Monday | June 8, 2026 |

26 ಲಕ್ಷ ರು.ಸ್ಥಾನಪಲ್ಲಟ ಪ್ರಕರಣ ವಿಚಾರಣೆ ಆದೇಶ ರದ್ದು,1,000 ರು ಲಂಚ ಪಡೆದ ಪ್ರಕರಣ ತನಿಖೆಗೆ ಆದೇಶ

ಬೆಂಗಳೂರು; ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೆಯೇ 26.07 ಲಕ್ಷ ರು.ಗಳನ್ನು ಸ್ಥಾನಪಲ್ಲಟಗೊಳಿಸಿದ್ದ ಆರೋಪಕ್ಕೆ ಗುರಿಯಾಗಿರುವ ಅಸಿಸ್ಟೆಂಟ್‌ ಎಕ್ಸಿಕ್ಯೂಟಿವ್‌ ಇಂಜನಿಯರ್‌ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಹೊರಡಿಸಿದ್ದ ಆದೇಶವನ್ನೇ ಸರ್ಕಾರವು ಹಿಂಪಡೆದುಕೊಂಡಿದೆ. ಇದೇ ಇಲಾಖೆಯ ಮತ್ತೊಬ್ಬ ಸಹಾಯಕ ಇಂಜಿನಿಯರ್‌ ಗುತ್ತಿಗೆದಾರರಿಂದ 1,000 ಅಕ್ರಮ ಸಂಭಾವನೆ ಪಡೆದ ಆರೋಪದಡಿಯಲ್ಲಿ ತನಿಖೆ ನಡೆಸಲು ಉಪ ಲೋಕಾಯುಕ್ತರಿಗೆ ವಹಿಸಿದೆ.

 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಹರಪನಹಳ್ಳಿ ಉಪ ವಿಭಾಗದ ಎಇಇ ಲಷ್ಕರಿ ನಾಯ್ಕ ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವ ಸಂಬಂಧ 2016ರ ಅಕ್ಟೋಬರ್‌ 25ರಂದು ಆದೇಶ ಹೊರಡಿಸಿತ್ತು. ಆದರೀಗ 6 ವರ್ಷಗಳ ನಂತರ ಆಪಾದಿತ ಅಧಿಕಾರಿಯು ಮೇಲಾಧಿಕಾರಿಯ ನಿರ್ದೇಶನದ ಮೇರೆಗೆ ಕ್ರಮವಹಿಸಲಾಗಿದೆ ಎಂದು ನೀಡಿದ್ದ ಸಮಜಾಯಿಷಿಗೆ ಮಣೆ ಹಾಕಿ ಲೋಕಾಯುಕ್ತ ವಿಚಾರಣೆಗೆ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದೆ. ಹೀಗಾಗಿ ಪ್ರಕರಣವು ಮುಕ್ತಾಯಗೊಂಡಂತಾಗಿದೆ.

 

ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಘುನಾಥಗೌಡ ಎಸ್‌ ಪಾಟೀಲ ಅವರು 2023ರ ಜನವರಿ 31ರಂದು ಲೋಕಾಯುಕ್ತ ನಿಬಂಧಕರಿಗೆ ಪತ್ರ(ಸಂಖ್ಯೆ; ಗ್ರಾಅಪ 8 ಇಎನ್‌ಕ್ಯೂ 2023) ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

26.07 ಲಕ್ಷ ಸ್ಥಾನಪಲ್ಲಟ ಪ್ರಕರಣ

 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಉಪ ವಿಭಾಗಕ್ಕೆ ವಿಶೇಷ ಅಭಿವೃದ್ಧಿ ಯೋಜನೆಯಡಿ 2003ರಲ್ಲಿ 1735 ಲಕ್ಷ ರು. ಅನುದಾನ ಒದಗಿಸಲಾಗಿತ್ತು. ಈ ಪೈಕಿ 26.07 ಲಕ್ಷ ರು.ಗಳನ್ನು ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೇ ಸ್ಥಾನಪಲ್ಲಟ ಮಾಡಿ ವೆಚ್ಚ ಮಾಡಿದ್ದರು. ಈ ಸಂಬಂಧ ಎಇಇ ಲಷ್ಕರಿ ನಾಯ್ಕ ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕು ಎಂದು 2016ರ ಅಕ್ಟೋಬರ್‌ 25ರಂದು ಆದೇಶ ಹೊರಡಿಸಲಾಗಿತ್ತು.

