Wednesday | March 25, 2026 |

ಆರೋಗ್ಯಕವಚ ಟೆಂಡರ್‍‌ನಲ್ಲಿ ಭಾರೀ ಅಕ್ರಮ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಫೋಟೋ ಸಹಿತ ಲೋಕಾಯುಕ್ತಕ್ಕೆ ದೂರು

Support THE-FILE

spot_img

ಬೆಂಗಳೂರು; ಶೈಕ್ಷಣಿಕ ಸೇವೆಗಳನ್ನು ಒದಗಿಸುವ ಹಿನ್ನೆಲೆ ಹೊಂದಿರುವ ಖಾಸಗಿ ಕಂಪನಿಯೊಂದಕ್ಕೆ 1,260 ಕೋಟಿ ರು ಮೊತ್ತದ 108 ಆರೋಗ್ಯ ಕವಚ ಆಂಬ್ಯುಲೆನ್ಸ್‌ ಸೇವೆ ಪಡೆಯಲು ಟೆಂಡರ್‍‌ ನೀಡಲು ಸಿದ್ಧತೆ ನಡೆಸಿದೆ ಮತ್ತು ಸದಾಶಿವನಗರದಲ್ಲಿರುವ ಸಚಿವರೊಬ್ಬರ ನಿವಾಸದ ನೆಲಮಹಡಿಯ ಕೊಠಡಿಯಲ್ಲಿ ಲಂಚದ ಹಣವನ್ನು ಖಾಸಗಿ ಕಂಪನಿಯೊಂದರಿಂದ ಉಪ ನಿರ್ದೇಶಕರೊಬ್ಬರು ಸ್ವೀಕರಿಸಿದ್ದಾರೆ ಎಂಬ ಆರೋಪ ಕುರಿತು ‘ದಿ ಫೈಲ್‌’ ವರದಿ ಪ್ರಕಟಿಸುತ್ತಿದ್ದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ವಕ್ತಾರ ಹಾಗೂ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್‌ಬಾಬು ಅವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ.

 

 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಶಾಖೆಯ ಉಪನಿರ್ದೇಶಕ ಡಾ. ಆರ್.ನಾರಾಯಣ್ ಎಂಬುವವರು ಈ ಹಗರಣದಲ್ಲಿ ಮಧ್ಯವರ್ತಿಗಳಾಗಿದ್ದಾರೆ. ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿರುವುದಿಲ್ಲ. ಚುನಾವಣಾ ಸಮಯದಲ್ಲಿ ತರಾತುರಿಯಲ್ಲಿ ನಿಯಮಗಳ ಉಲ್ಲಂಘನೆ ಮಾಡಿ ಟೆಂಡರ್ ಹಂಚಿಕೆ ಮಾಡಿರುವ ಕ್ರಮದ ಹಿಂದೆ ಭ್ರಷ್ಟಾಚಾರದ ವಾಸನೆ ಬಡಿದಿದೆ ಎಂದು ರಮೇಶ್‌ ಬಾಬು ಅವರು ದೂರಿದ್ದಾರೆ.

 

 

ಡಾ ಆರ್‍‌ ನಾರಾಯಣ್‌ ಎಂಬುವರು ಮಧ್ಯವರ್ತಿಗಳಗಾಗಿ ಹಣ ಪಡೆದಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್‌, ಈ ಸಂಬಂಧ ಡಾ ನಾರಾಯಣ್‌ ಅವರು ಹಣ ಪಡೆದಿದ್ದಾರೆ ಎಂಬುವುದಕ್ಕೆ ಸಾಕ್ಷ್ಯವಾಗಿ ಕೆಲ ಫೋಟೋಗಳನ್ನೂ ಲೋಕಾಯುಕ್ತಕ್ಕೆ ಸಲ್ಲಿಸಿರುವ ದೂರಿನೊಂದಿಗೇ ಸಲ್ಲಿಸಿದ್ದಾರೆ. ದೂರಿನ ಪ್ರತಿ ಮತ್ತು ಫೋಟೋಗಳು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

 

ಈ ದೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ ಕೆ ಸುಧಾಕರ್‍‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಟಿ ಕೆ ಅನಿಲ್‌ಕುಮಾರ್‍‌, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಡಾ ನವೀನ್‌ ಭಟ್‌, ಇಲಾಖೆಯ ಆಯುಕ್ತ ಡಿ ರಂದೀಪ್‌ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ಉಪ ನಿರ್ದೇಶಕ (ಇಎಂಆರ್‍ಐ)ನ ಡಾ ನಾರಾಯಣ್‌ ಅವರನ್ನು ಪ್ರತಿವಾದಿಯನ್ನಾಗಿಸಿರುವುದು ದೂರಿನಿಂದ ಗೊತ್ತಾಗಿದೆ.

