Friday | June 12, 2026 |

ಬ್ಯಾಂಕ್‌ಗಳಲ್ಲಿ 4,167 ನಕಲಿ ಕಂಪನಿಗಳ ಹೂಡಿಕೆ; ಗಮನಕ್ಕೇ ಬಂದಿಲ್ಲವೆಂದು ಸದನದ ದಾರಿತಪ್ಪಿಸಿದ ಸಚಿವ

ಬೆಂಗಳೂರು; ರಾಜ್ಯದ ನಗರ ಸಹಕಾರಿ ಬ್ಯಾಂಕ್‌ಗಳಲ್ಲಿ 4,167 ಹೆಚ್ಚು ನಕಲಿ ಕಂಪನಿಗಳು ವಹಿವಾಟು ನಡೆಸಿವೆ ಎಂದು ರಾಜ್ಯಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಸಹಕಾರ ಇಲಾಖೆಯೇ ಮಾಹಿತಿ ಒದಗಿಸಿದ್ದರೂ ಇದೀಗ ರಾಜ್ಯ ಸರ್ಕಾರದ ಗಮನಕ್ಕೇ ಬಂದಿಲ್ಲ ಎಂದು ಸಹಕಾರ ಇಲಾಖೆ ಸಚಿವ ಎಸ್‌ ಟಿ ಸೋಮಶೇಖರ್‌ ಅವರು ಸದನದ ದಾರಿತಪ್ಪಿಸಿರುವುದು ಇದೀಗ ಬಹಿರಂಗವಾಗಿದೆ.

 

ಅಲ್ಲದೆ ರಾಜ್ಯ ಸರ್ಕಾರದ ಗಮನಕ್ಕೆ ಬರದೆಯೇ 4,167ಕ್ಕೂ ಹೆಚ್ಚು ನಕಲಿ ಕಂಪನಿಗಳು ನಗರ ಸಹಕಾರಿ ಬ್ಯಾಂಕ್‌ಗಳಲ್ಲಿ ವ್ಯವಹಾರ ನಡೆಸುತ್ತಿದೆ ಎಂಬುದು ಮತ್ತೊಮ್ಮೆ ಸಾಬೀತಾದಂತಾಗಿದೆ. ಈ ಯಾವ ವ್ಯವಹಾರಗಳೂ ತನ್ನ ಗಮನಕ್ಕೆ ಬಂದಿಲ್ಲ ಎಂದು ಉತ್ತರಿಸುವ ಮೂಲಕ ರಾಜ್ಯ ಸರ್ಕಾರದ ಸಹಕಾರ ಇಲಾಖೆಯೇ ರಾಜ್ಯಮಟ್ಟದ ಸಮನ್ವಯ ಸಮಿತಿ ಸಭೆಗೆ ಮಂಡಿಸಿದ್ದ ಕಾರ್ಯಸೂಚಿ ಮತ್ತು ವಿವರಣೆಯನ್ನು ತಳ್ಳಿ ಹಾಕಿದೆ.

 

ನಗರ ಸಹಕಾರಿ ಬ್ಯಾಂಕ್‌ಗಳಲ್ಲಿ 4,167ಕ್ಕೂ ಹೆಚ್ಚು ನಕಲಿ ಕಂಪನಿಗಳು ವ್ಯವಹಾರ ನಡೆಸಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ ಮತ್ತು ಸಹಕಾರಿ ಬ್ಯಾಂಕ್‌ಗಳು ಬೇನಾಮಿ ಕಂಪನಿಗಳಿಂದ 4,754 ಕೋಟಿಗೂ ಹೆಚ್ಚು ಮೊತ್ತ ಠೇವಣಿ ಸ್ವೀಕರಿಸಿರುವ ಕುರಿತು ಸರ್ಕಾರದ ನಿಲುವಿನ ಕುರಿತು ವಿಧಾನಪರಿಷತ್‌ನ ಸದಸ್ಯ ಎನ್‌ ರವಿಕುಮಾರ್‌ ವಿಧಾನಪರಿಷತ್‌ ಅಧಿವೇಶನದಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳಿದ್ದರು.

 

ಇದಕ್ಕೆ ಉತ್ತರಿಸಿರುವ ಎಸ್‌ ಟಿ ಸೋಮಶೇಖರ್‌ ಅವರು ನಗರ ಸಹಕಾರಿ ಬ್ಯಾಂಕ್‌ಗಳಲ್ಲಿ 4,167ಕ್ಕೂ ಹೆಚ್ಚು ನಕಲಿ ಕಂಪನಿಗಳು ವ್ಯವಹಾರ ನಡೆಸಿರುವುದು ಸರ್ಕಾರದ ಗಮನಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.

