Thursday | July 16, 2026 |

ಶೇ.2ರ ಬಡ್ಡಿ ಸಹಾಯಧನ ಸ್ಥಗಿತ; ಕೇಂದ್ರದ ನಿರ್ಧಾರದಿಂದ ರಾಜ್ಯದ ಹೆಗಲಿಗೆ ಕೋಟ್ಯಂತರ ರುಪಾಯಿ ಹೊರೆ

ಬೆಂಗಳೂರು; ರೈತರಿಗೆ ನೀಡುತ್ತಿರುವ ಬೆಳೆ ಸಾಲಗಳಿಗೆ ಕೇಂದ್ರ ಸರ್ಕಾರವು ಶೇ.2ರ ಬಡ್ಡಿ ಸಹಾಯಧನ ಯೋಜನೆಯನ್ನು ಕೇಂದ್ರ ಸರ್ಕಾರವು 2022-23ನೇ ಸಾಲಿನಿಂದ ಮುಂದುವರೆಸದ ಕಾರಣ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳಿಗೆ (ಡಿಸಿಸಿ) ಬಹುಕೋಟಿಗಳಷ್ಟು ಬಡ್ಡಿ ಕೊರತೆ ಉಂಟಾಗಲಿದೆ. ಹೀಗಾಗಿ ಕೊರತೆಯಾಗುವ ಬಡ್ಡಿ ಸಹಾಯಧನ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸಬೇಕಾದ ಅನಿವಾರ್ಯತೆ ಎದುರಾಗಿದೆ.

 

ಕೇಂದ್ರ ಸರ್ಕಾರವು ಕೋವಿಡ್‌ ಲಾಕ್‌ಡೌನ್‌ ಅವಧಿಯಲ್ಲಿ ಘೋಷಿಸಿದ್ದ ಶೇ.2ರ ಬಡ್ಡಿ ಸಹಾಯಧನ ಯೋಜನೆಯನ್ನು ಸ್ಥಗಿತಗೊಳಿಸಿದೆಯಾದರೂ ರಾಜ್ಯ ಸರ್ಕಾರವು ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಬೆಳೆ ಸಾಲ ವಿತರಿಸುವ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲೂ (2022-23) ಮುಂದುವರೆಸಿದೆ. ಆದರೆ ಹಾಲಿ ದೊರೆಯುತ್ತಿರುವ ಬಡ್ಡಿಯ ಲಭ್ಯತೆಯಲ್ಲಿಯೂ ಇಳಿಕೆಯಾಗಲಿದೆ ಎಂದು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳು ಆತಂಕ ವ್ಯಕ್ತಪಡಿಸಿವೆ.

 

ರಾಜ್ಯ ಸರ್ಕಾರವು ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ ಕೃಷಿ ಸಾಲ ವಿತರಿಸುವ ಯೋಜನೆಯಲ್ಲಿ ಕೇಂದ್ರ ಸರ್ಕಾರದ ಶೇ.2ರ ಬಡ್ಡಿ ಸಹಾಯಧನ ಸಮ್ಮಿಶ್ರಗೊಳಿಸಿದ ನಂತರವೂ ಬಡ್ಡಿ ಆದಾಯದಲ್ಲಿ ಕೊರತೆ ಉಂಟಾಗುತ್ತಿರುವುದು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳ ಆತಂಕವನ್ನು ಇನ್ನಷ್ಟು ಹೆಚ್ಚಿಸಿದೆ.
ಈ ಕುರಿತು ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಕೆನರಾ ಡಿಸ್ಟ್ರಿಕ್ಟ್‌ ಸೆಂಟ್ರಲ್‌ ಕೋ ಆಪರೇಟೀವ್‌ನ ಅಧ್ಯಕ್ಷ ಎಸ್‌ ಎಂ ಹೆಬ್ಬಾರ ಅವರು ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‌ ಅವರಿಗೆ 2022ರ ಮೇ 4ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

 

