Tuesday | May 26, 2026 |

20 ಸಾವಿರ ಕೋಟಿ ರು ವಂಚನೆ; ಠೇವಣಿದಾರರಿಂದ ಪ್ರಧಾನಿ ಮೋದಿ, ಸಿಎಂಗೆ ದೂರು

ಬೆಂಗಳೂರು; ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರಿ ಬ್ಯಾಂಕ್‌ ಮತ್ತು ಕ್ರೆಡಿಟ್‌ ಸೌಹಾರ್ದ ಸೊಸೈಟಿಗಳಲ್ಲಿ ಹೂಡಿಕೆಯಾಗಿರುವ ಒಟ್ಟು ನಿಶ್ಚಿತ ಠೇವಣಿ ಹಣದ ಪೈಕಿ ಅಂದಾಜು 20,000 ಕೋಟಿ ರುಪಾಯಿಯನ್ನು ಆಡಳಿತ ಮಂಡಳಿಗಳು ನುಂಗಿ ಹಾಕಿವೆ. ಈ ಸಂಬಂಧ ಶೈಲಗಿರಿ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟೀವ್‌ ಸೇರಿದಂತೆ ವಿವಿಧ ಸಹಕಾರಿ ಬ್ಯಾಂಕ್‌ ಮತ್ತು ಸೌಹಾರ್ದ ಸೊಸೈಟಿಗಳಲ್ಲಿ ಹಣ ಹೂಡಿರುವ ಠೇವಣಿದಾರರು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರವನ್ನು ಬರೆದಿದ್ದಾರೆ.

 

ಕುರುಹೀನ ಶೆಟ್ಟಿ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟೀವ್‌ ಲಿಮಿಟೆಡ್‌, ಶ್ರೀ ವೈಭವ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ, ಕಣ್ವ, ಮಹಾಗಣಪತಿ, ನಾಗರತ್ನ, ಮಿಲಿನೇಯಂ, ಕಲ್ಪವೃಕ್ಷ ಕ್ರೆಡಿಟ್‌ ಸೇರಿದಂತೆ ಒಟ್ಟು ರಾಜ್ಯದ 1,000ಕ್ಕೂ ಹೆಚ್ಚು ಸೌಹಾರ್ದ ಸೊಸೈಟಿಗಳಲ್ಲಿನ ಠೇವಣಿದಾರರಿಗೆ ಅಪಾರ ಪ್ರಮಾಣದಲ್ಲಿ ವಂಚನೆಯಾಗಿದೆ ಎಂದು ಠೇವಣಿದಾರರು ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಬೆಂಗಳೂರಿನ ಬಸವನಗುಡಿಯ ಗಾಂಧಿಬಜಾರ್‌ನಲ್ಲಿರುವ ಶ್ರೀ ಶೈಲಗಿರಿ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟೀವ್‌ನಲ್ಲಿ ವಂಚನೆಗೊಳಗಾದ 200 ಮಂದಿ ಠೇವಣಿದಾರರು ಪ್ರಧಾನಿ ನರೇಂದ್ರ ಮೋದಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿರುವಂತೆ ಪ್ರಾಥಮಿಕ ಹಂತದಲ್ಲಿ 20 ಕೋಟಿ ರು. ಅವ್ಯವಹಾರವಾಗಿದೆ. ಈ ಸಂಬಂಧ ಬಸವನಗುಡಿ ಪೊಲೀಸ್‌ ಠಾಣೆಯಲ್ಲಿ  ದಾಖಲಾಗಿರುವ ದೂರಿಗೆ ಸಂಬಂಧಿಸಿದಂತೆ ಸೊಸೈಟಿಯ ಅಧ್ಯಕ್ಷ ನವೀನ್‌ ಡಿ ಪಿ, ಅನಿಲ್‌ಕುಮಾರ್‌, ಸಿಇಒ ಪಲ್ಲವಿ ಎನ್‌ ಸೇರಿದಂತೆ ಒಟ್ಟು 10 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಈ ಎಫ್‌ಐಆರ್‌ ಪ್ರತಿಯೂ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಬಸವನಗುಡಿಯ ಪೊಲೀಸ್‌ ಠಾಣೆಯಲ್ಲಿ 2022ರ ಮಾರ್ಚ್‌ನಲ್ಲಿ ದಾಖಲಾಗಿರುವ ಎಫ್‌ಐಆರ್‌ ಕುರಿತೂ ನೊಂದ ಹೂಡಿಕೆದಾರರು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತಂದಿದ್ದಾರೆ. ದೂರು ನೀಡಿರುವ ಹೆಗಡೆ ನಾಗಪತಿ, ವೀಣಾ ಹೆಗಡೆ ಮತ್ತು ಕುಮಾರ್‌ ಸಿ ಎ ಎಂಬುವರು ಶ್ರೀ ಶೈಲಗಿರಿ ಸೌಹಾರ್ದ ಕ್ರೆಡಿಟ್‌ ಕೋ ಅಪರೇಟೀವ್‌ನಲ್ಲಿ ಒಟ್ಟು 43.50 ಲಕ್ಷ ರು.ಗಳನ್ನು ಹೂಡಿದ್ದರು. ಆದರೆ ಈ ಸಹಕಾರಿ ಸಂಸ್ಥೆಯು ಈ ಹ ಣವನ್ನು ಪಾವತಿಸದೇ ಸಂಯುಕ್ತ ಸಹಕಾರಿ ಸೂಚನೆಯನ್ನು ಉಲ್ಲಂಘಿಸಿದೆ ಎಂಬುದು ಎಫ್‌ಐಆರ್‌ನಿಂದ ತಿಳಿದು ಬಂದಿದೆ.

