Wednesday | May 6, 2026 |

ಗುರುರಾಘವೇಂದ್ರ ಬ್ಯಾಂಕ್‌, ಸೊಸೈಟಿಯಲ್ಲಿ 2,692 ಕೋಟಿ ರು. ದುರುಪಯೋಗ ಪತ್ತೆ; ಮರು ಲೆಕ್ಕಪರಿಶೋಧನೆ

ಬೆಂಗಳೂರು; ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ ಮತ್ತು ಶ್ರೀ ಗುರು ಸಾರ್ವಭೌಮ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಸ್ಥೆಯಲ್ಲಿ 2014-15ರಿಂದ 2018-19ರವರೆಗೆ ಒಟ್ಟು 2,692.13 ಕೋಟಿ ರು. ಹಣ ದುರುಪಯೋಗವಾಗಿದೆ ಎಂದು ಮರು ಲೆಕ್ಕ ಪರಿಶೋಧನೆಯು ಪತ್ತೆ ಹಚ್ಚಿದೆ.

 

ಅಲ್ಲದೆ ಇದೇ ಬ್ಯಾಂಕ್‌ಗೆ ಸಂಬಂಧಿಸಿದಂತೆ ನ್ಯಾಯಾಲಯವು ನೀಡಿರುವ ಆದೇಶರಗಳ ಅನುಪಾಲನಾ ವರದಿಯನ್ನು ಸಲ್ಲಿಸಿ ಎಂದು ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಆರಾಧ್ಯ ಅವರಿದ್ದ ವಿಭಾಗೀಯ ನ್ಯಾಯಪೀಠವು ಮಂಗಳವಾರ (ಜುಲೈ 26) ಅರ್ಜಿದಾರರಿಗೆ ಸೂಚಿಸಿತ್ತು. ಇದರ ಬೆನ್ನಲ್ಲೇ ಸಹಕಾರ ಸಂಘಗಳ ಮತ್ತು ಬ್ಯಾಂಕ್‌ಗಳ ಮರು ಲೆಕ್ಕ ಪರಿಶೋಧನೆ , ಮರುಪರಿಶೀಲನೆಯ ಪ್ರಗತಿ ಸಂಬಂಧ 2021ರ ಡಿಸೆಂಬರ್‌ 1ರಂದು ನಡೆದಿದ್ದ ಸಭೆ ಅನುಸಾರ ಅನುಪಾಲನಾ ವರದಿಯು ಮುನ್ನೆಲೆಗೆ ಬಂದಿದೆ.

 

ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ನಿರ್ದೇಶಕರು 2022ರ ಜುಲೈ 19ರಂದು ಸಲ್ಲಿಸಿರುವ ಅನುಪಾಲನಾ ವರದಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

‘ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ನ 2014-15ರಿಂದ 2018-19ನೇ ಸಾಲಿನವರೆಗಿನ ಮರು ಲೆಕ್ಕ ಪರಿಶೋಧನೆ ವರದಿ ಪೂರ್ಣಗೊಂಡಿದ್ದು ವರದಿಗಳನ್ನು ಬಿಡುಗಡೆಗೊಳಿಸಲಾಗಿದೆ.  ಮರುಲೆಕ್ಕಪರಿಶೋಧನೆಯಿಮದ 2,574.13 ಕೋಟಿ ರು ಹಣ ದುರುಪಯೋಗದ ಮೊತ್ತವನ್ನು ಪತ್ತೆ ಹಚ್ಚಲಾಗಿದೆ. ಈ ಸಂಬಂಧ ಸರ್ಕಾರಕ್ಕೆ ಹಾಗೂ ಸಹಕಾರ ಸಂಘಗಳ ನಿಬಂಧಕರಿಗೆ ವರದಿ ಮಾಡಲಾಗಿದೆ,’ ಎಂದು ಅನುಪಾಲನಾ ವರದಿಯಲ್ಲಿ ವಿವರಿಸಲಾಗಿದೆ.

