Wednesday | May 13, 2026 |

ಪತ್ರಕರ್ತರಿಗೆ ಲಂಚ; ಸಿಎಂ, ಮಾಧ್ಯಮ ಸಂಯೋಜಕರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ ಜೆಎಸ್‌ಪಿ

ಬೆಂಗಳೂರು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಲಾಗಿದೆ ಎಂದು ಕೇಳಿಬಂದಿರುವ ಗಂಭೀರ ಆರೋಪದ ಕುರಿತು ತೀವ್ರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಭ್ರಷ್ಟಾಚಾರದ ವಿರುದ್ದ ಕಾನೂನಾತ್ಮಕ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಜನಾಧಿಕಾರ ಸಂಘರ್ಷ ಪರಿಷತ್‌ ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ್‌ ಪಾಗೋಜಿ ಎಂಬುವರ ವಿರುದ್ಧ ಲೋಕಾಯುಕ್ತ ಮತ್ತು ಲೋಕಾಯುಕ್ತ ಪೊಲೀಸ್‌ ವಿಭಾಗದ ಎಡಿಜಿಪಿ ಅವರಿಗೆ ದೂರು ನೀಡಿದೆ.

 

ಡೆಕ್ಕನ್‌ ಹೆರಾಲ್ಡ್‌ ಮತ್ತು ಪ್ರಜಾವಾಣಿಯ ಪ್ರಧಾನ/ಮುಖ್ಯ ವರದಿಗಾರರಿಬ್ಬರಿಗೆ ದೀಪಾವಳಿ ಹಬ್ಬದ ಸೋಗಿನಲ್ಲಿ ಸ್ವೀಟ್‌ ಬಾಕ್ಸ್‌ನೊಂದಿಗೆ 1 ಲಕ್ಷ ರು. ನಗದನ್ನಿರಿಸಿ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ್‌ ಪಾಗೋಜಿ ಎಂಬುವರು ನಗದು ನೀಡಿದ್ದಾರೆ ಎಂದು ದೂರಿರುವ ಜನಾಧಿಕಾರ ಸಂಘರ್ಷ ಪರಿಷತ್‌ ಮುಖ್ಯಮಂತ್ರಿ ಮತ್ತು ಮಾಧ್ಯಮ ಸಂಯೋಜಕರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 2018ರ ತಿದ್ದುಪಡಿ ಅಧಿನಿಯಮದ ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದೆ. ಈ ದೂರಿನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಗುತ್ತಿಗೆದಾರರಿಂದ 40 ಪರ್ಸೆಂಟೇಜ್‌ ಕಮಿಷನ್‌ಗೆ ಬೇಡಿಕೆ ಇಟ್ಟಿದ್ದ ಪ್ರಕರಣವು ರಾಜ್ಯ ರಾಜಕೀಯದಲ್ಲಿ ಎದ್ದಿದ್ದ ಬಿರುಗಾಳಿಯ ಅಬ್ಬರ ಮುಂದುವರೆದಿರುವ ಹೊತ್ತಿನಲ್ಲೇ ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಲಕ್ಷಗಟ್ಟಲೇ ಲಂಚ ನೀಡಲಾಗಿದೆ ಎಂಬ ಆರೋಪವು ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

 

ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಲಾಗಿದೆ ಎಂದು ಪೀಪಲ್‌ ಮೀಡಿಯಾ ಜಾಲತಾಣವು ಪ್ರಕಟಿಸಿದ ವರದಿಯು ಮಾಧ್ಯಮ ಸಂಸ್ಥೆಗಳಲ್ಲಿ ತೀವ್ರ ಸಂಚಲನ ಎಬ್ಬಿಸಿತ್ತು. ಈ ವರದಿಯ ನಂತರ ಲೇಖಕ ರಾಜರಾಂ ತಲ್ಲೂರು ಅವರು ಇದೊಂದು ಚುನಾವಣಾ ಪೂರ್ವ ಭ್ರಷ್ಟಾಚಾರ ಎಂದು ಪರಿಗಣಿಸಬೇಕಲ್ಲದೇ ಲೋಕಾಯುಕ್ತರು ತನಿಖೆ ನಡೆಸಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಜನಾಧಿಕಾರ ಸಂಘರ್ಷ ಪರಿಷತ್‌ ಕೂಡ ಲೋಕಾಯುಕ್ತರು ಮತ್ತು ಎಡಿಜಿಪಿ ಅವರಿಗೆ ಸಲ್ಲಿಸಿರುವ ದೂರು ಮಹತ್ವ ಪಡೆದುಕೊಂಡಿದೆ.

 

ದೂರಿನಲ್ಲೇನಿದೆ?