 

‘ಸಹಕಾರಿಯ ಚಟುವಟಿಕೆಗಳು ಸಂಶಯಾಸ್ಪದವಾಗಿದ್ದು ಮೋಸದ ಉದ್ದೇಶ ಹೊಂದಿರುವ ಸಾಧ್ಯತೆ ಇದೆ,’ ಎಂದು ದೂರು ಸಲ್ಲಿಸಿದ್ದರು. ಸೊಸೈಟಿಯ ಅಧ್ಯಕ್ಷರು, ಸಿಇಒ ಸೇರಿದಂತೆ ಒಟ್ಟು 10 ಮಂದಿ ವಿರುದ್ಧ ನಂಬಿಕೆ ದ್ರೋಹ, ಮೋಸ, ವಂಚನೆ ಮತ್ತು ಅಧಿಕಾರ ದುರುಪಯೋಗ ಎಸಗಿರುವ ಆರೋಪಗಳ ಡಡಿಯ್ಲಿ ಐಪಿಸಿ 1860 (406, 415, 417,419, 420, 465,470,468, 471 ಅಡಿಯಲ್ಲಿ ಮತ್ತು ಕೆಪಿಡಬ್ಲ್ಐಐಡಿ ಅಡಿಯಲ್ಲಿಯೂ ಎಫ್‌ಐಆರ್‌ ದಾಖಲಾಗಿರುವುದು ಗೊತ್ತಾಗಿದೆ.

 

ರಾಜ್ಯದ ಕಳೆದ 6 ತಿಂಗಳನಲ್ಲಿ ಹಲವು ಕ್ರೆಡಿಟ್‌ ಸೌಹಾರ್ದ ಸೊಸೈಟಿಗಳು ಮತ್ತು 40,000 ಸಹಕಾರಿ ಬ್ಯಾಂಕ್‌ಗಳಲ್ಲಿ ಹೂಡಿಕೆಯಾಗಿರುವ 20 ಲಕ್ಷಕ್ಕೂ ಅಧಿಕ ಸದಸ್ಯರ ನಿಶ್ಚಿತ ಠೇವಣಿ ಅಂದಾಜು 20,000 ಕೋಟಿ ರು.ಗಳನ್ನು ಆಡಳಿತ ಮಂಡಳಿಗಳು ನುಂಗಿ ಹಾಕಿವೆ. ಈ ಹಣವನ್ನು ಆಡಳಿತ ಮಂಡಳಿಗಳು ಹವಾಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿವೆಯಲ್ಲದೇ ಇನ್ನೂ ಹಲವು ಆಡಳಿತ ಮಂಡಳಿಗಳು ಠೇವಣಿ ಮೊತ್ತವನ್ನು ದುರುಪಯೋಗಪಡಿಸಿಕೊಂಡಿವೆ ಮತ್ತು ಅಕ್ರಮವಾಗಿ ಹಣ ವರ್ಗಾವಣೆ ಮಾಡಿವೆ ಎಂದು ದೂರಿನಲ್ಲಿ ಹೂಡಿಕೆದಾರರು ವಿವರಿಸಿದ್ದಾರೆ.

