Thursday | June 11, 2026 |

ಪತ್ರಕರ್ತರಿಗೆ ಆಮಿಷ; ಸಿಎಂಗೆ ಬರೆದ ಪತ್ರವನ್ನು ಗಡುವು ಮೀರಿದರೂ ಒದಗಿಸದೇ ಮುಚ್ಚಿಟ್ಟ ಸಚಿವಾಲಯ

ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ್‌ ಪಾಗೋಜಿ ಎಂಬುವರು ದೀಪಾವಳಿ ಹಬ್ಬದ ಸೋಗಿನಲ್ಲಿ ಸ್ವೀಟ್‌ ಬಾಕ್ಸ್‌ನೊಂದಿಗೆ 1 ಲಕ್ಷ ರು. ನಗದು ನೀಡಿದ್ದನ್ನು ಖಂಡಿಸಿ ಪ್ರಜಾವಾಣಿ-ಡೆಕ್ಕನ್‌ ಹೆರಾಲ್ಡ್‌ ಸಿಇಒ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದಿದ್ದಾರೆ ಎನ್ನಲಾದ ಪತ್ರವನ್ನು ಆರ್‌ಟಿಐ ಅಡಿಯಲ್ಲಿ ಗಡುವು ಮೀರಿದರೂ ಮುಖ್ಯಮಂತ್ರಿಗಳ ಸಚಿವಾಲಯವು ಒದಗಿಸಿಲ್ಲ.

 

ದೀಪಾವಳಿ ಗಿಫ್ಟ್‌ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಬರೆದಿದೆ ಎನ್ನಲಾದ ಪತ್ರವನ್ನು ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ‘ದಿ ಫೈಲ್‌’ 2022ರ ಅಕ್ಟೋಬರ್‌ 28ರಂದು ಅರ್ಜಿ ಸಲ್ಲಿಸಿತ್ತು. ಅರ್ಜಿ ಸಲ್ಲಿಸಿದ  30 ದಿನಗಳಾದರೂ ಪತ್ರವನ್ನೂ ಒದಗಿಸಿಲ್ಲ ಮತ್ತು ಈ ಸಂಬಂಧ ಯಾವುದೇ ಹಿಂಬರಹವನ್ನೂ ನೀಡಿಲ್ಲ.

 

ಅರ್ಜಿ ಸಲ್ಲಿಸಿದ ದಿನಾಂಕದಿಂದ ಒಂದು ತಿಂಗಳ ಒಳಗೇ ಮಾಹಿತಿ ಇಲ್ಲವೇ ಮಾಹಿತಿ ಸಂಬಂಧ ಹಿಂಬರಹವನ್ನು ಒದಗಿಸಬೇಕು. ಆದರೆ ಮುಖ್ಯಮಂತ್ರಿಗಳ ಸಚಿವಾಲಯವು ಮಾಹಿತಿ ನೀಡುವಲ್ಲಿ ವಿಫಲವಾಗಿದೆ.

 

ಆರ್‌ಟಿಐ ಅಡಿಯಲ್ಲಿ ಸಲ್ಲಿಸಿದ್ದ ಅರ್ಜಿ ಪ್ರತಿ

 

ಆದರೆ ದೀಪಾವಳಿ ಗಿಫ್ಟ್‌ ಕುರಿತಾಗಿ ಪ್ರಜಾವಾಣಿ ಮತ್ತು ಡೆಕ್ಕನ್‌ ಹೆರಾಲ್ಡ್‌ ಸಂಸ್ಥೆಯು ಬರೆದಿದೆ ಎನ್ನಲಾದ ಪತ್ರದ ಕುರಿತು ಯಾವುದೇ ಮಾಹಿತಿ ಒದಗಿಸದಿರುವುದು ಸರ್ಕಾರವು ಪತ್ರವನ್ನು ಮುಚ್ಚಿಡುತ್ತಿದೆಯೇ ಎಂಬ ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

 

 

ಪೆಂಡಿಂಗ್‌ ಇಡಲು ಸೂಚನೆ?