 

ಅದೇ ರೀತಿ ‘ಶ್ರೀ ಗುರುಸಾರ್ವಭೌಮ ಕ್ರೆಡಿಟ್‌ ಸೌಹಾರ್ದ ಸಹಕಾರಿಯ 2015-16 ಮತ್ತು 2016-17ನೇ ಸಾಲಿನ ಮರುಲೆಕ್ಕಪರಿಶೋಧನೆ ವದಿ ಪೂರ್ಣಗೊಂಡು ವರದಿ ಬಿಡುಗಡೆಯಾಗಿದೆ. 2017-18ನೇ ಸಾಲಿನ ಮರುಲೆಕ್ಕಪರಿಶೋಧನೆ ಪೊಊರ್ನಗೊಂಡಿದ್ದು ವರದಿ ಬಿಡುಗಡೆಗೆ ಬಾಕಿ ಇದ. 2015-16ರಿಂದ 2017-18ನೇ ಸಾಲುಗಳ ಮರುಲೆಕ್ಕಪರಿಶೋಧನೆಯಿಂದ 118 ಕೋಟಿ ರು. ಹಣ ದುರುಪಯೋಗ ಪತ್ತೆಯಾಗಿದೆ,’ ಎಂದು ಅನುಪಾಲನಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.

 

 

2018-19ನೇ ಸಾಲಿನ ಮರುಲೆಕ್ಕಪರಿಶೋಧನೆ ವರದಿಯಿನ್ನು ಜುಲೈ 2022ರೊಳಗೆ ಪೂರ್ಣಗೊಳಿಸಿ ವರದಿ ಬಿಡುಗಡೆಗೊಳಿಸಲು ಸನ್ನದು ಲೆಕ್ಕಪರಿಶೋಧಕರಿಗೆ ಸೂಚಿಸಿದೆ. 2015-16 ಮತ್ತು 2016-17ನೇ ಸಾಲಿನ ವಿಧಿವಿಜ್ಞಾನ ಲೆಕ್ಕಪರಿಶೋಧನೆ ವರದಿ ಪೂರ್ಣಗೊಂಡು ವರದಿ ಬಿಡುಗಡೆಯಾಗಿದೆ. 2017-18, 2018-19, 2019-20ನೇ ಸಾಲಿನ ವಿಧಿವಿಜ್ಞಾನ ಲೆಕ್ಕಪರಿಶೋಧನೆಯು ಪ್ರಗತಿಯಲ್ಲಿದೆ ಎಂಬುದು ಅನುಪಾಲನಾ ವರದಿಯಲ್ಲಿ ಮಾಹಿತಿ ಒದಗಿಸಿದೆ.

 

ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ 2014-15ನೇ ಸಾಲಿಗೆ 871 ಕೋಟಿ ರು. ನಷ್ಟ ಮತ್ತು 807 ಕೋಟಿ ರು. ಹಣ ದುರುಪಯೋಗವಾಗಿದೆ. 2018-19ರವರೆಗಿನ ಲೆಕ್ಕಪತ್ರಗಳನ್ನು ಮರು ಲೆಕ್ಕಪರಿಶೋಧನೆ ನಡೆಸಿದ್ದ ಸನ್ನದು ಲೆಕ್ಕಪರಿಶೋಧಕರು 2020ರ ಮಾರ್ಚ್‌ ಅಂತ್ಯಕ್ಕೆ ಒಟ್ಟು 1,923 ಕೋಟಿ ರು. ನಷ್ಟ ಹೊಂದಿದೆ ಎಂದು ವರದಿ ಸಲ್ಲಿಸಿದ್ದರು.

 

