Saturday | July 18, 2026 |

ಸಮಾಜ ಕಲ್ಯಾಣ ಇಲಾಖೆ; 4,710 ದಿನಗಳಿಂದಲೂ ಕಡತಗಳಿಗೆ ದೊರೆತಿಲ್ಲ ಮುಕ್ತಿ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಕಳೆದ 4,710 ದಿನಗಳಿಂದ ಕಡತಗಳು ವಿಲೇವಾರಿಯಾಗದೇ ಬಾಕಿ ಇರುವುದು ಇದೀಗ ಬಹಿರಂಗವಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿಯೇ ಈ ಮಾಹಿತಿಯನ್ನು ತೆರೆದಿಡಲಾಗಿದೆ.

 

ಸಚಿವಾಲಯದ ಇಲಾಖೆಗಳಲ್ಲಿ ಕಡತ ವಿಲೇವಾರಿ ವಿಳಂಬವಾಗುತ್ತಿರುವ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿನ ಕೆಡಿಪಿ ಸಭೆಗಳಲ್ಲಿ ಚರ್ಚೆಯಾಗುತ್ತಿದ್ದರೂ ಸಮಾಜ ಕಲ್ಯಾಣ ಇಲಾಖೆಯೊಂದರಲ್ಲೇ 4,710  ದಿನಗಳಿಂದ 383 ಕ್ಕೂ ಹೆಚ್ಚು ಕಡತಗಳು ವಿಲೇವಾರಿಗೆ ಬಾಕಿ ಇರುವುದು ಮುನ್ನೆಲೆಗೆ ಬಂದಿದೆ.

 

ಸಮಾಜ ಕಲ್ಯಾಣ ಇಲಾಖೆಯ ಸಚಿವರ ಬಳಿಯೇ ಒಟ್ಟು 14 ಕಡತಗಳು ಕಳೆದ 430  ದಿನಗಳಿಂದಲೂ ಬಾಕಿ ಇವೆ. ಉಪ ಕಾರ್ಯದರ್ಶಿ ಬಳಿ ೧೨೧ ಕಡತಗಳು 1,180  ದಿನಗಳಿಂದ, ಮತ್ತೊಬ್ಬ ಉಪ ಕಾರ್ಯದರ್ಶಿ (2) 101 ಕಡತಗಳು 2,274  ದಿನಗಳಿಂದಲೂ ಬಾಕಿ ಇರುವುದು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್‌ನಿಂದ ಗೊತ್ತಾಗಿದೆ.

 

2023 ರ ಏಪ್ರಿಲ್‌ 25ರಿಂದ 26ರವರೆಗೆ ಒಟ್ಟು 557 ಕಡತಗಳ ಪೈಕಿ 231  ಕಡತಗಳನ್ನು ಇಲಾಖೆಯು ಸ್ವೀಕರಿಸಿದೆ. ಇದರಲ್ಲಿ36 ಕಡತಗಳನ್ನಷ್ಟೇ ಮುಕ್ತಾಯಗೊಳಿಸಿದೆ. 234 ಕಡತಗಳನ್ನು ಮುಂದಿನ ಹಂತಕ್ಕೆ ರವಾನಿಸಿದೆ. ಒಟ್ಟು 383 ಕಡತಗಳು ವಿಲೇವಾರಿಗೆ ಬಾಕಿ ಇರುವುದು ವೆಬ್‌ಸೈಟ್‌ನಿಂದ ತಿಳಿದು ಬಂದಿದೆ.

 

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಪದಗ್ರಹಣ ಮಾಡಿ ತಮ್ಮ ಅವಧಿ ಪೂರ್ಣಗೊಳಿಸುವ ಹಂತಕ್ಕೆ ಬಂದಿದ್ದರೂ ಮುಖ್ಯಮಂತ್ರಿ ಮತ್ತು ವಿವಿಧ ಸಚಿವರೂ ಸೇರಿದಂತೆ ಕರ್ನಾಟಕ ಸರ್ಕಾರದ ಸಚಿವಾಲಯ ಮತ್ತು ಇಲಾಖೆಗಳಲ್ಲಿ 2023ರ ಮಾರ್ಚ್‌ 16ರವರೆಗೆ ಒಟ್ಟು 1,48,782 ಕಡತಗಳು ವಿಲೇವಾರಿಗೆ ಬಾಕಿ ಇದ್ದವು.

 

2023 ಮಾರ್ಚ್‌ 16ರ ಅಂತ್ಯಕ್ಕೆ ಎಫ್‌ಎಂಎಸ್‌ನಲ್ಲಿ ಒಟ್ಟು 43,376 ಮತ್ತು ಇ ಆಫೀಸ್‌ನಲ್ಲಿ 1,02,425 ಕಡತಗಳಿದ್ದವು. ಒಟ್ಟಾರೆ 1,45,801 ಕಡತಗಳಿದ್ದವು. ಇದೇ ಅವಧಿಯಲ್ಲಿ ಹೊಸದಾಗಿ ಎಫ್‌ಎಂಎಸ್‌ನಲ್ಲಿ 3,200 ಮತ್ತು ಇ ಆಫೀಸ್‌ನಲ್ಲಿ 27,420 ಸೇರಿ ಒಟ್ಟು  30,620 ಕಡತಗಳಿದ್ದವು.

