Thursday | March 26, 2026 |

ನಕಲಿ ಪ್ರಮಾಣಪತ್ರ ಸೃಷ್ಟಿಸಿ ಶಿಕ್ಷಕರ ನೇಮಕ ಪ್ರಕರಣ; ಮೇಲ್ಮನವಿ ಸಲ್ಲಿಸಲು ಲೋಕಾಯುಕ್ತದಲ್ಲೇ ಒಮ್ಮತವಿಲ್ಲ

Support THE-FILE

spot_img

ಬೆಂಗಳೂರು; ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ ಮಾಜಿ ಸೈನಿಕರ ಕೋಟಾದಡಿಯಲ್ಲಿ 22 ಮಂದಿಯನ್ನು ಶಿಕ್ಷಕರನ್ನಾಗಿ ನೇಮಿಸಿರುವ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸುವ ಸಂಬಂಧ ಲೋಕಾಯುಕ್ತ ಕಾನೂನು ಕೋಶ ಮತ್ತು ಲೋಕಾಯುಕ್ತದ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ನಡುವೆ ಒಮ್ಮತ ಇಲ್ಲದಿರುವುದು ಇದೀಗ ಬಹಿರಂಗವಾಗಿದೆ.

 

ಸರ್ವೋಚ್ಛ ನ್ಯಾಯಾಲಯದಲ್ಲಿ ಸಲ್ಲಿಸಬೇಕಾಗಿರುವ ಮತ್ತು ಈಗಾಗಲೇ ಸಲ್ಲಿಸಲಾಗಿರುವ ಎಸ್‌ಎಲ್‌ಪಿಗಳನ್ನು ಪರಿಶೀಲಿಸುವ ಸಂಬಂಧ 2022ರ ಸೆ.17ರಂದು ನಡೆದಿದ್ದ ಪರಿಶೀಲನಾ ಸಭೆಯಲ್ಲಿ ಲೋಕಾಯುಕ್ತ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಮತ್ತು ಲೋಕಾಯುಕ್ತ ಕಾನೂನು ಕೋಶದ ಭಿನ್ನ ಆಭಿಪ್ರಾಯಗಳನ್ನು ತಳೆದಿರುವುದರ ಕುರಿತು ಚರ್ಚೆಯಾಗಿದೆ. ಈ ಸಭೆಯ ನಡವಳಿಗಳು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

‘ಪ್ರಕರಣದಲ್ಲಿ ಲೋಕಾಯುಕ್ತ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಅವರು ಪ್ರಕರಣವು ಮೇಲ್ಮನವಿ ಸಲ್ಲಿಸಲು ಅರ್ಹವಿಲ್ಲವೆಂದು ಅಭಿಪ್ರಾಯಪಟ್ಟಿರುತ್ತಾರೆ. ಲೋಕಾಯುಕ್ತ ಕಾನೂನು ಕೋಶದ ಮುಖ್ಯಸ್ಥರು ಈ ಪ್ರಕರಣವು ಮೇಲ್ಮನವಿ ಸಲ್ಲಿಸಲು ಅರ್ಹವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಅಭಿಪ್ರಾಯವನ್ನು ಲೋಕಾಯುಕ್ತರು ಅನುಮೋದಿಸಿರುತ್ತಾರೆ. ಹಾಗೆಯೇ ಒಂದನೇ ಅಪರ ವಾದೇಕ್ಷಕರು ಪ್ರಕರಣವು ಮೇಲ್ಮನವಿ ಸಲ್ಲಿಸಲು ಅರ್ಹವಿಲ್ಲವೆಂದು ಅಭಿಪ್ರಾಯಪಟ್ಟಿರುತ್ತಾರೆ ,’ ಎಂದು ನಡವಳಿಯಲ್ಲಿ ಉಲ್ಲೇಖಿಸಲಾಗಿದೆ.

