Monday | April 6, 2026 |

ಎನ್‌ಸಿಸಿ ಕಂಪನಿ ನಿರ್ಮಾಣದ ಬಿಮ್ಸ್‌ ಆಸ್ಪತ್ರೆ ಬೀಮ್‌ನಲ್ಲೂ ನೀರು ಸೋರಿಕೆ; ಆತಂಕದಲ್ಲಿ ರೋಗಿಗಳು

ಬೆಂಗಳೂರು; ಇಲ್ಲಿನ ಹೆಣ್ಣೂರು ಕ್ರಾಸ್ ಬಳಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ತಾಯಿ ಮಗುವನ್ನು ಬಲಿ ಪಡೆದುಕೊಂಡಿರುವ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಾಗಿರುವ ನಾಗಾರ್ಜುನ ಕನ್ಸ್‌ಟ್ರಕ್ಷನ್ಸ್‌ ಕಂಪನಿಯು ಬೀದರ್‌ನಲ್ಲಿನ ಬಿಮ್ಸ್‌ ಆಸ್ಪತ್ರೆಯಲ್ಲಿಯೂ ಕಳಪೆ ಕಾಮಗಾರಿ ಮಾಡಿರುವ ಪರಿಣಾಮ ಆಸ್ಪತ್ರೆಯ ಬೀಮ್‌ಗಳಲ್ಲಿ ನೀರು ಸೋರಿಕೆಯಾಗುತ್ತಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

 

‘ಆಸ್ಪತ್ರೆ ವಿಸ್ತರಣೆಗಾಗಿ ಅಳವಡಿಸಿರುವ ಬೀಮ್‌ಗಳಲ್ಲಿ ನೀರು ಸೋರಿಕೆಯಾಗುತ್ತಿದೆ. ಜಾಯಿಂಟ್‌ ಕೆಲಸಗಳು ಸರಿಯಾಗಿ ಆಗದೇ ಇರುವುದರಿಂದ ನೀರು ಸೋರಿಕೆಯಾಗುತ್ತಿದೆ. ಕಾಮಗಾರಿಯನ್ನು ಸಮರ್ಪಕವಾಗಿ ಮಾಡದೇ ಇರುವುದೇ ಇದಕ್ಕೆ ಕಾರಣ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ಸಲ್ಲಿಸಿರುವ ವರದಿಯು ಇದೀಗ ಮುನ್ನೆಲೆಗೆ ಬಂದಿದೆ.

 

ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರ ಮೇಲುಸ್ತುವಾರಿಯಲ್ಲಿ ಎನ್‌ಸಿಸಿ ಸಂಸ್ಥೆಯು ಕಾಮಗಾರಿ ಕೈಗೆತ್ತಿಕೊಂಡಿತ್ತು. ಈ ಕಂಪನಿಯು ಕೈಗೆತ್ತಿಕೊಂಡಿರುವ ಆಸ್ಪತ್ರೆಯ ಕಾಮಗಾರಿಯು ಕಳಪೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಕಾಮಗಾರಿ ಗುಣಮಟ್ಟದ ಕುರಿತು ವರದಿಯನ್ನು ಸಲ್ಲಿಸದ ಪಿಡಬ್ಲ್ಯೂಡಿ ಇಲಾಖೆಯ ಕಾರ್ಯಪಾಲಕ ಅಭಿಯಂತರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವರದಿಯಲ್ಲಿ ಶಿಫಾರಸ್ಸು ಮಾಡಿರುವುದು ವರದಿಯಿಂದ ಗೊತ್ತಾಗಿದೆ. ಆದರೆ ಇದುವರೆಗೂ ಸಚಿವ ಡಾ ಕೆ ಸುಧಾಕರ್‌ ಅವರು ಈ ಕುರಿತು ಯಾವುದೇ ಕ್ರಮಕೈಗೊಂಡಿಲ್ಲ ಎಂದು ತಿಳಿದು ಬಂದಿದೆ.

