Sunday | September 13, 2026 |

‘ದಿ ಫೈಲ್‌’ ಹೊರಗೆಳೆದಿದ್ದ ವೇತನ ಹಗರಣ; ತನಿಖಾಧಿಕಾರಿ ವರದಿ ಎತ್ತಿ ಹಿಡಿದ ಕಾನೂನು ಇಲಾಖೆ

ಬೆಂಗಳೂರು; ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದ ಗಣಕ ಕೇಂದ್ರದ ಹೊರ ಗುತ್ತಿಗೆ ನೌಕರರಿಗೆ ಹೆಚ್ಚುವರಿ ವೇತನ ಪಾವತಿಯಾಗಿದೆ ಎಂದು ತನಿಖಾಧಿಕಾರಿ ನೀಡಿದ್ದ ವರದಿಯನ್ನು ಕಾನೂನು ಇಲಾಖೆಯೂ ಸಹ ಎತ್ತಿ ಹಿಡಿದಿರುವುದು ಇದೀಗ ಬಹಿರಂಗವಾಗಿದೆ.

 

ಕಳೆದ ಎರಡು ವರ್ಷಗಳ ಹಿಂದೆಯೇ ‘ದಿ ಫೈಲ್‌’ ಹೊರಗೆಳೆದಿದ್ದ ವೇತನ ಹಗರಣದ ಕುರಿತು ತಪಾಸಣೆ ನಡೆಸಿರುವ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರಿಗೆ ಯಾವ ವಿವರಗಳನ್ನೂ ಒದಗಿಸದೇ ವಿಧಾನ ಪರಿಷತ್‌ ಸಚಿವಾಲಯದ ಅಧಿಕಾರಶಾಹಿಯು ಕಳ್ಳಾಟ ಆಡುತ್ತಿರುವ ಹೊತ್ತಿನಲ್ಲಿಯೇ ಕಾನೂನು ಇಲಾಖೆಯು ಎತ್ತಿ ಹಿಡಿದಿರುವ ತನಿಖಾ ವರದಿಯು ಮಹತ್ವ ಪಡೆದುಕೊಂಡಿದೆ.

 

ಕಾನೂನು ಇಲಾಖೆಯು ನೀಡಿರುವ ಅಭಿಪ್ರಾಯದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯದರ್ಶಿ ಕೆ ಆರ್‌ ಮಹಾಲಕ್ಷ್ಮಿ ಅವರಿಗೆ 2023ರ ಮಾರ್ಚ್‌ 7ರಂದು ಟಿಪ್ಪಣಿ ಹೊರಡಿಸಿದ್ದಾರೆ. ಈ ಟಿಪ್ಪಣಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಜ್ಯೂನಿಯರ್‌ ಪ್ರೋಗ್ರಾಮರ್‌, ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌, ಕಂಪ್ಯೂಟರ್‌ ಆಪರೇಟರ್ಸ್‌, ಡಿಟಿಪಿ ಆಪರೇಟರ್ಸ್‌ಗಳನ್ನು ಹೊರಗುತ್ತಿಗೆ ಅಡಿಯಲ್ಲಿ ನೇಮಕ ಮಾಡಿರುವ ಪರಿಷತ್‌ ಸಚಿವಾಲಯವು ಕನಿಷ್ಠ ವೇತನ ಕಾಯ್ದೆಗಿಂತಲೂ ಹೆಚ್ಚುವರಿಯಾಗಿ ಕಳೆದ ಎರಡೂವರೆ ವರ್ಷಗಳಿಂದ 48,42,564 ರು.ಗಳನ್ನು ಪಾವತಿಸಿತ್ತು. ಇದನ್ನು ಆರ್ಥಿಕ ಇಲಾಖೆಯೂ ಆಕ್ಷೇಪಿಸಿತ್ತು.

