Thursday | March 26, 2026 |

ಗಣಿ ಕಂಪನಿ ಪರವಾಗಿ ನಿರ್ದೇಶನಕ್ಕೆ ಶಿಫಾರಸ್ಸು; ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತಂದರೇ ಕಾಗೇರಿ?

Support THE-FILE

spot_img

ಬೆಂಗಳೂರು; ಪರಿಹಾರಾತ್ಮಕ ಅರಣ್ಯ ಜಮೀನು ನೀಡುವ ಸಂಬಂಧ ಒತ್ತಾಯ ಮಾಡದಂತೆ ಅರಣ್ಯ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ಗಣಿ ಕಂಪನಿ ಪರವಾಗಿ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶಿಫಾರಸ್ಸು ಪತ್ರ ಬರೆದಿರುವುದು ಇದೀಗ ಬಹಿರಂಗವಾಗಿದೆ.

 

ಕಾಗೇರಿ ಅವರು ರೌಡಿ ಶೀಟರ್‌ ಒಬ್ಬರ ಜತೆ ಗುಪ್ತವಾಗಿ ಸಭೆ ನಡೆಸಿದ್ದಾರೆ ಎಂಬ ಫೋಟೋಗಳು ವೈರಲ್‌ ಆಗಿರುವ ಬೆನ್ನಲ್ಲೇ ಗಣಿ ಕಂಪನಿ ಪರವಾಗಿ ನಿರ್ದೆಶನ ನೀಡಬೇಕು ಎಂದು ಬರೆದಿರುವ ಪತ್ರವೂ ಮುನ್ನೆಲೆಗೆ ಬಂದಿದೆ. ಈ ಸಂಬಂಧ ಅರಣ್ಯ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯು ಕಂದಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಬರೆದಿರುವ ಪತ್ರದಲ್ಲಿ ಸಭಾಧ್ಯಕ್ಷರು ಬರೆದಿರುವ ಪತ್ರವನ್ನು ಉಲ್ಲೇಖಿಸಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ತಮ್ಮ ಮತ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸೇರಿದಂತೆ ಹಲವರಿಗೆ ಪತ್ರ ಮತ್ತು ಶಿಫಾರಸ್ಸು ಮಾಡಲು ಅವಕಾಶವಿದೆ. ಇದನ್ನು ಹೊರತುಪಡಿಸಿ ಗಣಿ ಕಂಪನಿಯೂ ಸೇರಿದಂತೆ ಮತ್ತಿತರೆ ವಿಚಾರಗಳಿಗೆ ಸಂಬಂಧಪಟ್ಟಂತೆ ನಿರ್ದೇಶನ ನೀಡಬೇಕು ಎಂದು ಪತ್ರ ಬರೆಯುವುದು ವಿಧಾನಸಭಾಧ್ಯಕ್ಷರ ಪೀಠದ ಗೌರವಕ್ಕೆ ಕುಂದು ತಂದಂತಾಗುತ್ತದೆ ಎಂಬ ಅಭಿಪ್ರಾಯವೂ ಕೇಳಿ ಬಂದಿದೆ.

 