 

ಈ ಕುರಿತು ‘ದಿ ಫೈಲ್‌’ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಮಾಹಿತಿ ಹಕ್ಕು ಅಧಿನಿಯಮದಡಿ ಸಲ್ಲಿಸಿರುವ ಅರ್ಜಿಯನ್ನು ಮೇಲಾಧಿಕಾರಿಗಳು ಪೆಂಡಿಂಗ್‌ ಇಡಲು ಹೇಳಿದ್ದಾರೆ,’ ಎಂದು ಸೂಚಿಸಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

 

ಪತ್ರಕರ್ತರಿಗೆ ದೀಪಾವಳಿ ಉಡುಗೊರೆ ನೀಡಿದ ಸಂದರ್ಭದಲ್ಲಿ ನಗದು ಹಣ ನೀಡಲಾಗಿತ್ತು ಎಂಬ ಸುದ್ದಿಯನ್ನು ಪೀಪಲ್ ಮೀಡಿಯಾ ಹೊರಗೆಡವಿತ್ತು. ಇದು ಮಾಧ್ಯಮ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಸಂದರ್ಭದಲ್ಲೇ ಪ್ರಜಾವಾಣಿ ಮುಖ್ಯ ವರದಿಗಾರ ವೈ ಗ ಜಗದೀಶ್‌ ಎಂಬುವರು ವಾಟ್ಸಾಪ್‌ ಗ್ರೂಪ್‌ವೊಂದರಲ್ಲಿ ನೀಡಿದ್ದರು ಎನ್ನಲಾದ ಸ್ಪಷ್ಟೀಕರಣವನ್ನು ಆಧರಿಸಿ ‘ದಿ ಫೈಲ್‌’ ಆರ್‌ಟಿಐ ಅಡಿಯಲ್ಲಿ ಅರ್ಜಿ ಸಲ್ಲಿಸಿತ್ತು.

 

ಸ್ಪಷ್ಟೀಕರಣದಲ್ಲಿ ಏನಿತ್ತು?

 

‘ದುಡ್ಡು ಕಳಿಸಿದ್ದು ಹೌದು. ಆದರೆ ದುಡ್ಡು ಎಷ್ಟಿತ್ತೆಂದು ನಾನು ನೋಡಿಲ್ಲ. ದುಡ್ಡಿರುವುದು ಗಮನಕ್ಕೆ ಬಂದ ಕೂಡಲೇ ತಲುಪಿಸಿದವರಿಗೆ ವಾಪಸ್‌ ಮಾಡಲಾಗಿದೆ. ಅದರ ಬಗ್ಗೆ ಸಿಇಓ ಕೇಳಿದ ನಂತರ ನಾನು ವಾಪಸ್‌ ಮಾಡಿದೆನೆಂಬುದು ನಿಜವಲ್ಲ. ಸಿಇಓ ಮತ್ತು ಸಂಪಾದಕರಿಗೆ ಎಲ್ಲ ಮಾಹಿತಿ ನೀಡಲಾಗಿದೆ. ಸಿಎಂಗೂ ಲಿಖಿತ ಪತ್ರ ಬರೆದು ಗಂಭೀರವಾಗಿ ಅಸಮಾಧಾನ ವ್ಯಕ್ತಪಡಿಸಲಾಗಿದೆ. ಅವರು ಸಾರಿ ಕೇಳಿಯೂ ಆಗಿದೆ,’ ಎಂದು ಪ್ರೆಸ್‌ಕ್ಲಬ್‌ ಕೂಟ ಹೆಸರಿನಲ್ಲಿರುವ ವಾಟ್ಸಾಪ್‌ ಗ್ರೂಪ್‌ವೊಂದರಲ್ಲಿ ವೈ ಗ ಜಗದೀಶ್‌ ಅವರ ಸ್ಪಷ್ಟನೆ ಎಂದು ಹಿರಿಯ ಪತ್ರಕರ್ತರೊಬ್ಬರು ಕಳಿಸಿದ್ದರು.