 

ಈ ಕುರಿತು ಸತ್ಯಾಸತ್ಯತೆಯನ್ನು ತನಿಖೆ ಮಾಡಲು ನೇಮಿಸಿದ್ದ ಕೆಎಎಸ್‌ ಅಧಿಕಾರಿ ಜಿ ಎನ್‌ ಮಂಜುನಾಥಸ್ವಾಮಿ ಅವರು ವರದಿ ಸಲ್ಲಿಸಿದ್ದರು. ಹೊರಗುತ್ತಿಗೆ ನೌಕರರಿಗೆ ಪಾವತಿಸಿದ್ದ 48.42 ಲಕ್ಷ ರು ಪೈಕಿ ಒಟ್ಟು 28.50 ಲಕ್ಷ ರು. ಹೆಚ್ಚುವರಿಯಾಗಿ ಪಾವತಿಯಾಗಿತ್ತು. ಇದು ಸರ್ಕಾರಕ್ಕೆ ಆದ ಆರ್ಥಿಕ ನಷ್ಟ ಎಂದು ತನಿಖಾಧಿಕಾರಿ ವರದಿಯಲ್ಲಿ ವಿವರಿಸಿದ್ದರು. ಇದೀಗ ಕಾನೂನು ಇಲಾಖೆಯು ಈ ವರದಿಯನ್ನು ಎತ್ತಿ ಹಿಡಿದಿದೆಯಲ್ಲದೇ ತನಿಖಾಧಿಕಾರಿಯ ವರದಿಯು ಸಮರ್ಪಕವಾಗಿದೆ ಎಂದು ಸ್ಪಷ್ಟವಾಗಿ ಅಭಿಪ್ರಾಯ (ಸಂಖ್ಯೆ;ಲಾ/141/ಅಭಿಪ್ರಾಯ/2022 ದಿನಾಂಕ 27.06.2022) ನೀಡಿರುವುದು ಸಭಾಪತಿ ಹೊರಟ್ಟಿ ಅವರು ಹೊರಡಿಸಿರುವ ಟಿಪ್ಪಣಿಯಿಂದ ತಿಳಿದು ಬಂದಿದೆ.

 

ಪ್ರಕರಣದ ವಿವರ

 

ಜ್ಯೂನಿಯರ್‌ ಪ್ರೋಗ್ರಾಮರ್‌, ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌, ಕಂಪ್ಯೂಟರ್‌ ಆಪರೇಟರ್ಸ್‌, ಡಿಟಿಪಿ ಆಪರೇಟರ್ಸ್‌ಗಳನ್ನು ಹೊರಗುತ್ತಿಗೆ ಅಡಿಯಲ್ಲಿ  ನೇಮಕ ಮಾಡಿರುವ ಪರಿಷತ್‌ ಸಚಿವಾಲಯವು ಕನಿಷ್ಠ ವೇತನ ಕಾಯ್ದೆಗಿಂತಲೂ ಹೆಚ್ಚುವರಿಯಾಗಿ ಕಳೆದ ಎರಡೂವರೆ ವರ್ಷಗಳಿಂದ 48,42,564 ರು.ಗಳನ್ನು ಪಾವತಿಸಿತ್ತು.  ಈ ಸಂಬಂಧ ತಕರಾರು ತೆಗೆದಿರುವ ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು 2021ರ ಏಪ್ರಿಲ್‌ 9ರಂದು ಪರಿಷತ್‌ ಸಚಿವಾಲಯದ ಕಾರ್ಯದರ್ಶಿಗೆ ಪತ್ರವನ್ನೂ ಬರೆದಿದ್ದರು.

 

ಡೇಟಾ ಎಂಟ್ರಿ ಆಪರೇಟರ್‌ ಹುದ್ದೆಗಳಿಗೆ ಸತೀಶ್‌ ಸಿ, ಶೃತಿ ಎಸ್‌, ಪ್ರತೀಕ್‌ ಶೆಟ್ಟಿ, ಸುಶಾಂತ್‌ ನಾಯಕ್‌, ಜ್ಯೂನಿಯರ್‌ ಪ್ರೋಗ್ರಾಮರ್‌ ಹುದ್ದೆಗೆ ಸುಹಾಸ್‌ ಎಂ, ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌ ಹುದ್ದೆಗಳಿಗೆ ಯೋಗೇಶ್ವರಿ ಬಿ, ಪುಷ್ಪಾ ಎಚ್‌ ಎಂ, ಯೋಗಿತಾ ಪಿ ಆರ್‌, ಜ್ಯೂನಿಯರ್‌ ಆಪರೇಟರ್‌ ಕನ್ಸಲ್ಟೆಂಟ್‌ ಹುದ್ದೆಗೆ ಎಂ ನಿಖಿಲ್‌ ಅವರನ್ನು ಕಿಯೋನಿಕ್ಸ್‌ ಮೂಲಕ ನೇಮಿಸಲಾಗಿತ್ತು.