 

ವೈದ್ಯಕೀಯ ಶಿಕ್ಷಣ ಇಲಾಖೆ ಸಲ್ಲಿಸಿರುವ ವರದಿ ಪ್ರತಿ

 

‘ನಾಗಾರ್ಜುನ ಕನ್ಸ್‌ಟ್ರಕ್ಷನ್ಸ್‌ ಕಂಪನಿಯವರು ಎಲ್ಲಾ ಕಾಮಗಾರಿಗಳನ್ನು ಮುಗಿಸಿ 2020ನೇ ವರ್ಷದಲ್ಲಿ ಕಟ್ಟಡವನ್ನು ಆಸ್ಪತ್ರೆಗೆ ಹಸ್ತಾಂತರ ಮಾಡಿರುತ್ತಾರೆ. ಕಾಮಗಾರಿಗೆ ನಿಗದಿಪಡಿಸಿದ್ದ ಅನುದಾನದಲ್ಲಿ 105 ಕೋಟಿ ರುಗಳನ್ನು ಸಂಸ್ಥೆಗೆ ಪಾವತಿಸಲಾಗಿದೆ. ಬಾಕಿ ಪಾವತಿಸಬೇಕಾಗಿರುವ ಅನುದಾನವನ್ನು ಬಿಡುಗಡೆ ಮಾಡಿಲ್ಲ,’ ಎಂಬುದು ವರದಿಯಿಂದ ಗೊತ್ತಾಗಿದೆ.

 

ಬಿಮ್ಸ್‌ ಆಸ್ಪತ್ರೆ ಕಟ್ಟಡ ಕಾಮಗಾರಿಯೂ ಸೇರಿದಂತೆ ಇಲ್ಲಿನ ಅವ್ಯವಸ್ಥೆಗಳ ಕುರಿತು ಶಾಸಕ ಹಾಗೂ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಸದಸ್ಯರೂ ಆಗಿರುವ ಈಶ್ವರ್ ಬಿ ಖಂಡ್ರೆ ಅವರು ಹಲವು ದೂರುಗಳನ್ನು ಸಮಿತಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇವರ ನೇತೃತ್ವದಲ್ಲಿ 2022ರ ನವೆಂಬರ್‌ 9ರಂದು ಆಸ್ಪತ್ರೆಯ ಕಾಮಗಾರಿ ಮತ್ತು ವ್ಯವಸ್ಥೆಗಳನ್ನು ಪರಿವೀಕ್ಷಣೆ ನಡೆಸಲಾಗಿತ್ತು. ಪರಿವೀಕ್ಷಣೆ ವೇಳೆಯಲ್ಲಿ ಆಸ್ಪತ್ರೆ ಕಾಮಗಾರಿಯಲ್ಲಿನ ಹಲವು ಲೋಪಗಳು ಬೆಳಕಿಗೆ ಬಂದಿದ್ದವು. ಇದನ್ನಾಧರಿಸಿ ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು ಎಂಬುದು ಗೊತ್ತಾಗಿದೆ.

 

ಸಿಬ್ಬಂದಿಗಳ ವಾಹನ ನಿಲುಗಡೆಗಾಗಿ ಮೀಸಲಿಟ್ಟಿರುವ ಆಸ್ಪತ್ರೆಯ ನೆಲಮಹಡಿಯಲ್ಲಿ ನೀರು ಸೋರಿಕೆಯಾಗುತ್ತಿರುವುದು, ಅಗ್ನಿಶಾಮಕ ಇಲಾಖೆಯವರು ವಿಧಿಸಿರುವ ದಂಡದ ಮೊತ್ತನ್ನು ಪಾವತಿಸಲು ವಿಫಲವಾಗಿರುವುದು, ಇಂಟರ್‌ನೆಟ್‌ ಸೇವೆ ಅಸಮರ್ಪಕವಾಗಿರುವುದು, ಆಸ್ಪತ್ರೆಯಲ್ಲಿ ಕ್ಯಾಥ್ ಲ್ಯಾಬ್‌ ಪ್ರಾರಂಭಿಸದೇ ಇರುವುದು, ಆಸ್ಪತ್ರೆಯ ಸಿವಿಲ್‌ ಕಾಮಗಾರಿಗಳಲ್ಲಿ ಆಗಿರುವ ಲೋಪಗಳ ಕುರಿತು ಕ್ರಮಕೈಗೊಳ್ಳದಿರುವುದು, ಆಸ್ಪತ್ರೆಗೆ ಲೆಕ್ಕಾಧಿಕಾರಿ, ಆರ್ಥಿಕ ಸಲಹೆಗಾರರನ್ನು ನೇಮಿಸದಿರುವುದು ಸೇರಿದಂತೆ ಹಲವು ಲೋಪಗಳನ್ನು ಪರಿವೀಕ್ಷಣೆ ವೇಳೆಯಲ್ಲಿ ಪತ್ತೆ ಹಚ್ಚಿದೆ.