 

ಈ ಪ್ರಕರಣದಲ್ಲಿ ಅರ್ಜಿದಾರ ಶ್ರೀಕಾಂತ್‌ ಮತ್ತು ಆಯ್ಕೆ ಪ್ರಾಧಿಕಾರದ ಸದಸ್ಯರು 2006-7ಮತ್ತು 2007-08ನೇ ವರ್ಷದಲ್ಲಿ 22 ಜನರನ್ನು ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ ಮಾಜಿ ಸೈನಿಕ ಕೋಟಾದಡಿಯಲ್ಲಿ ನೇಮಕಾತಿ ಮಾಡಿಕೊಂಡಿದ್ದರು. ಇದು ಲೋಕಾಯುಕ್ತದಲ್ಲಿ ಮೊಕದ್ದಮೆ (ಕ್ರೈಂ ನಂ 04/2014) ದಾಖಲಾಗಿತ್ತು. ಪ್ರಕರಣವು 2006-07 ಮತ್ತು 2007-08ನೇ ವರ್ಷಕ್ಕೆ ಸಂಬಂಧಿಸಿದ್ದಾಗಿದ್ದರಿಂದ ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಕಲಂ 8(2)ರ ಅನ್ವಯ ಪ್ರಕರಣದ ತನಿಖೆಯನ್ನು ನಡೆಸುವಂತಿಲ್ಲ. ಹೀಗಾಗಿ ಈ ಪ್ರಕರಣದಲ್ಲಿನ ನಡವಳಿಗಳನ್ನು ಮುಂದುವರೆಸುವುದು ವ್ಯರ್ಥ ಎಂದು ಅಭಿಪ್ರಾಯಪಟ್ಟಿದ್ದ ಹೈಕೋರ್ಟ್‌ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿತ್ತು ಎಂಬುದು ನಡವಳಿಯಿಂದ ತಿಳಿದು ಬಂದಿದೆ.

 

ಅಲ್ಲದೆ ಪ್ರಕರಣದ ಸಂಬಂಧಿಸಿದ ವ್ಯಾಪ್ತಿಯು ಪೊಲೀಸ್‌ ಠಾಣೆಯಲ್ಲಿ ವರದಿ ದಾಖಲು ಮಾಡಲು ಮತ್ತು ವ್ಯಾಪ್ತಿಯ ಪೊಲೀಸ್‌ ಠಾಣೆಯು ಕ್ರಮಕೈಗೊಳ್ಳಲು ಮಿತಿ ಅನ್ವಯವಾಗುವುದಿಲ್ಲ. ಭಾರತೀಯ ದಂಡ ಸಂಹಿತೆ ಕಲಂ 420ಕ್ಕೆ ಸಂಬಂಧಿಸಿದಂತೆ ಸಂಜ್ಞೆಯ ತೆಗೆದುಕೊಳ್ಳುವುದಕ್ಕೆ ಅಡ್ಡಿ ಇಲ್ಲ. ಹೀಗಾಗಿ ಉಚ್ಛ ನ್ಯಾಯಾಲಯವು ಕಾನೂನು ರೀತಿಯಂತೆ ಕ್ರಮ ಕೈಗೊಳ್ಳುವ ಸ್ವಾತಂತ್ರ್ಯವನ್ನು ಲೋಕಾಯುಕ್ತ/ಪ್ರತಿವಾದಿಗಳಿಗೆ ಕಾಯ್ದಿರಿಸಿ ಆದೇಶ ಮಾಡಿತ್ತು ಎಂಬುದು ನಡವಳಿಯಿಂದ ಗೊತ್ತಾಗಿದೆ.