‘ಉತ್ತರ ಕನ್ನಡ ಜಿಲ್ಲೆಯೊಂದರಲ್ಲೇ ಪ್ರಸಕ್ತ ವರ್ಷ 850 ಕೋಟಿ ರು.ಗಳಷ್ಟು ಬೆಳೆ ಸಾಲ ವಿತರಿಸಿದೆ. ಶೇ.2ರ ಬಡ್ಡಿ ಸಹಾಯಧನ ಲಭ್ಯವಾಗದಿದ್ದಲ್ಲಿ ಸರಿಸುಮಾರು 15 ಕೋಟಿಗೂ ಹೆಚ್ಚಿನ ಬಡ್ಡಿ ಬ್ಯಾಂಕ್‌, ಸಂಘಗಳಿಗೆ ಆದಾಯದಲ್ಲಿ ಕೊರತೆಯಾಗುತ್ತದೆ. ಕೇಂದ್ರ ಸರ್ಕಾರ ಶೇ. 2ರ ಬಡ್ಡಿ ಸಹಾಯಧನ ಯೋಜನೆಯನ್ನು 2022-23ನೇ ಸಾಲಿಗೆ ಮುಂದುವರೆಸುತ್ತಿಲ್ಲ. ಹೀಗಾಗಿ ಈ ವ್ಯತ್ಯಾಸದ ಬಡ್ಡಿಯನ್ನು ರಾಜ್ಯ ಸರ್ಕಾರವೇ ಸಂಬಂಧಪಟ್ಟ ಹಣಕಾಸು ಸಂಸ್ಥೆಗಳಿಗೆ ಭರಿಸಿಕೊಡಬೇಕು,’ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

 

 

ರಾಜ್ಯ ಸರ್ಕಾರವು ಶೂನ್ಯ ಬಡ್ಡಿದರದಲ್ಲಿ ಅಲ್ಪಾವಧಿ ಕೃಷಿ ಸಾಲ ವಿತರಿಸುವ ಯೋಜನೆಯಲ್ಲಿಯೇ ಕೇಂದ್ರ ಸರ್ಕಾರದ ಶೇ.2ರ ಬಡ್ಡಿ ಸಹಾಯಧನ ಯೋಜನೆಯನ್ನೂ ಸಮ್ಮಿಶ್ರಗೊಳಿಸಿದ ನಂತರವೂ ಡಿಸಿಸಿ ಬ್ಯಾಂಕ್‌ಗಳಿಗೆ ಮತ್ತು ಸಂಘಗಳಿಗೆ ಒಟ್ಟಾರೆ ಶೇ.10.60 ಬಡ್ಡಿಯೂ ದೊರಕುವುದಿಲ್ಲ. ಬದಲಿಗೆ ಶೇ. 8.60ರ ಬಡ್ಡಿ ಮಾತ್ರ ಲಭ್ಯವಾಗುತ್ತದೆ. ಇದರಲ್ಲಿಯೇ ಪುನಃ ಶೇ. 2ರ ಬಡ್ಡಿಯನ್ನು ಸಂಘದ ಮಾರ್ಜಿನನ್ನಾಗಿ ನೀಡಬೇಕಿದೆ. ಅಂತಿಮವಾಗಿ ಡಿಸಿಸಿ ಬ್ಯಾಂಕ್‌ಗೆ ಶೇ. 6.60 ಬಡ್ಡಿ ಲಭ್ಯವಾಗುತ್ತದೆ. ಇದರಿಂದ ಡಿಸಿಸಿ ಬ್ಯಾಂಕ್‌ಗಳಿಗೆ ಶೇ.24 ಬಡ್ಡಿ ಕೊರತೆ ಉಂಟಾಗುತ್ತದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

 

ಮಾರ್ಚ್ 1 ರಿಂದ ಮೇ ತಿಂಗಳ 31 ರ ನಡುವಿನ ಅವಧಿಯಲ್ಲಿ ಬ್ಯಾಂಕುಗಳು ನೀಡಿರುವ 3 ಲಕ್ಷ ರೂಪಾಯಿಗಳವರೆಗಿನ ಎಲ್ಲಾ ಬೆಳೆ ಸಾಲಗಳಿಗೆ 2020 ರ ಮೇ 31 ರವರೆಗೆ ಬ್ಯಾಂಕುಗಳಿಗೆ ಶೇ. 2ರ ಬಡ್ಡಿ ಸಹಾಯಧನ (ಐ.ಎಸ್.) ಮತ್ತು ಎಲ್ಲಾ ರೈತರಿಗೆ ಶೇ. 3ರಷ್ಟು ಸಕಾಲದಲ್ಲಿ ಮರುಪಾವತಿ ಸಹಾಯಧನ (ಪಿ.ಆರ್.ಐ.) ಸವಲತ್ತುಗಳನ್ನು ಕೇಂದ್ರ ಸರ್ಕಾರವು ವಿಸ್ತರಿಸಿತ್ತು.  ಕೋವಿಡ್ -19 ಜಾಗತಿಕ ಸಾಂಕ್ರಾಮಿಕವನ್ನು ತಡೆಗಟ್ಟಲು ಲಾಕ್‌ಡೌನ್‌ ವಿಧಿಸಿದ್ದ ಹಿನ್ನೆಲೆಯಲ್ಲಿ ಸರಕಾರವು ಬ್ಯಾಂಕುಗಳಿಗೆ ಶೇ 2 ಬಡ್ಡಿ ಮರುಪಾವತಿ ಸಹಾಯಧನ (ಐ.ಎಸ್.) ಮತ್ತು ಎಲ್ಲಾ ರೈತರಿಗೆ 2020 ರ ಮೇ 31 ರವರೆಗೆ ಸಕಾಲದಲ್ಲಿ ಮರುಪಾವತಿ ಪ್ರೋತ್ಸಾಹಧನ (ಪಿ.ಆರ್.ಐ.) ವನ್ನು ನೀಡಲು ಕ್ರಮವಹಿಸಿತ್ತು.