 

 

ನಗರ ಸಹಕಾರ ಬ್ಯಾಂಕ್‌ಗಳು ಕರ್ನಾಟಕ ರಾಜ್ಯ ಸಹಕಾರ ಸಂಘಗಳ ಕಾಯ್ದೆ 1959ರ ಅಡಿ ನೋಂದಣಿಯಾಗಿ ಆರ್‌ಬಿಐನಿಂದ ಪರವಾನಿಗೆ ಪಡೆದು ಕಾರ್ಯನಿರ್ವಹಿಸುತ್ತಿವೆ. ಈ ಬ್ಯಾಂಕ್‌ಗಳ ವ್ಯವಹಾರಗಳನ್ನು ವಾರ್ಷಿಕ ಲೆಕ್ಕ ಪರಿಶೋಧನೆ ಹಾಗೂ ಆರ್‌ಬಿಐ ಪರಿವೀಕ್ಷಣೆ ನಡೆಸುತ್ತಿದೆ. ಈ ವರದಿಗಳಲ್ಲಿ ಆರ್ಥಿಕ ಅವ್ಯವಹಾರಗಳು ಕಂಡುಬಂದಲ್ಲಿ ಬ್ಯಾಂಕಿಂಗ್‌ ರೆಗ್ಯುಲೇಷನ್‌ ಕಾಯ್ದೆ 1949 ಹಾಗೂ ಕರ್ನಾಟಕ ಸಹಕಾರಿ ಸಂಘಗಳ ಕಾಯ್ದೆ 1959ರ ಅವಕಾಶಗಳನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಉತ್ತರಿಸಿರುವ ಎಸ್ ಟಿ ಸೋಮಶೇಖರ್‌ ಅವರು ರಾಜ್ಯಮಟ್ಟದ ಸಮನ್ವಯ ಸಮಿತಿ ಸಭೆಯ ಕಾರ್ಯಸೂಚಿಯಲ್ಲಿನ ಟಿಪ್ಪಣಿಯನ್ನೇ ಮುಚ್ಚಿಟ್ಟಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

 

ಸಮನ್ವಯ ಸಮಿತಿ ಸಭೆಗೆ ಮಂಡಿಸಿದ್ದ ವಿವರಣೆಯಲ್ಲೇನಿತ್ತು?

 

ನಕಲಿ ಕಂಪನಿಗಳು ಆದಾಯ ತೆರಿಗೆ ಕುರಿತಾದ ವಿವರಗಳನ್ನು ಸಲ್ಲಿಸದಿರುವ ಕುರಿತು ಕಾರ್ಯಸೂಚಿ ಪಟ್ಟಿಯಲ್ಲಿ ಸೇರಿಸಿತ್ತು. ಕಂಪನಿಗಳ ನೋಂದಣಿ ಇಲಾಖೆ (ಆರ್‌ಒಸಿ) ಬೆಂಗಳೂರು ವ್ಯಾಪ್ತಿಯಲ್ಲಿ ಅಕ್ರಮ ವ್ಯವಹಾರ, ಅಕ್ರಮ ಆಸ್ತಿಗಳನ್ನು ಅಡಗಿಸಿಡುವುದಕ್ಕೆ ಪೂರಕವಾಗಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ಗುರುತಿಸಲಾಗಿರುವ ಒಟ್ಟು ನಕಲಿ (ಶೆಲ್‌) ಕಂಪನಿಗಳ ಪೈಕಿ 4,167 ಕಂಪನಿಗಳು ವಾರ್ಷಿಕ ರಿಟರ್ನ್ಸ್‌ ಸಲ್ಲಿಸಿರಲಿಲ್ಲ. ಅಲ್ಲದೆ ಈ ನಕಲಿ ಕಂಪನಿಗಳು ನಗರ ಸಹಕಾರಿ ಬ್ಯಾಂಕ್‌ಗಳಲ್ಲಿಯೇ ಖಾತೆ ತೆರೆದು ಕೋಟ್ಯಂತರ ವಹಿವಾಟು ನಡೆಸಿವೆ ಎಂಬ ಸಂಗತಿಯು ರಾಜ್ಯಮಟ್ಟದ ಸಮನ್ವಯ ಸಮಿತಿಯು 2022ರ ಜೂನ್‌ 27ರ ಇಂದು ನಡೆದಿದ್ದ 56ನೇ ಸಭೆಗೆ ಸಲ್ಲಿಸಿರುವ ಕಾರ್ಯಸೂಚಿ ಪಟ್ಟಿಯಲ್ಲಿ ವಿವರಣೆ ಒದಗಿಸಿತ್ತು. ಈ ಕುರಿತು ‘ದಿ ಫೈಲ್‌’ 2022ರ ಜುಲೈ 4ರಂದೇ ವರದಿ ಪ್ರಕಟಿಸಿತ್ತು.

