ಮ ಸರ್ಕಾರದ ಅವಧಿಯಲ್ಲಿ ಅಂತಿಮವಾಗಿರುವ ಟೆಂಡರ್ ಪ್ರಕ್ರಿಯೆಗಳ ಬಗ್ಗೆಯೂ ವಿಶೇಷವಾಗಿ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಲಾಗಿದೆ. ಹಿಂದಿನ ಸಂಪುಟ ಸಭೆಯಲ್ಲಿ ಟೆಂಡರ್ ಅಂದಾಜು ಹಾಗೂ ಪರಿಶೀಲನೆ ಬಗ್ಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಎರಡು ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿ ಕೂಡಲೇ ಕಾರ್ಯಗತಗೊಳಿಸಬೇಕು,’ ಎಂದು ಸೂಚಿಸಿದ್ದನ್ನು ಸ್ಮರಿಸಬಹುದು.

Hot this week

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

Topics

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

Related Articles

Popular Categories

error: Content is protected !!