 

ಮೆಟ್ರೋ ಪಿಲ್ಲರ್‌ ಕುಸಿದು ಬಿದ್ದು ತಾಯಿ ಮತ್ತು ಮಗು ಬಲಿ ಪಡೆದುಕೊಂಡಿರುವ ಪ್ರಕರಣದಲ್ಲಿ ನಾಗಾರ್ಜುನ ಕಂಪನಿ ಮತ್ತು ಅದರ ನಿರ್ದೇಶಕ ಚೈತನ್ಯ, ಜೂನಿಯರ್ ಎಂಜಿನಿಯರ್ ಪ್ರಭಾಕರ್, ಮೇಲ್ವಿಚಾರಣಾ ಪ್ರಾಜೆಕ್ಟ್ ಮ್ಯಾನೇಜರ್ ಮಥಾಯ್, ಯೋಜನಾ ವ್ಯವಸ್ಥಾಪಕ ವಿಕಾಸ್ ಸಿಂಗ್, ಮೇಲ್ವಿಚಾರಕ ಲಕ್ಷ್ಮೀಪತಿ ಹಾಗೂ ಬಿಎಂಆರ್‌ಸಿಎಲ್ ಉಪ ಮುಖ್ಯ ಎಂಜಿನಿಯರ್ ವೆಂಕಟೇಶ್ ಶೆಟ್ಟಿ, ಕಾರ್ಯನಿರ್ವಾಹಕ ಎಂಜಿನಿಯರ್ ಮಹೇಶ್ ಬೆಂಡೆಕರಿ ಮತ್ತು ಜೂನಿಯರ್ ಎಂಜಿನಿಯರ್ ಜಾಫರ್ ಸಾದಿಕ್ ಹೆಸರನ್ನು ಎಫ್ಐಆರ್ ನಲ್ಲಿ ದಾಖಲಿಸಿರುವುದನ್ನು ಸ್ಮರಿಸಬಹುದು.

Hot this week

ಬ್ಯಾಕ್‌ ಟು ಬ್ಯಾಕ್ ಸಾಲ,12 ಪ್ರತಿಶತದಷ್ಟು ಹೆಚ್ಚಳ, ಅಸಲನ್ನೂ ಮೀರಿಸಲಿದೆಯೆ ಬಡ್ಡಿ ಮರುಪಾವತಿ?

ಬೆಂಗಳೂರು; 2024-25ನೇ ಸಾಲಿನಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ಪಡೆದಿರುವ ಸಾರ್ವಜನಿಕ ಸಾಲವು...

1.16 ಕೋಟಿ ನಿಷ್ಕ್ರೀಯ ಖಾತೆಗಳಲ್ಲಿದೆ 3,403 ಕೋಟಿ; ಪರಿಣಾಮ ಬೀರದ ಆರ್‍‌ಬಿಐ ಮೇಲ್ವಿಚಾರಣೆ

ಬೆಂಗಳೂರು; ಸರ್ಕಾರಿ ಸೌಲಭ್ಯ ಪಡೆಯಲು ರಾಜ್ಯದ ರಾಷ್ಟ್ರೀಕೃತ ಮತ್ತಿತರೆ ಖಾಸಗಿ ಬ್ಯಾಂಕ್‌ಗಳಲ್ಲಿ...

ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ನ 850 ಕೋಟಿ ಬಾಕಿ ಪ್ರಕರಣ; ಕೇಂದ್ರ, ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಲಿಮಿಟೆಡ್‌ಗೆ ನಿಯಮಬಾಹಿರವಾಗಿ ಲೆಟರ್ ಆಫ್‌...

ಪ್ರಧಾನಮಂತ್ರಿ ಜೀವನ ಜ್ಯೋತಿ, ಸುರಕ್ಷಾ ವಿಮೆ ಯೋಜನೆ; ಕಲ್ಬುರ್ಗಿ ಸೇರಿ 12 ಜಿಲ್ಲೆಗಳಲ್ಲಿ ಕಳಪೆ ಪ್ರದರ್ಶನ

ಬೆಂಗಳೂರು; ಜೀವ ವಿಮೆ ರಕ್ಷಣೆ ನೀಡುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ...

