Saturday | October 3, 2026 |

ನಿಯಮ ಉಲ್ಲಂಘಿಸಿ ರಾಷ್ಟ್ರೋತ್ಥಾನ ಪರಿಷತ್‌ಗೆ ಸಿ ಎ ನಿವೇಶನ ; ಬೊಕ್ಕಸಕ್ಕೆ 7.50 ಕೋಟಿ ನಷ್ಟ

ಬೆಂಗಳೂರು; ನಾಗರಿಕ ಸೌಲಭ್ಯ ನಿವೇಶನವನ್ನು ರಿಯಾಯಿತಿ ದರದಲ್ಲಿ ಹಂಚಿಕೆಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲದಿದ್ದರೂ ನಿಯಮಬಾಹಿರವಾಗಿ ಬಳ್ಳಾರಿಯ ಕುವೆಂಪು ನಗರದ ಬಡಾವಣೆಯಲ್ಲಿನ ಬಹುಕೋಟಿ ಬೆಲೆಬಾಳುವ 5.92 ಎಕರೆ ವಿಸ್ತೀರ್ಣದ ಪೈಕಿ 24,008 ಚ.ಮೀ ವಿಸ್ತೀರ್ಣದ ನಾಗರಿಕ ಸೌಲಭ್ಯ ನಿವೇಶನವನ್ನು ನಿಯಮಬಾಹಿರವಾಗಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ರಾಜ್ಯ ಬಿಜೆಪಿ ಸರ್ಕಾರವು ರಾಷ್ಟ್ರೋತ್ಥಾನ ಪರಿಷತ್‌ಗೆ ಶೇ.25ರ ದರದಲ್ಲಿ 30 ವರ್ಷಗಳಿಗೆ ಗುತ್ತಿಗೆ ನೀಡಿದೆ. ಇದರಿಂದ ಬೊಕ್ಕಸಕ್ಕೆ ಅಂದಾಜು 7.50 ಕೋಟಿ ನಷ್ಟ ಸಂಭವಿಸಿದೆ.

 

ಬೆಂಗಳೂರಿನ ಚಾಮರಾಜಪೇಟೆಯ ಕೇಶವಶಿಲ್ಪದಲ್ಲಿರುವ ರಾಷ್ಟ್ರೋತ್ಥಾನ ಪರಿಷತ್‌ಗೆ ಬೆಂಗಳೂರು ನಗರ ಜಿಲ್ಲೆ ಸೇರಿದಂತೆ ವಿವಿಧೆಡೆ ಗೋಮಾಳವನ್ನು ಕಾನೂನು ಇಲಾಖೆಯ ವಿರೋಧದ ನಡುವೆ ಮತ್ತು ಪ್ರಚಲಿತ ಮಾರುಕಟ್ಟೆ ದರಕ್ಕಿಂತಲೂ ಚಿಲ್ಲರೆ ದರಕ್ಕೆ ಮಂಜೂರು ಮಾಡಿರುವ ರಾಜ್ಯ ಸರ್ಕಾರವು ಬಳ್ಳಾರಿ ನಗರದಲ್ಲಿಯೂ ನಿಯಮಬಾಹಿರವಾಗಿ ಒಟ್ಟಾರೆ 24,008.00 ಚ ಮೀ ವಿಸ್ತೀರ್ಣದ ನಾಗರಿಕ ಸೌಲಭ್ಯದ ನಿವೇಶನವನ್ನು 30 ವರ್ಷ ಅವಧಿಗೆ ಗುತ್ತಿಗೆ ಮಂಜೂರು ಮಾಡಿ ಸಂಘ ನಿಷ್ಠೆಯನ್ನು ಮೆರೆದಿದೆ. ಈ ಸಂಬಂಧ ‘ದಿ ಫೈಲ್‌’ ಆರ್‌ಟಿಐ ಅಡಿಯಲ್ಲಿ ಸಮಗ್ರ ದಾಖಲಾತಿಗಳನ್ನು ಪಡೆದುಕೊಂಡಿದೆ.