 

‘ಆರ್ಥಿಕ ಇಲಾಖೆಯ ಅನುಮತಿ ಪಡೆಯದೇ ಹಾಗೂ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ವ್ಯತಿರಿಕ್ತವಾಗಿ ಕಿಯೋನಿಕ್ಸ್‌ನಿಂದ ಕರಾರು ಒಪ್ಪಂದ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿರುವುದು ನಿಯಮಬಾಹಿರವಾಗಿರುತ್ತದೆ. ಆದ್ದರಿಂದ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿದ್ದಂತೆ ಹುದ್ದೆಗಳ ವೇತನ ಶ್ರೇಣಿಯ ಕನಿಷ್ಠ ವೇತನ ಕಾಯ್ದೆ ಪ್ರಕಾರ ನಿಗದಿಗೊಳಿಸಬೇಕು,’ ಎಂದು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ಪರಿಷತ್‌ನ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದರು.

 

ಹೆಚ್ಚುವರಿ ಪಾವತಿಸಿದ್ದೆಷ್ಟು?

 

ಜ್ಯೂನಿಯರ್‌ ಪ್ರೋಗ್ರಾಮರ್‌ ಹುದ್ದೆಗೆ ಕನಿಷ್ಠ ವೇತನ ಕಾಯ್ದೆಯಡಿ ಆರ್ಥಿಕ ಇಲಾಖೆಯು 22,800 ರು. ನಿಗದಿಪಡಿಸಿದೆ. ಆದರೆ ವಿಧಾನಪರಿಷತ್ತಿನ ಸಚಿವಾಲಯವು ನೀಡುತ್ತಿರುವುದು 42,065 ರು. . ಅಂದರೆ ಹೆಚ್ಚುವರಿಯಾಗಿ 19,265 ರು. ಪ್ರತಿ ತಿಂಗಳೂ ಪಾವತಿಯಾಗುತ್ತಿದೆ. ಕಳೆದ ಎರಡೂವರೆ ವರ್ಷಗಳಿಂದ ಹೆಚ್ಚುವರಿಯಾಗಿ ಜ್ಯೂನಿಯರ್‌ ಪ್ರೋಗ್ರಾಮರ್‌ ಹುದ್ದೆಗೆ 5,58,685 ರು. ಪಾವತಿಯಾಗಿದೆ. ಅದರಂತೆ ಇಬ್ಬರು ಜ್ಯೂನಿಯರ್‌ ಪ್ರೋಗ್ರಾಮರ್‌ಗಳಿಗೆ ಒಟ್ಟು 11,17,370 ರು. ಹೆಚ್ಚುವರಿಯಾಗಿ ಪಾವತಿಯಾದಂತಾಗಿತ್ತು.

 

ಅದೇ ರೀತಿ ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌ ಹುದ್ದೆಗೆ 20,000 ರು. ಕನಿಷ್ಠ ವೇತನ ನಿಗದಿಪಡಿಸಿದ್ದರೆ ವಿಧಾನಪರಿಷತ್ತಿನ ಸಚಿವಾಲಯವು 38,266 ರು. ನೀಡುತ್ತಿದೆ. ಹೆಚ್ಚುವರಿ 18,266 ರು. ನಂತೆ ಹೆಚ್ಚುವರಿಯಾಗಿ 5,29,714 ರು. ಪಾವತಿಸಲಾಗಿದೆ. ಅದರಂತೆ ಮೂವರು ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌ ಹುದ್ದೆಗಳಿಗೆ ಒಟ್ಟು 15,89,142 ರು. ಪಾವತಿಸಲಾಗಿತ್ತು.

