Sunday | March 22, 2026 |

ಅಗಸ್ತ್ಯ ಫೌಂಡೇಷನ್‌ ಒಪ್ಪಂದ ನವೀಕರಣ; ಖಾಸಗಿಗೆ 4.23 ಕೋಟಿ, ವಿಜ್ಞಾನ ಸಮಿತಿಗಳಿಗಿಲ್ಲ ಅನುದಾನ

Support THE-FILE

spot_img

ಬೆಂಗಳೂರು; ರಾಜ್ಯದಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌, ಭಾರತ ಜನ ವಿಜ್ಞಾನ ಸಮಿತಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಗಳು ವಿಶೇಷವಾಗಿ ಗ್ರಾಮೀಣ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಿ ವಿಜ್ಞಾನ ಕಲಿಕೆಗೆ ವಿದ್ಯಾರ್ಥಿಗಳನ್ನು ಸೆಳೆಯುತ್ತಿದ್ದರೂ ರಾಜ್ಯ ಬಿಜೆಪಿ ಸರ್ಕಾರವು ಷೇರು ಮಾರುಕಟ್ಟೆಯ ದೈತ್ಯ ರಾಕೇಶ್‌ ಜುಂಜನ್‌ವಾಲಾ ಅವರು ಪ್ರಮುಖ ಪೋಷಕರಾಗಿರುವ ಅಗಸ್ತ್ಯ ಫೌಂಡೇಷನ್‌ಗೆ ಮತ್ತೊಮ್ಮೆ ಮಣೆ ಹಾಕಿದೆ.

 

ಈ ಫೌಂಡೇಷನ್‌ನೊಂದಿಗೆ 2010ರಲ್ಲಿ ಮಾಡಿಕೊಂಡಿದ್ದ 10 ವರ್ಷದ ಒಡಂಬಡಿಕೆಯು ಮುಕ್ತಾಯಗೊಂಡಿದ್ದರೂ 2022-23ನೆ ಸಾಲಿನಿಂದ 2026-27ರವರೆಗೆ ಒಟ್ಟು 5 ವರ್ಷಗಳ ಅವಧಿಯವರೆಗೆ ನವೀಕರಿಸಿರುವ ಸರ್ಕಾರವು 2022ರ ಜೂನ್‌ 9ರಂದು ಆದೇಶ ಹೊರಡಿಸಿದೆ. ಆದೇಶದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಕಳೆದ ಹತ್ತಾರು ವರ್ಷಗಳಿಂದಲೂ ವಿಜ್ಞಾನ ಕಲಿಕೆ, ಶಿಕ್ಷಣದಲ್ಲಿ ಕ್ರಿಯಾಶೀಲವಾಗಿರುವ ವಿಜ್ಞಾನ ಸಮಿತಿಗಳನ್ನು ಕಡೆಗಣಿಸುವ ಮೂಲಕ ವಿಜ್ಞಾನ ಯೋಜನೆಗಳ ಅನುಷ್ಠಾನದಲ್ಲಿ ಅಗಸ್ತ್ಯ ಫೌಂಡೇಷನ್‌ನ ಏಕಸ್ವಾಮ್ಯತೆಯನ್ನು ಮುಂದುವರೆಸುವ ಮೂಲಕ ಬಲಪಡಿಸಿದಂತಾಗಿದೆ.

 

ಬಾಗಲಕೋಟೆ, ಬೀದರ್‌, ಬಿಜಾಪುರ, ಶಿವಮೊಗ್ಗ, ಧಾರವಾಡ ಜಿಲ್ಲೆಗಳಲ್ಲಿ ಕೋರ್‌ ವಿಜ್ಞಾನ ಚಟುವಟಿಕೆ ಕೇಂದ್ರಗಳ ನಿರ್ವಹಣೆ ಅವಧಿಯನ್ನು ಅಗಸ್ತ್ಯ ಫೌಂಡೇಷನ್‌ಗೆ ನೀಡಿ ಆದೇಶಿಸಿದೆ. ಇದಕ್ಕೆ ಸಚಿವ ಬಿ ಸಿ ನಾಗೇಶ್‌ ಅವರು ಅನುಮೋದಿಸಿದ್ದಾರೆ ಎಂದು ಗೊತ್ತಾಗಿದೆ.

