Thursday | March 26, 2026 |

371(ಜೆ) ನೇಮಕಾತಿ, ಮುಂಬಡ್ತಿ; 26,264 ಹುದ್ದೆಗಳು ಭರ್ತಿಗೆ ಬಾಕಿ, ಇಲಾಖೆಗಳಿಂದ ವಿಳಂಬ ದ್ರೋಹ

Support THE-FILE

spot_img

ಬೆಂಗಳೂರು; ಭಾರತ ಸಂವಿಧಾನದ ಅನುಚ್ಛೇಧ 371(ಜೆ) ಅಡಿ ನೇಮಕಾತಿಯಡಿಯಲ್ಲಿ ಇನ್ನೂ 26,264 ಹುದ್ದೆಗಳು ಭರ್ತಿ ಮಾಡಲು ಬಾಕಿ ಇದೆ. ಸ್ಥಳೀಯ ವೃಂದದಲ್ಲಿ ನೇರ ನೇಮಕಾತಿ, ಮುಂಬಡ್ತಿ, ಕೆಪಿಎಸ್‌ಸಿ, ಕೆಇಎ ಸೇರಿದಂತೆ ಇನ್ನಿತರೆ ನೇಮಕಾತಿ ಸಂಸ್ಥೆಗಳಲ್ಲಿ ಬಾಕಿ ಇರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಇಲಾಖೆಗಳು ಅನುಸರಿಸಿರುವ ವಿಳಂಬ ನೀತಿ ಬಗ್ಗೆ ಸಚಿವ ಸಂಪುಟ ಸಭೆಯು ಅಸಮಾಧಾನ ವ್ಯಕ್ತಪಡಿಸಿರುವುದು ಬಹಿರಂಗವಾಗಿದೆ.

 

371 (ಜೆ) ಅಡಿಲ್ಲಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಮೀಸಲಾತಿ ನೀತಿ ಪಾಲನೆ ಬಗ್ಗೆ ರಚಿಸಿರುವ ಸಚಿವ ಸಂಪುಟ ಉಪ ಸಮಿತಿಯ ಅಧ್ಯಕ್ಷ ಬಿ ಶ್ರೀರಾಮುಲು ಅಧ್ಯಕ್ಷತೆಯಲ್ಲಿ 2023ರ ಮಾರ್ಚ್‌ 24ರಂದು ನಡೆದಿದ್ದ ಸಭೆಯು ಇಲಾಖೆಗಳ ಕಾರ್ಯವೈಖರಿಗೆ ಕನ್ನಡಿ ಹಿಡಿದಿದೆ. ಸಭೆಯ ನಡವಳಿ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

371(ಜೆ) ಅಡಿಯಲ್ಲಿ ಮೀಸಲಾತಿ ಅನುಷ್ಠಾನ ಸೇರಿದಂತೆ ಇನ್ನಿತರೆ ಆದೇಶಗಳ ಪಾಲನೆಯಾಗಿವೆಯೆ ಇಲ್ಲವೇ ಎಂಬ ಕುರಿತು ಹಲವು ಇಲಾಖೆಗಳು ಸಚಿವ ಸಂಪುಟ ಉಪ ಸಮಿತಿಗೇ ಸರಿಯಾದ ಮಾಹಿತಿ ನೀಡಿಲ್ಲ. ಅಲ್ಲದೇ ನೇಮಕಾತಿ ಪ್ರಕ್ರಿಯೆಗಳನ್ನೂ ಪ್ರಾರಂಭಿಸಿಲ್ಲ ಎಂಬುದು ಸಭೆಯ ನಡವಳಿಯಿಂದ ತಿಳಿದು ಬಂದಿದೆ.

 

‘ಇದುವರೆಗೂ ಸ್ಥಳೀಯ ವೃಂದದಲ್ಲಿ 87,499 ಗುರುತಿಸಲಾದ ಹುದ್ದೆಗಳಲ್ಲಿ 61,235 ಹುದ್ದೆಗಳನ್ನು ಭರ್ತಿ ಮಾಡಿದ್ದು 26,254 ಹುದ್ದೆಗಳು ಭರ್ತಿ ಮಾಡಲು ಬಾಕಿ ಇದೆ. ಅದರಲ್ಲಿ 12,286 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿದ್ದು 13,978 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಬಾಕಿ ಇದೆ ಎಂಬ ವಿವರಗಳನ್ನು ಸಭೆಯ ಗಮನಕ್ಕೆ ತರಲಾಯಿತು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧ್ಯಕ್ಷರು ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗದೇ ಇರುವ ಹುದ್ದೆಗಳ ನೇಮಕಾತಿಯನ್ನು ತ್ವರಿತವಾಗಿ ಪ್ರಾರಂಭಿಸಬೇಕು,’ ಎಂದು ಸೂಚಿಸಿರುವುದು ಸಭೆಯ ನಡವಳಿಯಿಂದ ಗೊತ್ತಾಗಿದೆ.

