Tuesday | September 22, 2026 |

ಬಿಜೆಪಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಪರಿಶಿಷ್ಟರ ವಿದ್ಯಾರ್ಥಿ ನಿಲಯಕ್ಕೆ ಮೀಸಲಾದ ನಿವೇಶನ!; ಕಾರಜೋಳರ ಒತ್ತಡ?

ಬೆಂಗಳೂರು; ಸಾವಿರಾರು ಕೋಟಿ ರುಪಾಯಿ ದೇಣಿಗೆ ಪಡೆಯುತ್ತಿರುವ ಭಾರತೀಯ ಜನತಾ ಪಾರ್ಟಿಯು ತಾಲೂಕು ಪ್ರದೇಶಗಳಲ್ಲಿ ಸ್ವಂತ ಕಚೇರಿಗಾಗಿ ಕಟ್ಟಡ ನಿರ್ಮಾಣ ಮಾಡಲು ಪರಿಶಿಷ್ಟ ಜಾತಿಯ ಸರ್ಕಾರಿ ವಿದ್ಯಾರ್ಥಿ ನಿಲಯಗಳೂ ಸೇರಿದಂತೆ ಸಾರ್ವಜನಿಕ ಉದ್ದೇಶಕ್ಕೆ ಕಾಯ್ದಿರಿಸಿರುವ ನಿವೇಶನ, ಜಮೀನುಗಳ ಮೇಲೆ ಕಣ್ಣು ಹಾಕಿದೆ.

 

ಸಾರ್ವಜನಿಕ ಉದ್ದೇಶಕ್ಕಾಗಿ ಕಾಯ್ದಿರಿಸಿದ್ದ ನಿವೇಶನಗಳನ್ನು ಪಕ್ಷದ ಸ್ವಂತ ಕಚೇರಿಗಾಗಿ ಮಂಜೂರು ಮಾಡಿಸಿಕೊಳ್ಳಲು ಕಂದಾಯ ಇಲಾಖೆಗೆ ವಿವಿಧ ಜಿಲ್ಲೆಗಳಿಂದ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.
ಕಾನೂನು ಇಲಾಖೆಯ ಅಸಮ್ಮತಿ ನಡುವೆಯೂ ರಾಷ್ಟ್ರೋತ್ಥಾನ ಪರಿಷತ್‌ಗೆ ಗೋಮಾಳ ಮಂಜೂರು ಮಾಡಿರುವ ಬೆನ್ನಲ್ಲೇ ಹಲವು ಸಚಿವರು ತಾಲೂಕು ಪ್ರದೇಶಗಳಲ್ಲಿ ಪಕ್ಷಕ್ಕೆ ಸ್ವಂತ ಕಚೇರಿಗಾಗಿ ನಾಗರಿಕ ನಿವೇಶನ, ಇತರೆ ಇಲಾಖೆಗಳು ಸಾರ್ವಜನಿಕ ಉದ್ದೇಶಕ್ಕಾಗಿ ಕಾಯ್ದಿರಿಸಿರುವ, ಮೀಸಲಿರಿಸಿರುವ ನಿವೇಶನಗಳನ್ನು ಮಂಜೂರು ಮಾಡಲು ಸಲ್ಲಿಸಿರುವ ಅರ್ಜಿಗಳತ್ತ ಕಂದಾಯ ಇಲಾಖೆಯು ಅತ್ಯುತ್ಸಾಹ ವಹಿಸಿರುವುದು ಮುನ್ನೆಲೆಗೆ ಬಂದಿದೆ.

 

ಹಾಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಪ್ರತಿನಿಧಿಸಿರುವ ಮುಧೋಳ ನಗರದಲ್ಲಿ ಭಾರತೀಯ ಜನತಾ ಪಕ್ಷದ ಕಚೇರಿ ಕಟ್ಟಡ ನಿರ್ಮಾಣ ಸಂಬಂಧ ನಿವೇಶನ ಮಂಜೂರು ಮಾಡಬೇಕು ಎಂಬ ಅರ್ಜಿ ಸಲ್ಲಿಕೆಯಾಗಿದೆ. ಈ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯು 2022ರ ಜೂನ್‌ 9ರಂದು ಬಾಗಲಕೋಟೆ ಜಿಲ್ಲಾಧಿಕಾರಿಗೆ ಪತ್ರ ಬರೆದು ವರದಿ ಸಲ್ಲಿಸಲು ಸೂಚಿಸಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಬಾಗಲಕೋಟೆ ಜಿಲ್ಲಾಧಿಕಾರಿಗೆ ಕಂದಾಯ ಇಲಾಖೆಯು ಬರೆದಿರುವ ಪತ್ರದ ಪ್ರತಿ

 

ಮುಧೋಳ ನಗರದ ಮಂಟೂರು ರಸ್ತೆಯಲ್ಲಿ ಬಿಜೆಪಿ ಕಚೇರಿ ಕಟ್ಟಡಕ್ಕಾಗಿ ಗುರುತಿಸಿರುವ ಖಾಲಿ ನಿವೇಶನವು (ಆರ್‌ ಎಸ್‌ ನಂ 212 ಮತ್ತು ಸಿಟಿಎಸ್‌ ನಂ 2588, 134.00 ಚ ಮೀ) ಸಮಾಜ ಇಲಾಖೆಯ ಹೆಸರಿನಲ್ಲಿದೆ. ಅಲ್ಲದೆ ಪರಿಶಿಷ್ಟ ಜಾತಿಯ ಸರ್ಕಾರಿ ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣ ಸಂಬಂಧ ಕಾಯ್ದಿರಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಈಗಾಗಲೇ ಕಂದಾಯ ಇಲಾಖೆಯ ಪತ್ರ ಮುಖೇನ ಗಮನಕ್ಕೆ ತಂದಿರುವುದು ಸರ್ಕಾರದ ಪ್ರಧಾನ ಕಾರ್ಯದರ್ಶಿ ಪತ್ರದಿಂದ ತಿಳಿದು ಬಂದಿದೆ.