 

ಲಷ್ಕರಿ ನಾಯ್ಕ ಅವರು ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಕೆಎಟಿಯಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು 3 ವರ್ಷಗಳವರೆಗೆ ವಿಚಾರಣೆ ನಡೆಸಿದ್ದ ಕೆಎಟಿಯು 2019ರ ಅಕ್ಟೋಬರ್‌ 25ರಂದು ಸರ್ಕಾರದ ಆದೇಶವನ್ನು ರದ್ದುಗೊಳಿಸಿತ್ತು. ಆದರೆ ಈ ಆದೇಶವನ್ನು ಪ್ರಶ್ನಿಸಲು ಅರ್ಹವಲ್ಲವೆಂದು ಸರ್ಕಾರಿ ವಕೀಲರು ಅಭಿಪ್ರಾಯ ನೀಡಿದ್ದರು.

 

‘ಈ ಪ್ರಕರಣದಲ್ಲಿ ಯಾವುದೇ ಆರ್ಥಿಕ ನಷ್ಟ ಆಗದೇ ಇರುವುದು ಮತ್ತು ಆಪಾದಿತ ಅಧಿಕಾರಿಯು ತಮ್ಮ ಮೇಲಾಧಿಕಾರಿಯವರ ನಿರ್ದೇಶನದ ಅನುಸಾರ ಕ್ರಮವಹಿಸಿರುವುದು ಇತ್ಯಾದಿ ಅಂಶಗಳು ದಾಖಲೆಗಳಿಂದ ಕಂಡುಬಂದಿದ್ದರಿಂದ ನ್ಯಾಯ ಮಂಡಳಿಯ ಆದೇಶವನ್ನು ಒಪ್ಪಿ ಲಷ್ಕರಿ ನಾಯ್ಕ ಅವರ ವಿರುದ್ಧ ಇಲಾಖೆ ವಿಚಾರಣೆ ನಡೆಸಲು ಉಪಲೋಕಾಯುಕ್ತರಿಗೆ ವಹಿಸಿದ್ದ ಆದೇಶವನ್ನು ರದ್ದುಪಡಿಸಿ ಮತ್ತು ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸದೇ ಇರಲು ತೀರ್ಮಾನಿಸಿ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ,’ ಎಂದು ಲೋಕಾಯುಕ್ತ ನಿಬಂಧಕರಿಗೆ ಬರೆದ ಪತ್ರದಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ ವಿವರಿಸಿದ್ದಾರೆ.

 

1,000 ಅಕ್ರಮ ಸಂಭಾವನೆ ಪ್ರಕರಣ

 

ಶಿವಮೊಗ್ಗದಲ್ಲಿರುವ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಉಪ ವಿಭಾಗದ ಸಹಾಯಕ ಇಂಜಿನಿಯರ್‌ ಹೆಚ್‌ ಬಸವರಾಜ್‌ ಅವರು ಗುತ್ತಿಗೆದಾರರ ಸಹಾಯಕ ಪರಮೇಶ್‌ ಎಂಬುವರಿಂದ 1,000 ರು. ಅಕ್ರಮ ಸಂಭಾವನೆ ಸ್ವೀಕರಿಸುವ ವೇಳೆಯಲ್ಲಿ ಸಿಕ್ಕಿಬಿದ್ದಿದ್ದರು. ಈ ಪ್ರಕರಣದ ಕುರಿತು ಇಲಾಖೆ ವಿಚಾರಣೆ ನಡೆಸಲು ಕರ್ನಾಟಕ ನಾಗರಿಕ ಸೇವಾ ನಿಯಮ (ಸಸಿಎ) 14ಎ ಅನ್ವಯ ಉಪ ಲೋಕಾಯುಕ್ತರಿಗೆ ವಹಿಸಲಾಗಿತ್ತು.

 

ಈ ಕುರಿತು ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು 2023ರ ಫೆಬ್ರುವರಿ 1ರಂದು (ಸಂಖ್ಯೆ ಗ್ರಾಅಪ 29 ಇಎನ್‌ಕ್ಯೂ 2022) ಪತ್ರ ಬರೆದಿರುವುದು ಗೊತ್ತಾಗಿದೆ.

 

‘1,000 ಅಕ್ರಮ ಸಂಭಾವನೆ ಪಡೆದಿರುವ ಪ್ರಕರಣದಲ್ಲಿ ಭಾಗಿಯಾಗಿರುವ ಹೆಚ್‌ ಬಸವರಾಜ್‌ ಅವರ ಮಾತೃ ಇಲಾಖೆಯು ಲೋಕೋಪಯೋಗಿ ಇಲಾಖೆಯಾಗಿರುತ್ತದೆ. ಆದ್ದರಿಂದ ಅವರ ವಿರುದ್ಧ ಇಲಾಖೆ ವಿಚಾರಣೆ ಪ್ರಕರಣವನ್ನು ಲೋಕೋಪಯೋಗಿ ಇಲಾಖೆಯು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಾಗಿರುತ್ತದೆ,’ ಎಂದು ಪತ್ರದಲ್ಲಿ ವಿವರಿಸಲಾಗಿದೆ.

