ಕುರ್‌ಆನ್‌ ವಾಕ್ಯಗಳು ಸಂವಿಧಾನ ಆಶಯಕ್ಕೆ ವಿರುದ್ಧವಾಗಿಲ್ಲ; ಮಹತ್ವಪಡೆದುಕೊಂಡ ಸರ್ಕಾರದ ಉತ್ತರ

ಬೆಂಗಳೂರು; ಮದರಸಗಳಲ್ಲಿ ಪಾಠ ಮಾಡುತ್ತಿರುವ ಕುರ್‌ಆನ್‌  ಪುಸ್ತಕದಲ್ಲಿನ ಸುರ ಅಯತ್‌ 3.85 ಸುರ ವರ್ಸೆ 9;5, 8;12, 3;118, 3;28, 9;23, 66;9 ಮುಂತಾದ ಕುರಾನ್‌ನಲ್ಲಿರುವ ವಾಕ್ಯಗಳು ಭಾರತದ ಸಂವಿಧಾನ ಆಶಯಕ್ಕೆ ವಿರುದ್ಧವಾಗಿರುವುದಿಲ್ಲ ಎಂದು ರಾಜ್ಯ ಬಿಜೆಪಿ ಸರ್ಕಾರವೇ ಇದೀಗ ಅಧಿಕೃತವಾಗಿ ಉತ್ತರಿಸಿದೆ.
ವಿಧಾನಪರಿಷತ್‌ನ ಅಧಿವೇಶನದಲ್ಲಿ ಈ ಕುರಿತು ಸದಸ್ಯ ಎನ್‌ ರವಿಕುಮಾರ್‌ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿರುವ ಮುಜುರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಅ ಜೊಲ್ಲೆ ಅವರು ಲಿಖಿತ ಉತ್ತರ ಒದಗಿಸಿದ್ದಾರೆ.

 

ರಾಜ್ಯದ ಮದರಸಾಗಳ ಶಿಕ್ಷಣದ ಚಟುವಟಿಕೆಗಳ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಮದರಸಾಗಳ ಶಿಕ್ಷಣ ವ್ಯವಸ್ಥೆಗಾಗಿ ವಿಶೇಷ ಮಂಡಳಿ ರಚನೆಗೆ ರಾಜ್ಯ ಸರ್ಕಾರವು ಸಮಿತಿ ನಿರ್ಧರಿಸಿರುವ ಬೆನ್ನಲ್ಲೇ ಕುರಾನ್‌ ಮತ್ತು ಮದರಸಗಳ ಬಗ್ಗೆ ಸರ್ಕಾರವು ನೀಡಿರುವ ಉತ್ತರವು ಹೆಚ್ಚು ಮಹತ್ವ ಪಡೆದುಕೊಂಡಿದೆ.

 

ಉತ್ತರದಲ್ಲೇನಿದೆ?

 

ಕುರಾನ್‌ನಲ್ಲಿರುವ ವಾಕ್ಯಗಳು ಭಾರತದ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿರುವುದಿಲ್ಲ. ಕುರಾನ್‌ನಲ್ಲಿನ ವಾಕ್ಯಗಳನ್ನು ಅವುಗಳ ಹಿನ್ನೆಲೆಯೊಂದಿಗೆ ಧಾರ್ಮಿಕ ವಿದ್ವಾಂಸರು ಮಾತ್ರ ಅರ್ಥೈಯಿಸಬಹುದಾಗಿದೆ. ಮದರಸಗಳಲ್ಲಿ 3ರಿಂದ 10 ವರ್ಷಗಳ ಒಳಗಿನ ಮಕ್ಕಳಲ್ಲಿ ಸಮಾಜದ ಇತರ ಧರ್ಮಗಳ ವಿರುದ್ಧವಾದ ದ್ವೇ‍ಷ ಭಾವನೆಗಳನ್ನು ತುಂಬುವ ಇಂತಹ ಪಾಠಗಳನ್ನು ಮದರಸರಗಳಲ್ಲಿ ಮಾಡುವುದುದರಿಂದ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗವುಂಟಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿಲ್ಲ ಎಂದೂ ಉತ್ತರ ಒದಗಿಸಿದೆ.

 

 

ಮದರಸಗಳಲ್ಲಿ ಇಂತಹ ಶಿಕ್ಷಣ ಅತೀ ಸಣ್ಣ ವಯಸ್ಸಿನಲ್ಲೇ ಪಡೆಯುವ ಮಕ್ಕಳು ಸಮಾಜ ಕಂಟಕರಾಗಿ ದೇಶದ ಆಸ್ತಿ ಪಾಸ್ತಿಗಳನ್ನು ನಾಶಪಡಿಸುವುದಲ್ಲಿ ಪ್ರಮುಖರಾಗಿರುವುದು ಕೂಡ ಸರ್ಕಾರದ ಗಮನಕ್ಕೆ ಬಂದಿಲ್ಲ ಎಂದು ಲಿಖಿತ ಉತ್ತರ ನೀಡಿದೆ.