 

ಲಾಕ್‌ಡೌನ್‌ ಇದ್ದಿದ್ದರಿಂದಾಗಿ ಹಲವು ರೈತರಿಗೆ ಬ್ಯಾಂಕ್ ಶಾಖೆಗಳಿಗೆ ತೆರಳಿ ಅವರ ಅಲ್ಪಾವಧಿ ಬೆಳೆ ಸಾಲ ಮರುಪಾವತಿ ಮಾಡುವುದಕ್ಕೆ ಸಾಧ್ಯವಾಗಿರಲಿಲ್ಲ. ಸಕಾಲದಲ್ಲಿ ಅವರ ಉತ್ಪಾದನೆಗಳ ಮಾರಾಟ ಮತ್ತು ಅದರ ಬೆಲೆ ಪಾವತಿಯೂ ಲಭಿಸಿರುವುದಿಲ್ಲ. ಇದರಿಂದಾಗಿ ರೈತರು ಈ ಅವಧಿಯಲ್ಲಿ ಬರುವ ಅವರ ಅಲ್ಪಾವಧಿ ಬೆಳೆ ಸಾಲ ಮರುಪಾವತಿ ಮಾಡುವಲ್ಲಿ ಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರವು ಶೇ.2ರ ಬಡ್ಡಿ ಸಹಾಯಧನ ಯೋಜನೆಯನ್ನು ವಿಸ್ತರಿಸಿತ್ತು.

 

ರೈತರು ಎದುರಿಸುತ್ತಿರುವ ಈ ಸಮಸ್ಯೆಯನ್ನು ಪರಿಹರಿಸಲು ಬಡ್ಡಿ ಮರುಪಾವತಿ ಸಹಾಯಧನ (ಐ.ಎಸ್.) ಮತ್ತು ಸಕಾಲದಲ್ಲಿ ಮರುಪಾವತಿ ಸಹಾಯಧನ(ಪಿ.ಆರ್.ಐ.) ಪ್ರಯೋಜನಗಳನ್ನು 2020 ರ ಮೇ 31 ರವರೆಗೆ ವಿಸ್ತರಿಸಲಾಗಿತ್ತು. 3 ಲಕ್ಷದವರೆಗಿನ 2020ರ ಮೇ 31 ರವರೆಗೆ ಅಲ್ಪಾವಧಿ ಬೆಳೆ ಸಾಲಗಳಿಗೆ ಈ ಸೌಲಭ್ಯ ದೊರಕಿತ್ತು. ಇದು ರೈತರಿಗೆ ಇಂತಹ ಅಲ್ಪಾವಧಿ ಸಾಲವನ್ನು ಯಾವುದೇ ದಂಡವಿಲ್ಲದೆ ಶೇ. 4 ಬಡ್ಡಿದರದಲ್ಲಿ 2020 ರ ಮೇ 31 ರವರೆಗೆ ವಿಸ್ತರಿತ ಅವಧಿಯಲ್ಲಿ ಪಾವತಿ ಮಾಡಲು ಅವಕಾಶ ಒದಗುತ್ತದೆ ಎಂದು ಹೇಳಿತ್ತು.

 

‘ಸರಕಾರವು ರೈತರಿಗೆ ಬ್ಯಾಂಕುಗಳ ಮೂಲಕ ರಿಯಾಯತಿ ದರದಲ್ಲಿ ಬೆಳೆ ಸಾಲವನ್ನು ಒದಗಿಸುತ್ತಿದೆ. ಬ್ಯಾಂಕುಗಳಿಗೆ ವಾರ್ಷಿಕ 2% ಬಡ್ಡಿ ಸಹಾಯಧನ ಮತ್ತು ರೈತರಿಗೆ ಸಕಾಲದಲ್ಲಿ ಮರುಪಾವತಿ ಮಾಡಿದರೆ ಶೇ. 3 ಹೆಚ್ಚುವರಿ ಪ್ರಯೋಜನವನ್ನು ಒದಗಿಸುತ್ತಿದೆ. ಈ ಮೂಲಕ ಅದು ರೈತರಿಗೆ 3 ಲಕ್ಷ ರೂಪಾಯಿವರೆಗೆ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿದರೆ ಶೇ 4 ವಾರ್ಷಿಕ ಬಡ್ಡಿ ದರದಲ್ಲಿ ಒದಗಿಸುತ್ತಿದೆ,’ ಎಂದು ಬೆನ್ನು ತಟ್ಟಿಕೊಂಡಿತ್ತು.