 

ಅಂಗವಿಕಲರ ಹಾಗೂ ಬುದ್ಧಿಮಾಂದ್ಯರ ಕಲ್ಯಾಣಕ್ಕಾಗಿ ಸ್ಥಾಪಿಸಲಾದ ಸಂಸ್ಥೆಗಳಿಗೆ, ಕನ್ನಡ ಮಾಧ್ಯಮದಲ್ಲಿ ಶಾಲೆ ನಡೆಸುವ ಸಂಸ್ಥೆಗಳಿಗೆ ಮತ್ತು ಕೇಂದ್ರ, ರಾಜ್ಯ ಸರ್ಕಾರದ ಅಂಗ ಸಂಸ್ಥೆಗಳಿಗೆ ಮಾತ್ರ ಪ್ರಾಧಿಕಾರವು ನಿಗದಿಪಡಿಸಿದ ಮೊತ್ತದ ಶೇ.50ರ ದರದಲ್ಲಿ ನಾಗರಿಕ ಸೌಲಭ್ಯ ನಿವೇಶನವನ್ನು ಮಂಜೂರು ಮಾಡಲು ಅವಕಾಶವಿದೆ. ಆದರೆ ಇತರೆ ಸಂಘ ಸಂಸ್ಥೆಗಳಿಗೆ ನಿಗದಿತ ಮೊತ್ತಕ್ಕೆ ರಿಯಾಯಿತಿ ನೀಡಲು ನಿಯಮಗಳಲ್ಲಿ ಅವಕಾಶವಿಲ್ಲ ಎಂದು ಇಲಾಖೆಯು ನೀಡಿದ್ದ ಸ್ಪಷ್ಟ ಅಭಿಪ್ರಾಯವನ್ನು ಬದಿಗೆ ಸರಿಸಿದೆ.

 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರ ಒತ್ತಡಕ್ಕೆ ಮಣಿದ ಇಲಾಖೆಯು ನಿಯಮ ಉಲ್ಲಂಘಿಸಿ ಬಹುಕೋಟಿ ಬೆಲೆ ಬಾಳುವ ಜಮೀನನ್ನು ಪ್ರಚಲಿತ ಮಾರುಕಟ್ಟೆ ದರ ಶೇ. 25ರಷ್ಟು ದರಕ್ಕೆ ಮಂಜೂರು ಮಾಡಿದೆ.

 

ಬಳ್ಳಾರಿಯಲ್ಲಿ ನಾಗರಿಕ ಸೌಲಭ್ಯ ನಿವೇಶನವನ್ನು ರಿಯಾಯಿತಿ ದರದಲ್ಲಿ ಮಂಜೂರು ಮಾಡಿಸಿಕೊಳ್ಳಲು ಒತ್ತಡ ಹೇರಿದ್ದ ರಾಷ್ಟ್ರೋತ್ಥಾನ ಪರಿಷತ್‌, ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರವು ಸ್ವಕುಳಸಾಳಿ ಸಮಾಜ, ಮಡಿವಾಳ ಮಾಚಿದೇವ ಸಂಘ, ಜಿಲ್ಲಾ ಒಕ್ಕಲಿಗರ ಸಂಘ, ಪದ್ಮಶಾಲಿ ಸಮಾಜ, ಮಸ್ಜೀದ್‌-ಎ-ಅಕ್ಷಾ ತಂಜೀಮ್‌ ಸಮಿತಿ, ಮುಸ್ಲಿಂ ಎಜುಕೇಷನ್‌ ಫಂಡ್‌ ಅಸೋಸಿಯೇಷನ್‌, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸಮಾಜಕ್ಕೆ ಶೇ. 10ರ ದರದಲ್ಲಿ ಮಂಜೂರು ಮಾಡಿರುವುದನ್ನು ಉಲ್ಲೇಖಿಸಿ ಬಳ್ಳಾರಿಯಲ್ಲಿ ನಾಗರಿಕ ಸೌಲಭ್ಯ ನಿವೇಶನವನ್ನು ಮಂಜೂರು ಮಾಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

 

ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ್‌ ಸಿಂಗ್‌, ಬಳ್ಳಾರಿ ನಗರದ ಶಾಸಕ ಜಿ ಸೋಮಶೇಖರ್‌ ರೆಡ್ಡಿ, ಸಂಸದ ವೈ ದೇವೇಂದ್ರಪ್ಪ ಅವರು ರಾಷ್ಟ್ರೋತ್ಥಾನ ಪರಿಷತ್‌ಗೆ ರಿಯಾಯಿತಿ ದರದಲ್ಲಿ ಸಿ ಎ ನಿವೇಶನವನ್ನು ಮಂಜೂರು ಮಾಡಿಕೊಡಲು ಶಿಫಾರಸ್ಸು ಪತ್ರ ನೀಡಿರುವುದು ಆರ್‌ಟಿಐ ದಾಖಲೆಗಳಿಂದ ತಿಳಿದು ಬಂದಿದೆ.

 

ಸಿ ಎ ನಿವೇಶನಕ್ಕೆ ರಾಷ್ಟ್ರೊತ್ಥಾನ ಪರಿಷತ್‌ ಪ್ರಧಾನ ಕಾರ್ಯದರ್ಶಿ ನಾ ದಿನೇಶ್‌ ಹೆಗ್ಡೆ ಅವರು 2021ರ ಮೇ 16ರಂದು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದರು. ಶೈಕ್ಷಣಿಕ ಉದ್ದೇಶಕ್ಕಾಗಿ ಕಟ್ಟಡ ನಿರ್ಮಿಸಲು ನಾಗರಿಕ ಸೌಲಭ್ಯ ನಿವೇಶನ ಮಂಜೂರಾತಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ್ದ ಪ್ರಾಧಿಕಾರವು 2021ರ ಆಗಸ್ಟ್‌ 18ರಂದು ಸಭೆ ನಡೆಸಿತ್ತು. ‘ ಬಳ್ಳಾರಿ ನಗರದ ಕುವೆಂಪು ನಗರದ ಬಡಾವಣೆಯಲ್ಲಿ ಒಟ್ಟು 5.92 ಎಕರೆಯಲ್ಲಿನ ಪೈಕಿ 24,008.00 ವಿಸ್ತೀರ್ಣದ ನಾಗರಿಕ ಸೌಲಭ್ಯ ನಿವೇಶನಕ್ಕೆ ಚ.ಮೀ.ಗೆ 6,500 ರು.ಗಳಂತೆ ಒಟ್ಟು ನಿವೇಶನಕ್ಕೆ 15,60,52,000 ರು. ನಿಗದಿಪಡಿಸಿ’ ನಿರ್ಣಯ ಕೈಗೊಂಡಿತ್ತು.

 

ಈ ನಿವೇಶನ ಮೌಲ್ಯದ ಶೇ.10ರಷ್ಟು ಮೊತ್ತವನ್ನು ಅಂದರೆ 1,56,05,200 ರು.ಗಳನ್ನು ಠೇವಣಿ ರೂಪದಲ್ಲಿ ಪರಿಷತ್‌ ಜಮೆ ಮಾಡಿತ್ತು. ಇನ್ನುಳಿದ ಶೇ. 90ರಷ್ಟು ಅಂದರೆ 14,04,46,800 ರು.ಗಳನ್ನು ಪ್ರಾಧಿಕಾರಕ್ಕೆ 15 ದಿನಗಳ ಒಳಗಾಗಿ ಸಂದಾಯ ಮಾಡಲು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರವು ಸೂಚಿಸಿತ್ತು ಎಂಬುದು ಆರ್‌ಟಿಐ ದಾಖಲೆಗಳಿಂದ ಗೊತ್ತಾಗಿದೆ.

