Saturday | March 21, 2026 |

ದಲಿತ ಸ್ನಾತಕೋತ್ತರ ವಿದ್ಯಾರ್ಥಿಗಳ 2ನೇ ಪದವಿಗೆ ಹಾಸ್ಟೆಲ್‌ಗೆ ಅವಕಾಶವಿಲ್ಲ; ಸುತ್ತೋಲೆ ಬಹಿರಂಗ

Support THE-FILE

spot_img

ಬೆಂಗಳೂರು; ಎರಡನೇ ಸ್ನಾತಕೋತ್ತರ ಪದವಿಯ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಿಲಯದಲ್ಲಿ ಅವಕಾಶ ನೀಡಬಾರದು ಎಂದು ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಸುತ್ತೋಲೆ ಹೊರಡಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿಯಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಒದಗಿಸಲು ಅನುದಾನವಿಲ್ಲ ಎಂದು ಸರ್ಕಾರವು ಕೈ ಚೆಲ್ಲಿರುವ ಬೆನ್ನಲ್ಲೇ ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ 2022ರ ಡಿಸೆಂಬರ್ 2ರಂದು ಸುತ್ತೊಲೆ ಹೊರಡಿಸಿರುವ ಸುತ್ತೋಲೆಯು ಚರ್ಚೆಗೆ ಗ್ರಾಸವಾಗಿದೆ.

ಸುತ್ತೋಲೆಯಲ್ಲೇನಿದೆ?

2022-23ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದ ಹಾಸ್ಟೆಲ್‌ ಪ್ರವೇಶ ನೀಡುವ ಸಂದರ್ಭದಲ್ಲಿ ಎರಡನೇ ಸ್ನಾತಕೋತ್ತರ ಪದವಿಗೆ ಕಡ್ಡಾಯವಾಗಿ ಅವಕಾಶ ನೀಡಬಾರದೆಂದು ತಿಳಿಸಲಾಗಿದೆ. ಕಾರಣ ಸರ್ಕಾರದ ಆದೇಶದನ್ವಯ ಒಂದು ಬಾರಿ ಸರ್ಕಾರಿ ಅಥವಾ ವಿಶ್ವವಿದ್ಯಾಲಯದ ಸೌಲಭ್ಯಗಲನ್ನು ಪಡೆದಿರುವವರಿಗೆ ಮತ್ತೊಮ್ಮೆ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕೆ ಅವಕಾಶವಿಲ್ಲ. ಇದನ್ನು ಅತೀ ಸೂಕ್ಷ್ಮವಾಗಿ ಪರಿಗಣಿಸಿ ಪ್ರವೇಶ ನೀಡುವ ಸಂದರ್ಭದಲ್ಲಿ ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಿ ಪ್ರವೇಶ ನೀಡಬೇಕು ಎಂದು ಸೂಚಿಸಲಾಗಿದೆ.

ಆದ್ದರಿಂದ ಎಲ್ಲಾ ಪ್ರಧಾನ ಕ್ಷೇಮ ಪಾಲಕರುಗಲೂ ವಿದ್ಯಾರ್ಥಿಗಳ ವಿವರಗಳನ್ನು ಪರಿಶೀಲಿಸಿ ಮುಚ್ಚಳಿಕೆಯನ್ನು ಪಡೆದು ಹಾಸ್ಟೆಲ್‌ ಪ್ರವೇಶ ನೀಡುವುದು. ವಿಭಾಗಗಳಿಗೆ ಪ್ರವೇಶ ನೀಡುವ ಸಂದಭ್ದಲ್ಲಿ ವಿದ್ಯಾರ್ಥಿಗಳ ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಬೇಕು. ಮತ್ತು ಮೊದಲ ಪಿ ಜಿ ಮತ್ತು ಎರಡನೇ ಪಿ ಜಿ ಎಂಬುದನ್ನು ಪರಿಶೀಲಿಸಿಕೊಂಡು ವಿಭಾಗಗಳ ಮುಖ್ಯಸ್ಥರು ವಿದ್ಯಾರ್ಥಿಗಳ ಹಾಸ್ಟೆಲ್‌ ಪ್ರವೇಶದ ಅರ್ಜಿಗಳನ್ನು ದೃಢೀಕರಿಸಬೇಕು ಎಂದು ನಿರ್ದೇಶನ ನೀಡಿರುವುದು ಸುತ್ತೋಲೆಯಿಂದ ಗೊತ್ತಾಗಿದೆ.

‘ಬೆಂಗಳೂರು ವಿಶ್ವವಿದ್ಯಾಲಯವು ದಲಿತ ವಿರೋಧಿ ನೀತಿಯನ್ನು ಪದೇ ಪದೇ ಜಾಹೀರು ಮಾಡಿದೆ. ಬಿಜೆಪಿಯ ರಹಸ್ಯ ಕಾರ್ಯಸೂಚಿ ಬೆತ್ತಲಾಗಿದೆ. ದಲಿತ ವಿದ್ಯಾರ್ಥಿಗಳಿಗೆ ಎರಡನೇ ಸ್ನಾತಕೋತ್ತರ ಪದವಿಗೆ ಹಾಸ್ಟೆಲ್‌ಗೆ ಅವಕಾಶ ನೀಡದಂತೆ ಸುತ್ತೋಲೆ ನೀಡಿ ಅವರ ಹಕ್ಕು ಕಸಿಯಲು ಶಿಕ್ಷಣ ವಂಚಿತ ಮಾಡಲು ಹೊರಟಿದೆ,’ ಎಂದು ವಿಧಾನಪರಿಷತ್‌ನ ಮಾಜಿ ಸದಸ್ಯ ಕಾಂಗ್ರೆಸ್‌ನ ರಮೇಶ್‌ಬಾಬು ಅವರು ಟ್ವೀಟ್‌ ಮಾಡಿದ್ದಾರೆ.

Hot this week

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

Topics

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

Related Articles

Popular Categories

error: Content is protected !!