 

 

‘ಬಹಳ ಪ್ರಮುಖವಾಗಿ ಈ ಹಗರಣಕ್ಕೆ ಸಂಬಂಧಪಟ್ಟಂತೆ ಮಧ್ಯವರ್ತಿಯಾಗಿ ಸಚಿವರ ಪರವಾಗಿ ಅವರ ಮನೆಯಲ್ಲೇ ಹಣ ಪಡೆದಿರುವ ಅನುಮಾನಗಳಿರುತ್ತವೆ. ಕರ್ನಾಟಕ ರಾಜ್ಯ ಸರ್ಕಾರದ ಪೊಲೀಸ್ ಇಲಾಖೆಯ ಬೆಂಗಳೂರಿನ ಕ್ರೈಂ ಬ್ರಾಂಚ್ ನವರಿಗೂ ಈ ಹಗರಣ ಸಂಬಂಧ ಮಾಹಿತಿ ಇರುವುದಾಗಿ ತಿಳಿದುಬಂದಿರುತ್ತದೆ. ಆದರೆ ಇಲ್ಲಿಯವರೆಗೆ ಪ್ರಕರಣದ ಆರೋಪಿತರ ಮೇಲೆ ಯಾವುದೇ ಕ್ರಮ ಜರುಗಿರುವುದಿಲ್ಲ,’ ಎಂದು ರಮೇಶ್‌ಬಾಬು ಅವರು ದೂರಿನಲ್ಲಿ ಆಪಾದಿಸಿದ್ದಾರೆ.

 

 

ಹಾಗೆಯೇ “ಈ ಟೆಂಡರ್ ಹಗರಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳು ಮತ್ತು ಸಚಿವರು ಭಾಗಿಯಾಗಿರುವ ಆರೋಪದ ಸಂಬಂಧ ಮತ್ತು ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಾವಳಿಗಳನ್ನು ಮೀರಿ ಟೆಂಡರ್ ಹಂಚಿಕೆಯಾಗಿರುವ ಸಂಬಂಧ ಮಾನ್ಯ ಲೋಕಾಯುಕ್ತರು ಸಾರ್ವಜನಿಕ ಹಿತದೃಷ್ಟಿಯಿಂದ ತನಿಖೆಯನ್ನು ಮಾಡಬೇಕಾಗಿರುತ್ತದೆ,’ ಎಂದೂ ದೂರಿನಲ್ಲಿ ಒತ್ತಾಯಿಸಿದ್ದಾರೆ.

 

ಕರ್ನಾಟಕದಲ್ಲಿ 10 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಟೆಂಡರ್ ಅಂಗೀಕಾರ ಆಗಬೇಕಾದಲ್ಲಿ ಅದು ಸಂಪುಟ ಸಭೆಯ ಮೂಲಕ ಅನುಮೋದನೆ ಆಗಬೇಕು. ಇದರ ಜೊತೆಗೆ ಕರ್ನಾಟಕ ಪಾರದರ್ಶಕ ಕಾಯಿದೆ ಅನ್ವಯ ಬಿಡ್ ದಾರರ ಟೆಂಡರ್ ಗಳು ತಾಂತ್ರಿಕ ಮತ್ತು ಆರ್ಥಿಕ ಅನುಮೋದನೆಯನ್ನು ಪಡೆಯಬೇಕಾಗುತ್ತದೆ. ರಾಜ್ಯ ಸರ್ಕಾರದ ಹೊಸ ನೀತಿಗೆ ಅನುಗುಣವಾಗಿ ಟೆಂಡರ್ ಅನುಮೋದನೆ ಸಮಿತಿಯಿಂದಲೂ ಅನುಮೋದನೆ ಪಡೆಯಬೇಕಾಗುತ್ತದೆ.

 

ಆದರೆ ಈ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಾವಳಿಗಳನ್ನು ಗಾಳಿಗೆ ತೋರಿ ಚುನಾವಣಾ ಪೂರ್ವದಲ್ಲಿ ಟೆಂಡರ್ ಅನುಮೋದನೆ ಮಾಡಿರುವುದು ಹಲವಾರು ಅನುಮಾನಗಳಿಗೆ ಅವಕಾಶ ನೀಡುತ್ತದೆ. ಸದರಿ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿದ್ದು, ಮಾನ್ಯ ಮುಖ್ಯಮಂತ್ರಿಗಳು, ಆರೋಗ್ಯ ಇಲಾಖೆಯ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳು ಶಾಮೀಲಾಗಿರುವ ಸಾಧ್ಯತೆಗಳಿರುತ್ತವೆ ಎಂದು ವಿವರಿಸಿರುವುದು ದೂರಿನಿಂದ ಗೊತ್ತಾಗಿದೆ.