‘ಎವರ್‌ ಗ್ರೀನ್‌ ಅಕೌಂಟ್ಸ್‌ ಎಂದು ಸೃಷ್ಟಿಸಿ ವಾಸ್ತವಿಕವಾಗಿ ಸಾಲಗಾರರಿಗೆ  ಸಾಲ ನೀಡಲಾಗಿದೆ ಎಂದು ದಾಖಲೆಯನ್ನು ಸೃಷ್ಟಿಸಿ ಎವರ್‌ ಗ್ರೀನ್‌ ಅಕೌಂಟ್ಸ್‌ ಸೃಷ್ಟಿಸಿರುತ್ತಾರೆ. ಸಾಲ ನೀಡುವಿಕೆಯಲ್ಲಿ ದೊಡ್ಡ ಪ್ರಮಾಣದ ವಂಚನೆ ಕಂಡು ಬರುತ್ತಿದೆ. ಪ್ರತಿ ಖಾತೆಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದ್ದು, ಸಾಲ ಮಂಜೂರಾತಿ, ಸಾಲದ ಹಣ ವರ್ಗಾವಣೆ ಆಯಾ ಸಾಲಗಾರರಿಗೆ ಆಗದೇ ಬೇರೆ ಸಾಲಗಳಿಗೆ ವರ್ಗಾವಣೆ ಮಾಡಿ ಹೊಂದಾಣಿಕೆ ಮಾಡಿರುವುದು ಸಾಬೀತಾಗುತ್ತಿದೆ,’ ಎಂದು ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‌ ಅಧ್ಯಕ್ಷತೆಯಲ್ಲಿ 2022ರ ಫೆಬ್ರುವರಿ 9ರಂದು ನಡೆದಿದ್ದ ಸಭೆಯಲ್ಲಿ ಸಹಕಾರ ನಿಬಂಧಕರು ವಿವರಣಾತ್ಮಕವಾದ ಟಿಪ್ಪಣಿ ಸಲ್ಲಿಸಿದ್ದರು. ಅಲ್ಲದೆ ಕಳೆದ 20 ವರ್ಷಗಳಿಂದಲೂ ಈ ಬ್ಯಾಂಕ್‌ನಲ್ಲಿ ಹಣ ದುರುಪಯೋಗವಾಗುತ್ತಿದೆ ಎಂಬ ಕುರಿತು 2022ರ ಫೆ. 14ರಂದು ‘ದಿ ಫೈಲ್‌’ ವರದಿ ಪ್ರಕಟಿಸಿತ್ತು.

ಗುರುರಾಘವೇಂದ್ರ ಬ್ಯಾಂಕ್‌ ಹಗರಣ; 20 ವರ್ಷದಿಂದಲೂ ಅವ್ಯವಹಾರ, ಕಣ್ಮುಚ್ಚಿ ಕುಳಿತಿದ್ದ ಸರ್ಕಾರ

 

ಸಂಘದ ಅವ್ಯವಹಾರಕ್ಕೆ ಕಾರಣರಾಗಿರುವವರ ವಿರುದ್ಧ ಸಂಬಂಧಪಟ್ಟ ಇಲಾಖೆಗಳೊಂದಿಗೆ ಪತ್ರ ವ್ಯವಹಾರ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಹಕಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಉಮಾಶಂಕರ್‌ ಅವರು ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ನಿರ್ದೇಶಕರಿಗೆ 2022ರ ಜುಲೈ 20ರಂದು ಪತ್ರ ಬರೆದಿದ್ದನ್ನು ಸ್ಮರಿಸಬಹುದು. ಈ ಕುರಿತು ಜುಲೈ 22ರಂದು ‘ದಿ ಫೈಲ್‌’ ವರದಿ ಪ್ರಕಟಿಸಿತ್ತು.

ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ ಅಕ್ರಮ; ನಿರೀಕ್ಷಿತ ಮಟ್ಟದಲ್ಲಿ ನಡೆಯದ ಮರುಲೆಕ್ಕಪರಿಶೋಧನೆ

2015-16 ಮತ್ತು 2016-17ನೇ ಸಾಲಿನ ಮರು ಲೆಕ್ಕ ಪರಿಶೋಧನೆ ವರದಿಯನ್ನು ಸಲ್ಲಿಸಿರುವ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ನಿರ್ದೇಶಕರು ಅಕ್ರಮದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದ್ದನ್ನು ಸ್ಮರಿಸಬಹುದು.

 

Hot this week

ಒಂದೇ ಜಾಗದಲ್ಲಿ ಎರಡು ಫ್ಲೈ ಓವರ್, ಶೇ.50ರಷ್ಟು ಕಾಮಗಾರಿಯಾಗಿದ್ದರೂ ಪೂರ್ಣ ಪಾವತಿ; ಬ್ಯಾಂಕ್‌ ಗ್ಯಾರಂಟಿ ಮುಟ್ಟುಗೋಲಿಲ್ಲ, ಗುತ್ತಿಗೆದಾರರಿಗೆ ಲಾಭ, ಬಿಬಿಎಂಪಿ ನಿಧಿಗೆ ನಷ್ಟ

ಬೆಂಗಳೂರು;  ಈಜಿಪುರ ಮೇಲ್ಸೇತುವೆ ಎಲಿವೇಟೆಡ್‌ ಕಾರಿಡಾರ್  ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ  ಪೂರ್ಣಗೊಳಿಸದ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...
Please Scan to make Your Contribution

Topics

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

Related Articles

Popular Categories

error: Content is protected !!