Wednesday | March 25, 2026 |

ಹಣ, ಅಶ್ಲೀಲ ಸುದ್ದಿಗಳ ಜಾಲತಾಣ; 3 ವರ್ಷದಲ್ಲಿ 32,746 ಪ್ರಕರಣ, 11,125 ಸೈಬರ್‌ ಅಪರಾಧ ಮೊಕದ್ದಮೆ ದಾಖಲು

Support THE-FILE

spot_img

ಬೆಂಗಳೂರು; ಹಣ, ಅಶ್ಲೀಲ ಮತ್ತಿತರ ವಿಷಯಗಳ ಜಾಲತಾಣಗಳ ಕುರಿತಂತೆ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 32,746 ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಇದೇ ಅವಧಿಯಲ್ಲಿ 11,125 ಪ್ರಕರಣಗಳು ಸೈಬರ್‌ ಅಪರಾಧದಡಿಯಲ್ಲಿ ದಾಖಲಾಗಿವೆ ಎಂಬ ಅಂಕಿ ಅಂಶಗಳನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬಹಿರಂಗಪಡಿಸಿದ್ದಾರೆ.

ಕೋವಿಡ್‌ ಮೊದಲ ಅವಧಿಯಲ್ಲಿ 3,501 ಸೈಬರ್‌ ಅಪರಾಧಗಳಿದ್ದರೆ ಹಣ, ಅಶ್ಲೀಲ ಮತ್ತಿತರರ ವಿಷಯಗಳ ಜಾಲತಾಣಗಳ ಕುರಿತಂತೆ ಒಟ್ಟು 10,738 ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿ ಒದಗಿಸಿದ್ದಾರೆ.
ವಿಧಾನಪರಿಷತ್‌ ಸದಸ್ಯ ಡಾ ಚಂದ್ರಶೇಖರ್‌ ಬ ಪಾಟೀಲ್‌ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸೈಬರ್‌ ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪಿಗಳ ಹೆಸರುಗಳನ್ನು ಬಹಿರಂಗಪಡಿಸಿಲ್ಲ.

ಸೈಬರ್‌ ಅಪರಾಧಿಗಳಡಿಯಲ್ಲಿ ದಾಖಲಾಗಿರುವ 37,746 ಪ್ರಕರಣಗಳಲ್ಲಿನ ಕೇವಲ 1,503 ಆರೋಪಿಗಳನ್ನಷ್ಟೇ ಬಂಧಿಸಿರುವುದು ಸಚಿವರು ನೀಡಿರುವ ಉತ್ತರದಿಂದ ಗೊತ್ತಾಗಿದೆ.
2021ರಲ್ಲಿ 3,501, 2022ರಲ್ಲಿ 2,701, 2023 (ಜನವರಿ ಅಂತ್ಯ) 172 ಸೈಬರ್‌ ಅಪರಾಧಗಳು ದಾಖಲಾಗಿದ್ದರೆ 2020ರಲ್ಲಿ 10,738, 2021ರಲ್ಲಿ 8,132, 2022ರಲ್ಲಿ 12,551, 2023 (ಜನವರಿ ಅಂತ್ಯ) 1,325 ಪ್ರಕರಣಗಳು ಹಣ, ಅಶ್ಲೀಲ ಮತ್ತಿತರ ಜಾಲತಾಣಗಳ ಕುರಿತಾಗಿವೆ.

ಕಳೆದೆರಡು ವರ್ಷಗಳಿಂದ ಆನ್‌ಲೈನ್‌ ಬ್ಯಾಂಕಿಂಗ್‌ ಮತ್ತು ಮೊಬೈಲ್ ಮೂಲಕ ಹಣ ದೋಚುವ ಸೈಬರ್‌ ಅಪರಾಧ ಪ್ರಕರಣಗಳು ದ್ವಿಗುಣಗೊಂಡಿದ್ದರೂ ಸೈಬರ್ ಅಪರಾಧಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳ ರಚನೆ ಆಗಿಲ್ಲ. ಕಳೆದೊಂದು ವರ್ಷದಿಂದಲೂ ಪೊಲೀಸ್‌ ಮಹಾನಿರ್ದೇಶಕರು ವಿಶೇಷ ನ್ಯಾಯಾಲಯ ಸ್ಥಾಪನೆ ಕುರಿತು ಪತ್ರಗಳನ್ನು ಬರೆಯತ್ತಿದ್ದರೂ ಸರ್ಕಾರ ಮಾತ್ರ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ.