 

ಸಂಪೂರ್ಣ ಮದರಸಗಳ ಮಾಹಿತಿ ಪಡೆಯಲು ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ರಾಜ್ಯದ ಮದರಸಾಗಳ ಕುರಿತು 15 ದಿನಗಳಲ್ಲಿ ವರದಿ ನೀಡುವಂತೆ ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಸೂಚನೆ ನೀಡಿದ್ದರು. ಅಧಿಕಾರಿಗಳ ವರದಿ ಬಳಿಕ ಮುಂದಿನ ತೀರ್ಮಾನ ಮಾಡಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿತ್ತು.

 

ಮದರಸಾ ಶಿಕ್ಷಣದ ಬಗ್ಗೆ ಕರ್ನಾಟಕ ದಲ್ಲಿ ದೊಡ್ಡ ಮಟ್ಟದಲ್ಲಿ ಹಿಂದೂಸಂಘಟನೆಗಳು ಕೆಲವರು ಸಿಡಿದೆದ್ದಿದ್ದರು. ಮದರಸಾದಲ್ಲಿ ಭಯೋತ್ಪಾದನೆಯ ಪಾಠ ಹೇಳಲಾಗುತ್ತಿದೆ. ಇಸ್ಲಾಂ ಮೂಲಭೂತವಾದ ಕಲಿಸಿಕೊಡಲಾಗುತ್ತದೆ. ಅಂಕುಶ ಹಾಕಿ ಇಲ್ಲವೇ ಬ್ಯಾನ್ ಮಾಡಿ ಎನ್ನುವ ಕೂಗು ದೊಡ್ಡದಾಗಿ ಕೇಳಿಬಂದಿತ್ತು. ಬಿಜೆಪಿ ಮುಖಂಡ ಸಿಟಿ ರವಿ ಟ್ವೀಟ್ ಮಾಡಿ ಮದರಸಾ ಶಿಕ್ಷಣದ ಬಗ್ಗೆ ಬಹಿರಂಗ ಆಕ್ಷೇಪ ವ್ಯಕ್ತಪಡಿಸಿದ್ದನ್ನು ಸ್ಮರಿಸಬಹುದು.

 

ಮಂಡಳಿ ರಚನೆಗೆ ಕಾರಣ ಏನು?

 

ಕರ್ನಾಟಕದಲ್ಲಿ 900 ಮದರಸಾಗಳು ವಕ್ಫ್‌ ಬೋರ್ಡ್‌ ಅಡಿ ನೋಂದಣಿಯಾಗಿದ್ದು ಪ್ರತಿ ವರ್ಷ 10 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ. ಈ ಅನುದಾನ ಸಮರ್ಪಕವಾಗಿ ಬಳಕೆ ಆಗುತ್ತಿಲ್ಲ. ಮದರಸಾಗಳಲ್ಲಿ ಶಿಕ್ಷಣದ ಬದಲಾಗಿ ಧರ್ಮ ಬೋಧನೆಯ ಕೆಲಸ ಆಗುತ್ತಿದೆ ಎಂಬ ಆರೋಪ ಬಂದಿತ್ತು.

 

ಅಷ್ಟೇ ಅಲ್ಲದೇ ರಾಷ್ಟ್ರಗೀತೆ, ರಾಷ್ಟ್ರ ಭಾವೈಕ್ಯತೆಯ ಕಾರ್ಯಕ್ರಮಗಳು‌ ನಡೆಯುತ್ತಿಲ್ಲ. ಮದರಸಾಗಳಲ್ಲಿ ಕಲಿಯೋ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಕಂಪ್ಯೂಟರ್ ತರಬೇತಿ, ವಿಜ್ಞಾನದ ಲ್ಯಾಬ್ ಗಳು, ನೈತಿಕ ಶಿಕ್ಷಣದಂತಹ ಶೈಕ್ಷಣಿಕ ಚಟುವಟಿಕೆಗಳು ಸರಿಯಾಗಿ ನಡೆಯುತ್ತಿಲ್ಲ ಎಂಬ ಆರೋಪ ಹಿನ್ನೆಲೆಯಲ್ಲಿ ಮಂಡಳಿ ರಚನೆಗೆ ಸರ್ಕಾರ ಮುಂದಾಗಿತ್ತು.