 

ಪ್ರಕರಣದ ಹಿನ್ನೆಲೆ

 

2006-07ರಿಂದ 2009-10ನೇ ಸಾಲಿನಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಮಾಜಿ ಸೈನಿಕರ/ಅವಲಂಬಿತರ ಖೋಟಾದಡಿಇಯಲ್ಲಿ ನಕಲಿ ಸೃಷ್ಟಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ಎಸಗಿರುವ ಆರೋಪದಡಿಯಲ್ಲಿ ಯಾದಗಿರಿಯ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯ ಪ್ರಾಂಶುಪಾಲರೂ ಸೇರಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ,ನೌಕರರೂ ಗುರಿಯಾಗಿದ್ದಾರೆ.

 

ಸಾರ್ವಜನಿಕ ಶಿಕ್ಷಣ ಇಲಾಖೆಯ ಹೊಸದುರ್ಗ ಉಪನಿರ್ದೇಶಕರ ಕಚೇರಿಯಲ್ಲಿನ ಹಿಂದಿನ ಪ್ರಥಮದರ್ಜೆ ಸಹಾಯಕ ಶ್ರೀಕಾಂತ( ಯಾದಗಿರಿಯಲ್ಲಿ ಪ್ರಸ್ತುತ ಸೇವೆ) ಮತ್ತು ಶಹಾಪೂರ ತಾಲೂಕಿನ ದೋರನಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಪ್ರಥಮದರ್ಜೆ ಸಹಾಯಕರ ಅವರ ಮುಂದಿನ ಎರಡು ವಾರ್ಷಿಕ ವೇತನ ಬಡ್ತಿಗಳನ್ನು ತಡೆಹಿಡಿದು ದಂಡನೆ ವಿಧಿಸಿರುವುದು ಪತ್ರದಿಂದ ತಿಳಿದು ಬಂದಿದೆ.

 

ಅಲ್ಲದೆ ಈ ಪ್ರಕರಣದ ಕುರಿತು ಆಪಾದಿತರಿಗೆ ಕಠಿಣ ದಂಡನೆ ವಿಧಿಸಲು ಯಾವುದೇ ಹೊಸ ಅಂಶಗಳನ್ನೂ ಅಧಿಕಾರಿಗಳು ಸರ್ಕಾರಕ್ಕೆ ಮಂಡಿಸಿಲ್ಲ. ವಿಚಾರಣೆ ವರದಿಯಲ್ಲಿನ ಅಂಶಗಳನ್ನು ಹೊರತುಪಡಿಸಿ ದಂಡನೆ ಪರಿಷ್ಕರಣೆ ಮಾಡಲು ಹೊಸ ಅಂಶಗಳನ್ನೂ ಸಲ್ಲಿಸಿಲ್ಲ.

 

ಆದರೆ ಈ ಪ್ರಕರಣವನ್ನು ಪುನರ್‌ ಪರಿಶೀಲಿಸಿಲು ವಿಚಾರಣೆ ವರದಿಯಲ್ಲಿನ ಅಂಶಗಳನ್ನು ಹೊರತುಪಡಿಸಿ ಕರ್ನಾಟಕ ನಾಗರಿಕ ಸೇವಾ(ಸಿಸಿಎ) ನಿಯಮಗಳು 1957ರ ನಿಯಮ 26ರಲ್ಲಿ ಹೇಳಿರುವಂತೆ ದಂಡನಾ ಆದೇಶವನ್ನು ಪುನರಾವಲೋಕಿಸಲು ಯಾವುದೇ ಸೂಕ್ತ ದಾಖಲೆಗಳು, ಪುರಾವೆಗಳು, ಹೊಸ ಅಂಶಗಳು ಮತ್ತು ಸಾಕಷ್ಟು ಸಕಾರಣಗಳು ಕಂಡುಬರುತ್ತಿಲ್ಲ ಎಂದೂ ಸಚಿವಾಲಯದ ಅಧಿಕಾರಿಗಳು ನಿಲುವು ತಳೆದಿರುವುದು ಪತ್ರದಿಂದ ಗೊತ್ತಾಗಿದೆ.