 

ಹಾಗೆಯೇ ಡೇಟಾ ಎಂಟ್ರಿ ಆಪರೇಟರ್‌ ಹುದ್ದೆಗೆ 13,284 ರು. ನೀಡಬೇಕಿದ್ದರೆ ವಿಧಾನಪರಿಷತ್ತಿನ ಸಚಿವಾಲಯವು 18,414.25 ರು.ಗಳನ್ನು ಹೆಚ್ಚುವರಿ ನೀಡಿ ಒಟ್ಟು 31,699 ರು. ನಂತೆ ಒಬ್ಬರಿಗೆ 5,34, 013 ರು ಪಾವತಿಯಾಗಿದೆ. ನೀಡುತ್ತಿದೆ. ಅದರಂತೆ ನಾಲ್ವರು ಡೇಟಾ ಎಂಟ್ರಿ ಆಪರೇಟರ್‌ಗಳಿಗೆ ಹೆಚ್ಚುವರಿಯಾಗಿ 21,36,052 ರು. ರು. ಪಾವತಿಸಿರುವುದು ಆರ್ಥಿಕ ಇಲಾಖೆ ಬರೆದಿರುವ ಪತ್ರದಿಂದ ತಿಳಿದು ಬಂದಿತ್ತು.

 

‘ವಿಧಾನ ಪರಿಷತ್‌ನ ಲೆಕ್ಕ ಶೀರ್ಷಿಕೆ (2011-02-103-2-01-034)ಯಂತೆ ಕರ್ನಾಟಕ ವಿಧಾನ ಪರಿಷತ್‌ನ ಸಚಿವಾಲಯದಲ್ಲಿ ಶೀಘ್ರಲಿಪಿಗಾರರ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಪಡೆದಿದ್ದು ವೇತನವನ್ನು 30,350 ರು.ಗಳಿಗೆ ನಿಗದಿಗೊಳಸಲಾಗಿದೆ. ಇದು ಕನಿಷ್ಠ ವೇತನ ಕಾಯ್ದೆ ಮೀರಿದ್ದರಿಂದ ಪರಿಷ್ಕರಿಸಿ 22,000 ರು.ಗಳಿಗೆ ನಿಗದಿಪಡಿಸಿ 2021-22ನೇ ಸಾಲಿನ ಅಯವ್ಯಯದಲ್ಲಿ ಅನುದಾನ ನಿಗದಿಪಡಿಸಲಾಗಿದೆ. ಆದ್ದರಿಂದ ಶೀಘ್ರಲಿಪಿಗಾರರ ವೇತನವನ್ನೂ ಮರು ನಿಗದಿಪಡಿಸಬೇಕು,’ ಎಂದು ಆರ್ಥಿಕ ಇಲಾಖೆಯು ಆಡಳಿತ ಇಲಾಖೆಗೆ ನಿರ್ದೇಶಿಸಿತ್ತು.

 

ಜ್ಯೂನಿಯರ್‌ ಪ್ರೋಗ್ರಾಮರ್‌, ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌ ಹುದ್ದೆಗಳ ಭರ್ತಿಗೆ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಶೇ.50ರಷ್ಟನ್ನು ಪದನ್ನೋತಿಯಿಂದ ಶೇ.50ರಷ್ಟು ನೇರ ನೇಮಕಾತಿಯಿಂದ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ. ಎರಡೂ ಇಲ್ಲದ ಪಕ್ಷದಲ್ಲಿ ನಿಯೋಜನೆ ಮೇಲೆ ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದರೆ ಆರ್ಥಿಕ ಇಲಾಖೆಯ ಅನುಮತಿ ಪಡೆಯದೇ ಹಾಗೂ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ವ್ಯತಿರಿಕ್ತವಾಗಿ ಕಿಯೋನಿಕ್ಸ್‌ನಿಂದ ಕರಾರು ಒಪ್ಪಂದ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ನಿಯಮಬಾಹಿರವಾಗಿ ಭರ್ತಿ ಮಾಡಿತ್ತು.