 

ಸಮಿತಿ ಕೆಲಸ ಏನು?

 

ಮದರಸಾಗಳಲ್ಲಿ ಯಾವ ರೀತಿಯ ಶಿಕ್ಷಣ ನೀಡಲಾಗುತ್ತಿದೆ? ಸರ್ಕಾರದ ಅನುದಾನದ ಸಮರ್ಪಕ ಬಳಕೆ , ಶಿಕ್ಷಣ ಹಕ್ಕು ಕಾಯ್ದೆಯಡಿ ಮಕ್ಕಳಿಗೆ ಶಿಕ್ಷಣ ಸಿಗುತ್ತಿದ್ಯಾ? ಮದರಸಗಳಲ್ಲಿ ಧರ್ಮ ಬೋಧನೆ ಆರೋಪದ ಬಗ್ಗೆ ವರದಿ ಸಂಗ್ರಹಿಸಬೇಕು.

 

ಪಠ್ಯಗಳ ಸಿಲಬಸ್ ಹೇಗಿದೆ?

 

ಈ ಮಕ್ಕಳ ಕಲಿಕೆಗೂ ಬೇರೆ ಮಕ್ಕಳ ಕಲಿಕೆಗೂ ಇರುವ ವ್ಯತ್ಯಾಸ, ಸರ್ಕಾರದ ಅನುದಾನ ಹೊರತು ಪಡಿಸಿ ಖಾಸಗಿಯಾಗಿ ನಡೆಯುತ್ತಿರೋ ಮದರಸಾಗಳ ಕಾರ್ಯಚಟುವಟಿಕೆಗಳು ಏನು? ಖಾಸಗಿ ಮದರಸಾಗಳ ಅನುದಾನ ಮೂಲ ಏನು ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಬೇಕು. ರಾಷ್ಟ್ರೀಯ ಭಾವೈಕ್ಯತೆ ಕಾರ್ಯಕ್ರಮಗಳು, ಮೂಲಭೂತ ಕರ್ತವ್ಯಗಳ ಪಾಲನೆ ಆಗ್ತಿದೆಯಾ ಎಂಬ ವರದಿ ಸಂಗ್ರಹಿಸಬೇಕು ಎಂದು ಸೂಚಿಸಲಾಗಿದೆ.

 

ಉತ್ತರ ಪ್ರದೇಶದಲ್ಲಿ ಶಿಕ್ಷಕರು ಬಿ.ಎಡ್ ಪದವಿ ಜೊತೆಗೆ ಟಿಇಟಿ ಪರೀಕ್ಷೆ ಉತ್ತೀರ್ಣ ಕಡ್ಡಾಯ. ಮದರಸಾಗಳಲ್ಲಿ ಪೂರ್ಣ ಪ್ರಮಾಣದಲ್ಲಿ ನೀಡುತ್ತಿರುವ ಧಾರ್ಮಿಕ ಶಿಕ್ಷಣಕ್ಕೆ ಕಡಿವಾಣ. ಶೇ.20 ಮಾತ್ರ ಧಾರ್ಮಿಕ ಶಿಕ್ಷಣ, ಶೇ.80ರಷ್ಟು ಹೊಸ ಶಿಕ್ಷಣ ನೀಡಬೇಕಾಗುತ್ತದೆ.

 

ಶಿಕ್ಷಣ ಇಲಾಖೆಯ ಮೇಲುಸ್ತುವಾರಿಯಲ್ಲಿ ಪಠ್ಯಕ್ರಮ ರಚನೆಯಾಗುತ್ತದೆ. ಮದರಸಗಳಲ್ಲಿ ಒಬ್ಬ ಶಿಕ್ಷಕರು, 5ನೇ ತರಗತಿಯಲ್ಲಿ ನಾಲ್ವರು ಶಿಕ್ಷಕರು, 6-8ನೇ ತರಗತಿಗೆ ಇಬ್ಬರು ಶಿಕ್ಷಕರು, 9-10ನೇ ತರಗತಿಗೆ ಆಧುನಿಕ ಶಿಕ್ಷಣವನ್ನು ಕಲಿಸಲು ಮೂವರು ಶಿಕ್ಷಕರ ನೇಮಕ ಮಾಡಲಾಗುತ್ತದೆ. ರಾಷ್ಟ್ರಗೀತೆಯನ್ನು ಪ್ರತಿನಿತ್ಯ ಹಾಡುವುದು ಕಡ್ಡಾಯ. ಅನಧಿಕೃತ ಮದರಸಗಳನ್ನು ಮುಚ್ಚಲಾಗುತ್ತದೆ.

the fil favicon

SUPPORT THE FILE

Latest News

Related Posts