 

‘ರಾಜ್ಯದಲ್ಲಿ ಹತ್ತಿರತ್ತಿರ 20 ಲಕ್ಷ ಠೇವಣಿದಾರರು ತೊಂದರೆಯಲ್ಲಿ ಸಿಕ್ಕಿಕೊಂಡಿದ್ದಾರೆ. ಠೇವಣಿ ಹಣಕ್ಕೆ ಮೋಸವಾಗಿರುವುದು ಮಾತ್ರವಲ್ಲದೇ ಸಹಕಾರಿ ಸಂಸ್ಥೆಗಳ ಮೇಲೆ ವಿಶ್ವಾಸವೇ ಕಳೆದುಹೋಗಿದೆ. ಹೀಗಾಗಿ ಸೆಬಿ, ರಿಸರ್ವ್‌ ಬ್ಯಾಂಕ್‌ಗಳ ಮೂಲಕ ಸಹಕಾರ ಬ್ಯಾಂಕ್‌, ಸೌಹಾರ್ದ ಕ್ರೆಡಿಟ್‌ ಸೊಸೈಟಿಗಳಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕಬೇಕು. ಸೊಸೈಟಿ ಮತ್ತು ಸಹಕಾರ ಬ್ಯಾಂಕ್‌ಗಳ ಆರಂಭಕ್ಕೆ ಬಿಗಿಯಾದ ಮಾರ್ಗಸೂಚಿಗಳನ್ನು ರೂಪಿಸಬೇಕು. ಇಲ್ಲವಾದಲ್ಲಿ ಠೇವಣಿ ಹೂಡಿಕೆದಾರರು ಕಷ್ಟದಲ್ಲಿ ಸಿಲುಕುವ ಸಾಧ್ಯತೆ ಇದೆ,’ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಠೇವಣಿದಾರರು ಅಳಲು ತೋಡಿಕೊಂಡಿದ್ದಾರೆ.

 

ನಗರ ಸಹಕಾರಿ ಬ್ಯಾಂಕ್‌ಗಳಲ್ಲಿ 4,167 ಹೆಚ್ಚು ನಕಲಿ ಕಂಪನಿಗಳು ವಹಿವಾಟು ನಡೆಸಿವೆ ಎಂದು ರಾಜ್ಯಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಸಹಕಾರ ಇಲಾಖೆಯೇ ಮಾಹಿತಿ ಒದಗಿಸಿದ್ದರೂ ರಾಜ್ಯ ಸರ್ಕಾರದ ಗಮನಕ್ಕೇ ಬಂದಿಲ್ಲ ಎಂದು ಸಹಕಾರ ಇಲಾಖೆ ಸಚಿವ ಎಸ್‌ ಟಿ ಸೋಮಶೇಖರ್‌ ಅವರು ಸದನದ ದಾರಿತಪ್ಪಿಸಿದ್ದರು. ಈ ಯಾವ ವ್ಯವಹಾರಗಳೂ ತನ್ನ ಗಮನಕ್ಕೆ ಬಂದಿಲ್ಲ ಎಂದು ಉತ್ತರಿಸುವ ಮೂಲಕ ರಾಜ್ಯ ಸರ್ಕಾರದ ಸಹಕಾರ ಇಲಾಖೆಯೇ ರಾಜ್ಯಮಟ್ಟದ ಸಮನ್ವಯ ಸಮಿತಿ ಸಭೆಗೆ ಮಂಡಿಸಿದ್ದ ಕಾರ್ಯಸೂಚಿ ಮತ್ತು ವಿವರಣೆಯನ್ನು ತಳ್ಳಿ ಹಾಕಿದ್ದರು.

 

ನಕಲಿ ಕಂಪನಿಗಳು ಆದಾಯ ತೆರಿಗೆ ಕುರಿತಾದ ವಿವರಗಳನ್ನು ಸಲ್ಲಿಸದಿರುವ ಕುರಿತು ಕಾರ್ಯಸೂಚಿ ಪಟ್ಟಿಯಲ್ಲಿ ಸೇರಿಸಿತ್ತು. ಕಂಪನಿಗಳ ನೋಂದಣಿ ಇಲಾಖೆ (ಆರ್‌ಒಸಿ) ಬೆಂಗಳೂರು ವ್ಯಾಪ್ತಿಯಲ್ಲಿ ಅಕ್ರಮ ವ್ಯವಹಾರ, ಅಕ್ರಮ ಆಸ್ತಿಗಳನ್ನು ಅಡಗಿಸಿಡುವುದಕ್ಕೆ ಪೂರಕವಾಗಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ಗುರುತಿಸಲಾಗಿರುವ ಒಟ್ಟು ನಕಲಿ (ಶೆಲ್‌) ಕಂಪನಿಗಳ ಪೈಕಿ 4,167 ಕಂಪನಿಗಳು ವಾರ್ಷಿಕ ರಿಟರ್ನ್ಸ್‌ ಸಲ್ಲಿಸಿರಲಿಲ್ಲ. ಅಲ್ಲದೆ ಈ ನಕಲಿ ಕಂಪನಿಗಳು ನಗರ ಸಹಕಾರಿ ಬ್ಯಾಂಕ್‌ಗಳಲ್ಲಿಯೇ ಖಾತೆ ತೆರೆದು ಕೋಟ್ಯಂತರ ವಹಿವಾಟು ನಡೆಸಿವೆ ಎಂಬ ಸಂಗತಿಯು ರಾಜ್ಯಮಟ್ಟದ ಸಮನ್ವಯ ಸಮಿತಿಯು 2022ರ ಜೂನ್‌ 27ರ ಇಂದು ನಡೆದಿದ್ದ 56ನೇ ಸಭೆಗೆ ಸಲ್ಲಿಸಿರುವ ಕಾರ್ಯಸೂಚಿ ಪಟ್ಟಿಯಲ್ಲಿ ವಿವರಣೆ ಒದಗಿಸಿತ್ತು.

