Tuesday | March 10, 2026 |

ತಾಲೂಕುಗಳ ಆಡಳಿತ ಕುಸಿತ; ಸರ್ಕಾರವನ್ನೇ ಲೆಕ್ಕಿಸದ ತಹಶೀಲ್ದಾರ್‌ಗಳು, ಹೇಳೋರಿಲ್ಲ, ಕೇಳೋರಿಲ್ಲ

Support THE-FILE

spot_img

ಬೆಂಗಳೂರು; ರಾಜ್ಯದಲ್ಲಿ ಕಳೆದ 2 ವರ್ಷಗಳಿಂದಲೂ ಸಾರ್ವಜನಿಕ ಆಡಳಿತವು ಕುಸಿತವಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿರುವ ಬೆನ್ನಲ್ಲೇ ಇದೀಗ ರಾಜ್ಯದ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ತಹಶೀಲ್ದಾರ್‌ಗಳು ಸರ್ಕಾರದ ಎಲ್ಲಾ ಮಾರ್ಗಸೂಚಿಗಳನ್ನು ಕಸದಬುಟ್ಟಿಗೆ ಎಸೆದು ಮರು ಆದೇಶವನ್ನು ಪಡೆಯದೆಯೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುತ್ತಿರುವ ಹಲವು ಪ್ರಕರಣಗಳು ಬಹಿರಂಗವಾಗಿವೆ.

 

ತಾಲೂಕುಗಳಿಂದ ವರ್ಗಾವಣೆಗೊಳ್ಳುವ ತಹಶೀಲ್ದಾರ್‌ಗಳು ಸರ್ಕಾರದ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಆಡಳಿತ ನ್ಯಾಯ ಮಂಡಳಿಯ ಮೊರೆ ಹೊಕ್ಕು ತಡೆಯಾಜ್ಞೆ ತರುತ್ತಿದ್ದಾರೆ. ಆದರೆ ಈ ತಡೆಯಾಜ್ಞೆಗಳನ್ನು ಸರ್ಕಾರಕ್ಕೆ ಸಲ್ಲಿಸುತ್ತಿಲ್ಲ ಮತ್ತು ಈ ಸಂಬಂಧ ಮನವಿಯನ್ನೂ ಸಲ್ಲಿಸುತ್ತಿಲ್ಲ. ತಹಶೀಲ್ದಾರ್‌ಗಳು ಸಹ ಸರ್ಕಾರವನ್ನು ಲೆಕ್ಕಿಸುತ್ತಿಲ್ಲ ಎಂಬುದು ಕಂದಾಯ ಇಲಾಖೆಯು 2022ರ ಜೂನ್‌ 13ರಂದು ಎಲ್ಲಾ ಪ್ರಾದೇಶಿಕ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳಿಗೆ ಹೊರಡಿಸಿರುವ ಸುತ್ತೋಲೆಯು ಪುಷ್ಠೀಕರಿಸಿದೆ. ಈ ಸುತ್ತೋಲೆ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

‘ಕಂದಾಯ ಇಲಾಖೆಯ ತಹಶೀಲ್ದಾರ್‌ಗಳು ವರ್ಗಾವಣೆಗಳಿಗೆ ಸಂಬಂಧಿಸಿದಂತೆ ಸರ್ಕಾರದ ಆದೇಶವನ್ನು ಕರ್ನಾಟಕ ಆಡಳಿತ ನ್ಯಾಯ ಮಂಡಳಿಯಲ್ಲಿ ಪ್ರಶ್ನಿಸುತ್ತಾರೆ. ಇಂತಹ ಪ್ರಕರಣಗಳಲ್ಲಿ ನ್ಯಾಯಾಲಯವು ಸರ್ಕಾರದಿಂದ ಹೊರಡಿಸಿದ ಆದೇಶಕ್ಕೆ ತಡೆಯಾಜ್ಞೆಯನ್ನು ನೀಡಿದ ನಂತರ ಬಹುತೇಕ ತಹಶೀಲ್ದಾರ್‌ಗಳು ಸರ್ಕಾರದಲ್ಲಿ ಮನವಿ ಸಲ್ಲಿಸಿ ಮರು ಆದೇಶವನ್ನು ಪಡೆಯದೇ ನೇರವಾಗಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಅಥವಾ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಕಚೇರಿಯಲ್ಲಿನ ತಹಶೀಲ್ದಾರ್‌ ಹುದ್ದೆಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ,’ ಎಂದು ಸುತ್ತೋಲೆಯಲ್ಲಿ ಹೇಳಿದೆ.

