Thursday | July 16, 2026 |

ಪ್ರತ್ಯೇಕ ರಾಜ್ಯದ ಗುಂಗಿನಲ್ಲೇ ಮುಳುಗಿದ ಕತ್ತಿ;ಅರಣ್ಯ ಇಲಾಖೆಯಲ್ಲೇ 4,199 ಕಡತಗಳು ವಿಲೇವಾರಿಗೆ ಬಾಕಿ

ಬೆಂಗಳೂರು; ಪ್ರತ್ಯೇಕ ರಾಜ್ಯದ ಬಗ್ಗೆ ಆಗಾಗ್ಗೆ ಹೂಂಕರಿಸುವ ಸಚಿವ ಉಮೇಶ್‌ ವಿ ಕತ್ತಿ ಅವರು ನಿಭಾಯಿಸುತ್ತಿರುವ ಅರಣ್ಯ ಇಲಾಖೆಯಲ್ಲಿ ಕಡತಗಳು ವಿಲೇವಾರಿಯಾಗದೇ ಧೂಳಿಡಿದು ಕೂತಿವೆ. ಸಚಿವಾಲಯ ವಾಹಿನಿ, ಇ-ಆಫೀಸ್‌ ಸೇರಿ ಒಟ್ಟು 4,199 ಕಡತಗಳು ವಿಲೇವಾರಿಯಾಗದೇ ಬಾಕಿ ಇರುವುದು ಇದೀಗ ಬಹಿರಂಗವಾಗಿದೆ.

 

ಅರಣ್ಯ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ 2022ರ ಜೂನ್‌ 23ರಂದು ನಡೆದ ಸಭೆಯಲ್ಲಿ ಕಡತಗಳು ವಿಲೇವಾರಿಯಾಗದೇ ಕುರಿತು ಚರ್ಚೆಯಾಗಿದೆ. ಅದರಲ್ಲೂ ತುಂಬಾ ಮುಖ್ಯವಾಗಿ ನ್ಯಾಯಾಲಯದ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಲೇವಾರಿಯಾಗದೇ ಇರುವ ಕಡತಗಳ ಸಂಖ್ಯೆಯೂ ಹೆಚ್ಚಿನ ಸಂಖ್ಯೆಯಲ್ಲಿವೆ. ಸಭೆ ನಡವಳಿಗಳ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

 

ಕಡತ ವಿಲೇವಾರಿ ಕುರಿತು ಸಚಿವ ಉಮೇಶ್‌ ಕತ್ತಿ ಅವರು ನಿಯಮಿತವಾಗಿ ಸಭೆ ನಡೆಸದಿರುವುದೇ 4,199 ಕಡತಗಳು ಬಾಕಿ ಇರುವುದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳೂ ನಡೆಯುವ ಕೆಡಿಪಿ ಸಭೆಯಲ್ಲಿಯೂ ಎಲ್ಲಾ ಇಲಾಖೆಗಳ ಕಡತಗಳ ವಿಲೇವಾರಿ ಕುರಿತು ಚರ್ಚೆ ನಡೆಯುತ್ತಾದರೂ ಅರಣ್ಯ ಇಲಾಖೆಯಲ್ಲಿ ಮಾತ್ರ ವಿಲೇವಾರಿಯಾಗದ ಕಡತಗಳು ಬೆಟ್ಟದಂತೆ ಏರುತ್ತಿದೆ.

 

2022ರ 16ರಿಂದ ಜೂನ್‌ 15ರವರೆಗಿನ ಅಂಕಿ ಅಂಶಗಳ ಪ್ರಕಾರ ಸಚಿವಾಲಯ ವಾಹಿನಿಯಲ್ಲಿ 2,399 ಮತ್ತು ಇ-ಆಫೀಸ್‌ನಲ್ಲಿ 1,800 ಕಡತಗಳು ಸೇರಿ ಒಟ್ಟು 4,199 ಕಡತಗಳು ಬಾಕಿ ಇವೆ. ಈ ಪೈಕಿ 03 ವರ್ಷಗಳಿಗಿಂತ ಹಳೆಯದಾದ ಕಡತಗಳ ಸಂಖ್ಯೆ 1,069ರಷ್ಟಿದೆ. ಇದರಲ್ಲಿ ನ್ಯಾಯಾಲಯ, ಲೋಕಾಯುಕ್ತ, ಕರ್ನಾಟಕ ಆಡಳಿತ ನ್ಯಾಯಮಂಡಳಿ, ಇಲಾಖೆ ವಿಚಾರಣೆ, ಅರಣ್ಯ ವಿಮೋಚನಾ ಪ್ರಕರಣಗಳಿಗೆ ಸಂಬಂಧಿಸಿದ ಕಡತಗಳೇ ಹೆಚ್ಚಿರುವುದು ನಡವಳಿಯಿಂದ ತಿಳಿದು ಬಂದಿದೆ.

 

ಕರ್ತವ್ಯಲೋಪ, ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ಹಣಕಾಸು ದುರುಪಯೋಗ ಸೇರಿದಂತೆ ಇನ್ನಿತರೆ ಲೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ವಿಚಾರಣೆಗೆ ಗುರಿಯಾಗಿರುವ ಅಧಿಕಾರಿ, ನೌಕರರ ವಿರುದ್ಧವೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ವಿಭಾಗದಲ್ಲಿ ಇದುವರೆಗೆ ಒಟ್ಟು 25 ಕಡತಗಳು ಬಾಕಿ ಇವೆ. ಕಾರಣ ಕೇಳುವ ನೋಟೀಸ್‌ಗೆ ಆಪಾದಿತರೆಂದು ಹೇಳಲಾಗಿರುವ ಬಹುತೇಕ ಅಧಿಕಾರಿಗಳಿಂದ ಉತ್ತರವೂ ಇಲಾಖೆಗೆ ಸ್ವೀಕೃತವಾಗಿಲ್ಲ ಎಂದು ಗೊತ್ತಾಗಿದೆ.

 

ಇನ್ನು ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯಲ್ಲಿ ನ್ಯಾಯಾಲಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 797 ಪ್ರಕರಣಗಳು ಚಾಲ್ತಿಯಲ್ಲಿವೆ. ಈ ಪೈಕಿ ಸರ್ವೋಚ್ಛ ನ್ಯಾಯಾಲಯದಲ್ಲಿ 70, ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ 493, ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ 138, ಇತರೆ ನ್ಯಾಯಾಲಯಗಳಲ್ಲಿ 96 ಪ್ರಕರಣಗಳು ಬಾಕಿ ಇವೆ.

 

ಅರಣ್ಯ ಇಲಾಖೆಯಲ್ಲಿ ಕಡತ ವಿಲೇವಾರಿ ಮತ್ತು ವಿವಿಧ ಪ್ರಕರಣಗಳು ಬಾಕಿ ಇದ್ದರೂ ಸಚಿವ ಉಮೇಶ್‌ ಕತ್ತಿ ಅವರು ನಿಯಮಿತವಾಗಿ ಸಭೆ ನಡೆಸುತ್ತಿಲ್ಲ. ಬದಲಿಗೆ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇರಿಸುವುದರಲ್ಲಿಯೇ ಕಾಲಹರಣ ಮಾಡುತ್ತಿರುವ ಕಾರಣ ಅಧಿಕಾರಿಶಾಹಿಯೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.

Hot this week

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!