 

ಕೆಲವು ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿಗೆ ಪ್ರಸ್ತಾಪಿಸಲಾಗಿದೆ. ಇದಿನ್ನೂ ಅಂತಿಮವಾಗಿಲ್ಲ. ಹೀಗಾಗಿ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲು ತೊಡಕಾಗಿದೆ ಎಂದು ನಡವಳಿಯಿಂದ ತಿಳಿದು ಬಂದಿದೆ.

 

ನೇರ ನೇಮಕಾತಿ ಮಾತ್ರವಲ್ಲದೇ ಮುಂಬಡ್ತಿಗೆ ಸಂಬಂಧಿಸಿದಂತೆಯೂ ಇಲಾಖೆಗಳು ವಿಳಂಬ ಧೋರಣೆಯನ್ನು ಪ್ರದರ್ಶಿಸಿವೆ. ಸ್ಥಳೀಯ ವೃಂದದಲ್ಲಿ ಮುಂಬಡ್ತಿಗೆ ಸಂಬಂಧಿಸಿದಂತೆ ಒಟ್ಟು 33,043 ಗುರುತಿಸಲಾದ ಹುದ್ದೆಗಳಲ್ಲಿ 23,444 ಹುದ್ದೆಗಳನ್ನು ಈವರೆಗೆ ಭರ್ತಿ ಮಾಡಲಾಗಿದೆ. ಪ್ರಸ್ತುತ 9,604 ಹುದ್ದೆಗಳನ್ನು ಭರ್ತಿ ಮಾಡಲು ಬಾಕಿ ಇದೆ. ಅದರಲ್ಲಿ 1,662 ಅಭ್ಯರ್ಥಿಗಳು ಮುಂಬಡ್ತಿಗೆ ಅರ್ಹತೆ ಪಡೆದಿಲ್ಲ.

 

ಸ್ಥಳೀಯ ವೃಂದದಲ್ಲಿ ನೇರ ನೇಮಕಾತಿ, ಮುಂಬಡ್ತಿ, ಕೆಪಿಎಸ್‌ಸಿ, ಕೆಇಎ ಸೇರಿದಂತೆ ಇನ್ನಿತರೆ ನೇಮಕಾತಿ ಸಂಸ್ಥೆಗಳಲ್ಲಿ ಬಾಕಿ ಇರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ 2022ರ ಆಗಸ್ಟ್‌ 3ರಂದು ಸಚಿವ ಸಂಪುಟದ ಉಪ ಸಮಿತಿ ಸಭೆಗೆ ಯೋಜನಾ ಇಲಾಖೆಯು ಸಲ್ಲಿಸಿರುವ ವಿಷಯ ಟಿಪ್ಪಣಿಯಲ್ಲಿ 27, 735 ಹುದ್ದೆಗಳು ನೇರ ನೇಮಕಾತಿಗೆ ಬಾಕಿ ಇರುವುದನ್ನು ಪ್ರಸ್ತಾಪಿಸಿತ್ತು. ಬಾಕಿ ಇರುವ ಮುಂಬಡ್ತಿ ಹುದ್ದೆಗಳನ್ನು 2022ರ ಮೇ ಅಂತ್ಯದೊಳಗೆ ಮತ್ತು ಬಾಕಿ ಇರುವ ನೇರ ನೇಮಕಾತಿ ಹುದ್ದೆಗಳನ್ನು ಜುಲೈ 2022ರ ಅಂತ್ಯದೊಳಗೆ ಭರ್ತಿ ಮಾಡಲು ಸಮಯಾವಕಾಶ ನೀಡಿತ್ತು.

