Friday | September 18, 2026 |

79.29 ಕೋಟಿ ರು ಪಾವತಿ; ಪಿಎಸಿ ಸಭೆಗೆ ಗೈರಾದ ಡಿಸಿ ಬಗಾದಿ ಗೌತಮ್‌ ವಿರುದ್ಧ ಕ್ರಮಕ್ಕೆ ನಿರ್ದೇಶನ

ಬೆಂಗಳೂರು; ಮೂಲ ದಾಖಲೆ ಮತ್ತು ಸೂಕ್ತ ಪರಿಶೀಲನೆ ನಡೆಸದೆಯೇ 79.29 ಕೋಟಿ ರು. ಪಾವತಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಒದಗಿಸದೇ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಸಭೆಗೆ ಗೈರು ಹಾಜರಾಗಿ ಅಗೌರವ ತೋರಿದ್ದಾರೆ ಎಂಬ ಗುರುತರ ಆರೋಪಕ್ಕೆ ಮೈಸೂರಿನ ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್‌ ಅವರು ಗುರಿಯಾಗಿದ್ದಾರೆ.

 

ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯು ಶಾಸನಸಭೆಯಿಂದ ರಚನೆಯಾಗಿರುವ ಸಮಿತಿಯಾಗಿದ್ದರೂ ಸಮಿತಿ ಅಧ್ಯಕ್ಷರಿಂದ ಯಾವುದೇ ಪೂರ್ವಾನುಮತಿ, ವಿನಾಯಿತಿಯನ್ನೂ ಪಡೆಯದೇ ಸಭೆಗೆ ಗೈರಾಗಿರುವುದನ್ನು ಸಮಿತಿಯು ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಮೈಸೂರು ಜಿಲ್ಲಾಧಿಕಾರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಕರ್ನಾಟಕ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ 2022ರ ಜೂನ್‌ 29ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಪತ್ರದಲ್ಲೇನಿದೆ?

 

‘ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ ವರದಿಯ ಕಂಡಿಕೆ ಸಂಖ್ಯೆ 3/13/2014-15 ಅಂಗೀಕಾರಾರ್ಹವಲ್ಲದ 79.29 ಕೋಟಿ ರು. ಭೂ ಪರಿಹಾರ ಪಾವತಿ ಕುರಿತು ಚರ್ಚಿಸಲು ಇತ್ತೀಚಿನ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಮೈಸೂರು ಜಿಲ್ಲಾಧಿಕಾರಿ ಅವರನ್ನು ಕೋರಲಾಗಿತ್ತು. ಆದರೆ ಡಾ ಬಗಾದಿ ಗೌತಮ್‌ ಅವರು 2022ರ ಜೂನ್‌ 28ರಂದು ನಡೆದ ಸಭೆಗೆ ಗೈರುಹಾಜರಾಗಿರುತ್ತಾರೆ. ಈ ಸಮಿತಿಯು ಶಾಸನಸಭೆಯಿಂದ ರಚನೆಯಾಗಿದೆ. ಹೀಗಾಗಿ ಶಾಸನಸಭೆಯಷ್ಟೇ ಗೌರವ ಮತ್ತು ಜವಾಬ್ದಾರಿ ಹೊಂದಿದೆ. ಸಮಿತಿಯ ಅಧ್ಯಕ್ಷರಿಂದ ಪೂರ್ವಾನುಮತಿ/ವಿನಾಯಿತಿ ಪಡೆಯದೇ ಜಿಲ್ಲಾಧಿಕಾರಿ ಗೈರು ಹಾಜರಾಗಿರುವುದು ಸಮಿತಿಗೆ ತೋರಿದ ಅಗೌರವವಾಗಿದೆ ಎಂದು ಸಭೆಯಲ್ಲಿ ಸಮಿತಿಯ ಸದಸ್ಯರುಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾವು ಬಗಾದಿ ಗೌತಮ್‌ ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಬೇಕು ಮತ್ತು ಈ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿಯನ್ನು ಸಮಿತಿಗೆ ನೀಡಬೇಕು,’ ಎಂದು ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಪತ್ರದಲ್ಲಿ ನಿರ್ದೇಶಿಸಿದ್ದಾರೆ.

 

79.29 ಕೋಟಿ ಪರಿಹಾರ ನೀಡುವಲ್ಲಿ ಆಗಿರುವ ಉಲ್ಲಂಘನೆಗಳಿವು

 

ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದ 377.24 ಎಕರೆ ಭೂ ಸ್ವಾಧೀನಕ್ಕಾಗಿ 79.29 ಕೋಟಿ ರು.ಗಳನ್ನು ಪಾವತಿಸುವ ಮುನ್ನ ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯು ಮೂಲ ದಾಖಲೆಗಳನ್ನು ಪಡೆದಿರಲಿಲ್ಲ ಮತ್ತು ಸೂಕ್ತ ಪರೀಕ್ಷೆಗಳನ್ನು ನಡೆಸಿರಲಿಲ್ಲ.