Hot this week

ಘನತ್ಯಾಜ್ಯ ವಿಲೇವಾರಿ; 39,437 ಕೋಟಿ ರು ಮೌಲ್ಯದ ಟೆಂಡರ್ ಪರಿಶೀಲನೆಗೆ ಕೇವಲ 7 ದಿನ ಗಡುವು, ಸಿದ್ದು ಅವಧಿಯಲ್ಲಿ ರಚಿಸಿದ್ದ ತಂಡಕ್ಕೆ ಕೊಕ್‌ ಕೊಟ್ಟು ಹೊಸ ತಂಡ ರಚಿಸಿದ್ದೇಕೆ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ...

ಎಂಎಸ್‌ಐಎಲ್‌ನಲ್ಲಿ ಅಕ್ರಮ; ನಿವೃತ್ತ ಐಎಎಸ್‌ ಜಿ ಸಿ ಪ್ರಕಾಶ್‌ ಸೇರಿ 7 ಮಂದಿ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಮೈಸೂರು ಸೇಲ್ಸ್‌ ಇಂಟರ್ ನ್ಯಾ‍ಷನಲ್‌ ಲಿಮಿಟೆಡ್‌ನಲ್ಲಿ ನಡೆದಿದೆ ಎನ್ನಲಾದ ವಿವಿಧ...

ಮತದಾರರ ಪಟ್ಟಿ ಪರಿಷ್ಕರಣೆ; ಹಲವು ಜಿಲ್ಲೆಗಳಲ್ಲಿ ವರ್ಷವಾದರೂ ನೇಮಕವಾಗದ ಬಿಎಲ್‌ಒ, ಕಾಲಕಸವಾಯಿತೇ ಆಯೋಗದ ಪತ್ರ?

ಬೆಂಗಳೂರು; ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮತ್ತು ವಿಶೇಷ ಸಂಕ್ಷಿಪ್ತ...
Please Scan to make Your Contribution

Topics

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ...

ಎಂಎಸ್‌ಐಎಲ್‌ನಲ್ಲಿ ಅಕ್ರಮ; ನಿವೃತ್ತ ಐಎಎಸ್‌ ಜಿ ಸಿ ಪ್ರಕಾಶ್‌ ಸೇರಿ 7 ಮಂದಿ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಮೈಸೂರು ಸೇಲ್ಸ್‌ ಇಂಟರ್ ನ್ಯಾ‍ಷನಲ್‌ ಲಿಮಿಟೆಡ್‌ನಲ್ಲಿ ನಡೆದಿದೆ ಎನ್ನಲಾದ ವಿವಿಧ...

ಮತದಾರರ ಪಟ್ಟಿ ಪರಿಷ್ಕರಣೆ; ಹಲವು ಜಿಲ್ಲೆಗಳಲ್ಲಿ ವರ್ಷವಾದರೂ ನೇಮಕವಾಗದ ಬಿಎಲ್‌ಒ, ಕಾಲಕಸವಾಯಿತೇ ಆಯೋಗದ ಪತ್ರ?

ಬೆಂಗಳೂರು; ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮತ್ತು ವಿಶೇಷ ಸಂಕ್ಷಿಪ್ತ...

ಆರ್‍‌ಬಿಎಸ್‌ಎಸ್ಎನ್‌ ಗಣಿ ಕಂಪನಿಗೆ 64.50 ಎಕರೆ ವಿಸ್ತೀರ್ಣದ ಸರ್ಕಾರಿ ಜಮೀನು; 3 ಬಾರಿ ಪ್ರಸ್ತಾವ ತಿರಸ್ಕೃತವಾದರೂ ಸಚಿವ ಸಂಪುಟಕ್ಕೆ ಮಂಡಿಸಲು ಸಿಎಂ ನಿರ್ದೇಶನ

ಬೆಂಗಳೂರು; ಕಾನೂನುಬಾಹಿರವಾಗಿ ಗಣಿಗಾರಿಕೆ ನಡೆಸುತ್ತಿದೆ ಎಂಬ ಗಂಭೀರ ಆರೋಪಕ್ಕೆ ಗುರಿಯಾಗಿರುವ ಆರ್‍‌ಬಿಎಸ್‌ಎನ್‌...

Related Articles

Popular Categories

error: Content is protected !!