 

ಕಂದಾಯ ಇಲಾಖೆ ಹೊರಡಿಸಿರುವ ಸುತ್ತೋಲೆ ಪ್ರತಿ

 

ಅಧಿಕಾರ ವಹಿಸಿಕೊಂಡ ಅತ್ಯಲ್ಪ ದಿನಗಳು ಮತ್ತು ಹಲವು ವರ್ಷಗಳಿಂದಲೂ ಒಂದೇ ಕಡೆ ಬೇರು ಬಿಟ್ಟಿರುವ ತಹಶೀಲ್ದಾರ್‌ಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡುತ್ತಿದೆ. ಈ ಆದೇಶಗಳನ್ನು ಪ್ರಶ್ನಿಸಿ ಹಲವು ತಹಶೀಲ್ದಾರ್‌ಗಳು ಕೆಎಟಿ ಮೊರೆ ಹೋಗುತ್ತಿದ್ದಾರೆ. ಈ ಜಾಗಕ್ಕೆ ಬೇರೆ ಯಾರೂ ಕರ್ತವ್ಯ ವಹಿಸಿಕೊಳ್ಳದಂತೆ ಪ್ರಭಾವಿ ತಹಶೀಲ್ದಾರ್‌ಗಳು ಖಾಲಿ ಇರುವಂತೆಯೇ ನೋಡಿಕೊಳ್ಳುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಹೀಗಾಗಿ ಹೀಗಾಗಿ ತಾಲೂಕುಗಳ ಆಡಳಿತವು ಕುಸಿದು ಬಿದ್ದಿದೆ.

 

ಕೆಎಟಿಯಲ್ಲಿ ತಡೆಯಾಜ್ಞೆ ಪಡೆದುಕೊಳ್ಳುವ ತಹಶೀಲ್ದಾರ್‌ಗಳು ನಿಯಮಗಳ ಪ್ರಕಾರ ಸರ್ಕಾರಕ್ಕೆ ನ್ಯಾಯಾಲಯದ ದೃಢೀಕೃತ ಆದೇಶದ ಪ್ರತಿಯೊಂದಿಗೆ ಕೋರಿಕೆ ಸಲ್ಲಿಸಬೇಕು. ಅಲ್ಲದೆ ಈ ಸಂಬಂಧ ಸರ್ಕಾರದಿಂದ ಮರು ಆದೇಶ ಪಡೆಯಬೇಕು. ಇದಾದ ನಂತರ ಮರು ಆದೇಶವನ್ನು ಪಡೆದ ನಂತರವಷ್ಟೇ ಕರ್ತವ್ಯ ವಹಿಸಿಕೊಳ್ಳಬೇಕು. ಆದರೆ ರಾಜ್ಯದ ಹಲವು ತಾಲೂಕುಗಳಲ್ಲಿನ ತಹಶೀಲ್ದಾರ್‌ಗಳು ಈ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂಬ ಗುರುತರವಾದ ಆರೋಪಗಳಿವೆ.

 

‘ಕಂದಾಯ ಇಲಾಖೆಯ ತಹಶೀಲ್ದಾರ್‌ಗಳು ವರ್ಗಾವಣೆಗಳಿಗೆ ಸಂಬಂಧಿಸಿದಂತೆ ಸರ್ಕಾರದಿಂದ ಹೊರಡಿಸಲಾದ ಆದೇಶವನ್ನು ಕರ್ನಾಟಕ ಆಡಳಿತ ನ್ಯಾಯ ಮಂಡಳಿಯಲ್ಲಿ ಪ್ರಶ್ನಿಸಿದ ನಂತರ ಹಾಗೂ ನ್ಯಾಯಾಲಯವು ಸರ್ಕಾರದಿಂದ ಹೊರಡಿಸಿದ ಆದೇಶವನ್ನು ಪ್ರಶ್ನಿಸಿದ ತಹಶೀಲ್ದಾರ್‌ಗಳು ಇನ್ನು ಮುಂದೆ ನ್ಯಾಯಾಲಯದ ಆದೇಶದ ದೃಢೀಕೃತ ಪ್ರತಿಯೊಂದಿಗೆ ಮನವಿಯನ್ನು ಕಡ್ಡಾಯವಾಗಿ ಸರ್ಕಾರಕ್ಕೆ ಸಲ್ಲಿಸಬೇಕು,’ ಎಂದು ಹೊರಡಿಸಿರುವ ಸುತ್ತೋಲೆಯು ತಹಶೀಲ್ದಾರ್‌ಗಳು ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂಬ ಆರೋಪಗಳನ್ನು ಬಲಪಡಿಸಿವೆ.