 

ಅಲ್ಲದೆ ಹಿಂದಿನ ವಿಶೇಷ ಭೂ ಸ್ವಾಧೀನಾಧಿಕಾರಿ ಹಿರಿಯ ಶ್ರೇಣಿ ಕೆಎಎಸ್‌ ಅಧಿಕಾರಿ ಎಚ್‌ ಕೆ ಕೃಷ್ಣಮೂರ್ತಿ ಅವರು ಭೂ ಪರಿಹಾರ ಕೋರಿದವರ ಕಡೆಯಿಂದ ಹಾಜರಪಡಿಸಿದ್ದ ಪಹಣಿ ಪತ್ರಿಕೆಗಳ ನೈಜತೆಯನ್ನು ಪರಿಶೀಲಿಸಿರಲಿಲ್ಲ, ಮರಣ ಪ್ರಮಾಣ ಪತ್ರ, ಮೃತ ಖಾತೆದಾರರಿಂದ ಉತ್ತರಾಧಿಕಾರತ್ವ ಪ್ರಮಾಣಪತ್ರ ಪಡೆಯದೇ ಪರಿಹಾರ ವಿತರಣೆ ಮಾಡಲಾಗಿತ್ತು.

 

ಪರಿಹಾರ ವಿತರಣೆ ಮಾಡುವ ಪೂರ್ವದಲ್ಲಿ ಪರಿಹಾರ ಪಡೆಯುವ ಅರ್ಹತೆ ಹೊಂದಿದ ಬಗ್ಗೆ ಸೂಕ್ತ ದಾಖಲಾತಿಗಳನ್ನು ಅರ್ಜಿದಾರರದಿಂದ ಪಡೆದು ಪರಿಶೀಲಿಸದೇ ಶಾಮೀಲಾಗಿದ್ದರು. ಅಲ್ಲದೆ ಪರಿಹಾರದ ಹಣವನ್ನು ವಿತರಣೆ ಮಾಡುವ ಮೂಲಕ ಸರ್ಕಾರಕ್ಕೆ ನಷ್ಟವನ್ನುಂಟು ಮಾಡಲಾಗಿದೆ ಎಂದು ಲೆಕ್ಕ ಪರಿಶೋಧನೆ ವರದಿಯಲ್ಲಿ ಹೇಳಲಾಗಿತ್ತು.

 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಶ್ರೇಣಿ ಕೆಎಎಸ್‌ ಅಧಿಕಾರಿ ಎಚ್‌ ಕೆ ಕೃಷ್ಣಮೂರ್ತಿ (ಸದ್ಯ ನಿವೃತ್ತ) ಇವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಮತ್ತು ರಿಕವರಿ ಸೂಟ್‌ ದಾಖಲಿಸಿ ಕ್ರಮ ಕೈಗೊಳ್ಳಬೇಕಿತ್ತು. ಅಲ್ಲದೆ ಕಂದಾಯ ಇಲಾಖೆಯಲ್ಲಿ ತಹಶೀಲ್ದಾರ್‌ ಆಗಿ ಸೇವೆ ಸಲ್ಲಿಸಿದ್ದ ನವೀನ್‌ ಜೋಸೆಫ್‌ (ಸದ್ಯ ಬಿಡಿಎ ಉಪ ಕಾರ್ಯದರ್ಶಿ), ಕೆಐಎಡಿಬಿಯ ತಪ್ಪಿತಸ್ಥ ಅಧಿಕಾರಿ ಕೃಷ್ಣಮೂರ್ತಿ ಇವರ ವಿರುದ್ಧ ಶಿಸ್ತು ಕ್ರಮ ಜರುಗಿಸಿ 2022ರ ಜನವರಿ 25ರಂದು ನಡೆದಿದ್ದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಗೆ ಮಾಹಿತಿ ಒದಗಿಸಲು ಸೂಚಿಸಲಾಗಿತ್ತು.

 

ಅದೇ ರೀತಿ ಅಧಿಕಾರಿಗಳು ಗಂಭೀರ ಸ್ವರೂಪದ ಪ್ರಕರಣದಲ್ಲಿ ಭಾಗಿಯಾಗಿರುವುದರಿಂದ ಅವರನ್ನು ಇಲಾಖೆ ತನಿಖೆ ಮುಗಿಯುವವರೆಗೂ ನಾನ್‌ ಎಕ್ಸಿಕ್ಯೂಟಿವ್‌ ಹುದ್ದೆಗೆ ನಿಯೋಜಿಸಬೇಕು ಎಂದು ಸಮಿತಿಯು ಸೂಚಿಸಿತ್ತು. ಈ ಎಲ್ಲಾ ಮಾಹಿತಿಗಳೊಂದಿಗೆ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್‌ ಅವರು 2022ರ ಜೂನ್‌ 28ರಂದು ನಡೆದ ಸಭೆಗೆ ಹಾಜರಾಗಿ ವಿವರಿಸಬೇಕಿತ್ತು ಎಂದು ಗೊತ್ತಾಗಿದೆ.

Hot this week

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ...
Please Scan to make Your Contribution

Topics

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ...

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

ಕೋವಿಡ್ ವೆಚ್ಚದಲ್ಲಿ ಅಕ್ರಮ ಆರೋಪ; ಐಎಎಸ್‌ ಗೌರವ್ ಗುಪ್ತಾ, ರಾಜೇಂದ್ರ ಚೋಳನ್ ಆರೋಪ ಮುಕ್ತ, ಕುನ್ಹಾ ವರದಿಗಿಲ್ಲ ಕಿಮ್ಮತ್ತು

ಬೆಂಗಳೂರು;  ಕೋವಿಡ್‌ 19ರ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೆಯೇ,...

Related Articles

Popular Categories

error: Content is protected !!