 

‘ಈ ಪ್ರಕರಣದ ಕುರಿತು ಆಪಾದಿತರಿಗೆ ಕಠಿಣ ದಂಡನೆ ವಿಧಿಸಲು ವಿಚಾರಣಾಧಿಕಾರಿಗಳ ವಿಚಾರನೆ ವರದಿಯಲ್ಲಿನ ಅಂಶಗಳನ್ನು ಹೊರತುಪಡಿಸಿ ಈ ಪ್ರಕರಣವನ್ನು ಪುನರ್‌ ಪರಿಶೀಲಿಸಲು ಕರ್ನಾಟಕ ನಾಗರೀಕ ಸೇವಾ (ಸಿಸಿಎ) ನಿಯಮಗಳು 1957ರ ನಿಯಮ 26ರಲ್ಲಿ ತಿಳಿಸಿರುವಂತೆ ತಮ್ಮ ಶಿಫಾರಸ್ಸಿಗೆ ಪೂರಕವಾದ ಹೊಸ ಅಂಶ, ಪುರಾವೆಗಳೊಂದಿಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಲ್ಲಿ ನಿಯಮಾನುಸಾರ ಪರಿಶೀಲಿಸಲಾಗುವುದು,’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಕಲ್ಬುರ್ಗಿಯ ಹೆಚ್ಚುವರಿ ಆಯುಕ್ತರಿಗೆ ನಿರ್ದೇಶಿಸಿರುವುದು ಪತ್ರದಿಂದ ತಿಳಿದು ಬಂದಿದೆ.

 

ತುಮಕೂರು, ಕೋಲಾರ ಜಿಲ್ಲೆಯಲ್ಲಿನ ಶಿಕ್ಷಕರ ನೇಮಕಾತಿಯಲ್ಲಿನ ಅಕ್ರಮವನ್ನು ಹೊರಗೆಳೆದಿದ್ದ ಲಂಚಮುಕ್ತ ನಿರ್ಮಾಣ ಕರ್ನಾಟಕ ವೇದಿಕೆಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಭಟ್ಟರಹಳ್ಳಿ ಅವರು ಮುಖ್ಯಮಂತ್ರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ, ಪ್ರಧಾನ ಕಾರ್ಯದರ್ಶಿಗಳಿಗೆ ಲಿಖಿತ ದೂರು ನೀಡಿದ್ದರು. ಇದೀಗ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯು ಸರ್ಕಾರಕ್ಕೆ ಮತ್ತಷ್ಟು ಮಾಹಿತಿಗಳನ್ನು ಹಂಚಿಕೊಂಡಿದ್ದನ್ನು ಸ್ಮರಿಸಬಹುದು. ಈ ದೂರನ್ನಾಧರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ ಸಿ ನಾಗೇಶ್‌ ಅವರು ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿದ್ದನ್ನು ಸ್ಮರಿಸಬಹುದು.

 

ಕೋಲಾರ ಜಿಲ್ಲೆಯೊಂದರಲ್ಲೇ 9 ಮಂದಿ ಶಿಕ್ಷಕರು ಅಕ್ರಮವಾಗಿ ನೇಮಕವಾಗಿದ್ದಾರೆ ಎಂದು ಲಂಚಮುಕ್ತ ನಿರ್ಮಾಣ ಕರ್ನಾಟಕ ವೇದಿಕೆಯು ಸರ್ಕಾರಕ್ಕೆ ಪಟ್ಟಿಯನ್ನು ಒದಗಿಸಿದೆ. ಈ ಶಿಕ್ಷಕರ ಸೇವಾ ಹಿರಿತನಕ್ಕೆ ಸಂಬಂಧಿಸಿದಂತೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಶಿಕ್ಷಕರ ಹೆಸರುಗಳಿರಲಿಲ್ಲ ಎಂದು ವೇದಿಕೆಯು ಸರ್ಕಾರದ ಗಮನಕ್ಕೆ ತಂದಿತ್ತು.

Hot this week

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

Topics

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

Related Articles

Popular Categories

error: Content is protected !!