 

15 ಕೋಟಿ ಪಾವತಿಸಲು ಒಪ್ಪದ ಪರಿಷತ್‌

 

‘ರಾಷ್ಟ್ರೋತ್ಥಾನ ಪರಿಷ್‌ ಒಂದು ಸಾರ್ವಜನಿಕ ಸಂಸ್ಥೆಯಾಗಿದ್ದು ಕಳೆದ 55 ವರ್ಷಗಳಿಂದ ಸ್ವಸ್ಥ-ಸುಸ್ಥಿರ ಸಮಾಜ ನಿರ್ಮಾಣ ಮಾಡಲು ಶಿಕ್ಷಣ, ಆರೋಗ್ಯ, ವಿವಿಧ ಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ. ಬೆಂಗಳೂರು ನಗರದಲ್ಲಿ 250 ಕೊಳಚೆ ಪ್ರದೇಶಗಳಲ್ಲಿ ಬಡಮಕ್ಕಳಿಗಾಗಿ ಉಚಿತ ಮನೆಪಾಠ ತರಗತಿ ನಡೆಸುತ್ತಿದೆ. ಈ ಮೊದಲು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ ವಿವಿಧ ಸಂಸ್ಥೆಗಳಿಗೆ ಅತೀ ಕಡಿಮೆ ರಿಯಾಯಿತಿ ದರದಲ್ಲಿ ಮಂಜೂರು ಮಾಡಿದೆ. ಹೀಗಾಗಿ ರಾಜ್ಯಾದ್ಯಂತ ಬಹುಮುಖಿ ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿರುವ ನಮ್ಮ ಸಂಸ್ಥೆಗೆ ನಿವೇಶನದ ಒಟ್ಟು ಮೌಲ್ಯದ ಶೇ.20ರ ದರದಲ್ಲಿ ಪಾವತಿತಿಸಿಕೊಂಡು ರಾಷ್ಟ್ರೋತ್ಥಾನ ಪರಿಷತ್‌ ಹೆಸರಿನಲ್ಲಿ ನೋಂದಣಿ ಮಾಡಿಕೊಡಬೇಕು,’ ಎಂದು ಪರಿಷತ್‌ನ ನಾ ದಿನೇಶ್‌ ಹೆಗ್ಡೆ ಅವರು 2021ರ ಸೆ.27ರಂದು ಪ್ರಾಧಿಕಾರದ ಆಯುಕ್ತರಿಗೆ ಕೋರಿಕೆ ಪತ್ರ ಸಲ್ಲಿಸಿದ್ದರು.

 

ಈ ಪತ್ರವನ್ನು ಪರಿಶೀಲಿಸಿದ್ದ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯು ‘ನಾಗರಿಕ ಸೌಲಭ್ಯ ನಿವೇಶನ ಹಂಚಿಕೆ ನಿಯಮಗಳಲ್ಲಿ ಪ್ರಾಧಿಕಾರದ ಹಂತದಲ್ಲಿ ರಿಯಾಯಿತಿ ನೀಡಲು ಅವಕಾಶವಿರುವುದಿಲ್ಲ. ಆದ್ದರಿಂದ ಈಗಾಗಲೇ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ರಿಯಾಯಿತಿ ದರದಲ್ಲಿ ಸಿ ಎ ನಿವೇಶನ ಮಂಜೂರು ಮಾಡಿ ಸರ್ಕಾರವು ಹೊರಡಿಸಿರುವ ಆದೇಶದಂತೆ ಈ ಸಂಸ್ಥೆಗೂ ರಿಯಾಯಿತಿ ದರದಲ್ಲಿ ಮಂಜೂರು ಮಾಡಲು ಆದೇಶ ಕೋರಿ ಪ್ರಸ್ತಾವನೆಯನ್ನು ಸರ್ಕಾರದ ಅನುಮೋದನೆಗೆ ಸಲ್ಲಿಸಲು,’ ಸರ್ವಾನುಮತದಿಂದ ನಿರ್ಣಯಿಸಿ 2021ರ ನವೆಂಬರ್‌ 8ರಂದು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗೆ ಪತ್ರ ಬರೆದಿತ್ತು.