 

ಎಫ್ಎಂಎಸ್‌ನಲ್ಲಿದ್ದ 43,376 ಕಡತಗಳ ಪೈಕಿ ಮುಕ್ತಾಯಗೊಂಡ ಕಡತಗಳ ಸಂಖ್ಯೆ 2,060 ಸಂಖ್ಯೆಯಲ್ಲಿದ್ದರೇ ಈ ಆಫೀಸ್‌ನಲ್ಲಿದ್ದ 1,02,425 ಕಡತಗಳ ಪೈಕಿ 25,639 ಸೇರಿ ಒಟ್ಟಾರೆ 27,699 ಕಡತಗಳು ಮುಕ್ತಾಯಗೊಂಡಿದ್ದವು. ಉಳಿದಂತೆ ವಿಲೇವಾರಿಗೆ ಎಫ್‌ಎಂಎಸ್‌ನಲ್ಲಿ 44,576, ಇ ಅಫೀಸ್‌ನಲ್ಲಿ 104,206 ಸೇರಿ ಒಟ್ಟಾರೆ 1,48,782 ಕಡತಗಳು ಬಾಕಿ ಇದ್ದವು.

 

2021ರ ಅಕ್ಟೋಬರ್‌ 25ರ ಅಂತ್ಯಕ್ಕೆ ಒಟ್ಟು 31,308 ಕಡತಗಳು ವಿಲೇವಾರಿಗೆ ಬಾಕಿ ಉಳಿದಿದ್ದವು. ಇದೇ ಅವಧಿಯಲ್ಲಿ 18 ಇಲಾಖೆಗಳ ಮುಖ್ಯಸ್ಥರ ಹಂತದಲ್ಲೇ 31,308 ಕಡತಗಳು  ವಿಲೇವಾರಿಯಾಗಿರಲಿಲ್ಲ. ಬಸವರಾಜ ಬೊಮ್ಮಾಯಿ ಅವರು ನಿಭಾಯಿಸುವ ಹಣಕಾಸು ಇಲಾಖೆಯಲ್ಲಿಯೇ 2021ರ ಅಕ್ಟೋಬರ್‌ 27ರ ಅಂತ್ಯಕ್ಕೆ 3,351 ಕಡತಗಳು ಬಾಕಿ ಉಳಿದಿದ್ದವು.

 

2021ರ ಆಗಸ್ಟ್‌ ಅಂತ್ಯಕ್ಕೆ 41 ಆಡಳಿತ ಇಲಾಖೆಗಳಲ್ಲಿ 1.60 ಲಕ್ಷ ಕಡತಗಳು ವಿಲೇವಾರಿಗೆ ಬಾಕಿ ಇದ್ದವು. ಈ ಪೈಕಿ 31,077 ಕಡತಗಳು ಈ ಆಫೀಸ್‌ನಲ್ಲಿಯೇ ವಿಲೇವಾರಿ ಆಗಿರಲಿಲ್ಲ. ನಗರಾಭಿವೃದ್ಧಿ ಇಲಾಖೆಯಲ್ಲಿ 11,250, ಕಂದಾಯ ಇಲಾಖೆಯಲ್ಲಿ 9,314, ಪ್ರಾಥಮಿಕ, ಪ್ರೌಢಶಿಕ್ಷಣದಲ್ಲಿ 7,689, ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯಲ್ಲಿ 5,446, ಜಲ ಸಂಪನ್ಮೂಲ ಇಲಾಖೆಯಲ್ಲಿ 5,490 ಕಡತಗಳು ಬಾಕಿ ಇದ್ದವು. ಈ ಕುರಿತು ‘ದಿ ಫೈಲ್‌’ ಸೆ.2ರಂದು ವರದಿ ಪ್ರಕಟಿಸಿದ್ದನ್ನು ಸ್ಮರಿಸಬಹುದು.

 

ವಿಲೇವಾರಿಗೆ ಬಾಕಿ ಇವೆ 1.69 ಲಕ್ಷ ಕಡತಗಳು; ಕುಂತಲ್ಲೇ ಕುಳಿತಿದೆ ಮೈಗಳ್ಳರ ಸರ್ಕಾರ!

ಕಡತಗಳ ವಿಲೇವಾರಿಗೆ ಅಧೀನ ಕಾರ್ಯದರ್ಶಿ ಅಥವಾ ಉಪಕಾರ್ಯದರ್ಶಿಗಳನ್ನು ಕಡತ ವಿಲೇವಾರಿ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲು ಮುಂದಾಗಿದೆ. ನೋಡೆಲ್ ಅಧಿಕಾರಿಗಳು ಕಾನೂನು ಇಲಾಖೆ ಸಂಯೋಜನೆ ಮಾಡಿ ಎರಡು ತಿಂಗಳೊಳಗೆ ಕಡತ ವಿಲೇವಾರಿ ಮಾಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದನ್ನು ಸ್ಮರಿಸಬಹುದು.

Hot this week

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...
Please Scan to make Your Contribution

Topics

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...

ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆ; ಕನಿಷ್ಟ ಭೂಮಿ ಪ್ರಮಾಣ, ಜಂಟಿ ಸ್ಥಿರ ಠೇವಣಿ 25 ಕೋಟಿ ಬದಲಿಗೆ 20 ಕೋಟಿ ರು ಇಳಿಕೆಗೆ ಚಿಂತನೆ

ಬೆಂಗಳೂರು;  ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಇದ್ದ  ಕನಿಷ್ಠ ಭೂಮಿ ಅವಶ್ಯಕತೆ ತೆಗೆದುಹಾಕುವುದು...

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

Related Articles

Popular Categories

error: Content is protected !!