ಗಣಿ ಗುತ್ತಿಗೆ ಪ್ರದೇಶಗಳಲ್ಲಿ ಗಣಿಗಾರಿಕೆ ಮಾಡಲು ಅರ್ಜಿ ಸಲ್ಲಿಸುವ ಕಂಪನಿಗಳು ಅರಣ್ಯ ವಿಮೋಚನೆ ಪಡೆಯುವ ಸಂದರ್ಭದಲ್ಲಿ ಪರಿಹಾರಾತ್ಮಕ ಅರಣ್ಯ ಜಮೀನು ಅಥವಾ ಇದಕ್ಕೆ ಸಮನಾಂತರವಾದ ಹಣವನ್ನು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಲ್ಲಿ ಠೇವಣಿ ಇರಿಸಲು ಅವಕಾಶವಿದೆ. ಆದರೆ ಸಭಾಧ್ಯಕ್ಷರು ಬರೆದಿರುವ ಪತ್ರದಲ್ಲಿ ಉಪಯೋಗಿ ಸಂಸ್ಥೆಗೆ ಯಾವುದೇ ರೀತಿಯಲ್ಲಿ ಪರಿಹಾರಾತ್ಮಕ ಅರಣ್ಯ ಜಮೀನು ನೀಡಲು ಒತ್ತಾಯ ಮಾಡದಂತೆ ನಿರ್ದೇಶನ ನೀಡಬೇಕು ಎಂದು ಮುಖ್ಯಮಂತ್ರಿ ಅವರನ್ನು ಕೋರಿರುವುದು ಚರ್ಚೆಗೆ ಗ್ರಾಸವಾಗಿದೆ. ಸ್ಪೀಕರ್‌ ಕಾಗೇರಿ ಅವರು ಬರೆದಿರುವ ಪತ್ರದ ಬಗ್ಗೆ ವಿಧಾನಸಭೆಯ ನಿವೃತ್ತ ಕಾರ್ಯದರ್ಶಿಗಳು ಆಕ್ಷೇಪಿಸಿದ್ದಾರೆ.

 

ಅರಣ್ಯ ಇಲಾಖೆ ಎಸಿಎಸ್‌ ಬರೆದಿರುವ ಪತ್ರದಲ್ಲೇನಿದೆ?

 

ಗವಿ ಸಿದ್ದೇಶ್ವರ ಮಿನರಲ್ಸ್‌ (ಗಣಿ ಗುತ್ತಿಗೆ ಸಂಖ್ಯೆ 2552)ಗೆ ಸಂಬಂಧಿಸಿದಂತೆ ಅರಣ್ಯ (ಸಂರಕ್ಷಣೆ) ಕಾಯ್ದೆ 1980 ರಡಿ ಅರಣ್ಯ ವಿಮೋಚನೆ ನೀಡುವ ಸಂದರ್ಭದಲ್ಲಿ ಪರಿಹಾರಾತ್ಮಕ ಅರಣ್ಯ ಜಮೀನನ್ನು ನೀಡುವ ವಿಷಯವಾಗಿ ಈ ಹಿಂದೆ ಕೇಂದ್ರ ಸರ್ಕಾರವು ವಿಧಿಸಿದ್ದ ಷರತ್ತುಗಳನ್ನು ಪಾಲಿಸಿದ್ದು, ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಗಳ ನಡುವೆ ಸಮನ್ವಯತೆ ಇಲ್ಲದಿರುವ ಹಿನ್ನೆಲೆಯಲ್ಲಿ ಇವರಿಗೆ ತೊಂದರೆ ಉಂಟಾಗುತ್ತಿದೆ.

 

ಇದನ್ನು ಅರಣ್ಯ ಇಲಾಖೆಯು ತನ್ನ ಹಂತದಲ್ಲಿಯೇ ಪರಿಹರಿಸಿಕೊಳ್ಳುವಂತೆ ಹಾಗೂ ಉಪಯೋಗಿ ಸಂಸ್ಥೆಗೆ ಯಾವುದೇ ರೀತಿಯಲ್ಲಿ ಪರಿಹಾರಾತ್ಮಕ ಅರಣ್ಯ ಜಮೀನನ್ನು ನೀಡಲು ಒತ್ತಾಯ ಮಾಡದಂತೆ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿಯವರನ್ನು ಸಭಾಧ್ಯಕ್ಷರು ಕೋರಿರುತ್ತಾರೆ ಎಂದು ಅರಣ್ಯ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಜಯರಾಮ್‌ ಅವರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 

 