 

 

ನಷ್ಟವೆಂದಿದ್ದ ಆರ್ಥಿಕ ಇಲಾಖೆ

 

ರಾಷ್ಟ್ರೋತ್ಥಾನ ಪರಿಷತ್‌ಗೆ ರಿಯಾಯಿತಿ ದರದಲ್ಲಿ ಸಿ ಎ ನಿವೇಶನವನ್ನು ಮಂಜೂರು ಮಾಡಲು ಆರ್ಥಿಕ ಇಲಾಖೆಯು ಸಹಮತಿಸಿರಲಿಲ್ಲ. ‘ ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಿದೆ. ಪ್ರಸ್ತಾವನೆಗೆ ಆರ್ಥಿಕ ಇಲಾಖೆಯು ಸಹಮತಿಸಿರುವುದಿಲ್ಲ,’ ಎಂದು 2022ರ ಜೂನ್‌ 15ರಂದೇ ತನ್ನ ಅಭಿಪ್ರಾಯ ತಿಳಿಸಿತ್ತು. ಅಲ್ಲದೆ ‘ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ನಾಗರಿಕ ಸೌಲಭ್ಯ ನಿವೇಶನಗಳ ಹಂಚಿಕೆ) ನಿಯಮಗಳು 1991ರ ನಿಯಮ 8(1)ರಲ್ಲಿ ನಾಗರಿಕ ಸೌಲಭ್ಯ ನಿವೇಶನಗಳ ಗುತ್ತಿಗೆ ಹಣವನ್ನು ನಿಗದಿಪಡಿಸಲು ಅವಕಾಶ ಕಲ್ಪಿಸಿರುವಂತೆ ಸಿ ಎ ನಿವೇಶನಕ್ಕೆ ರಿಯಾಯಿತಿ ನೀಡಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ. ಪ್ರಸ್ತಾಪಿತ ಸಿ ಎ ನಿವೇಶನಕ್ಕೆ ರಿಯಾಯಿತಿ ನೀಡಿದಲ್ಲಿ  ಪ್ರಾಧಿಕಾರಕ್ಕೆ ಆರ್ಥಿಕ ನಷ್ಟ ಉಂಟಾಗುತ್ತದೆ, ‘ಎಂದೂ ಎಚ್ಚರಿಕೆ ನೀಡಿತ್ತು.

 

ಈ ಎಲ್ಲಾ ಅಂಶಗಳನ್ನು ನಗರಾಭಿವೃದ್ಧಿ ಇಲಾಖೆಯು ದಾಖಲಿಸಿ ಸಚಿವ ಸಂಪುಟಕ್ಕೆ ಕಡತ ಮಂಡಿಸಿತ್ತು. ಈ ಸಂಬಂಧ 2022ರ ಜುಲೈ 20ರಂದು ನಡೆದಿದ್ದ ಸಚಿವ ಸಂಪುಟ ಸಭೆಯು 24,008 ಚ ಮೀ ವಿಸ್ತೀರ್ಣವುಳ್ಳ ನಾಗರಿಕ ಸೌಲಭ್ಯ ನಿವೇಶನದ ಗುತ್ತಿಗೆ ಮೊತ್ತವನ್ನು ಪ್ರಚಲಿತ ಮಾರುಕಟ್ಟೆ ದರದ ಸೇ. 25ರಷ್ಟನ್ನು ನಿಗದಿಪಡಿಸಿ ನಿರ್ಣಯ ಕೈಗೊಂಡಿತು. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯು 2022ರ ಆಗಸ್ಟ್‌ 4ರಂದು ಆದೇಶವನ್ನೂ ಹೊರಡಿಸಿದೆ.

 

ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲೂಕಿನ ಹುಣಸಚಿಕ್ಕಮಾರನಹಳ್ಳಿ ಸೇರಿದಂತೆ ರಾಜ್ಯದ ಹಲವೆಡೆ ಗೋಮಾಳ ಜಮೀನುಗಳನ್ನು ರಾಷ್ಟ್ರೊತ್ಥಾನ ಪರಿಷತ್‌ಗೆ ಮಂಜೂರು ಮಾಡುತ್ತಿದೆ.