 

ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಗಸ್ತ್ಯ ಫೌಂಡೇಷನ್‌ಗೆ ವಿದೇಶಿ ಹಣ ಹಾಗೂ ಸಿ.ಎಸ್.ಆರ್. ಫಂಡ್‌ನ ನೆರವು ದೊರೆಯುತ್ತಿದೆ. ಆದರೂ ರಾಜ್ಯದಲ್ಲಿ ಕೋರ್‌ ವಿಜ್ಞಾನ ಕೇಂದ್ರ ಮತ್ತು ಪ್ರಯೋಗಾಲಯಗಳ ಕಾರ್ಯನಿರ್ವಹಣೆಗೆ ಸಮಗ್ರ ಶಿಕ್ಷಣ ಅಭಿಯಾನದ ಅನುದಾನವನ್ನು ಒದಗಿಸಿದೆ.

 

ಈ 10 ವರ್ಷದ ಅವಧಿಯಲ್ಲಿ ಕೋರ್‌ ವಿಜ್ಞಾನ ಕೇಂದ್ರಗಳು, ಸಂಚಾರಿ ಪ್ರಯೋಗಾಲಯಗಳ ಮೇಲು ಉಸ್ತುವಾರಿ, ಪರ್ಯಾಯ ವ್ಯವಸ್ಥೆಯನ್ನು ಸರ್ಕಾರವು ಬಲಪಡಿಸಬೇಕಿತ್ತು. ಅಲ್ಲದೆ ಇಂತಹ ಯೋಜನೆಗಳನ್ನು ಇಲಾಖೆಯ ಮಾಲೀಕತ್ವದಡಿಯಲ್ಲಿ ನಿರ್ವಹಿಸುವಲ್ಲಿ ಆಸಕ್ತಿ ವಹಿಸಬೇಕಿತ್ತು. ಆದರೆ ಸರ್ಕಾರವು ವಿಫಲವಾಗಿರುವುದರಿಂದಲೇ ವಿಜ್ಞಾನ ಕಲಿಕೆ ಯೋಜನೆಗಳು ಅಗಸ್ತ್ಯ ಫೌಂಡೇಷನ್‌ ಪಾಲಾಗಿದೆ. ಈ ಮೂಲಕ ಸಮಗ್ರ ಶಿಕ್ಷಣ ಕರ್ನಾಟಕ ಅಭಿಯಾನದ ಸಂಪನ್ಮೂಲವನ್ನು ಅಗಸ್ತ್ಯ ಫೌಂಡೇಷನ್‌ಗೆ ಧಾರೆಯೆರೆದಂತಾಗಿದೆ ಎಂಬ ಮಾತು ಶಿಕ್ಷಣ ತಜ್ಞರ ವಲಯದಲ್ಲಿ ಕೇಳಿ ಬರುತ್ತಿದೆ.

 

2021-222ನೇ ಸಾಲಿಗೆ ಕೋರ್‌ ವಿಜ್ಞಾನ ಕೇಂದ್ರಗಳನ್ನು ಅಗಸ್ತ್ಯ ಫೌಂಡೇಷನ್‌ ಸಂಸ್ಥೆಯೊಂದಿಗೆ ನಿರ್ವಹಿಸಲು ಒಡಂಬಡಿಕೆ ನವೀಕರಿಸಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಲ್ಲಿ ಉಳಿಕೆ ಇರುವ 4.23 ಕೋಟಿ ರು. ವೆಚ್ಚ ಮಾಡಲಿದೆ.  2020-21 ಮತ್ತು 2021-22ನೇ ಸಾಲಿನ ಕಾರ್ಯಕ್ರಮದ ವೆಚ್ಚಗಳಿಗೆ 4.43 ಕೋಟಿ ಅನುದಾನದ ಅವಶ್ಯಕತೆಯನ್ನು ಪ್ರಸ್ತುತ ಸಮಗ್ರ ಶಿಕ್ಷಣ ಕರ್ನಾಟಕ ಸಂಸ್ಥೆಯಲ್ಲಿ ಐಡಿಎಫ್‌ ಕಾರ್ಯಕ್ರಮದದ ಅನುದಾನದಲ್ಲಿ ಉಳಿಕೆ ಇರುವ ಒಟ್ಟು 4.23 ಕೋಟಿ ರು.ಗಳನ್ನು ಅನುದಾನದಿಂದ ಬಳಸಿಕೊಳ್ಳಲು ಚಾಲ್ತಿ ವರ್ಷಕ್ಕೆ ಅನುಮತಿ ನೀಡಲಾಗಿತ್ತು.