 

ಇದಲ್ಲದೆ ರೈತರು ಮತ್ತು ರೈತ ಮಹಿಳೆಯರು ತಮ್ಮ ಕುಟುಂಬದಲ್ಲಿರುವ ಆಭರಣಗಳನ್ನು ಖಾಸಗಿ ಲೇವಾದೇವಿದಾರರಿಗೆ ಹೆಚ್ಚಿನ ಬಡ್ಡಿ ದರದಲ್ಲಿ ಅಡವಿಟ್ಟು ಶೋಷಣೆಗೆ ತುತ್ತಾಗುವುದನ್ನು ತಪ್ಪಿಸಲು ಗೃಹಲಕ್ಷ್ಮಿ ಬೆಳೆ ಸಾಲ ಯೋಜನೆಯನ್ನು 2019ರ ಜುಲೈ 10ರಂದು ಜಾರಿಗೆ ತಂದಿತ್ತು.

 

ರಾಜ್ಯ ಸರ್ಕಾರವು 2019ರಲ್ಲಿ ಗೃಹ ಲಕ್ಷ್ಮಿ ಯೋಜನೆ ಹೆಸರಿನಲ್ಲಿ 24.50 ಲಕ್ಷ ರೈತರಿಗೆ 14,500 ಕೋಟಿ ರು. ಬೆಳೆ ಸಾಲ ವಿತರಿಸಲು 2020ರಲ್ಲಿ ಜಿಲ್ಲಾವಾರು ಗುರಿ ನಿಗದಿಪಡಿಸಿತ್ತು. ಕೇಂದ್ರ ಸರ್ಕಾರದ ಶೇ.2 ಬಡ್ಡಿ ಸಹಾಯ ಧನ ಮತ್ತು ಶೇ. 3ರ ಪ್ರೋತ್ಸಾಹಧನ ಪಡೆಯಲು ಕೆಸಿಸಿ ಖಾತೆ ಮೂಲಕವೇ ಸಾಲ ವಿತರಿಸಲು ಸೂಚಿಸಿತ್ತು. ಕುಟುಂಬ ಸದಸ್ಯರು ಒಟ್ಟಾರೆ ಎಷ್ಟೇ ಸಾಲ ಪಡೆದಿದ್ದರೂ ಯಾವ ಸದಸ್ಯನ ಸಾಲದ ಗಡುವು ಮೊದಲು ಬರುತ್ತದೋ ಅಂತಹ ಸದಸ್ಯರಿಗೆ ಮೊದಲ ಮೂರುಲಕ್ಷಗಳವರೆಗಿನ ಸಾಲಕ್ಕೆ ಮಾತ್ರ ರಾಜ್ಯ ಸರ್ಕಾರದ ಬಡ್ಡಿ ಸಹಾಯಧನ ದೊರೆಯಲಿದೆ ಎಂದು ಹೇಳಿತ್ತು.

 

ಈ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅವರ ಆಭರಣಗಳ ಮೇಲೆ ಶೇ. 3ರ ಬಡ್ಡಿ ದರದಲ್ಲಿ ಬೆಳೆ ಸಾಲ ನೀಡುವ ಉದ್ದೇಶವಿತ್ತು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್‌ ಮತ್ತು ಡಿಸಿಸಿ ಬ್ಯಾಂಕ್‌ಗಳ ಮೂಲಕ ಜಾರಿಗೊಳಿಸಿತ್ತು. ಗರಿಷ್ಠ 5 ಎಕರೆ ಭೂ ಹಿಡುವಳಿ ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ. ಕುಟುಂಬದಲ್ಲಿ ಪಹಣಿ ಹೊಂದಿದ ಸಣ್ಣ ಮತ್ತು ಅತಿಸಣ್ಣ ರೈತರೆಲ್ಲರಿಗೂ ಪ್ರತ್ಯೇಕವಾಗಿ ಈ ಯೋಜನೆಯು ಅನ್ವಯವಾಗುತ್ತದೆ.

Hot this week

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!