 

ಸಾರ್ವಜನಿಕ ಹಣದ ಸಂರಕ್ಷಣೆಯನ್ನು ರಾಜ್ಯ ಸರ್ಕಾರವೇ ಮಾಡಬೇಕಾಗಿದ್ದು, ಈ ಹಗರಣದಲ್ಲಿ ಆಡಳಿತ ಪಕ್ಷ ಅಕ್ರಮ ರೀತಿಯಲ್ಲಿ ಆತುರ ಆತುರವಾಗಿ ಟೆಂಡರ್ ಗೆ ಅನುಮೋದನೆ ನೀಡುವ ಮೂಲಕ ಭ್ರಷ್ಟಾಚಾರದ ಆರೋಪಗಳಿಗೆ ಅವಕಾಶವನ್ನು ನೀಡಿದಂತಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

 

ರಾಜ್ಯದ ಹಿತದೃಷ್ಟಿಯಿಂದ ಮತ್ತು ಅಗತ್ಯ ಸೇವೆಯಾದ ಆರೋಗ್ಯ ಇಲಾಖೆಯ ಆಂಬುಲೆನ್ಸ್ ಸೇವೆಯನ್ನು ಯಾವುದೇ ಹಗರಣಗಳಿಗೆ ಆಸ್ಪದ ನೀಡದಂತೆ ಜನರಿಗೆ ನೀಡುವ ಕಾರಣಕ್ಕಾಗಿ ಮಾನ್ಯ ಲೋಕಾಯುಕ್ತರು ಪಾರದರ್ಶಕ ತನಿಖೆ ನಡೆಸಿ ಈ ಹಗರಣದಲ್ಲಿ ನಡೆದಿರುವ ಅಕ್ರಮಗಳನ್ನು ಬಯಲಿಗೆಳೆಯಬೇಕು ಎಂದು ದೂರಿನಲ್ಲಿ ರಮೇಶ್‌ ಬಾಬು ಅವರು ಒತ್ತಾಯಿಸಿದ್ದಾರೆ.

 

ಕರ್ನಾಟಕ ವಿಧಾನಸಭೆಗೆ ಮತದಾನಕ್ಕೆ ಇನ್ನು ಐದೇ ಐದು ದಿನಗಳು ಬಾಕಿ ಇರುವಾಗಲೇ ಶೈಕ್ಷಣಿಕ ಹಿನ್ನೆಲೆ ಹೊಂದಿರುವ ಖಾಸಗಿ ಕಂಪನಿಯೊಂದರಿಂದ ದೊಡ್ಡಮಟ್ಟದ ಲಂಚದ ವ್ಯವಹಾರ ನಡೆದಿದೆ ಎಂಬ ಆಪಾದನೆಗೂ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಪ್ರಭಾವಿ ಸಚಿವರೊಬ್ಬರು ಗುರಿಯಾಗಿದ್ದಾರೆ. ಈ ಸಂಬಂಧ ಖಾಸಗಿ ಸಂಸ್ಥೆಯೊಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಲಿಖಿತ ದೂರು ಸಲ್ಲಿಸಿತ್ತು ಎಂದು ಗೊತ್ತಾಗಿದೆ. ಈ ಕುರಿತು ‘ದಿ ಫೈಲ್‌’ 2023ರ ಮೇ 6ರಂದೇ ವರದಿ ಪ್ರಕಟಿಸಿತ್ತು.

 

ಆಂಬ್ಯುಲೆನ್ಸ್; ಶೈಕ್ಷಣಿಕ ಹಿನ್ನೆಲೆ ಕಂಪನಿಗೆ 1,260 ಕೋಟಿ ಮೊತ್ತದ ಟೆಂಡರ್‌,100 ಕೋಟಿ ಲಂಚದ ಆರೋಪ

 

ಅಲ್ಲದೇ ಸಚಿವರೊಬ್ಬರಿಗೆ 100 ಕೋಟಿ ರು., ಇಲಾಖೆಯ ಉನ್ನತ ಅಧಿಕಾರಿಗಳಿಗೆ 10 ಕೋಟಿ, ಉಪ ನಿರ್ದೇಶಕರೊಬ್ಬರಿಗೆ 10 ಕೋಟಿ ಮತ್ತು ಸಮಿತಿಯ ಸದಸ್ಯರುಗಳಿಗೂ 1 ಕೋಟಿ ಲಂಚ ನೀಡಲಾಗಿದೆ. ಲಂಚದ ಹಣವನ್ನು ಪಡೆಯುವಾಗ ಉಪ ನಿರ್ದೇಶಕರೊಬ್ಬರು ಸಿಕ್ಕಿಬಿದ್ದಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆಯಲ್ಲದೆ ಹಣವನ್ನು ಪಡೆದು ಬ್ಯಾಗ್‌ನಲ್ಲಿ ಇರಿಸುತ್ತಿರುವ ಫೋಟೋಗಳನ್ನೂ ಲಗತ್ತಿಸಲಾಗಿತ್ತು ಎಂದು ವರದಿಯಲ್ಲಿ ವಿವರಿಸಿದ್ದನ್ನು ಸ್ಮರಿಸಬಹುದು.

Hot this week

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

Topics

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

Related Articles

Popular Categories

error: Content is protected !!