 

ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಪ್ರಾದೇಶಿಕ ವಿಜ್ಞಾನ ಕೇಂದ್ರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌, ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಸಂಪನ್ಮೂಲ ಶಿಕ್ಷಕರಿದ್ದರೂ ಅವರಿಂದಲೇ ವಿಜ್ಞಾನ ಪ್ರಯೋಗಾಲಯ, ಸಂಚಾರಿ ವಿಜ್ಞಾನ ಪ್ರಯೋಗಾಲಯಗಳನ್ನು ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿಯೇ ಆರಂಭಿಸಲು ಅವಕಾಶಗಳಿವೆ.

 

ಷೇರು ಮಾರುಕಟ್ಟೆಯ ದೈತ್ಯ ಎಂದೇ ಹೇಳಲಾಗಿರುವ ರಾಕೇಶ್‌ ಜುಂಜನ್‌ವಾಲಾ ಅವರು ಈ ಫೌಂಡೇಷನ್‌ಗೆ ಪ್ರಮುಖ ಪೋಷಕರು. ಅಲ್ಲದೆ ದೇಶ ವಿದೇಶಗಳಿಂದಲೂ ದೇಣಿಗೆ ಪಡೆಯುತ್ತಿರುವ ಈ ಫೌಂಡೇಷನ್‌ಗೆ ಒಡಂಬಡಿಕೆಯನ್ನು ನವೀಕರಿಸಿ ಕೋಟ್ಯಂತರ ರುಪಾಯಿ ನೀಡುತ್ತಿರುವುದಕ್ಕೆ ಕ್ರಿಯಾಶೀಲ ವಿಜ್ಞಾನ ಸಮಿತಿಗಳಿಂದಲೇ ಆಕ್ಷೇಪ ಕೇಳಿ ಬಂದಿದೆ.

 

ಸುಮಾರು ಹದಿನೈದು ವರ್ಷಗಳ ಹಿಂದೆ ವಿದೇಶಿ ಹಣ ಹಾಗೂ ಸಿ.ಎಸ್.ಆರ್. ಫಂಡ್‌ನಿಂದ ತನ್ನ ಕೆಲಸ ಪ್ರಾರಂಭಿಸಿದ ಅಗಸ್ತ್ಯ ಇಂಟರ್ ನ್ಯಾಷನಲ್ ಸಂಸ್ಥೆಯು ಕಳೆದ ಹತ್ತು ವರ್ಷದಿಂದಲೂ ಸಮಗ್ರ ಶಿಕ್ಷಣ ಅಭಿಯಾನದಿಂದ ನಿರಾಯಾಸವಾಗಿ ಹಣ ಪಡೆಯುತ್ತಿದೆ. ಇತರ ಶೈಕ್ಷಣಿಕ ಹಾಗೂ ವೈಜ್ಞಾನಿಕ ಸಂಸ್ಥೆಗಳು ಸಲ್ಲಿಸುವ ಪ್ರಸ್ತಾವನೆಗಳನ್ನು ಕಡೆಗಣಿಸುವ ಈ ಸಮಗ್ರ ಶಿಕ್ಷಣ ಅಭಿಯಾನ ಯಾವ ಮಾನದಂಡಗಳನ್ನು ಅನುಸರಿಸಿ ಈ ರೀತಿಯಲ್ಲಿ ಹಣ ನೀಡುತ್ತಿದೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

 

