Monday | October 5, 2026 |

ದಲಿತ ಸಮುದಾಯದ ಅಪ್ರಾಪ್ತ ಬಾಲಕಿ, ಸಂತ್ರಸ್ತೆ ಎಂಬುದನ್ನೇ ಮರೆತರೇ ಮಾದಾರಾ ಚನ್ನಯ್ಯ ಶ್ರೀ?

ಬೆಂಗಳೂರು; ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಮುರುಘಾ ಶರಣರನ್ನು ಬೆಂಬಲಿಸಿ ಹೇಳಿಕೆ ನೀಡಿರುವ ಮಾದಾರಾ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರು ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯು ಸಂತ್ರಸ್ತೆ ಎಂಬುದನ್ನೇ ಮರೆತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

ಈ ಕುರಿತು ಕರ್ನಾಟಕ ಮಾಧ್ಯಮ ಅಕಾಡೆಮಿ ನಿಕಟಪೂರ್ವ ಸದಸ್ಯ ಎನ್‌ ರವಿಕುಮಾರ್‌ ಅವರು ಮಾದಾರ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ‘ಆರೋಪಿ ಸ್ಥಾನದಲ್ಲಿರುವ ಮುರುಘಾ ಶರಣರನ್ನು ಬೆಂಬಲಿಸುವ ಬಹಿರಂಗ ಹೇಳಿಕೆ ನೀಡುವ ನೀವು ತಮ್ಮದೆ ಆದ ಮಾದಿಗ ಸಮುದಾಯದ ಅಪ್ರಾಪ್ತ ಬಾಲಕಿಯೊಬ್ಬಳು ಸಂತ್ರಸ್ತೆಯಾಗಿರುವುದನ್ನು ಮರೆತುಬಿಟ್ಟಿರೇಕೆ,’ ಎಂದು ಪ್ರಶ್ನಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಆ ಹೆಣ್ಣು ಮಗು, ಮತ್ತವರ ಕುಟುಂಬ ಆರೋಪಿಯ ಬಲಿಷ್ಠ ಪ್ರಭಾವದ ಕಾವಿನಲ್ಲಿ ಹೇಗೆಲ್ಲಾ ನರಳಿ ನಲುಗುತ್ತಿರಬಹುದು ಎಂಬುದನ್ನು ನಿಸ್ಸಂಸಾರಿಯಾದ ನೀವು ಅರ್ಥಮಾಡಿಕೊಳ್ಳಲು ಸಾಧ್ಯವೇ ಎಂದೂ ಪ್ರಶ್ನಿಸಿರುವ ರವಿಕುಮಾರ್‌ ಅವರು ನ್ಯಾಯಪ್ರಜ್ಞೆಯನ್ನು ವ್ಯಕ್ತಪಡಿಸದೆ ಆರೋಪಿ ಸ್ಥಾನದಲ್ಲಿರುವ ಮುರುಘಾ ಶರಣರನ್ನು ಬೆಂಬಲಿಸ ಹೊರಟಿರುವುದು ದೌಭಾರ್ಗ್ಯದ ಸಂಗತಿ ಎಂದಿದ್ದಾರೆ.

ಬಹಿರಂಗ ಪತ್ರದಲ್ಲೇನಿದೆ?

ಪ್ರಕರಣ ತನಿಖೆಯ ಆರಂಭಿಕ ಹಂತದಲ್ಲಿರುವಾಗ ಯಾರೇ ಆದರೋ ಪ್ರಭಾವಿ ಆರೋಪಿಗೆ ಬೆಂಬಲ ನೀಡುವುದು ಸತ್ಯದ ಮೇಲೆ, ಸಹಜ ನ್ಯಾಯದ ಮೇಲೆ ದುಷ್ಪರಿಣಾಮ ಬೀರುವ ಅಥವಾ ಸಂತ್ರಸ್ತೆಯನ್ನು ಅಸಹಾಯಕಳನ್ನಾಗಿ ಮಾಡುವ ಬೆದರಿಕೆಯೂ ಆಗಿರುತ್ತದೆ.

