ಮೀಸಲಾತಿ ಇಲ್ಲದಿರುವ ಅಭ್ಯರ್ಥಿಗಳಿಗೂ ಜಾತಿ ಪ್ರಮಾಣ ಪತ್ರ ವಿತರಣೆ; ಆಯೋಗದ ಸಭೆಯಲ್ಲಿ ಬಹಿರಂಗ

ಬೆಂಗಳೂರು; ಮೀಸಲಾತಿ ಇಲ್ಲದೇ ಇರುವ ಅಭ್ಯರ್ಥಿಗಳಿಗೆ ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಲು ಅವಕಾಶಗಳಿಲ್ಲದಿದ್ದರೂ ನಾಡಕಚೇರಿಗಳಲ್ಲಿ ವಿತರಿಸುತ್ತಿರುವುದು ಇದೀಗ ಬಹಿರಂಗವಾಗಿದೆ.

 

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ ಜಯಪ್ರಕಾಶ್‌ ಹೆಗ್ಡೆ ಅವರ  ಉಪಸ್ಥಿತಿಯಲ್ಲಿ 2022ರ ಅಕ್ಟೋಬರ್‌ 31ರಂದು ನಡೆದ ಸಭೆಗೆ ಅಟಲ್‌ಜೀ ಜನಸ್ನೇಹಿ ನಿರ್ದೇಶನಾಲಯವು ಈ ಮಾಹಿತಿಯನ್ನು ನೀಡಿದೆ. ಮಾಹಿತಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಕೇಂದ್ರ ಓಬಿಸಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಇಲ್ಲದೇ ಇರುವ ಜಾತಿಯ ಅರ್ಹ ಅಭ್ಯರ್ಥಿಗಳಿಗೆ ಆದಾಯ ಮತ್ತು ಸ್ವತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಗುತ್ತಿದೆ ಎಂದು ಅಟಲ್‌ಜೀ ಜನಸ್ನೇಹಿ ನಿರ್ದೇಶನಾಲಯವು ಮಾಹಿತಿ ಒದಗಿಸಿರುವುದು ತಿಳಿದು ಬಂದಿದೆ.

 

‘ಕೇಂದ್ರ ಓಬಿಸಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಇಲ್ಲದೇ ಇರುವ ಜಾತಿಯ ಅರ್ಹ ಅಭ್ಯರ್ಥಿಗಳಿಗೆ ಆದಾಯ ಮತ್ತು ಸ್ವತ್ತು ಪ್ರಮಾಣಪತ್ರಗಳನ್ನು ವಿತರಿಸಲಾಗುತ್ತಿದೆ. ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳು, ಇತರೆ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) ಅಧಿನಿಯಮ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹೊರಡಿಸಲಾದ ಜಾತಿಪಟ್ಟಿಗಳನ್ನು ನಾಡಕಚೇರಿ ತಂತ್ರಾಂಶದಲ್ಲಿ ಅಳವಡಿಸಿ ಸಾರ್ವಜನಿಕರು ಕೋರಿರುವ ಜಾತಿಗೆ ಸಂಬಂಧಿಸಿದ ಅರ್ಜಿ, ದಾಖಲೆಗಳನ್ನು ಪರಿಶೀಲಿಸಿ ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಲು ಕ್ರಮವಹಿಸಲಾಗುತ್ತಿದೆ,’ ಎಂದು ಮಾಹಿತಿಯಲ್ಲಿ ವಿವರಿಸಲಾಗಿದೆ.

 

ಪರಿಶಿಷ್ಟ ಜಾತಿಗೆ ಸಂಬಂಧಿಸಿದಂತೆ 2022ರ ಜನವರಿ 1ರಿಂದ 2022ರ ಅಕ್ಟೋಬರ್ 28ರವರೆಗೆ ಒಟ್ಟು 6,59,743 ಅರ್ಜಿಗಳು ಸ್ವೀಕೃತವಾಗಿವೆ. ಈ ಪೈಕಿ 6,36,458 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಪರಿಶಿಷ್ಟ ಪಂಗಡಗಳ ಜಾತಿಗೆ ಸಂಬಂಧಿಸಿದಂತೆ 2022ರ ಅಕ್ಟೋಬರ್‌ 28ರಚರೆಗೆ ಒಟ್ಟು 2,30,288 ಅರ್ಜಿಗಳು ಸ್ವೀಕೃತವಾಗಿವೆ. ಈ ಪೈಕಿ 22,390 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

 

ಇತರೆ ಜಾತಿಗಳಿಗೆ ಸಂಬಂಧಿಸಿದಂತೆ 2022ರ ಜನವರಿ 1ರಿಂದ ಅಕ್ಟೋಬರ್‌ 28ರವರೆಗೆ ಒಟ್ಟು 26, 56,822 ಅರ್ಜಿಗಳು ಸ್ವೀಕೃತವಾಗಿವೆ. ಈ ಪೈಕಿ 25,90,539 ಅರ್ಜಿಗಳು ವಿಲೇವಾರಿಯಾಗಿವೆ. ಹಾಗೆಯೇ ಆದಾಯ ಸ್ವತ್ತು ಪ್ರಮಾಣಪತ್ರಗಳಿಗೆ ಸಂಬಂಧಿಸಿದಂತೆ ಅಕ್ಟೋಬರ್‌ 28ರವರೆಗೆ ಒಟರಟು 36,360 ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ 35,494 ಅಜಿfಗಳು ವಿಲೇವಾರಿಯಾಗಿವೆ.

SUPPORT THE FILE

Latest News

Related Posts