 

ಅಲ್ಲದೇ ವಿಧಾನಪರಿಷತ್‌ನ ಮಾಜಿ ಸದಸ್ಯ ರಮೇಶ್‌ ಬಾಬು ಅವರು ಮುಖ್ಯಮಂತ್ರಿ, ಕಾನೂನು ಸಚಿವ, ಪರಿಷತ್‌ನ ಸಭಾಪತಿಗೂ ಪತ್ರ ಬರೆದಿದ್ದರು. ಲೆಕ್ಕ ತಪಾಸಣೆ ನಡೆಸಿರುವ ಅಧಿಕಾರಿಗಳು ಪರಿಷತ್‌ ಸಭಾಪತಿಗಳಿಗೆ ಬರೆದಿರುವ ಪತ್ರದಲ್ಲಿಯೂ ರಮೇಶ್‌ ಬಾಬು ಅವರು ಬರೆದಿದ್ದ ಪತ್ರದ ಕುರಿತು ಪ್ರಸ್ತಾಪಿಸಿದ್ದಾರೆ. ಈ ಯಾವ ಪತ್ರಗಳಿಗೂ ಉತ್ತರವನ್ನು ನೀಡದ ವಿಧಾನಪರಿಷತ್‌ ಸಚಿವಾಲಯದ ಅಧಿಕಾರಶಾಹಿಯು ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೇಖಪಾಲರಿಗೂ ವಿವರಣೆ ಒದಗಿಸದಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಂತಾಗಿತ್ತು.

 

 

 

ಜ್ಯೂನಿಯರ್‌ ಪ್ರೋಗ್ರಾಮರ್‌, ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌, ಕಂಪ್ಯೂಟರ್‌ ಆಪರೇಟರ್ಸ್‌, ಡಿಟಿಪಿ ಆಪರೇಟರ್ಸ್‌ಗಳನ್ನು ಹೊರಗುತ್ತಿಗೆ ಅಡಿಯಲ್ಲಿ ನೇಮಕ ಮಾಡಿರುವ ಪರಿಷತ್‌ ಸಚಿವಾಲಯವು ಕನಿಷ್ಠ ವೇತನ ಕಾಯ್ದೆಗಿಂತಲೂ ಹೆಚ್ಚುವರಿಯಾಗಿ ಕಳೆದ ಎರಡೂವರೆ ವರ್ಷಗಳಿಂದ 48,42,564 ರು.ಗಳನ್ನು ಪಾವತಿಸಿರುವುದು ಗೊತ್ತಾಗಿದೆ. ಈ ಸಂಬಂಧ ತಕರಾರು ತೆಗೆದಿರುವ ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು 2021ರ ಏಪ್ರಿಲ್‌ 9ರಂದು ಪರಿಷತ್‌ ಸಚಿವಾಲಯದ ಕಾರ್ಯದರ್ಶಿಗೆ ಪತ್ರವನ್ನೂ ಬರೆದಿದ್ದರು. ಈ ಪತ್ರವನ್ನಾಧರಿಸಿ ‘ದಿ ಫೈಲ್‌’ 2021ರ ಜೂನ್‌ 18ರಂದೇ ವರದಿ ಪ್ರಕಟಿಸಿತ್ತು.

 

ಪರಿಷತ್‌ನಲ್ಲಿ ಅಕ್ರಮ ನೇಮಕ, ಹೆಚ್ಚುವರಿ ವೇತನ, 48 ಲಕ್ಷ ನಷ್ಟ; ಹೊರಟ್ಟಿ ಮೌನ!

 

 

‘ಆರ್ಥಿಕ ಇಲಾಖೆಯ ಅನುಮತಿ ಪಡೆಯದೇ ಹಾಗೂ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ವ್ಯತಿರಿಕ್ತವಾಗಿ ಕಿಯೋನಿಕ್ಸ್‌ನಿಂದ ಕರಾರು ಒಪ್ಪಂದ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿರುವುದು ನಿಯಮಬಾಹಿರವಾಗಿರುತ್ತದೆ. ಆದ್ದರಿಂದ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿದ್ದಂತೆ ಹುದ್ದೆಗಳ ವೇತನ ಶ್ರೇಣಿಯ ಕನಿಷ್ಠ ವೇತನ ಕಾಯ್ದೆ ಪ್ರಕಾರ ನಿಗದಿಗೊಳಿಸಬೇಕು,’ ಎಂದು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ಪರಿಷತ್‌ನ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದನ್ನು ಸ್ಮರಿಸಬಹುದು.