ಕೆಎಎಸ್ 2011ರ ನೇಮಕಾತಿ ಅಕ್ರಮದ ತನಿಖಾ ವರದಿಗೆ ಕೊನೆ ಮೊಳೆ; ವಿಚಾರಣೆಯಿಲ್ಲದೇ ಪ್ರಕರಣ ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು; 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ...

Topics

ಬ್ಯಾಕ್‌ ಟು ಬ್ಯಾಕ್ ಸಾಲ,12 ಪ್ರತಿಶತದಷ್ಟು ಹೆಚ್ಚಳ, ಅಸಲನ್ನೂ ಮೀರಿಸಲಿದೆಯೆ ಬಡ್ಡಿ ಮರುಪಾವತಿ?

ಬೆಂಗಳೂರು; 2024-25ನೇ ಸಾಲಿನಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ಪಡೆದಿರುವ ಸಾರ್ವಜನಿಕ ಸಾಲವು...

1.16 ಕೋಟಿ ನಿಷ್ಕ್ರೀಯ ಖಾತೆಗಳಲ್ಲಿದೆ 3,403 ಕೋಟಿ; ಪರಿಣಾಮ ಬೀರದ ಆರ್‍‌ಬಿಐ ಮೇಲ್ವಿಚಾರಣೆ

ಬೆಂಗಳೂರು; ಸರ್ಕಾರಿ ಸೌಲಭ್ಯ ಪಡೆಯಲು ರಾಜ್ಯದ ರಾಷ್ಟ್ರೀಕೃತ ಮತ್ತಿತರೆ ಖಾಸಗಿ ಬ್ಯಾಂಕ್‌ಗಳಲ್ಲಿ...

ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ನ 850 ಕೋಟಿ ಬಾಕಿ ಪ್ರಕರಣ; ಕೇಂದ್ರ, ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಲಿಮಿಟೆಡ್‌ಗೆ ನಿಯಮಬಾಹಿರವಾಗಿ ಲೆಟರ್ ಆಫ್‌...

ಕೆಎಎಸ್ 2011ರ ನೇಮಕಾತಿ ಅಕ್ರಮದ ತನಿಖಾ ವರದಿಗೆ ಕೊನೆ ಮೊಳೆ; ವಿಚಾರಣೆಯಿಲ್ಲದೇ ಪ್ರಕರಣ ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು; 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ...

ಗಂಗಾ ಕಲ್ಯಾಣ ಯೋಜನೆ ವಿದ್ಯುದ್ದೀಕರಣ; ವಾಸ್ತವಿಕ ವೆಚ್ಚದಲ್ಲಿ ಏರಿಕೆ, ಎಸ್ಕಾಂಗಳಿಗೆ ಆರ್ಥಿಕ ಸಂಕಷ್ಟ

ಬೆಂಗಳೂರು; ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣ ವಿದ್ಯುತ್ ಸರಬರಾಜು...

ಅಂಬೇಡ್ಕರ್, ಜಗಜೀವನ್ ರಾಂ ಪ್ರಶಸ್ತಿಗೆ ಲಾಬಿ!; ಸರಜೂ ಕಾಟ್ಕರ್ ಸೇರಿ ಹಲವರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯು ಪ್ರತೀ ಏಪ್ರಿಲ್ ತಿಂಗಳಲ್ಲಿ ನೀಡುವ ಡಾ...

ಗ್ಯಾರಂಟಿಗಳಿಂದ ಹೆಚ್ಚಿದ ಹಣಕಾಸಿನ ಒತ್ತಡ, ಶಾಸಕಾಂಗದ ಅನುಮೋದನೆಯಿಲ್ಲದೇ 10,035 ಕೋಟಿ ವೆಚ್ಚಕ್ಕೆ ಆದೇಶ

ಬೆಂಗಳೂರು; ರಾಜ್ಯ ಶಾಸಕಾಂಗದ ಅನುಮೋದನೆಗೆ ಮುಂಚಿತವಾಗಿಯೇ 10,035.13 ಕೋಟಿ ರು ವೆಚ್ಚಕ್ಕೆ...

Related Articles

Popular Categories

error: Content is protected !!