 

ರಾಜ್ಯದ ಹಲವಾರು ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವರದಿಗಾರರಿಗೆ ಮುಖ್ಯಮಂತ್ರಿ ಕಚೇರಿಯು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ ಪಾಗೋಜಿ ಅವರ ಮೂಲಕ ನಗದು ಹಣವನ್ನು ನೀಡಲಾಗಿದೆ. ವಿಶ್ವಸನೀಯ ಮೂಲಗಳ ಪ್ರಕಾರ ಡೆಕ್ಕನ್‌ ಹೆರಾಲ್ಡ್‌ನ ಮುಖ್ಯ ವರದಿಗಾರ ಭರತ್‌ ಜೋಷಿ ಅವರಿಗೆ ತಲುಪಿಸಿದ್ದ ಸ್ವೀಟ್‌ ಬಾಕ್ಸ್‌ನಲ್ಲಿಯೇ 1 ಲಕ್ಷ ರು. ನಗದನ್ನು ತಲುಪಿಸಲಾಗಿತ್ತು. ಇದು ಅವರ ಗಮನಕ್ಕೆ ಬಂದ ನಂತರ ಡೆಕ್ಕನ್‌ ಹೆರಾಲ್ಡ್‌ನ ಸಂಪಾದಕರು ಮತ್ತು ಸಿಇಒ ಅವರ ಗಮನಕ್ಕೆ ತಂದು ಅವರ ಸೂಚನೆಯಂತೆ ಹಣವನ್ನು ಹಿಂದಿರುಗಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

 

ಅಲ್ಲದೇ ‘ಪ್ರಜಾವಾಣಿಯ ಮುಖ್ಯ ವರದಿಗಾರ ವೈ ಜಿ ಜಗದೀಶ್‌ ಎಂಬುವರಿಗೂ ಹಣ ತಲುಪಿಸಲಾಗಿತ್ತು. ಈ ಬಗ್ಗೆ ಖುದ್ದು ವೈ ಜಿ ಜಗದೀಶ್‌ ಅವರೇ ಮಾಧ್ಯಮದ ವಾಟ್ಸಾಪ್‌ ಗ್ರೂಪ್‌ನಲ್ಲಿ  ಹೇಳಿರುವ ಪ್ರಕಾರ ಮುಖ್ಯಮಂತ್ರಿ ಕಚೇರಿಯಿಂದ ಹಣ ಬಂದಿದೆ. ಇವರೂ ಸಹ ಸಂಸ್ಥೆಯ ಸಿಇಒ ಮತ್ತು ಸಂಪಾದಕರ ಗಮನಕ್ಕೆ ತಂದು ಹಣವನ್ನು ಹಿಂದಿರುಗಿಸಲಾಗಿದೆ. ಅಲ್ಲದೇ ವೈ ಜಿ ಜಗದೀಶ್‌ ಅವರೇ ಹೇಳಿಕೊಂಡಿರುವಂತೆ ಈ ಸಂಬಂಧ ಮುಖ್ಯಮಂತ್ರಿ ಅವರಿಗೆ ಸಂಸ್ಥೆಯಿಂದ ಖಂಡನಾ ಪತ್ರವನ್ನು ಬರೆಯಲಾಗಿದೆ. ಮತ್ತು ಇದಕ್ಕೆ ಮುಖ್ಯಮಂತ್ರಿ ಅವರು ಕ್ಷಮೆಯನ್ನೂ ಯಾಚಿಸಿದ್ದಾರೆ,’ ಎಂದು ದೂರಿನಲ್ಲಿ ಆದರ್ಶ ಐಯ್ಯರ್‌ ಅವರು ದೂರಿನಲ್ಲಿ ವಿವರಿಸಿದ್ದಾರೆ.

 

ಮುಖ್ಯಮಂತ್ರಿ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರದ ಆರೋಪ, ಕೆಟ್ಟ ಆಡಳಿತದ ಕುರಿತು ಪತ್ರಿಕೆಯಲ್ಲಿ ಪ್ರಕಟಿಸದಂತೆ ಹಣ ನೀಡಲಾಗಿದೆ ಎಂಬುದಕ್ಕೆ ಪುಷ್ಠಿ ನೀಡಿದಂತಾಗಿದೆ. ಮುಖ್ಯಮಂತ್ರಿ ಕಚೇರಿಯೇ ನೇರವಾಗಿ ಮಾಧ್ಯಮ ಪ್ರತಿನಿಧಿಗಳಿಗೆ ಲಂಚ ನೀಡಿರುವುದು ಅನೈತಿಕವಾದದ್ದಾಗಿದೆ. ಅಲ್ಲದೇ ಮಾಧ್ಯಮ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ ಸರ್ಕಾರದ ಪರವಾಗಿ ಇರುವಂತೆ ನೋಡಿಕೊಂಡಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ದೂರಿನಲ್ಲಿ ಜನಾಧಿಕಾರ ಸಂಘರ್ಷ ಪರಿಷತ್‌ ವಿವರಿಸಿದೆ.