ರಾಷ್ಟ್ರೋತ್ಥಾನ ಪರಿಷತ್‌, ಬಿಜೆಪಿ ಕಚೇರಿಗೆ ಗೋಮಾಳ, ಜಮೀನು ಹಂಚಿಕೆ ಸುತ್ತ ‘ದಿ ಫೈಲ್‌’ನ 13 ವರದಿಗಳು

 

9 ಎಕರೆ ಗೋಮಾಳವನ್ನು ಮಾರುಕಟ್ಟೆ ದರಕ್ಕಿಂತಲೂ ಶೇ.25ರ ದರದಲ್ಲಿ ಮಂಜೂರು ಮಾಡಿ ಬೊಕ್ಕಸಕ್ಕೆ ಅಂದಾಜು 9 ಕೋಟಿ ರು. ನಷ್ಟವನ್ನು ಹೊರೆಸಿರುವುದನ್ನು ಸ್ಮರಿಸಬಹುದು.

Hot this week

ಗೋವಿಂದರಾವ್ ವರದಿ ಶಿಫಾರಸ್ಸಿನಂತೆ ನಿಗದಿಯಾಗದ ಅನುದಾನ; ಕೃಷಿ ಇಲಾಖೆಯನ್ನೇ ನಿರ್ಲಕ್ಷ್ಯಿಸಿತೇ ಸರ್ಕಾರ?

ಬೆಂಗಳೂರು; ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಆರ್ಥಿಕ ತಜ್ಞ ಪ್ರೊ ಎಂ...

ಅನ್ನಭಾಗ್ಯ; ಫಲಾನುಭವಿಗಳ ಅರ್ಹತೆ, ಅನರ್ಹತೆ ಪರಿಶೀಲಿಸಲು ಸಿಎಜಿಗೆ ದತ್ತಾಂಶಗಳನ್ನೇ ಒದಗಿಸದ ಸರ್ಕಾರ

ಬೆಂಗಳೂರು; ಅನ್ನಭಾಗ್ಯ ಯೋಜನೆಯ ದತ್ತಾಂಶ ಆಧಾರಿತ ಲೆಕ್ಕಪರಿಶೋಧನೆಗೆ, ಬಿಪಿಎಲ್ ಮತ್ತು ಆದ್ಯತಾ...

100 ಎಕರೆ ಜಮೀನು ಮಾರಾಟ; ಕೋರಮಂಡಲ್ ಷುಗರ್ಸ್‌ ಲಿಮಿಟೆಡ್‌ ಕೋರಿಕೆಗೆ ಮನ್ನಣೆ, ಪರಭಾರೆ ನಿರ್ಬಂಧ ಸಡಿಲಿಸುವುದೇ ಸರ್ಕಾರ?

ಬೆಂಗಳೂರು; ಜಮೀನು ಮಂಜೂರು ಮಾಡಿದ ದಿನಾಂಕದಿಂದ 30 ವರ್ಷಗಳವರೆಗೆ ಮಾರಾಟ ಮಾಡಬಾರದು...

ವಿಮಾ ಕಂಪನಿಯಿಂದ ಹಣ ಬಂದಿದೆ, ಆದರೆ ರೈತರ ಖಾತೆಗಳಿಗೆ ಜಮೆಯೇ ಆಗಿಲ್ಲ; ಬರಗಾಲದ ನಡುವೆಯೇ ರೈತರಿಗೆ ಮತ್ತೊಂದು ಬರೆ

ಬೆಂಗಳೂರು;  ರಾಜ್ಯದಾದ್ಯಂತ ತೀವ್ರ ಬರಗಾಲ ಎದುರಾಗಿರುವ ನಡುವೆಯೇ  2025-26ನೇ ಮುಂಗಾರು ಹಂಗಾಮಿನ...
Please Scan to make Your Contribution

Topics

ಗೋವಿಂದರಾವ್ ವರದಿ ಶಿಫಾರಸ್ಸಿನಂತೆ ನಿಗದಿಯಾಗದ ಅನುದಾನ; ಕೃಷಿ ಇಲಾಖೆಯನ್ನೇ ನಿರ್ಲಕ್ಷ್ಯಿಸಿತೇ ಸರ್ಕಾರ?

ಬೆಂಗಳೂರು; ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಆರ್ಥಿಕ ತಜ್ಞ ಪ್ರೊ ಎಂ...