 

4,167 ನಕಲಿ ಕಂಪನಿಗಳಿಂದ ನಗರ ಸಹಕಾರಿ ಬ್ಯಾಂಕ್‌ಗಳಲ್ಲಿ ಹೂಡಿಕೆ; ಕೋಟ್ಯಂತರ ರು.ವಹಿವಾಟು

 

ಹಲವು ನಕಲಿ ಕಂಪನಿಗಳು ಹೊಂದಿದ್ದ ಬ್ಯಾಂಕ್‌ ಖಾತೆಗಳನ್ನು ಜಫ್ತಿ ಮಾಡಲಾಗಿದ್ದರೂ ಇನ್ನೂ ಬಹುತೇಕ ಕಂಪನಿಗಳು ರಾಜ್ಯದಲ್ಲಿ ಕಾರ್ಯಾಚರಿಸುತ್ತಿವೆ. ರಿಜಿಸ್ಟ್ರರ್‌ ಆಫ್‌ ಕಂಪನೀಸ್‌ ಮಾಹಿತಿ ಪ್ರಕಾರ ಶೆಲ್‌ ಕಂಪನಿಗಳು ನಗರ ಸಹಕಾರಿ ಬ್ಯಾಂಕ್‌ಗಳಲ್ಲಿ ಖಾತಗೆ ತೆರೆದಿವೆ. ಈ ಸಂಬಂಧ ಭಾರತೀಯ ರಿಸರ್ವ್‌ ಬ್ಯಾಂಕ್‌, ನಗರ ಸಹಕಾರಿ ಬ್ಯಾಂಕ್‌ಗಳಿಂದ ಮಾಹಿತಿಯನ್ನು ಬಯಸಿದೆ ಎಂಬುದು ಕಾರ್ಯಸೂಚಿ ಪಟ್ಟಿಯಿಂದ ತಿಳಿದು ಬಂದಿತ್ತು.

 

ಎಸ್‌ಎಲ್‌ಸಿಸಿ (ಸ್ಟೇಟ್‌ ಲೆವೆಲ್‌ ಕೋ ಆರ್ಡಿನೇಷನ್ ಕಮಿಟಿ)ಯ 54ನೇ ಸಭೆಯಲ್ಲಿ ಕಂಪನಿಗಳ ಕೆವೈಸಿ ವಿವರಗಳ ಕ್ರೋಢೀಕೃತ ಮಾಹಿತಿ ಒದಗಿಸುವ ಕುರಿತು ಚರ್ಚೆ ನಡೆದಿತ್ತು. ಆದರೆ ಬ್ಯಾಂಕ್‌ಗಳು ಈ ಮಾಹಿತಿಯನ್ನು ಆರ್‌ಬಿಐನೊಂದಿಗೆ ಹಂಚಿಕೊಂಡಿರಲಿಲ್ಲ.

 

ಅಲ್ಲದೆ 55ನೇ ಎಸ್‌ಎಲ್‌ಸಿಸಿ ಸಭೆಯಲ್ಲಿ ಸೆಬಿಯ ಯಾವೊಬ್ಬ ಪ್ರತಿನಿಧಿಯು ಹಾಜರಿರಲಿಲ್ಲ ಎಂಬುದು ಕಾರ್ಯಸೂಚಿ ಪಟ್ಟಿಯಿಂದ ಗೊತ್ತಾಗಿದೆ. ಅಲ್ಲದೆ ನಗರ ಸಹಕಾರಿ ಬ್ಯಾಂಕ್‌ಗಳಲ್ಲಿ ನಕಲಿ ಕಂಪನಿಗಳು ಹೂಡಿಕೆ ಮಾಡಿವೆ ಎಂದು ಆರ್‌ಬಿಐ ಸರ್ಕಾರದ ಗಮನಕ್ಕೆ ತಂದಿದ್ದರೂ ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‌ ಅವರು ಈ ಕುರಿತು ಗಂಭೀರ ಕ್ರಮ ಕೈಗೊಂಡಿಲ್ಲ ಎಂದು ಗೊತ್ತಾಗಿದೆ.

 

ಸಂಸತ್‌ ಅಧಿವೇಶನದಲ್ಲಿ ಕೇಳಲಾಗಿದ್ದ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದ ಕಂಪನಿ ವ್ಯವಹಾರಗಳ ಕೇಂದ್ರ ಸಚಿವಾಲಯವು ನೀಡಿದ್ದ ಮಾಹಿತಿ ಪ್ರಕಾರ ಆರ್‌ಒಸಿ ಬೆಂಗಳೂರು ವ್ಯಾಪ್ತಿಯಲ್ಲಿಯೇ 11,185 ಶೆಲ್‌ ಕಂಪನಿಗಳಿದ್ದವು. ಅಲ್ಲದೆ ದೇಶದಲ್ಲಿ 2018ರಿಂದ 2021ರ ಅವಧಿಯಲ್ಲಿ 2,38,223 ಶೆಲ್‌ ಕಂಪನಿಗಳಿವೆ ಎಂದು ಕೇಂದ್ರ ಸರ್ಕಾರವು ಗುರುತಿಸಿದ್ದನ್ನು ಸ್ಮರಿಸಬಹುದು.

Hot this week

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

Related Articles

Popular Categories

error: Content is protected !!