 

‘ಸರ್ಕಾರದ ಅಧಿಕಾರಿಗಳ ಭ್ರಷ್ಟಾಚಾರದ ವಿರುದ್ಧ ಹಲವಾರು ದೂರುಗಳನ್ನು ನೀಡಿದ್ದರೂ ಮಾಧ್ಯಮಗಳು ಗಂಭೀರವಾಗಿ ಪರಿಗಣಿಸಿರಲಿಲ್ಲ ಮತ್ತು ಪ್ರಶ್ನಿಸುತ್ತಿರಲಿಲ್ಲ. ಮಾಧ್ಯಮಗಳನ್ನು ಸರ್ಕಾರವು ಕೊಳ್ಳುತ್ತಿರುವ ಬಗ್ಗೆ ಬಹುತೇಕ ಜನರಿಗೆ ಅನುಮಾನವಿದೆ. ಈ ಪ್ರಕರಣವು ಆ ಅನುಮಾನವನ್ನು ಸಾಬೀತುಗೊಳಿಸಿದೆ. ಇದು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಮತ್ತು ಸಂವಿಧಾನವನ್ನು ಬುಡಮೇಲು ಮಾಡಲು ಬಿಜೆಪಿಯು ಹುನ್ನಾರ ನಡೆಸುತ್ತಿರುವ ಹಲವಾರು ಪ್ರಯತ್ನಗಳಲ್ಲಿ ಇದು ಕೂಡ ಒಂದಾಗಿದೆ. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದು ತಕ್ಷಣವೇ ಲೋಕಾಯುಕ್ತರು ಈ ದೂರನ್ನಾಧರಿಸಿ ತನಿಖೆ ನಡೆಸಿ ಆಪಾದಿತ ಮುಖ್ಯಮಂತ್ರಿ ಮತ್ತು ಅವರ ಮಾಧ್ಯಮ ಸಂಯೋಜಕರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 2018ರ ತಿದ್ದುಪಡಿ ಅಧಿನಿಯಮ ಅನ್ವಯ ಕ್ರಮ ಕೈಗೊಳ್ಳಬೇಕು,’ ಎಂದು ಜನಾಧಿಕಾರ ಸಂಘರ್ಷ ಪರಿಷತ್‌ನ ಸಹ ಅಧ್ಯಕ್ಷ ಆದರ್ಶ ಐಯ್ಯರ್‌ ಅವರು ‘ದಿ ಫೈಲ್‌’ಗೆ ಅಭಿಪ್ರಾಯ ನೀಡಿದ್ದಾರೆ.

 

‘ಇಂದು ಬೆಳಗ್ಗಿನಿಂದ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಕಚೇರಿಯಿಂದ, ಸಚಿವರ ಕಚೇರಿಗಳಿಂದ ದೀಪಾವಳಿ ಇನಾಮಿನ ಜೊತೆಯಲ್ಲಿ ನಗದು ಹಣವನ್ನು ನೀಡಲಾಗಿದೆ ಎಂಬ ವದಂತಿಗಳು ಹಬ್ಬಿವೆ. ಇದು ಹೌದೆಂದಾಗಿದ್ದಲ್ಲಿ, ಚುನಾವಣಾ ಪೂರ್ವ ಭ್ರಷ್ಟಾಚಾರ ಎಂದು ಇದನ್ನು ಪರಿಗಣಿಸುವುದು ಕರ್ನಾಟಕದ ಸಾರ್ವಜನಿಕ ಸ್ವಾಸ್ಥ್ಯದ ದೃಷ್ಟಿಯಿಂದ ಅತ್ಯಗತ್ಯ. ತಾವು ತಕ್ಷಣ ಈಬಗ್ಗೆ ಕೂಲಂಕಷ ತನಿಖೆ ನಡೆಸಬೇಕು ಮತ್ತು ಭ್ರಷ್ಟಾಚಾರ ನಡೆದಿರುವುದು ಹೌದೆಂದಾದರೆ, ಆ ಬಗ್ಗೆ ಲೋಕಾಯುಕ್ತರು ತಕ್ಷಣ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕು,’ ಎಂದು ಲೇಖಕ ರಾಜರಾಂ ತಲ್ಲೂರು ಅವರು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯಿಸಿದ್ದರು.

Hot this week

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...
Please Scan to make Your Contribution

Topics

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

Related Articles

Popular Categories

error: Content is protected !!