ಅನ್ನಭಾಗ್ಯ; ಫಲಾನುಭವಿಗಳ ಅರ್ಹತೆ, ಅನರ್ಹತೆ ಪರಿಶೀಲಿಸಲು ಸಿಎಜಿಗೆ ದತ್ತಾಂಶಗಳನ್ನೇ ಒದಗಿಸದ ಸರ್ಕಾರ

ಬೆಂಗಳೂರು; ಅನ್ನಭಾಗ್ಯ ಯೋಜನೆಯ ದತ್ತಾಂಶ ಆಧಾರಿತ ಲೆಕ್ಕಪರಿಶೋಧನೆಗೆ, ಬಿಪಿಎಲ್ ಮತ್ತು ಆದ್ಯತಾ...

100 ಎಕರೆ ಜಮೀನು ಮಾರಾಟ; ಕೋರಮಂಡಲ್ ಷುಗರ್ಸ್‌ ಲಿಮಿಟೆಡ್‌ ಕೋರಿಕೆಗೆ ಮನ್ನಣೆ, ಪರಭಾರೆ ನಿರ್ಬಂಧ ಸಡಿಲಿಸುವುದೇ ಸರ್ಕಾರ?

ಬೆಂಗಳೂರು; ಜಮೀನು ಮಂಜೂರು ಮಾಡಿದ ದಿನಾಂಕದಿಂದ 30 ವರ್ಷಗಳವರೆಗೆ ಮಾರಾಟ ಮಾಡಬಾರದು...

ವಿಮಾ ಕಂಪನಿಯಿಂದ ಹಣ ಬಂದಿದೆ, ಆದರೆ ರೈತರ ಖಾತೆಗಳಿಗೆ ಜಮೆಯೇ ಆಗಿಲ್ಲ; ಬರಗಾಲದ ನಡುವೆಯೇ ರೈತರಿಗೆ ಮತ್ತೊಂದು ಬರೆ

ಬೆಂಗಳೂರು;  ರಾಜ್ಯದಾದ್ಯಂತ ತೀವ್ರ ಬರಗಾಲ ಎದುರಾಗಿರುವ ನಡುವೆಯೇ  2025-26ನೇ ಮುಂಗಾರು ಹಂಗಾಮಿನ...

ಪ್ರಿಂಟರ್, ಸ್ಕ್ಯಾನರ್ ಕೂಡ ಲಭ್ಯವಿಲ್ಲ, ಇ-ಮೇಲ್‌ ಮಾಡಲೂ ಕಷ್ಟಸಾಧ್ಯ; ಸರ್ಕಾರದ ಆರ್ಥಿಕ ಪರಿಸ್ಥಿತಿ ತೆರೆದಿಟ್ಟ ಶಾಲಾ ಶಿಕ್ಷಣ ಸಾಕ್ಷರತೆ ಇಲಾಖೆ

ಬೆಂಗಳೂರು; ಚಾಲ್ತಿಯಲ್ಲಿರುವ ಮತ್ತು ಹೊಸ ಯೋಜನೆಗಳಿಗೆ ಅನುದಾನ ಹೊಂದಿಸಲು ಏದುಸಿರು ಬಿಡುತ್ತಿರುವ...

ಗೃಹಲಕ್ಷ್ಮಿ; 2,660.26 ಕೋಟಿ ಬಿಡುಗಡೆಗೆ ಸಹಮತಿಸಿದ್ದ ಆರ್ಥಿಕ ಇಲಾಖೆಯಲ್ಲಿ ಕಡತವೇ ಲಭ್ಯವಿಲ್ಲ, ಮುಚ್ಚಿಡಲಾಗಿದೆಯೇ, ನಾಪತ್ತೆ ಮಾಡಲಾಗಿದೆಯೇ?

ಬೆಂಗಳೂರು;  2024-25ನೇ ಸಾಲಿಗೆ ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯ ವಲಯದ ಲೆಕ್ಕ ಶೀರ್ಷಿಕೆಯಡಿಯಲ್ಲಿ...

Related Articles

Popular Categories

error: Content is protected !!