 

ಈ ಸ್ಪಷ್ಟನೆಯಲ್ಲಿಯೂ ಯಾರಿಗೆ ಹಣ ವಾಪಸ್‌ ಮಾಡಲಾಗಿದೆ ಎಂಬ ಮಾಹಿತಿ ಇರಲಿಲ್ಲ. ಸಿಇಒ ಮತ್ತು ಸಂಪಾದಕರಿಗೆ ಮಾಹಿತಿ ನೀಡಲಾಗಿದೆ ಎಂಬ ಮಾಹಿತಿಯು ಸ್ಪಷ್ಟನೆಯಲ್ಲಿದ್ದರೂ ಸಂಸ್ಥೆಯ ಸಿಇಒ ಮತ್ತು ಸಂಪಾದಕರೂ ಇದುವರೆಗೂ ಖಚಿತಪಡಿಸಿಲ್ಲ. ವೈ ಗ ಜಗದೀಶ್‌ ಅವರು ನೀಡಿದ್ದಾರೆ ಎನ್ನಲಾದ ಸ್ಪಷ್ಟೀಕರಣದ ಸ್ಕ್ರೀನ್‌ ಶಾಟ್‌ನ್ನೂ ಲಗತ್ತಿಸಿರುವ ಜನಾಧಿಕಾರ ಸಂಘರ್ಷ ಪರಿಷತ್‌ ಲೋಕಾಯುಕ್ತ ಪೊಲೀಸ್‌ ಎಸ್ಪಿ ತುಳಸಿಗೇರಿ ಅವರಿಗೆ   ಈಗಾಗಲೇ ದೂರು ಸಲ್ಲಿಸಿದೆ.

 

ದೂರಿನಲ್ಲೇನಿತ್ತು?

 

ರಾಜ್ಯದ ಹಲವಾರು ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವರದಿಗಾರರಿಗೆ ಮುಖ್ಯಮಂತ್ರಿ ಕಚೇರಿಯು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ ಪಾಗೋಜಿ ಅವರ ಮೂಲಕ ನಗದು ಹಣವನ್ನು ನೀಡಲಾಗಿದೆ. ವಿಶ್ವಸನೀಯ ಮೂಲಗಳ ಪ್ರಕಾರ ಡೆಕ್ಕನ್‌ ಹೆರಾಲ್ಡ್‌ನ ಮುಖ್ಯ ವರದಿಗಾರ ಭರತ್‌ ಜೋಷಿ ಅವರಿಗೆ ತಲುಪಿಸಿದ್ದ ಸ್ವೀಟ್‌ ಬಾಕ್ಸ್‌ನಲ್ಲಿಯೇ 1 ಲಕ್ಷ ರು. ನಗದನ್ನು ತಲುಪಿಸಲಾಗಿತ್ತು. ಇದು ಅವರ ಗಮನಕ್ಕೆ ಬಂದ ನಂತರ ಡೆಕ್ಕನ್‌ ಹೆರಾಲ್ಡ್‌ನ ಸಂಪಾದಕರು ಮತ್ತು ಸಿಇಒ ಅವರ ಗಮನಕ್ಕೆ ತಂದು ಅವರ ಸೂಚನೆಯಂತೆ ಹಣವನ್ನು ಹಿಂದಿರುಗಿಸಿದ್ದಾರೆ.

