ಚಿತ್ರದುರ್ಗದಲ್ಲಿ ಪೋಕ್ಸೋ ಕಾಯ್ದೆ ಅನುಷ್ಠಾನ; 3 ವರ್ಷದಲ್ಲಿ 123 ಪ್ರಕರಣ, 146 ಮಂದಿ ಬಂಧನ

photo credit-thenewsminute

ಬೆಂಗಳೂರು; ಬೇಟಿ ಪಡಾವ್‌ ಬೇಟಿ ಬಚಾವ್‌ ಹೆಸರಿನಲ್ಲಿ ಅಭಿಯಾನಕ್ಕೆ ಚಾಲನೆ ಸಿಕ್ಕಿದ ನಂತರ ರಾಜ್ಯದ ಚಿತ್ರದುರ್ಗ ಜಿಲ್ಲೆಯಲ್ಲಿ ಅಪ್ರಾಪ್ತ ಹೆಣ್ಣುಮಕ್ಕಳು ಒಳಗೊಂಡಂತೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ (ಪೋಕ್ಸೋ) ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ 2018ರಿಂದ 2021ರವರೆಗೆ ಒಟ್ಟು 123 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಕೋವಿಡ್‌ ಲಾಕ್‌ಡೌನ್‌ ಅವಧಿಯಲ್ಲಿ ಪೋಕ್ಸೋ ಸಂಬಂಧ ಚಿತ್ರದುರ್ಗ ಜಿಲ್ಲೆಯಲ್ಲಿ 65 ಪ್ರಕರಣಗಳು ವರದಿಯಾಗಿವೆ.

 

ಅದೇ ರೀತಿ ಕಳೆದ 3 ವರ್ಷಗಳಲ್ಲಿ ಅಪ್ರಾಪ್ತ ಹೆಣ್ಣುಮಕ್ಕಳು ಒಳಗೊಂಡಂತೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ (ಪೋಕ್ಸೋ) ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಒಟ್ಟು 9,418 ಪ್ರಕರಣಗಳು ವರದಿಯಾಗಿವೆ.

 

ಮಕ್ಕಳ ಮೇಲೆ  ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವ ಹೊತ್ತಿನಲ್ಲೇ ಪೋಕ್ಸೋ ಅಡಿಯಲ್ಲಿ ಕಳೆದ 3 ವರ್ಷಗಳಲ್ಲಿ ವರದಿಯಾಗಿರುವ ಪ್ರಕರಣಗಳ ಅಂಕಿ ಸಂಖ್ಯೆಗಳು ಮುನ್ನೆಲೆಗೆ ಬಂದಿವೆ.

 

ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 123 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಕೋವಿಡ್‌ ಲಾಕ್‌ಡೌನ್‌ ಅವಧಿಯಲ್ಲಿ ಪೋಕ್ಸೋ ಸಂಬಂಧ  65 ಪ್ರಕರಣಗಳು ವರದಿಯಾದ ಪ್ರಕರಣಗಳೂ ಸೇರಿದಂತೆ ಒಟ್ಟಾರೆ ಪ್ರಕರಣಗಳಲ್ಲಿ  ಒಟ್ಟು 146 ಮಂದಿಯನ್ನು ಬಂಧಿಸಲಾಗಿದೆ.

 

ಪೋಕ್ಸೋ ಕಾಯ್ದೆ ಅಡಿಯಲ್ಲಿ ಚಿತ್ರದುರ್ಗದಲ್ಲಿ ಇದುವರೆಗೆ ದಾಖಲಾದ ಪ್ರಕರಣಗಳ ಅಂಕಿ ಸಂಖ್ಯೆ

 

2018ರಲ್ಲಿ 2,061, 2019ರಲ್ಲಿ 2,200, 2020ರಲ್ಲಿ 2,150, 2021ರಲ್ಲಿ 2,778, 2022ರ ಜನವರಿ 31ರ ಅಂತ್ಯದವರೆಗೆ 229 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಕೇವಲ 763 ಪ್ರಕರಣಗಳಲ್ಲಷ್ಟೇ ತನಿಖೆ ನಡೆದಿವೆ. ನ್ಯಾಯಾಲಯದಲ್ಲಿ 6,601 ಪ್ರಕರಣಗಳು ವಿಚಾರಣೆಯಲ್ಲಿವೆ. ಈ ಪೈಕಿ ಕೇವಲ 93 ಪ್ರಕರಣಗಳಲ್ಲಷ್ಟೇ ಶಿಕ್ಷೆಯಾಗಿವೆ. 1,352 ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಯಾಗಿದ್ದಾರೆ. 2018ರಲ್ಲಿ 632, 2019ರಲ್ಲಿ 436, 2020ರಲ್ಲಿ 214, 2021ರಲ್ಲಿ 70 ಪ್ರಕರಣಗಳು ಖುಲಾಸೆಯಾಗಿವೆ.

