Thursday | July 16, 2026 |

ವಿಶೇಷ ಚೇತನರಿಗೆ ಸೌಲಭ್ಯ ; ಸಾಧನ ಯೋಜನೆಯಡಿ ಕೇವಲ 16 ಫಲಾನುಭವಿಗಳಿಗಷ್ಟೇ ಸಲಕರಣೆ ವಿತರಣೆ

ಬೆಂಗಳೂರು; ತ್ರಿಚಕ್ರ ವಾಹನ, ಲ್ಯಾಪ್‌ಟಾಪ್ ಸೇರಿದಂತೆ ಇನ್ನಿತರೆ ಸಾಧನ ಸಲಕರಣೆಗಳನ್ನು ವಿಶೇಷ ಚೇತನರಿಗೆ ನಿಗದಿತ ಅವಧಿಯೊಳಗೆ ನೀಡದೇ ಶಾಸಕರ ಅನುಮತಿಯಿಲ್ಲದೇ ಅಧಿಕಾರಿಗಳು ಸರಬರಾಜು ಮಾಡುತ್ತಿಲ್ಲ ಎಂಬ ಗುರುತರವಾದ ಆರೋಪಗಳ ಕೇಳಿ ಬಂದಿರುವ ನಡುವೆಯೇ 2021-22ನೇ ಸಾಲಿನ ಹಣಕಾಸಿನ ವರ್ಷದ ಡಿಸೆಂಬರ್ ಅಂತ್ಯಕ್ಕೆ ಸಾಧನೆ ಯೋಜನೆಯಡಿ ಕೇವಲ 16 ಫಲಾನುಭವಿಗಳಿಗಷ್ಟೇ ಸಾಧನ ಸಲಕರಣೆಗಳನ್ನು ವಿತರಿಸಿದೆ. ಅ ಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸುವ ಅಂಗವಿಕಲ ಕ್ರೀಡಾಪಟುಗಳಿಗೆ ಧನ ಸಹಾಯ ನಿರೀಕ್ಷಿಸಿದ್ದ ವಿಶೇಷ ಚೇತನರು ತೊಂದರೆ ಅನುಭವಿಸಿರುವುದು ಇದೀಗ ಬಹಿರಂಗವಾಗಿದೆ.

ವಿಧಾನಪರಿಷತ್‌ ಅಧಿವೇಶನದಲ್ಲಿ ಸದಸ್ಯ ಎನ್‌ ರವಿಕುಮಾರ್‌ ಅವರು ಕೇಳಿದ್ದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿರುವ ಸಚಿವ ಹಾಲಪ್ಪ ಆಚಾರ್‌ ಅವರು ಈ ಮಾಹಿತಿಯನ್ನು ಒದಗಿಸಿದ್ದಾರೆ.

2020-21ನೇ ಸಾಲಿನಲ್ಲಿ 7,314 ವಿಶೇಷ ಚೇತನರಿಗೆ 2,220.00 ಲಕ್ಷ ರು. ವೆಚ್ಚ ಮಾಡಿರುವ ಇಲಾಖೆಯು ಡಿಸೆಂಬರ್‌ ಅಂತ್ಯಕ್ಕೆ ಗುರುತಿಸಲಾಗಿದ್ದ ವಿಶೇಷ ಚೇತನ ಫಲಾನುಭವಿಗಳಿಗೆ ಪ್ರತಿಯಾಗಿ ಕೇವಲ 16 ಫಲಾನುಭವಿಗಳಿಗೆ ಮಾತ್ರವೇ 69.55 ಲಕ್ಷ ರು. ವೆಚ್ಚ ಮಾಡಿದೆ.

2021-22ನೇ ಸಾಲಿನ ಹಣಕಾಸು ವರ್ಷದ ಕ್ರಿಯಾ ಯೋಜನೆಯಲ್ಲಿ ವಿವಿಧ ಫಲಾನುಭವಿ ಆಧರಿತ ಯೋಜನೆಗಳಡಿ ಒಟ್ಟು 2,20.00 ಲಕ್ಷ ರು.ಗಳನ್ನು ಆಯವ್ಯಯದಲ್ಲಿ ಒದಗಿಸಲಾಗಿತ್ತು. ಒಟ್ಟು 8,435 ಫಲಾನುಭವಿಗಳನ್ನು ಗುರುತಿಸಲಾಗಿತ್ತು. ಈ ಪೈಕಿ 8,681 ಸಲಕರಣೆಗಳನ್ನು ವಿತರಿಸಿದೆ. ಅದೇ ರೀತಿ ಡಿಸೆಂಬರ್‌ 2021ರ ಅಂತ್ಯಕ್ಕೆ ಸಾಧನ ಸಲಕರಣೆ ಯೋಜನೆಯಡಿ 1,815 ಫಲಾನುಭವಿಗಳಿಗೆ ಹಾಗೂ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸುವ ಅಂಗವಿಕಲ ಕ್ರೀಡಾ ಪಟುಗಳಿಗೆ ಧನಸಹಾಯ ಮಾಡುವ ಸಾಧನ ಯೋಜನೆಯಡಿ 16 ಫಲಾನುಭವಿಗಳಿಗೆ ಸೌಲಭ್ಯ ನೀಡಲಾಗಿದೆ ಎಂದು ಉತ್ತರಿಸಿದ್ದಾರೆ.

ಸಾಧನ ಸಲಕರಣೆಗಳಿಗಾಗಿ 248.50 ಲಕ್ಷ ರು., ಲ್ಯಾಪ್‌ಟಾಪ್‌ ಒದಗಿಸಲು 399.50 ಲಕ್ಷ ರು., ಯಂತ್ರಚಾಲಿತ ದ್ವಿಚಕ್ರ ವಾಹನಗಳಿಗಾಗಿ 1,350.00 ಲಕ್ಷ ರು., ಶ್ರವಣ ದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ವಿತರಿಸಲು 72.00 ಲಕ್ಷ ರು., ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್‌ ಮೊಬೈಲ್‌, ಬ್ರೈಲ್‌ ವಾಚ್‌, ವಾಕಿಂಗ್‌ ಸ್ಟಿಕ್‌ ಇನ್ನಿತರೆ ಕಿಟ್‌ಗಳಿಗೆ 100.00 ಲಕ್ಷ ರು., ಸಾಧನೆ ಯೋಜನೆಯಡಿ 50.00 ಲಕ್ಷ ರು.ಗಳನ್ನು ಆಯವ್ಯಯದಲ್ಲಿ ಅನುದಾನ ನಿಗದಿಪಡಿಸಲಾಗಿತ್ತು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಯಂತ್ರಚಾಲಿತ ತ್ರಿಚಕ್ರ ವಾಹನಗಳನ್ನು ವಿತರಿಸಲು ಸಚಿವ ಮಾಧುಸ್ವಾಮಿ ಅವರ ಆಪ್ತ ಸಹಾಯಕರು ಲಂಚಕ್ಕೆ ಬೇಡಿಕೆ ಇರಿಸಿದ್ದರು. ಈ ಕುರಿತು ಫಲಾನುಭವಿಯೊಬ್ಬರು ಅಧಿಕಾರಿಯೊಬ್ಬರೊಂದಿಗೆ ನಡೆದಿದ್ದ ಸಂಭಾಷಣೆಯು ಸೋರಿಕೆಯಾಗಿದ್ದನ್ನು ಸ್ಮರಿಸಬಹುದು.

Hot this week

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!