 

‘ಸರ್ಕಾರದಿಂದ ಮರು ಆದೇಶವನ್ನು ಪಡೆದ ನಂತರವಷ್ಟೇ ಹಿಂದೆ ಕರ್ತವ್ಯ ನಿರ್ವಹಿಸಿದ ತಾಲೂಕು ಕಚೇರಿಯಲ್ಲಿನ ತಹಶೀಲ್ದಾರ್‌ ಹುದ್ದೆಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಬೇಕು. ಅಲ್ಲದೇ ಸರ್ಕಾರದಿಂದ ಮರು ಆದೇಶವನ್ನು ಪಡೆಯದೇ ಕರ್ತವ್ಯ ವರದಿ ಮಾಡಿಕೊಳ್ಳಲು ಬರುವ ತಹಶೀಲ್ದಾರ್‌ಗಳನ್ನು ಜಿಲ್ಲಾಧಿಕಾರಿಗಳು ಕರ್ತವ್ಯಕ್ಕೆ ವರದಿ ಮಾಡಿಸಿಕೊಳ್ಳತಕ್ಕದ್ದಲ್ಲ. ಒಂದುವೇಳೆ ಕರ್ತವ್ಯಕ್ಕೆ ವರದಿ ಮಾಡಿಕೊಂಡಲ್ಲಿ ಅಂತಹ ತಹಶೀಲ್ದಾರ್‌ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ನಿಯಮಾನುಸಾರ ಪರಿಶೀಲಿಸಲಾಗುವುದು,’ ಎಂದು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ನಿರ್ದೇಶಿಸಿರುವುದು ಸುತ್ತೋಲೆಯಿಂದ ತಿಳಿದು ಬಂದಿದೆ.

 

ರಾಜ್ಯದಲ್ಲಿ ಈಗಾಗಲೇ ಮುಂಗಾರು ಪೂರ್ವ ಅವಧಿಯಲ್ಲಿ ಬೆಳೆ ನಾಶವಾಗಿದೆ. ತಾಲೂಕುಗಳ ರೈತಾಪಿ ಸಮುದಾಯ ಸೇರಿದಂತೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಪಿಂಚಣಿ ಸೇರಿದಂತೆ ಸಾಮಾಜಿಕ ಭದ್ರತೆಯ ಹಲವು ಯೋಜನೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳು ಸಕಾಲದಲ್ಲಿ ವಿಲೇವಾರಿಯಾಗುತ್ತಿಲ್ಲ. ಇದರಿಂದ ತಾಲೂಕಿನಾದ್ಯಂತ ಇರುವ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಅನುಕೂಲವಾಗುತ್ತಿಲ್ಲ.

 

‘ವರ್ಗಾವಣೆ ಪ್ರಕ್ರಿಯೆಯಲ್ಲಿನ ದೋಷಗಳು ಮತ್ತು ನ್ಯಾಯಾಲಯಗಳು ಹೊರಡಿಸುತ್ತಿರುವ ತಡೆಯಾಜ್ಞೆ ಆದೇಶಗಳು, ಪ್ರಭಾವಿ ತಹಶೀಲ್ದಾರ್‌ಗಳು ವರ್ಗಾವಣೆಗೊಂಡು ಬರುವ ತಹಶೀಲ್ದಾರ್‌ಗಳಿಗೆ ಕರ್ತವ್ಯ ವಹಿಸಿಕೊಡದೇ ಇರುವುದು, ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದರೂ ಅದನ್ನು ನಿಯಮಾನುಸಾರವಾಗಿ ಸರ್ಕಾರಕ್ಕೆ ಸಲ್ಲಿಸದಿರುವುದು, ಮರು ಆದೇಶವನ್ನು ಪಡೆಯದೇ ನೇರವಾಗಿ ಕರ್ತವ್ಯ ವಹಿಸಿಕೊಳ್ಳುತ್ತಿರುವ ಪ್ರಕರಣಗಳು ಸಾಲು ಸಾಲಾಗಿ ಹೊರಬೀಳುತ್ತಲೇ ಇದೆ. ಆದರೆ ಕಂದಾಯ ಸಚಿವ ಆರ್‌ ಅಶೋಕ್‌ ಅವರು ಇದುವರೆಗೂ ಕುಸಿದು ಬಿದ್ದಿರುವ ಆಡಳಿತವನ್ನು ಸರಿದಾರಿಗೆ ತರಲು ಯಾವುದೇ ಕಠಿಣ ಕ್ರಮಕೈಗೊಂಡಿಲ್ಲ,’ ಎನ್ನುತ್ತಾರೆ ಅಧಿಕಾರಿಯೊಬ್ಬರು.

Hot this week

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

Topics

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

Related Articles

Popular Categories

spot_imgspot_img
error: Content is protected !!