 

ರಿಜಿಸ್ಟ್ರರ್‌ ಆಫ್‌ ಕಂಪನೀಸ್‌ ಮಾಹಿತಿ ಪ್ರಕಾರ ಶೆಲ್‌ ಕಂಪನಿಗಳು ನಗರ ಸಹಕಾರಿ ಬ್ಯಾಂಕ್‌ಗಳಲ್ಲಿ ಖಾತಗೆ ತೆರೆದಿವೆ. ಈ ಸಂಬಂಧ ಭಾರತೀಯ ರಿಸರ್ವ್‌ ಬ್ಯಾಂಕ್‌, ನಗರ ಸಹಕಾರಿ ಬ್ಯಾಂಕ್‌ಗಳಿಂದ ಮಾಹಿತಿಯನ್ನು ಬಯಸಿದೆ ಎಂಬುದು ಕಾರ್ಯಸೂಚಿ ಪಟ್ಟಿಯಿಂದ ತಿಳಿದು ಬಂದಿತ್ತು.

 

ಎಸ್‌ಎಲ್‌ಸಿಸಿ (ಸ್ಟೇಟ್‌ ಲೆವೆಲ್‌ ಕೋ ಆರ್ಡಿನೇಷನ್ ಕಮಿಟಿ)ಯ 54ನೇ ಸಭೆಯಲ್ಲಿ ಕಂಪನಿಗಳ ಕೆವೈಸಿ ವಿವರಗಳ ಕ್ರೋಢೀಕೃತ ಮಾಹಿತಿ ಒದಗಿಸುವ ಕುರಿತು ಚರ್ಚೆ ನಡೆದಿತ್ತು. ಆದರೆ ಬ್ಯಾಂಕ್‌ಗಳು ಈ ಮಾಹಿತಿಯನ್ನು ಆರ್‌ಬಿಐನೊಂದಿಗೆ ಹಂಚಿಕೊಂಡಿರಲಿಲ್ಲ.

Hot this week

ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21  ಪ್ಯಾಕೇಜ್‌ಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಐಎಎಸ್...

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...
Please Scan to make Your Contribution

Topics

ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21  ಪ್ಯಾಕೇಜ್‌ಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಐಎಎಸ್...

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...

52 ಕ್ರಿಮಿನಲ್ ಪ್ರಕರಣಗಳ ಹಿಂತೆಗೆತಕ್ಕೆ ಮತ್ತೆ ಚಾಲನೆ; ಡಿಜಿಐಜಿಪಿ, ಕಾನೂನು ಇಲಾಖೆ ಅಸಮ್ಮತಿ ನಡುವೆಯೂ ಪ್ರಸ್ತಾವ

ಬೆಂಗಳೂರು; ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ  ಜನಪ್ರತಿನಿಧಿಗಳ ವಿರುದ್ಧ  ದಾಖಲಾಗಿರುವ ಮತ್ತು...

ಸ್ವಚ್ಛ ನಗರಿಯ ಕಸದ ಕರಾಳತೆ; ಪರೀಕ್ಷೆಯಿಲ್ಲದೇ ವಿಷಕಾರಿ ತ್ಯಾಜ್ಯ ನಿರ್ವಹಣೆ, ಸಿಎಂ ತವರಿನಲ್ಲೇ ಅವೈಜ್ಞಾನಿಕ ವಿಲೇವಾರಿ?

ಬೆಂಗಳೂರು;  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ  ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ...

Related Articles

Popular Categories

error: Content is protected !!