‘ಒಂದು ವೇಳೆ ಪರಿಹಾರಾತ್ಮಕ ಅರಣ್ಯ ಜಮೀನು ಸಿಗದೇ ಇದ್ದಲ್ಲಿ ಅವರು ಇದಕ್ಕೆ ಸಮನಾಂತರವಾದ ಹಣವನ್ನು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಕ್ಕೆ ಠೇವಣಿ ಇರಿಸಬಹುದು. ತದನಂತರ ಅರಣ್ಯ ವಿಮೋಚನೆ ನೀಡಲು ಅವಕಾಶವಿದೆ,’ ಎಂದು ಗಣಿ ಉದ್ಯಮಿಯೊಬ್ಬರು ‘ದಿ ಫೈಲ್‌’ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಅರಣ್ಯ ವಿಮೋಚನೆ ನೀಡುವ ಸಂಬಂಧಪಟ್ಟಂತೆ 3,000 ಅರ್ಜಿಗಳು ಬಾಕಿ ಇವೆ. ಇದರಲ್ಲಿ ಅರಣ್ಯ ಪ್ರದೇಶಕ್ಕೆ ಒಳಪಟ್ಟಿರುವುದಕ್ಕೆ ಸಂಬಂಧಿಸಿದಂತೆ ಶೇ.90ರಷ್ಟು ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ. ಕಾರಣಾಂತರಗಳಿಂದ ಅವೆಲ್ಲ ಬಾಕಿ ಇವೆ ಎಂದು ತಿಳಿದು ಬಂದಿದೆ.

 

ಒಂದು ವೇಳೆ ಪರಿಹಾರಾತ್ಮಕ ಅರಣ್ಯ ಜಮೀನು ಪಡೆದುಕೊಳ್ಳದಿದ್ದರೇ ಇದನ್ನೇ ಮಾದರಿಯಾಗಿಟ್ಟುಕೊಂಡು ಬೇರೆ ಕಂಪನಿಗಳು ಹಕ್ಕು ಸಾಧಿಸಬಹುದು. ಅರಣ್ಯ ಹಕ್ಕು ಉಲ್ಲಂಘನೆ ಮಾಡಲು ದಾರಿಮಾಡಿಕೊಡಲಿದೆ. ಹೀಗಾಗಿ ಯಾವುದೇ ಕಾರಣಕ್ಕೆ ಅರಣ್ಯ ವಿಮೋಚನೆಗಾಗಿ ಅರಣ್ಯ ಜಮೀನು ನೀಡಲು ಒತ್ತಾಯ ಮಾಡದಂತೆ ನಿರ್ದೇಶನ ನೀಡಬೇಕು ಎಂದು ಎಂದು ಸ್ಪೀಕರ್‌ ಮಾಡಿರುವ ಮನವಿಯು ಕಾನೂನುಬಾಹಿರವಾಗುತ್ತದೆ.ಪ್ರಧಾನಿಗೂ ಇಂತಹ  ಅಧಿಕಾರವಿಲ್ಲ ಎನ್ನುತ್ತಾರೆ ಗಣಿ ಉದ್ಯಮಿಯೊಬ್ಬರು.

 

‘ಸಭಾಧ್ಯಕ್ಷರ ಸ್ಥಾನ ಗೌರವಯುತವಾದದ್ದು. ತಮ್ಮ ಮತಕ್ಷೇತ್ರದ ಪರವಾಗಿ ಕೆಲಸ ಮಾಡಲು ಪತ್ರ ಬರೆಯಬಹುದು. ಅದನ್ನು ಬಿಟ್ಟು ಬೇರೆ ಏನನ್ನೂ ಮಾಡಬಾರದು. ಸಭಾಧ್ಯಕ್ಷರ ಹುದ್ದೆಯನ್ನು ಬಳಸಿಕೊಂಡು ಗಣಿ ಕಂಪನಿಗಳ ಪರವಾಗಿ ನಿರ್ದೇಶನ ನೀಡಿ ಎಂದು ಮನವಿ ಮಾಡುವುದು ಮತ್ತು ಶಿಫಾರಸ್ಸು ಮಾಡಿದರೆ ಅದು ಸಭಾಧ್ಯಕ್ಷರ ಪೀಠದ ಗೌರವಕ್ಕೆ ಅಗೌರವ ತಂದಂತಾಗುತ್ತದೆ ಮತ್ತು ಕ್ರಮಬಾಹಿರವಾಗುತ್ತದೆ,’ ಎನ್ನುತ್ತಾರೆ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಯಾಗಿದ್ದ ಟಿ ಎನ್‌ ಧೃವಕುಮಾರ್‌.

Hot this week

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

Topics

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

Related Articles

Popular Categories

error: Content is protected !!