ವಿಶೇಷ ನ್ಯಾಯಾಲಯಗಳ ಸ್ಥಾಪನೆ ಕುರಿತು ಗಮನಹರಿಸಬೇಕಿದ್ದ ಕಾನೂನು ಇಲಾಖೆಯು ದಿವ್ಯ ನಿರ್ಲಕ್ಷ್ಯ ವಹಿಸಿದೆ. ಹೀಗಾಗಿ ಒಳಾಡಳಿತ ಇಲಾಖೆಯು ಸೈಬರ್‌ ಅಪರಾಧಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬೇಕು ಎಂದು 2022ರ ಮೇ 31ರಂದು ಪತ್ರವನ್ನು ಬರೆದಿತ್ತು.

‘ದೇಶದಲ್ಲಿ ಐ ಟಿ ಕ್ಷೇತ್ರವು ವ್ಯಾಪಕವಾಗಿ ಅಭಿವೃದ್ಧಿಯಾಗುತ್ತಿದ್ದು ಕರ್ನಾಟಕ ರಾಜ್ಯವು ಅಗ್ರಸ್ಥಾನದಲ್ಲಿದೆ. ಪ್ರಸ್ತುತ ಸಾರ್ವಜನಿಕರು ದೈನಂದಿನ ವ್ಯವಹಾರಗಳನ್ನು ಹೆಚ್ಚಾಗಿ ಅನ್‌ಲೈನ್‌ ಬ್ಯಾಂಕಿಂಗ್‌, ಮೊಬೈಲ್‌ ಮೂಲಕ ಹಣಕಾಸಿನ ಚಲಾವಣೆ ಮಾಡುತ್ತಿರುವುದರಿಂದ ಸೈಬರ್‌ ವಂಚಕರ ಸಂಖ್ಯೆಯು ಹೆಚ್ಚಾಗಿ ಸೈಬರ್‌ ಅಪರಾಧಗಳು 2019ರಿಂದ ದ್ವಿಗುಣಗೊಂಡಿದೆ. ಆದ್ದರಿಂದ ಸೈಬರ್‌ ಅಪರಾಧಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲು ಕ್ರಮವಹಿಸಬೇಕು,’ ಎಂದು ಒಳಾಡಳಿತ ಇಲಾಖೆಯು ಕಾನೂನು ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.

ಸೈಬರ್‌ ಅಪರಾಧಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಹಾಗೂ ಇಂತಹ ಪ್ರಕರಣಗಳನ್ನು ತಡೆಗಟ್ಟಲುರಾಜ್ಯದ ಪ್ರತಿ ಜಿಲ್ಲೆ ಹಾಗೂ ನಗರಗಳಲ್ಲಿ ವಿಶೇಷ ಸೈಬರ್‌, ನಾರ್ಕೋಟಿಕ್‌ ಎಕಾನಾಮಿಕ್‌ ಪೊಲೀಸ್‌ ಠಾಣೆಗಳನ್ನು ಸ್ಥಾಪಿಸಿದೆ. ರಾಜ್ಯದಲ್ಲಿ ಒಟ್ಟು 46 ಸಿಇಎನ್‌ ಪೊಲೀಸ್‌ ಠಾಣೆಗಳು ಹಾಗೂ ಇವುಗಳ ಪೈಕಿ ಬೆಂಗಳೂರು ನಗರದಲರ್ಲಿ ಮಾತ್ರ 8 ವಿಶೇಷ ಸಿಇಎನ್‌ಪೊಲೀಸ್‌ ಠಾಣೆಗಳು ಪ್ರತಿ ವಿಭಾಗಕ್ಕೆ ಒಂದರಂತೆ ಕಾರ್ಯನಿರ್ವಹಿಸುತ್ತಿವೆ.

ಸೈಬರ್‌ ಅಪರಾಧಗಳನ್ನು ತಡೆಗಟ್ಟುವ ಸಲುವಾಗಿಸಿಐಡಿ ಕಚೇರಿಯಲ್ಲಿ ಸೆಂಟರ್‌ ಫಾರ್‌ ಸೈಬರ್‌ ಕ್ರೈಮ್‌ ಇನ್ವೆಸ್ಟಿಗೇಷನ್‌ ಮತ್ತುಡಿಜಿಟಲ್‌ ಫೊರೆನ್ಸಿಕ್‌ ಟ್ರೈನಿಂಗ್‌ ಅಂಡ್‌ ರೀಸರ್ಚ್ ಘಟಕ ಆರಂಭಿಸಿದೆ ಎಂದು ತಿಳಿದುಬಂದಿದೆ.

Hot this week

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

Topics

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

Related Articles

Popular Categories

error: Content is protected !!