 

ಅಲ್ಲದೇ ಪ್ರಜಾವಾಣಿಯ ಮುಖ್ಯ ವರದಿಗಾರ ವೈ ಗ ಜಗದೀಶ್‌ ಎಂಬುವರಿಗೂ ಹಣ ತಲುಪಿಸಲಾಗಿತ್ತು. ಈ ಬಗ್ಗೆ ಖುದ್ದು ವೈ ಗ ಜಗದೀಶ್‌ ಅವರೇ ಹಣ ಪಡೆದಿದ್ದನ್ನು ಖಚಿತಪಡಿಸಿ ಒಪ್ಪಿಕೊಂಡಿದ್ದರು. ಇವರೂ ಸಹ ಸಂಸ್ಥೆಯ ಸಿಇಒ ಮತ್ತು ಸಂಪಾದಕರ ಗಮನಕ್ಕೆ ತಂದು ಹಣವನ್ನು ಹಿಂದಿರುಗಿಸಿದ್ದರು. ಅಲ್ಲದೇ ವೈ ಗ ಜಗದೀಶ್‌ ಅವರೇ ಒಪ್ಪಿಕೊಂಡಿರುವಂತೆ ಈ ಸಂಬಂಧ ಮುಖ್ಯಮಂತ್ರಿ ಅವರಿಗೆ ಸಂಸ್ಥೆಯಿಂದ ಖಂಡನಾ ಪತ್ರವನ್ನು ಬರೆಯಲಾಗಿದೆ. ಮತ್ತು ಇದಕ್ಕೆ ಮುಖ್ಯಮಂತ್ರಿ ಅವರು ಕ್ಷಮೆಯನ್ನೂ ಯಾಚಿಸಿದ್ದಾರೆ.

 

ಮುಖ್ಯಮಂತ್ರಿ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರದ ಆರೋಪ, ಕೆಟ್ಟ ಆಡಳಿತದ ಕುರಿತು ಪತ್ರಿಕೆಯಲ್ಲಿ ಪ್ರಕಟಿಸದಂತೆ ಹಣ ನೀಡಲಾಗಿದೆ ಎಂಬುದಕ್ಕೆ ಪುಷ್ಠಿ ನೀಡಿದಂತಾಗಿದೆ. ಮುಖ್ಯಮಂತ್ರಿ ಕಚೇರಿಯೇ ನೇರವಾಗಿ ಮಾಧ್ಯಮ ಪ್ರತಿನಿಧಿಗಳಿಗೆ ಲಂಚ ನೀಡಿರುವುದು ಅನೈತಿಕವಾದದ್ದಾಗಿದೆ. ಅಲ್ಲದೇ ಮಾಧ್ಯಮ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ ಸರ್ಕಾರದ ಪರವಾಗಿ ಇರುವಂತೆ ನೋಡಿಕೊಂಡಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ದೂರಿನಲ್ಲಿ ಜನಾಧಿಕಾರ ಸಂಘರ್ಷ ಪರಿಷತ್‌ ವಿವರಿಸಿತ್ತು.

 

ಈ ಪ್ರಕರಣವನ್ನು ಬೆನ್ನೆತ್ತಿರುವ ಜನಾಧಿಕಾರ ಸಂಘರ್ಷ ಪರಿಷತ್‌, ಲಂಚಮುಕ್ತ ಕರ್ನಾಟಕ ವೇದಿಕೆ ಮತ್ತು ನೈಜಹೋರಾಟಗಾರರ ವೇದಿಕೆಯು ಈಗಾಗಲೇ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ದೂರು ದಾಖಲಿಸಿದೆ. ದೂರು ದಾಖಲಿಸಿ ತಿಂಗಳಾಗಿದ್ದರೂ ಯಾರೊಬ್ಬರ ಮೇಲೂ ಎಫ್‌ಐಆರ್‌ ದಾಖಲಿಸಿಲ್ಲ. ಪ್ರಕರಣ ಸಂಬಂಧ ಜನಾಧಿಕಾರ ಸಂಘರ್ಷ ಪರಿಷತ್‌ ಮತ್ತಷ್ಟು ಸಾಕ್ಷ್ಯಗಳನ್ನು ಒದಗಿಸಿದ್ದನ್ನು ಸ್ಮರಿಸಬಹುದು.

Hot this week

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...

Related Articles

Popular Categories

error: Content is protected !!