ಮುರುಘಾಮಠಕ್ಕೆ ’ಲಿಂಗಾಯಿತ ಪರಂಪರೆ’ (ಆರ್ಥಿಕ, ರಾಜಕೀಯ, ಸಾಮಾಜಿಕವಾಗಿ ಬಲಿಷ್ಠವಾದ) ಇದೆ. ಅದು ತೀರ್ಮಾನ ಕೈಗೊಳ್ಳುತ್ತದೆ ಎಂದು ಹೆಮ್ಮೆಯಿಂದ ಹೇಳುವ ನೀವು ಸಾಮಾಜಿಕವಾಗಿ, ರಾಜಕೀಯವಾಗಿ, ಆರ್ಥಿಕವಾಗಿ ದುರ್ಬಲವಾಗಿರುವ ಮಾದಿಗ ಸಮುದಾಯದ ಅಪ್ರಾಪ್ತ ಹೆಣ್ಣುಮಗಳೊಬ್ಬಳ ಮತ್ತು ಆಕೆಯ ಕುಟುಂಬದ ಆತ್ಮಗೌರವ, ಚಾರಿತ್ರ್ಯವನ್ನು ಕಾಪಾಡುವುದು, ದಿಟ್ಟದನಿಯಲ್ಲಿ ನ್ಯಾಯ ಕೇಳುವುದು ಮತ್ತು ತನ್ನ ದುರ್ಬಲ ಸಮುದಾಯದ ಜೊತೆ ನಿಲ್ಲುವುದು ಧರ್ಮ, ನ್ಯಾಯ ಮತ್ತು ಆತ್ಮಸಾಕ್ಷಿಯ ನಡೆಯಾಗುತ್ತದೆ.

ಮುರುಘಾ ಶರಣರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾರೆ ಎನ್ನಲಾಗುತ್ತಿರುವ ಇಬ್ಬರು ಬಾಲಕಿಯರು ಹಿಂದುಳಿದ ಮತ್ತು ಮಾದಿಗ ಸಮುದಾಯಕ್ಕೆ ಸೇರಿದವರೆನ್ನೆಲಾಗಿದೆ. ಇಲ್ಲಿ ಜಾತಿ ಅಪ್ರಸ್ತುತ ನಿಜ, ಹೆಣ್ಣು ಜಾತ್ಯಾತೀತ ಮತ್ತು ಧರ್ಮಾತೀತವಾಗಿ ಸದಾ ಶೋಷಣೆಗೆ ಒಳಗಾಗುತ್ತಲೇ ಇರುತ್ತಾಳೆ. ಈ ಪ್ರಕರಣದಲ್ಲಿ ಈ ಇಬ್ಬರೂ ಹೆಣ್ಣುಮಕ್ಕಳು ಸಮಾನ ಸಂತ್ರಸ್ತರೆ ಆಗಿರುತ್ತಾರೆ. ಈ ಇಬ್ಬರಲ್ಲೂ ಜಾತಿ ಬಗೆದು ನೋಡಬೇಕಾಗಿಲ್ಲ.

ಆದರೆ ಈ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಮಾದಿಗ ಸಮುದಾಯದ ಹೆಣ್ಣುಮಗಳೊಬ್ಬಳ ಮಾನ, ಪ್ರಾಣ, ಆತ್ಮಗೌರವ, ಸಾಮಾಜಿಕ ಗೌರವ ರಕ್ಷಣೆ ಕುರಿತು ನೀವು *’ಉತ್ತರದಾಯಿ’* ಗಳು ಎಂದು ಪತ್ರದಲ್ಲಿ ಹೇಳಿದ್ದಾರೆ.

ಬಸವಣ್ಣ ಯಾವ ವೈದಿಕ  ವಿಚಾರಧಾರೆಗಳ ವಿರುದ್ದ ಬಂಡೆದ್ದು ಹೋರಾಡಿದರೂ ಅಂತಹ ವಿಚಾರಧಾರೆಯ ಅನುಯಾಯಿಗಳಿಗಿಂತಲೂ ಮಿಗಿಲಾದ ನಿಮ್ಮ ಸಡಗರ ಬಸವಣ್ಣರಿಗೆ ಬಗೆಯುತ್ತಿರುವ ದ್ರೋಹವೆಂದೆ ಭಾವಿಸಬೇಕಾದ ನಿಷ್ಠುರಕ್ಕೆ ಮಾದಿಗ ಸಮುದಾಯವನ್ನು ದೂಡಿದ್ದೀರಿ ಎಂದು ಪತ್ರದಲ್ಲಿ ರವಿಕುಮಾರ್‌ ಅವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

Hot this week

21 ಪ್ಯಾಕೇಜ್‌ ಟೆಂಡರ್ ನಲ್ಲಿ ಭ್ರಷ್ಟಾಚಾರ ಆರೋಪ; ಅಂಜುಂ ಪರ್ವೇಝ್ ಸಮಿತಿ ವರದಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು; ಹಸಿ ತ್ಯಾಜ್ಯ, ಒಣ ತಾಜ್ಯ, ನೈರ್ಮಲ್ಯ ತ್ಯಾಜ್ಯ, ರಸ್ತೆ ಗುಡಿಸುವಿಕೆ,...

ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಮನವಿ; ಸ್ಪಷ್ಟ ಅಭಿಪ್ರಾಯ ಸಲ್ಲಿಸಲು ಡಿಜಿಐಜಿಪಿಗೆ ನಿರ್ದೇಶನ

ಬೆಂಗಳೂರು;   ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧದ ಪ್ರಕರಣದಲ್ಲಿ ಸಿಐಡಿ ವಿಶೇಷ ವಿಚಾರಣೆ...

ಗೋವಿಂದರಾವ್ ವರದಿ ಶಿಫಾರಸ್ಸಿನಂತೆ ನಿಗದಿಯಾಗದ ಅನುದಾನ; ಕೃಷಿ ಇಲಾಖೆಯನ್ನೇ ನಿರ್ಲಕ್ಷ್ಯಿಸಿತೇ ಸರ್ಕಾರ?

ಬೆಂಗಳೂರು; ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಆರ್ಥಿಕ ತಜ್ಞ ಪ್ರೊ ಎಂ...

ಅನ್ನಭಾಗ್ಯ; ಫಲಾನುಭವಿಗಳ ಅರ್ಹತೆ, ಅನರ್ಹತೆ ಪರಿಶೀಲಿಸಲು ಸಿಎಜಿಗೆ ದತ್ತಾಂಶಗಳನ್ನೇ ಒದಗಿಸದ ಸರ್ಕಾರ

ಬೆಂಗಳೂರು; ಅನ್ನಭಾಗ್ಯ ಯೋಜನೆಯ ದತ್ತಾಂಶ ಆಧಾರಿತ ಲೆಕ್ಕಪರಿಶೋಧನೆಗೆ, ಬಿಪಿಎಲ್ ಮತ್ತು ಆದ್ಯತಾ...

100 ಎಕರೆ ಜಮೀನು ಮಾರಾಟ; ಕೋರಮಂಡಲ್ ಷುಗರ್ಸ್‌ ಲಿಮಿಟೆಡ್‌ ಕೋರಿಕೆಗೆ ಮನ್ನಣೆ, ಪರಭಾರೆ ನಿರ್ಬಂಧ ಸಡಿಲಿಸುವುದೇ ಸರ್ಕಾರ?

ಬೆಂಗಳೂರು; ಜಮೀನು ಮಂಜೂರು ಮಾಡಿದ ದಿನಾಂಕದಿಂದ 30 ವರ್ಷಗಳವರೆಗೆ ಮಾರಾಟ ಮಾಡಬಾರದು...
Please Scan to make Your Contribution

Topics

ವಿಮಾ ಕಂಪನಿಯಿಂದ ಹಣ ಬಂದಿದೆ, ಆದರೆ ರೈತರ ಖಾತೆಗಳಿಗೆ ಜಮೆಯೇ ಆಗಿಲ್ಲ; ಬರಗಾಲದ ನಡುವೆಯೇ ರೈತರಿಗೆ ಮತ್ತೊಂದು ಬರೆ

ಬೆಂಗಳೂರು;  ರಾಜ್ಯದಾದ್ಯಂತ ತೀವ್ರ ಬರಗಾಲ ಎದುರಾಗಿರುವ ನಡುವೆಯೇ  2025-26ನೇ ಮುಂಗಾರು ಹಂಗಾಮಿನ...

ಪ್ರಿಂಟರ್, ಸ್ಕ್ಯಾನರ್ ಕೂಡ ಲಭ್ಯವಿಲ್ಲ, ಇ-ಮೇಲ್‌ ಮಾಡಲೂ ಕಷ್ಟಸಾಧ್ಯ; ಸರ್ಕಾರದ ಆರ್ಥಿಕ ಪರಿಸ್ಥಿತಿ ತೆರೆದಿಟ್ಟ ಶಾಲಾ ಶಿಕ್ಷಣ ಸಾಕ್ಷರತೆ ಇಲಾಖೆ

ಬೆಂಗಳೂರು; ಚಾಲ್ತಿಯಲ್ಲಿರುವ ಮತ್ತು ಹೊಸ ಯೋಜನೆಗಳಿಗೆ ಅನುದಾನ ಹೊಂದಿಸಲು ಏದುಸಿರು ಬಿಡುತ್ತಿರುವ...

Related Articles

Popular Categories

error: Content is protected !!