ಕ್ಲಸ್ಟರ್ ಸಂಪನ್ಮೂಲ ಕೇಂದ್ರಗಳ ಬಗ್ಗೆ ಮಾತನಾಡದೇ ಸುಮ್ಮನಿರುವುದೇ ಲೇಸು. ಅಲ್ಲಿರುವ ಸಂಪನ್ಮೂಲ ವ್ಯಕ್ತಿಯನ್ನು ಶಾಲೆಗಳಿಂದ ಮಾಹಿತಿ ತರುವುದಷ್ಟಕ್ಕೇ ಉಪಯೋಗಿಸಿಕೊಳ್ಳಲಾಗುತ್ತಿದೆ. ಖಾಸಗಿ ಫೌಂಡೇಷನ್‌ಗಳಿಗೆ ಶಿಕ್ಷಣ ಅಭಿಯಾನದ ಸಂಪನ್ಮೂಲವನ್ನು ಹರಿಸುವುದಕ್ಕಿಂತ ಸರ್ಕಾರಿ ಸ್ವಾಮ್ಯದಲ್ಲಿರುವ ಪ್ರಾದೇಶಿಕ ವಿಜ್ಞಾನ ಕೇಂದ್ರ, ಕ್ರಿಯಾಶೀಲ ವಿಜ್ಞಾನ ಸಂಘಟನೆಗಳ ಮೂಲಕ ಇಂತಹ ಕಾರ್ಯಕ್ರಮಗಳನ್ನು ನಿರ್ವಹಿಸಬೇಕು. ಒಂದು ಸಂಸ್ಥೆಗೆ ಹಣ ನೀಡಬೇಕಾದರೆ ಒಂದು ನಿಯಮ ಅನುಸರಿಸಬೇಕು. ರಾಜ್ಯದಲ್ಲಿ ಕೆಲಸ ಮಾಡುತ್ತಿರುವ ವಿವಿಧ ವಿಜ್ಞಾನ ಸಂಸ್ಥೆಗಳನ್ನು ಆಹ್ವಾನಿಸಿ ಅವಕಾಶಗಳನ್ನು ನೀಡಬೇಕು. ಆದರೆ ಅಂಥ ಯಾವುದೇ ಪ್ರಯತ್ನಗಳಾದಂತೆ ಕಾಣುತ್ತಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ.

 

2004-05 ರಲ್ಲಿ ಸಾಫ್ಟ್‌ವೇರ್‌ ಸಂಸ್ಥೆಗಳಿಂದ ವಾಹನಗಳನ್ನು ಹಾಗೂ ವಿಜ್ಞಾನ ಬೋಧಿಸುವ ಕಲಿಕೋಪಕರಣಗಳನ್ನು ಹೊಂದಿಸಿಕೊಂಡಿರುವ ಅಗಸ್ತ್ಯ ಸಂಸ್ಥೆಯು ಕ್ರಿಯಾಶೀಲವಾಗಿರುವ ವಿಜ್ಞಾನ ಸಂಘಟನೆಗಳ ನೆರವಿನೊಂದಿಗೆ ಶಾಲೆಗಳನ್ನು ತಲುಪಿದೆ. ಅಂದಿನಿಂದಲೂ ಈ ಫೌಂಡೇಷನ್‌ ಸರ್ಕಾರಿ ಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ, ಕೋರ್‌ ವಿಜ್ಞಾನ ಕೇಂದ್ರಗಳ ಮೇಲೆ ಏಕಸ್ವಾಮ್ಯತೆಯನ್ನು ಪಡೆದಿದೆ.

 

ರಾಜ್ಯದಲ್ಲಿ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ (ಡಯಟ್)ಗಳನ್ನು ನಡೆಸುತ್ತಿದೆ. ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರಗಳಿವೆ ಮತ್ತು ಕ್ಲಸ್ಟರ್ ಸಂಪನ್ಮೂಲ ಕೇಂದ್ರಗಳಿವೆ. ಇವುಗಳ ನಿರ್ವಹಣೆಗೆ ಸಾಕಷ್ಟು ಮಾನವ ಸಂಪನ್ಮೂಲವೂ ಇದೆ. ಆದರೆ ಈ ಕೇಂದ್ರಗಳು ಕೊಠಡಿಗಳಿಗಷ್ಟೇ ಮೀಸಲಾಗಿದೆಯಲ್ಲದೆ ಶಿಕ್ಷಕರಿಗೆ ತರಬೇತಿ ನೀಡುವುದಕ್ಕಷ್ಟೇ ಸೀಮಿತಗೊಂಡಿವೆ ಎಂದು ತಿಳಿದು ಬಂದಿದೆ.

Hot this week

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

Topics

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

Related Articles

Popular Categories

error: Content is protected !!