 

ಪರಿಶಿಷ್ಟ ಜಾತಿಯ ಸರ್ಕಾರಿ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣ ಸಂಬಂಧ ಕಾಯ್ದರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ವರದಿ ನೀಡಿದ್ದರೂ ಇದೇ ಜಾಗದಲ್ಲಿ ಭಾರತೀಯ ಜನತಾ ಪಕ್ಷದ ಕಚೇರಿ ಕಟ್ಟಡ ನಿರ್ಮಾಣ ಮಾಡಲು ಖಾಲಿ ನಿವೇಶನ ಮಂಜೂರು ಮಾಡಲು ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿರುವುದು ಗೊತ್ತಾಗಿದೆ.

 

2019-20ನೇ ಸಾಲಿನಲ್ಲಿ ಬಿಜೆಪಿ ರಾಷ್ಟ್ರೀಯ ಘಟಕವು 4,848 ಕೋಟಿ ರು.ಮೌಲ್ಯದ ಆಸ್ತಿ ಹೊಂದಿರುವುದನ್ನು ಪ್ರಕಟಿಸಿತ್ತು. ಅದೇ ರೀತಿ 2020-21ರಲ್ಲಿ ಬಿಜೆಪಿಯ ಕರ್ನಾಟಕ ಘಟಕವು 22.44 ಕೋಟಿ ರು.ನಷ್ಟು ದೇಣಿಗೆ ಸಂಗ್ರಹಿಸಿತ್ತು ಎಂದು ಎಡಿಆರ್‌ ವರದಿ ಪ್ರಕಟಿಸಿದ್ದನ್ನು ಸ್ಮರಿಸಬಹುದು.

Hot this week

ಮೂಲಸೌಕರ್ಯಗಳ ಕೊರತೆ; ಸಂಭಾವ್ಯ ಹೂಡಿಕೆದಾರರನ್ನು ಹಿಮ್ಮೆಟ್ಟಿಸಿದ್ದ ಮಂಡಳಿ, ಬಳಕೆಯಾಗದ 281.34 ಕೋಟಿ

ಬೆಂಗಳೂರು; ದೇವನಹಳ್ಳಿಯಲ್ಲಿರುವ ಏರೋಸ್ಪೇಸ್‌ ಪಾರ್ಕ್ ಸೇರಿದಂತೆ ಇನ್ನಿತರೆ ಕೈಗಾರಿಕೆ ಪ್ರದೇಶಗಳಲ್ಲಿ ಮೂಲಭೂತ...

ರಸ್ತೆ ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲೇ ಲೋಪ; 483 ಕಾಮಗಾರಿಗಳಲ್ಲಿ 72.01 ಕೋಟಿಯಷ್ಟು ಹೆಚ್ಚುವರಿ ಹೊರೆ, ಪಿಡಬ್ಲ್ಯೂಡಿಯ ಕಾರ್ಯವೈಖರಿ ಬಯಲು ಮಾಡಿದ ಸಿಎಜಿ

ಬೆಂಗಳೂರು;  ರಸ್ತೆ ಕಾಮಗಾರಿಗಳಲ್ಲಿ  ಸಬ್‌ ಬೇಸ್‌ ದಪ್ಪವನ್ನು ಕಡಿಮೆ ಮಾಡದಿರುವುದು ಸೇರಿದಂತೆ...

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಆದೇಶ; ಮುನ್ನೆಲೆಗೆ ಬಂದ ದಿ ಫೈಲ್‌ ನ 10 ವರದಿಗಳು

ಬೆಂಗಳೂರು;  ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ...

ಖರ್ಗೆ ಕುಟುಂಬ ಸದಸ್ಯರ ಸಿದ್ದಾರ್ಥ ವಿಹಾರ ಟ್ರಸ್ಟ್‌; ಪ್ರಕರಣ ಮುಂದುವರಿಕೆ, ಲೋಕಾಯುಕ್ತ ಎಸ್‌ಪಿ ಗೆ ನೋಟೀಸ್‌ ನೀಡಿದ ನ್ಯಾಯಾಲಯ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ,...
Please Scan to make Your Contribution

Topics

ಮೂಲಸೌಕರ್ಯಗಳ ಕೊರತೆ; ಸಂಭಾವ್ಯ ಹೂಡಿಕೆದಾರರನ್ನು ಹಿಮ್ಮೆಟ್ಟಿಸಿದ್ದ ಮಂಡಳಿ, ಬಳಕೆಯಾಗದ 281.34 ಕೋಟಿ

ಬೆಂಗಳೂರು; ದೇವನಹಳ್ಳಿಯಲ್ಲಿರುವ ಏರೋಸ್ಪೇಸ್‌ ಪಾರ್ಕ್ ಸೇರಿದಂತೆ ಇನ್ನಿತರೆ ಕೈಗಾರಿಕೆ ಪ್ರದೇಶಗಳಲ್ಲಿ ಮೂಲಭೂತ...

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಆದೇಶ; ಮುನ್ನೆಲೆಗೆ ಬಂದ ದಿ ಫೈಲ್‌ ನ 10 ವರದಿಗಳು

ಬೆಂಗಳೂರು;  ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ...

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ...

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...

Related Articles

Popular Categories

error: Content is protected !!