Hot this week

ದಿ ಫೈಲ್‌ ಸಂಪಾದಕರಿಗೆ ಜೀವ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ; ಅಪರಿಚಿತನ ವಿರುದ್ಧ ಕಡೆಗೂ ಎಫ್‌ಐಆರ್ ದಾಖಲಿಸಿದ ಪೊಲೀಸರು

ಬೆಂಗಳೂರು; ದಿ ಫೈಲ್‌ ಸುದ್ದಿ ಜಾಲತಾಣದಲ್ಲಿ ಪ್ರಕಟಿಸಿದ್ದ ವರದಿ ಉಲ್ಲೇಖಿಸಿ ಸಂಪಾದಕರಿಗೆ...

ಬಹು ದೊಡ್ಡ ಬರಗಾಲ; ಜಿಲ್ಲಾಧಿಕಾರಿಗಳ ಪಿ ಡಿ ಖಾತೆಗಳಲ್ಲಿ 310 ಕೋಟಿಯಷ್ಟೇ ಲಭ್ಯ

ಬೆಂಗಳೂರು; ರಾಜ್ಯದ ಇತಿಹಾಸದಲ್ಲಿ ಎರಡನೇ ಬಾರಿಗೆ ಕಾಣಿಸಿಕೊಂಡಿರುವ ಬಹುದೊಡ್ಡ ಬರಕ್ಕೆ ತುತ್ತಾಗಿರುವ...
Please Scan to make Your Contribution

Topics

ದಿ ಫೈಲ್‌ ಸಂಪಾದಕರಿಗೆ ಜೀವ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ; ಅಪರಿಚಿತನ ವಿರುದ್ಧ ಕಡೆಗೂ ಎಫ್‌ಐಆರ್ ದಾಖಲಿಸಿದ ಪೊಲೀಸರು

ಬೆಂಗಳೂರು; ದಿ ಫೈಲ್‌ ಸುದ್ದಿ ಜಾಲತಾಣದಲ್ಲಿ ಪ್ರಕಟಿಸಿದ್ದ ವರದಿ ಉಲ್ಲೇಖಿಸಿ ಸಂಪಾದಕರಿಗೆ...

ಬಹು ದೊಡ್ಡ ಬರಗಾಲ; ಜಿಲ್ಲಾಧಿಕಾರಿಗಳ ಪಿ ಡಿ ಖಾತೆಗಳಲ್ಲಿ 310 ಕೋಟಿಯಷ್ಟೇ ಲಭ್ಯ

ಬೆಂಗಳೂರು; ರಾಜ್ಯದ ಇತಿಹಾಸದಲ್ಲಿ ಎರಡನೇ ಬಾರಿಗೆ ಕಾಣಿಸಿಕೊಂಡಿರುವ ಬಹುದೊಡ್ಡ ಬರಕ್ಕೆ ತುತ್ತಾಗಿರುವ...

ಶೇ 14 ಟೆಂಡರ್ ಪ್ರೀಮಿಯಂಗೆ ಸಮರ್ಥನೆ ಮಾಡಲು ಶೇ.10ರಷ್ಟು ಸೇವಾ ಶುಲ್ಕ ಸೇರಿಸಿದ್ದ ಬಿಎಸ್‌ಡಬ್ಲ್ಯೂಎಂಎಲ್; ಆರ್ಥಿಕ ಇಲಾಖೆ ಅವಲೋಕನ

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಾಗಾಣಿಕೆ ಮಾಡುವ...

ತನಿಖೆಯಿಂದ ಪತ್ತೆ ಹಚ್ಚಬಹುದಾದನ್ನು ದೂರುದಾರ ಸಾಬೀತುಪಡಿಸಬೇಕೇ?; ಸಿದ್ದಾರ್ಥ ವಿಹಾರ ಟ್ರಸ್ಟ್‌ ಪ್ರಕರಣದಲ್ಲಿ ನ್ಯಾಯಪೀಠದ ಅವಲೋಕನ

ಬೆಂಗಳೂರು; 'ದೂರುದಾರರ ವಿಚಾರಣೆಯ ಮೂಲಕವೇ  ಸಂಪೂರ್ಣ ಸರಪಳಿಯನ್ನು ಬಿಚ್ಚಿಡುವಂತೆ ಖಾಸಗಿ ದೂರುದಾರರಿಂದ...

Related Articles

Popular Categories

error: Content is protected !!