 

ಕೆಪಿಎಸ್‌ಸಿಯಲ್ಲಿ 3,189, ಕೆಇ ಎ ಮತ್ತು ಇತರೆ ನೇಮಕಾತಿ ಸಂಸ್ಥೆಗಳಲ್ಲಿ 9,309 ಹುದ್ದೆಗಳು ಬಾಕಿ ಇವೆ. ಇದರ ಹೊರತಾಗಿಯೂ ಇನ್ನು ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗದೇ 12,846 ಹುದ್ದೆಗಳು ಬಾಕಿ ಇವೆ. ಅದೇ ರೀತಿ ಮುಂಬಡ್ತಿಯಿಂದ ಭರ್ತಿ ಮಾಡಬೇಕಿರುವ ಒಟ್ಟು 32, 284 ಹುದ್ದೆಗಳ ಪೈಕಿ 22,603 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಈ ವಿಭಾಗದಲ್ಲಿ ಇನ್ನೂ 9,667 ಹುದ್ದೆಗಳಿಗೆ ಮುಂಬಡ್ತಿಯಿಂದ ತುಂಬಬೇಕಿತ್ತು.

 

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ 371(ಜೆ) ಅನ್ವಯ ಸ್ಥಳೀಯ ವೃಂದದಲ್ಲಿ ನೇರ ನೇಮಕಾತಿ ಅಡಿಯಲ್ಲಿ 6,.974 ಹುದ್ದೆಗಳು ಬಾಕಿ ಇವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3,056, ಸಾರಿಗೆ ಇಲಾಖೆಯಲ್ಲಿ 2,250, ಉನ್ನತ ಶಿಕ್ಷಣ ಇಲಾಖೆಯಲ್ಲಿ 1,773, ಇಂಧನ ಇಲಾಖೆಯಲ್ಲಿ 1,584, ನಗರಾಭಿವೃದ್ದಿ ಇಲಾಖೆಯಲ್ಲಿ 1,273 ಹುದ್ದೆಗಳು ಬಾಕಿ ಇವೆ. ಕಳೆದೆರಡು ವರ್ಷಗಳಿಂದಲೂ 371 ಜೆ ಅನುಷ್ಠಾನದ ಕುರಿತು ನಿರಂತರವಾಗಿ ಸಭೆ ನಡೆಯುತ್ತಿದ್ದರೂ ಖಾಲಿ ಇರುವ ಹುದ್ದೆಗಳು ಭರ್ತಿಯಾಗುತ್ತಿಲ್ಲ. ಈ ಕುರಿತು ‘ದಿ ಫೈಲ್‌’ 2022ರ ಆಗಸ್ಟ್‌ 3ರಂದು ವರದಿ ಪ್ರಕಟಿಸಿತ್ತು.

371 (ಜೆ) ಅನುಷ್ಠಾನದಲ್ಲಿ ಹಿಂದುಳಿದ ಸರ್ಕಾರ; 27,735 ಹುದ್ದೆಗಳ ಭರ್ತಿಗೆ ಇನ್ನೂ ಕೂಡಿ ಬಂದಿಲ್ಲ ಕಾಲ

ಅದೇ ರೀತಿ ಪ್ರಾಥಮಿಕ ಪ್ರೌಢಶಿಕ್ಷಣ ಇಲಾಖೆಯಲ್ಲಿ 2,044, ಇಂಧನ ಇಲಾಖೆಯಲ್ಲಿ 1,419 ಹುದ್ದೆಗಳನ್ನು ಮುಂಬಡ್ತಿಯಿಂದ ಭರ್ತಿ ಮಾಡಿಕೊಳ್ಳಬೇಕಿದೆ. ಕೆಇಎ ಮತ್ತು ಇತರೆ ನೇಮಕಾತಿ ಸಂಸ್ಥೆಗಳಲ್ಲಿ ಬಾಕಿ ಇರುವ ಹುದ್ದೆಗಳ ಪೈಕಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ 5,050, ಸಾರಿಗೆ ಇಲಾಖೆಯಲ್ಲಿ 1,595, ಹುದ್ದೆಗಳು ಬಾಕಿ ಇವೆ. ಕೆಪಿಎಸ್ಸಿಯಲ್ಲಿ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ 439, ಉನ್ನತ ಶಿಕ್ಷಣ ಇಲಾಖೆಯಲ್ಲಿ 354, ನಗರಾಭಿವೃದ್ಧಿ ಇಲಾಖೆಯಲ್ಲಿ 384 ಹುದ್ದೆಗಳು ಬಾಕಿ ಇರುವುದು ತಿಳಿದು ಬಂದಿದೆ.

Hot this week

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

Topics

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

Related Articles

Popular Categories

error: Content is protected !!