 

ಕಳೆದ 5 ವರ್ಷಗಳಲ್ಲಿ 2016ರಲ್ಲಿ 150, 2017ರಲ್ಲಿ 148, 2018ರಲ್ಲಿ 101, 2019ರಲ್ಲಿ 42, 2020ರಲ್ಲಿ 4, 2021(ಆಗಸ್ಟ್‌ 31) 1 ಮಾತ್ರ ಶಿಕ್ಷೆಯಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ 2019ರಲ್ಲಿ 4,758, 2020ರಲ್ಲಿ 4,540, 2021 (ಅಗಸ್ಟ್‌ 31) 3,154 ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ಆರೋಪಕ್ಕೆ ಗುರಿಯಾಗಿದ್ದವರ ಪೈಕಿ 2019ರಲ್ಲಿ 9,919, 2020ರಲ್ಲಿ 10,334, 2021 (ಆಗಸ್ಟ್‌ 31) 5,859 ಆರೋಪಿಗಳನ್ನು ಬಂಧಿಸಲಾಗಿದೆ.

 

 

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2012ರಲ್ಲಿ ಪೋಕ್ಸೋ ಕಾಯ್ದೆ ಜಾರಿಗೊಳಿಸಿದೆ. ಅದರಂತೆ ಮೊದಲು ರಾಜ್ಯದಲ್ಲಿನ 12 ಜಿಲ್ಲೆಗಳಲ್ಲಿ ಪೋಕ್ಸೋ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿತ್ತು.

 

ಕಳೆದ 2019ರಲ್ಲಿ ಯಾವುದೇ ಜಿಲ್ಲೆಯಲ್ಲಿ 100 ಕ್ಕಿಂತ ಹೆಚ್ಚು ಪ್ರಕರಣಗಳಿದ್ದಲ್ಲಿ ಅಲ್ಲಿಯೂ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬೇಕು ಎಂದು ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿತ್ತು. ಅದರನ್ವಯ ರಾಜ್ಯದ ಉಳಿದ 18 ಜಿಲ್ಲೆಗಳಲ್ಲಿಯೂ ಇದೀಗ ಪೋಕ್ಸೋ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳ ಪ್ರಕರಣಗಳ ವಿಚಾರಣೆಗೂ ತಲಾ ಎರಡೆರಡು ವಿಶೇಷ ನ್ಯಾಯಾಲಯಗಳನ್ನು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಸ್ಥಾಪಿಸಲಾಗಿದೆ.

 

ಸ್ವಾಮೀಜಿ ಅವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು. ಇಂಥ ಅನುಭವ ಹಲವು ವಿದ್ಯಾರ್ಥಿನಿಯರಿಗೆ ಆಗಿದ್ದರೂ ದೂರು ನೀಡಲು ಹೆದರುತ್ತಿದ್ದರು. ನಮಗೆ ಚಿತ್ರದುರ್ಗದಲ್ಲಿ ನ್ಯಾಯ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಗೆ ದೂರು ನೀಡಿದ್ದೇವೆ ಎಂದು ಹೇಳಿಕೊಂಡಿದ್ದರು,’

 

ಒಡನಾಡಿ ಸಂಸ್ಥೆಯವರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಮಕ್ಕಳ ಹೇಳಿಕೆ ಆಧರಿಸಿ ದೂರು ನೀಡಿದ್ದರು. ವಿಚಾರಣೆ ನಡೆಸಿದಾಗ ಮಕ್ಕಳು ತಮಗಾದ ಅನುಭವವನ್ನು ಸಮಿತಿ ಮುಂದೆ ದಾಖಲಿಸಿದ್ದರು. ವಿಸ್ತೃತ ವಿಚಾರಣೆ ನಂತರ ಸಮಿತಿಯು ಮೊಕದ್ದಮೆ ದಾಖಲಿಸಲು ಮಕ್ಕಳ ರಕ್ಷಣಾಧಿಕಾರಿಗೆ ಆದೇಶ ನೀಡಿತ್ತು. ಸಮಿತಿ ಅಧ್ಯಕ್ಷರಾದ  ಕಮಲ ಅವರು ರಜೆ ಇದ್ದ ಕಾರಣ  ಹಿರಿಯ ಸದಸ್ಯ ಧನಂಜಯ ಎಲಿಯೂರು, ಸದಸ್ಯರಾದ ಅಶೋಕ್ ಹಾಗೂ ಸವಿತಾಕುಮಾರಿ ವಿಚಾರಣೆ ನಡೆಸಿದ್ದನ್ನು ಸ್ಮರಿಬಹುದು.

SUPPORT THE FILE

Latest News

Related Posts